KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಉಡುಪಿ: ಕಚ್ಚಾ ಬಾಂಬ್ ತಯಾರಿಸುತ್ತಿದ್ದ ಇಬ್ಬರ ಬಂಧನ

Posted by Vidyamaana on 2023-10-15 16:19:02 |

Share: | | | | |


ಉಡುಪಿ: ಕಚ್ಚಾ ಬಾಂಬ್ ತಯಾರಿಸುತ್ತಿದ್ದ ಇಬ್ಬರ ಬಂಧನ

ಉಡುಪಿ :   ಉಡುಪಿ ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಮಂದಾರ್ತಿ ಬಳಿಯ ಹಾಡಿಯಲ್ಲಿ ಹಂದಿ ಬೇಟೆಗಾಗಿ ಇಡಲಾದ ಕಚ್ಚಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಚೆನ್ನಗಿರಿ ಮೂಲದ ಕಾಶಿನಾಥ ಜೆ.ಎಸ್.(30), ಶಿವಮೊಗ್ಗ ಜಿಲ್ಲೆಯ ಸದಾಶಿವಪುರದ ಹಕ್ಕಿಪಿಕ್ಕಿ ಕ್ಯಾಂಪ್ ನಿವಾಸಿ ಯಹೋ ಶಿವು(25) ಬಂಧಿತ ಆರೋಪಿಗಳು. ಇವರು ಕಚ್ಚಾ ಬಾಂಬ್ ಸಾಗಾಟಕ್ಕೆ ಬಳಸಿದ 15 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನ ಹಾಗೂ ಎರಡು ಮೊಬೈಲ್ ಮತ್ತು 10 ಸಾವಿರ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅ.12ರಂದು ಕಾಡು ಹಂದಿ ಬೇಟೆಗಾಗಿ ಇಡಲಾದ ಕಚ್ಚಾ ಬಾಂಬ್ ಕಚ್ಚಿದ ಪರಿಣಾಮ ಸುಧೀರ್ ಪೂಜಾರಿ ಎಂಬವರ ಸಾಕು ನಾಯಿ ಸಾವನ್ನಪ್ಪಿದ್ದು, ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಅಕ್ರಮ ಸ್ಫೋಟಕ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಬಂಧಿತ ಇಬ್ಬರು ಆರೋಪಿಗಳು ಶಿವಮೊಗ್ಗ ಜಿಲ್ಲೆಯ ಸೊರಬ ಹಾಗೂ ಇನ್ನಿತರ ಕಡೆ ಸ್ಥಳೀಯವಾಗಿ ಸಿಗುವ ಸ್ಫೋಟಕ ರಾಸಾಯನಿಕ ವಸ್ತುಗಳನ್ನು ಬಳಸಿ ಕಚ್ಚಾ ಬಾಂಬ್‌ಗಳನ್ನು ತಯಾರಿಸುತ್ತಿದ್ದು, ಅದನ್ನು ಶಿವಮೊಗ್ಗ, ಉಡುಪಿ ಮತ್ತು ದಾವಣಗೆರೆ ಭಾಗಗಳಲ್ಲಿ ಕಾಡು ಹಂದಿಗಳ ಬೇಟೆಗೆ(ಶಿಕಾರಿಗೆ) ಬಳಕೆ ಮಾಡುತ್ತಿ ದ್ದಾರೆನ್ನಲಾಗಿದೆ. ಬೇಟೆಯಾಡಿದ ಕಾಡು ಹಂದಿಯ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. ಈ ಹಿಂದೆ ಬ್ರಹ್ಮಾವರ ಮತ್ತು ಕೋಟ ಭಾಗದಲ್ಲಿ ಕಚ್ಚಾ ಬಾಂಬ್ ಬಳಸಿ ಕಾಡುಹಂದಿ ಶಿಕಾರಿ ಮಾಡಿರುವ ಸಂಶಯವಿರುವ ಕಾರಣ ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

ಇನ್ನು ಜನ್ಮ ದಿನಾಂಕಕ್ಕೆ ಆಧಾರ್ ಕಾರ್ಡ್ ಮಾನ್ಯವಲ್ಲ: ದಾಖಲೆ ಪಟ್ಟಿಯಿಂದ ಆಧಾರ್ ಕೈಬಿಟ್ಟ EPFO

Posted by Vidyamaana on 2024-01-18 08:39:29 |

Share: | | | | |


ಇನ್ನು ಜನ್ಮ ದಿನಾಂಕಕ್ಕೆ ಆಧಾರ್ ಕಾರ್ಡ್ ಮಾನ್ಯವಲ್ಲ: ದಾಖಲೆ ಪಟ್ಟಿಯಿಂದ ಆಧಾರ್ ಕೈಬಿಟ್ಟ EPFO

ನವದೆಹಲಿ: ಜನ್ಮ ದಿನಾಂಕ ಪರಿಷ್ಕರಣೆ ಮತ್ತು ತಿದ್ದುಪಡಿಗೆ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯಿಂದ ಆಧಾರ್ ಅನ್ನು ಉದ್ಯೋಗಿಗಳ ಭವಿಷ್ಯ ನಿತ್ಯ ಸಂಸ್ಥೆ(EPFO) ಕೈ ಬಿಟ್ಟಿದೆ.ಇನ್ನು ಮುಂದೆ ಇಪಿಎಫ್‌ಒ ನಲ್ಲಿ ಜನ್ಮ ದಿನಾಂಕ ಅಪ್ ಡೇಟ್, ತಿದ್ದುಪಡಿಗೆ, ಆಧಾರ್ ಅರ್ಹ ದಾಖಲೆ ಎಲ್ಲ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮಾಹಿತಿ ನೀಡಿದೆ.ಈ ಉದ್ದೇಶಕ್ಕಾಗಿ ಇನ್ನು ಮುಂದೆ ಜನ್ಮ ಪ್ರಮಾಣ ಪತ್ರ, ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಪಾನ್ ಕಾರ್ಡ್, ಪಾಸ್ಪೋರ್ಟ್ ಮೊದಲಾದವುಗಳನ್ನು ದಾಖಲೆಯಾಗಿ ಬಳಸಬಹುದು ಎಂದು ಹೇಳಲಾಗಿದೆ.


EPFO ಗಾಗಿ ಆಧಾರ್ ಇನ್ನು ಮುಂದೆ ಜನ್ಮ ದಿನಾಂಕದ ಪುರಾವೆಯಾಗಿ ಮಾನ್ಯವಾಗಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO), ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಜನವರಿ 16, 2024 ರಂದು ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದು, ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯಿಂದ ಆಧಾರ್ ಅನ್ನು ತೆಗೆದುಹಾಕಲಾಗಿದೆ. ಇದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (UIDAI) ನಿರ್ದೇಶನವನ್ನು ಅನುಸರಿಸಿದೆ ಎಂದು ಹೇಳಲಾಗಿದೆ.ಆಧಾರ್ ಒಂದು ವಿಶಿಷ್ಟ ಗುರುತಾಗಿದ್ದರೂ, ಆಧಾರ್ ಕಾಯಿದೆ 2016 ರ ಪ್ರಕಾರ ಜನ್ಮ ದಿನಾಂಕದ ಪುರಾವೆಯಾಗಿ ಗುರುತಿಸಲಾಗಿಲ್ಲ. UIDAI ಆಧಾರ್ ಗುರುತಿನ ಪರಿಶೀಲನೆಯನ್ನು ಒದಗಿಸಿದೆ, ಜನ್ಮ ಪುರಾವೆಯಲ್ಲ ಎಂದು ಹೇಳಿದೆ.

ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಸಿ ಎಂ ಪತ್ರಿಕಾಗೋಷ್ಠಿ

Posted by Vidyamaana on 2023-12-21 15:49:28 |

Share: | | | | |


ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಸಿ ಎಂ ಪತ್ರಿಕಾಗೋಷ್ಠಿ

ಬೆಂಗಳೂರು; ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕುವ ಪರಿಸ್ಥಿತಿ ಬಂದಿಲ್ಲ. ಕಡ್ಡಾಯವಾಗಿ ಮಾಸ್ಕ್ ಹಾಕಿ ಎಂದು ಹೇಳುತ್ತಿಲ್ಲ. ಸಲಹೆ ಅಷ್ಟೇ. ಇನ್ನು ಸೂಕ್ತ ಕೋವಿಡ್ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.



ಕರ್ನಾಟಕದಲ್ಲಿ ಕೋವಿಡ್ ಕುರಿತು ಗೃಹ ಕಚೇರಿ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. Tac ಜೊತೆ ಚರ್ಚೆ ಮಾಡಿ ಅವರ ಸಲಹೆ ತೆಗೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಮಾಡಿದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗೆ ಸೂಚನೆ ನೀಡಿದ್ದೇನೆ. ಆಕ್ಸಿಜನ್, ಬೆಡ್ ಸಮಸ್ಯೆ ಬರಬಾರದು ಎಂದು ಹೇಳಿದ್ದೇನೆ. ಬೇರೆ ಖಾಯಿಲೆಗಳನ್ನ ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆಗೆ ಸೂಚಿಸಿದ್ದೇನೆ ಎಂದರು.


ಇನ್ನು ಇದೇ ವೇಳೆ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.



60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಹಾಗೇ ಇನ್ನುಳಿದವರೂ ಸಹ ಜನಸಂದಣಿ ಇರುವ ಕಡೆ ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. RTPCR 3,500 ಸೇರಿ ಒಟ್ಟು 5 ಸಾವಿರ ಟೆಸ್ಟ್ ನಿತ್ಯ ಆಗಲಿದ್ದು, ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ಗೆ ಸೂಚಿಸಲಾಗಿದೆ. ಈ ಖಾಯಿಲೆಗೆ ಯಾರೂ ಭಯ, ಆತಂಕ ಪಡುವ ಅಗತ್ಯವಿಲ್ಲ. ಆದ್ರೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು

Shocking : ಆವರಣದಲ್ಲೇ ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಮಗ : ಇಲ್ಲಿದೆ ಭಯಾನಕ ವಿಡಿಯೋ

Posted by Vidyamaana on 2024-07-17 13:26:01 |

Share: | | | | |


Shocking : ಆವರಣದಲ್ಲೇ ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಮಗ : ಇಲ್ಲಿದೆ ಭಯಾನಕ ವಿಡಿಯೋ

ಅಲಿಗಢ: ಪೊಲೀಸ್ ಠಾಣೆ ಆವರಣದಲ್ಲಿಯೇ ಯುವಕನೊಬ್ಬ ತನ್ನ ತಾಯಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ತನ್ನ ಸಂಬಂಧಿಕರೊಂದಿಗಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತನ್ನ ತಾಯಿ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಯುವಕ ಚಿತ್ರಿಸಲು ಪ್ರಯತ್ನಿಸಿದನು.

ಯುವಕ ತನ್ನ ತಾಯಿಗೆ ಬೆಂಕಿ ಹಚ್ಚುವಾಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಯುವಕನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಖೈರ್ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಸಂಬಂಧಿಕರೊಂದಿಗೆ ಆಸ್ತಿ ವಿವಾದದಿಂದಾಗಿ ಮಹಿಳೆ ಮತ್ತು ಆಕೆಯ ಮಗ ಪೊಲೀಸ್ ಠಾಣೆಯನ್ನು ತಲುಪಿದ್ದಾರೆ. ಸ್ವಲ್ಪ ಸಮಯದ ನಂತರ, ಮಹಿಳೆ ಮತ್ತು ಆಕೆಯ ಮಗ ಪೊಲೀಸ್ ಠಾಣೆಯಿಂದ ಹೊರಬಂದು ಆವರಣದೊಳಗಿನ ನಿರ್ಜನ ಸ್ಥಳಕ್ಕೆ ತೆರಳಿದರು. ಮಹಿಳೆ ತನ್ನ ದೇಹದಾದ್ಯಂತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದಳು

ಶಾಸಕರ ಇಂದಿನ ಕಾರ್ಯಕ್ರಮ ಜು 25

Posted by Vidyamaana on 2023-07-24 23:14:15 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 25


ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 25 ರಂದು.

ಬೆಳಿಗ್ಗೆ 10 ಗಂಟೆಗೆ ರೈ ಎಜುಕೇಶನಲ್ ಟ್ರಸ್ಟ್ ನಲ್ಲಿ ಕೆಎಸ್ಆರ್ಟಿಸಿ ಚಾಲಕ ತರಬೇತಿ ಹುದ್ದೆ ಕಾರ್ಯಾಗಾರ


11 ಗಂಟೆಗೆ ಸಾಮೆತ್ತಡ್ಕ ಸರಕಾರಿ ಶಾಲೆಯಲ್ಲಿ ಕೊಠಡಿ ಉದ್ಘಾಟನೆ


12 ಗಂಟೆಗೆ ಸರಕಾರಿ ನೌಕರರ ಸಂಘದ ಮಹಾಸಭೆ ,ಸನ್ಮಾನ


12.30 ಕ್ಕೆ ಎಂ ಆರ್ ಪಿ ಎಲ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ

ಬಟ್ಟೆ ಖರೀದಿಸುವ ನೆಪದಲ್ಲಿ ರೇಷ್ಮೆ ಸೀರೆ ಕಳ್ಳತನ: ನಾಲ್ವರು ಮಹಿಳೆಯರ ಬಂಧನ

Posted by Vidyamaana on 2024-09-04 05:13:32 |

Share: | | | | |


ಬಟ್ಟೆ ಖರೀದಿಸುವ ನೆಪದಲ್ಲಿ ರೇಷ್ಮೆ ಸೀರೆ ಕಳ್ಳತನ: ನಾಲ್ವರು ಮಹಿಳೆಯರ ಬಂಧನ

ಬೆಂಗಳೂರು : ಬಟ್ಟೆ ಖರೀದಿಸುವ ನೆಪದಲ್ಲಿ ಅಂಗಡಿಗಳಿಗೆ ತೆರಳಿ ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ದುಬಾರಿ ಬೆಲೆಯ ರೇಷ್ಮೆ ಸೀರೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದ ವಿಜಯವಾಡದ ಜಾನಕಿ, ಪೊನ್ನುರು ಮಲ್ಲಿ, ಮೇಧ ರಜಿನಿ ಹಾಗೂ ವೆಂಕಟೇಶ್ವರಮ್ಮ ಎಂಬುವರನ್ನು ಬಂಧಿಸಿ, ₹17.5 ಲಕ್ಷ ಮೌಲ್ಯದ 38 ರೇಷ್ಮೆ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಬ್ಬರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೆ.ಪಿ. ನಗರ ಠಾಣಾ ವ್ಯಾಪ್ತಿಯ ಸಿಲ್ಕ್ ಹೌಸ್​ವೊಂದರಲ್ಲಿ ಆಗಸ್ಟ್‌ 25ರಂದು ಸೀರೆ ಖರೀದಿ ನೆಪದಲ್ಲಿ ಬಂದ ಆರು ಮಹಿಳೆಯರು, ದುಬಾರಿ ಬೆಲೆಯ ರೇಷ್ಮೆ ಸೀರೆ ತೋರಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದರು. ಸೀರೆಗಳನ್ನು ತೋರಿಸುವಾಗಲೇ ಸಿಬ್ಬಂದಿಯ ಗಮನ ಬೇರೆಡೆ ಸೆಳೆದರು. ಇಬ್ಬರು ಮಹಿಳೆಯರು ತಾವು ಧರಿಸಿದ್ದ ಒಳ ಉಡುಪಿನಲ್ಲಿ ಎಂಟು ಹೊಸ ಸೀರೆ ಅಡಗಿಸಿಟ್ಟುಕೊಂಡು ಪರಾರಿಯಾದರು.

Recent News


Leave a Comment: