ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಈಶ್ವರ ಮಲ್ಪೆ ತಂಡದಿಂದ ಮತ್ತೆ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ

Posted by Vidyamaana on 2024-08-04 06:41:01 |

Share: | | | | |


ಈಶ್ವರ ಮಲ್ಪೆ ತಂಡದಿಂದ ಮತ್ತೆ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ

ಮಲ್ಪೆ: ನದಿಯ ನೀರಿನ ಹರಿವಿನ ಪ್ರಮಾಣ ಅಮಾವಾಸ್ಯೆ ಹಾಗೂ ಹುಣ್ಣಿಮೆಯಲ್ಲಿ, ಸಮುದ್ರದ ಉಬ್ಬರವನ್ನು ಅವಲಂಬಿಸಿ ಕೆಲವು ಸಲ ಇಳಿಮುಖಗೊಳ್ಳುವ ಸಾಧ್ಯತೆ ಇರುವುದರಿಂದ ಆ. 4ರ ಅಮಾವಾಸ್ಯೆಯಂದು ಈಶ್ವರ ಮಲ್ಪೆ ಅವರು ಅಂಕೋಲ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಹರಿಯುತ್ತಿರುವ ಗಂಗಾವಳಿ ನದಿಯಲ್ಲಿ ಮೃತದೇಹದ ಶೋಧ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

ಬೆಂಗಳೂರು ಕಂಬಳ ಕರೆ ಉದ್ಘಾಟನೆ

Posted by Vidyamaana on 2023-11-25 12:24:25 |

Share: | | | | |


ಬೆಂಗಳೂರು ಕಂಬಳ ಕರೆ ಉದ್ಘಾಟನೆ

ಬೆಂಗಳೂರು ನ.25: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ (Bengaluru Kambala) ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ (Ashwini Puneeth Rajkumar)​​ ಅವರು ಶನಿವಾರ (ನ.25) ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.


ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್​ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.


ಬೆಂಗಳೂರು ಕಂಬಳದ ವಿಶೇಷತೆ

6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು. ಕಂಬಳದಲ್ಲಿ 200 ಜೋಡಿ ಕೋಣಗಳು ಭಾಗವಹಿಸುವ ಸಾಧ್ಯತೆ ಇದೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್​ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರಾಕ್‌ (ಕರೆ)ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವ ಇರಲಿದೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಆಯೋಜಿಸಲಾಗಿದೆ.ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ, ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ. ಇದು ಕಂಬಳದ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದೆ. 228 ಜೋಡಿ ಕೋಣಗಳ ರಿಜಿಸ್ಟ್ರೇಷನ್ ಆಗಿದ್ದು, 200 ಜೋಡಿ‌ ಫೈನಲ್‌ ಆಗಿವೆ. ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ.


ಕೋಣಗಳ ಆರೈಕೆ

ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರಿಂದ ವಿಶೇಷ ಕಾಳಜಿ ವಹಿಸಲಾಗುತ್ತದೆ. ಕೋಣಗಳಿಗೆ ಬೈಹುಲ್ಲು, ನೀರನ್ನು ಕೂಡ ಊರಿನಿಂದಲೇ ತರಲಾಗಿದೆ. ನೀರು ಬದಲಾದರೆ ಕೋಣಗಳ ಆರೋಗ್ಯ ಏರುಪೇರು ಆಗುವ ಸಾಧ್ಯತೆ ಇದೆ. ಹೀಗಾಗಿ ಊರಿನಿಂದಲೇ ಟ್ಯಾಂಕರ್ ಮೂಲಕ ನೀರು ತರಲಾಗಿದೆ. ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಕೂಡ ಬಂದುದ್ದಾರೆ.


ಗೆದ್ದ ಕೋಣಗಳಿಗೆ ಬಹುಮಾನ

ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು


ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು


ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

ಸ್ಪೇನ್ ಹುಡುಗನ ಕೈ ಹಿಡಿದ ಮಂಡ್ಯ ಯುವತಿ

Posted by Vidyamaana on 2024-04-30 07:14:53 |

Share: | | | | |


ಸ್ಪೇನ್ ಹುಡುಗನ ಕೈ ಹಿಡಿದ ಮಂಡ್ಯ ಯುವತಿ

ಪ್ರೀತಿಗೆ ಯಾವುದೇ ಜಾತಿ, ಗಡಿ, ಭಾಷೆಯ ಹಂಗಿಲ್ಲ, ಎಲ್ಲಿಯ ಮಂಡ್ಯ, ಎಲ್ಲಿಯ ಸ್ಪೇನ್. ಮಂಡ್ಯದ ಯುವತಿಯನ್ನು ಸ್ಪೇನ್‌ನ ಯುವಕನೊಬ್ಬ ಮದುವೆಯಾಗಿದ್ದಾನೆ. ಕೆ.ಆರ್.ಪೇಟೆ ಪಟ್ಟಣದ ನಂಜಮ್ಮ ಮುದ್ದೇಗೌಡ ಸಮುದಾಯ ಭವನದಲ್ಲಿ ಜಾನ್‌ವೈಡಲ್ ಮತ್ತು ಬಿ.ಆರ್.ದೀಕ್ಷಿತಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೆ.ಆರ್.ಪೇಟೆ ಪಟ್ಟಣದ ಶಮಂತ್ ಟೆಕ್ಸ್‌ಟೈಲ್ಸ್‌ ಮಾಲೀಕರಾದ ರವೀಂದ್ರನಾಥ್ ಅವರ ಪುತ್ರಿ ದೀಕ್ಷಿತಾ ಕೊಯಮತ್ತೂರಿನ ಈಶಾ ಫೌಂಡೇಶನ್‌ನಲ್ಲಿ ಯೋಗ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಗ ಸ್ಪೇನ್ ದೇಶದ ಬಾರ್ಸಿಲೋನ ನಗರದ ಯುವಕ ಜಾನ್‌ವೈಡಲ್ ಪರಿಚಯವಾಗಿ, ಪರಿಚಯ ಪ್ರೇಮಕ್ಕೆ ತಿರುಗಿತ್ತು.

ಇಶಾ ಫೌಂಡೇಶನ್ ಮುಖ್ಯಸ್ಥರಾದ ಸದ್ಗುರು ಜಗ್ಗಿವಾಸುದೇವ್ ಅವರ ಮೂಲಕ ಎರಡೂ ಕುಟುಂಬಗಳ ಮನವೊಲಿಸಿದ ಪರಿಣಾಮವಾಗಿ ಸೋಮವಾರ ಕೆ.ಆರ್.ಪೇಟೆ ಪಟ್ಟಣದಲ್ಲಿ ಸಂಪ್ರದಾಯ ಬದ್ದವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ

ವರ ಜಾನ್‌ವೈಡಲ್ ತಂದೆತಾಯಿಗಳು, ಸಹೋದರ, ಸಹೋದರಿ ಸೇರಿದಂತೆ ವಧುವಿನ ತಂದೆ-ತಾಯಿಗಳು, ಬಂಧುಗಳು, ಹಾಗೂ ಸ್ನೇಹಿತರ ಸಮಕ್ಷಮದಲ್ಲಿ ವಿದೇಶಿ ವರನೊಂದಿಗೆ ಕನ್ನಡದ ಹುಡುಗಿ ಕೆ.ಆರ್.ಪೇಟೆಯ ಹುಡುಗಿ ಧೀಕ್ಷಿತಾ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಬಿಜೆಪಿ ಎರಡನೇ ಪಟ್ಟಿ ಇಂದೇ ಬಿಡುಗಡೆ- ಯಡಿಯೂರಪ್ಪ

Posted by Vidyamaana on 2023-04-12 11:35:12 |

Share: | | | | |


ಬಿಜೆಪಿ ಎರಡನೇ ಪಟ್ಟಿ ಇಂದೇ ಬಿಡುಗಡೆ- ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್​ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಮಂಗಳವಾರ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಹತ್ತಾರು ಬಾರಿ ಯೋಚನೆ ಮಾಡಿಯೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿವುದು.ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ. ಒಂದಿಬ್ಬರು ಬೇರೆ ಕಡೆ ಹೋಗಬಹುದು. ಆದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಈ ಬಾರಿ 125 – 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

Posted by Vidyamaana on 2024-05-27 21:31:18 |

Share: | | | | |


ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರ ನಗರದ ಡೊಂಗರಕೇರಿಯ ಕೆನರಾ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ ಓರ್ವ ನುರಿತ ರಾಜಕಾರಣಿ. ಅವರ ಮಾತುಗಳು ಕೇಳಿದ್ರೆ ಅವರು ಬಾಲ್ಯದಲ್ಲಿ ಸ್ವಯಂ ಸೇವಕ ಆಗಿರಬೇಕು ಅನಿಸುತ್ತದೆ. ಡಾ.ಧನಂಜಯ ಸರ್ಜಿ ಹೊಟ್ಟೆ ಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ. ಅವರು ಮಾಡಿರುವ ಸೇವೆಯ ಕಾರಣಕ್ಕೆ ಜನರು ಅವರನ್ನು ಗುರುತಿಸಿದ್ದಾರೆ ಎಂದರು.

ಸೋಲಿನ ಹೊಣೆ ಹೊತ್ತ ಮುಖ್ಯಮಂತ್ರಿ ರಾಜೀನಾಮೆ

Posted by Vidyamaana on 2023-05-13 17:05:46 |

Share: | | | | |


ಸೋಲಿನ ಹೊಣೆ ಹೊತ್ತ ಮುಖ್ಯಮಂತ್ರಿ ರಾಜೀನಾಮೆ

ಬೆಂಗಳೂರು: ತೀವ್ರ ಆಘಾತಕಾರಿ ಸೋಲಿನ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

ಸೋಲಿನ ಹೊಣೆ ಹೊತ್ತ ಅವರು, ಅಧಿಕಾರ ಇಲ್ಲದೇ ಇದ್ದರೂ ಜನಸೇವೆ ಮಾಡುವುದಾಗಿ ತಿಳಿಸಿದರು. ಜನಸೇವೆಗೆ ತಲೆಬಾಗುವುದಾಗಿ ತಿಳಿಸಿದರು.

Recent News


Leave a Comment: