ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


BREAKING: ಸಂಸದ ಪ್ರಜ್ವಲ್ ರೇವಣ್ಣ 6 ದಿನ SIT ಕಸ್ಟಡಿಗೆ.! ನ್ಯಾಯಾಲಯ ಆದೇಶ

Posted by Vidyamaana on 2024-05-31 16:56:09 |

Share: | | | | |


BREAKING: ಸಂಸದ ಪ್ರಜ್ವಲ್ ರೇವಣ್ಣ 6 ದಿನ SIT ಕಸ್ಟಡಿಗೆ.! ನ್ಯಾಯಾಲಯ ಆದೇಶ

ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಮುಖಂಡ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಬಂಧಿಸಲಾಗಿದೆ

ಹಾಸನದ 33 ವರ್ಷದ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಮಾನ ನಿಲ್ದಾಣದಿಂದ ವಶಕ್ಕೆ ತೆಗೆದುಕೊಂಡಿದೆ. ದೇಶವನ್ನು ತೊರೆದ ಸುಮಾರು ಒಂದು ತಿಂಗಳ ನಂತರ ಅವರು ಗುರುವಾರ ಮಧ್ಯರಾತ್ರಿ ಜರ್ಮನಿಯಿಂದ ಭಾರತಕ್ಕೆ ಮರಳಿದರು.

ಕೋರ್ಟ್‌ನಲ್ಲಿ ವಾದ-ಪ್ರತಿ ವಿವಾದ ಆಗಿದ್ದೇನು?

ಈ ನಡುವೆ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು ಕೆಲ ನಿಮಿಷಗಳ ಹಿಂದೆ, ಬೆಂಗಳೂರಿನ 42 ನೇ ಎಸಿಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್‌ ಶಿವಕುಮಾರ್‌ ಅವರ ಮುಂದೆ ಹಾಜರು ಪಡಿಸಿದರು, ಈ ವೇಳೆ ಎಸ್‌ಐಟಿ (SIT) ಪರ ಎಸ್‌ಪಿಪಿ ಅಶೋಕ್‌ ನಾಯಕ್‌ ಅವರು ವಾದ ಮಂಡನೆ ಮಾಡಿದರು. 15 ದಿನಗಳ ಕಾಲ ಎಸ್‌ಐಟಿ (SIT) ಕಸ್ಟಡಿಗೆ ನಿಡುವಂತೆ ಮನವಿ ಮಾಡಿದರು,. ಆದರೆ ನ್ಯಾಯಾಧೀಶರು 6 ದಿನಗಳ ಕಾಲ ಎಸ್‌ಐಟಿ(SIT) ಕಸ್ಟಡಿಗೆ ನೀಡಿ ಆದೇಶವನ್ನು ಹೊರಡಿಸಿದರು

ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬ ದುರಂತ ಅಂತ್ಯ: 41 ಕೋಟಿ ರೂ.ಬಂಗಲೆಯಲ್ಲಿ ಮೂವರ ಶವ ಪತ್ತೆ!

Posted by Vidyamaana on 2023-12-30 22:25:45 |

Share: | | | | |


ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬ ದುರಂತ ಅಂತ್ಯ: 41 ಕೋಟಿ ರೂ.ಬಂಗಲೆಯಲ್ಲಿ ಮೂವರ ಶವ ಪತ್ತೆ!

ವಾಷಿಂಗ್ಟನ್​: ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಮ್ಯಾಸಚೂಸೆಟ್ಸ್‌ನ ಡೋವರ್‌ನಲ್ಲಿರುವ ಅವರ ಬಂಗಲೆಯಲ್ಲಿ ದಂಪತಿ ಮತ್ತು 18 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ರಾಕೇಶ್ ಕಮಲ್ (57), ಟೀನಾ (54) ಮತ್ತು ಅವರ ಪುತ್ರಿ ಅರಿಯಾನಾ (18) ಎಂದು ಗುರುತಿಸಲಾಗಿದೆ. ರಾಕೇಶ್ ಮೃತದೇಹದ ಬಳಿ ಬಂದೂಕು ಪತ್ತೆಯಾಗಿದ್ದು, ಅವರ ಸಾವಿನ ಹಿಂದೆ ಹಲವು ಅನುಮಾನಗಳಿವೆ.ರಾಕೇಶ್ ಕಮಲ್ ದಂಪತಿ ಅಮೆರಿಕದಲ್ಲಿ ಶ್ರೀಮಂತ ಕುಟುಂಬ. ಕಮಲ್ ತಮ್ಮ ಶಿಕ್ಷಣವನ್ನು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ, ಬೋಸ್ಟನ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸ್ಲೋನ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಪೂರ್ಣಗೊಳಿಸಿದರು. ಟೀನಾ ತನ್ನ ಶಿಕ್ಷಣವನ್ನು ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ದೆಹಲಿ ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದರು. ಇಬ್ಬರಿಗೂ ಶಿಕ್ಷಣ ಕ್ಷೇತ್ರದಲ್ಲಿ ಅನುಭವವಿದ್ದ ಕಾರಣ 2016ರಲ್ಲಿ ಎಡುನೋವಾ ಎಂಬ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದರು.


ಆದರೆ ಹಣಕಾಸಿನ ತೊಂದರೆಗಳಿಂದಾಗಿ ಇದು 2021 ರಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿತು. ಕಳೆದ ವರ್ಷ ಸೆಪ್ಟೆಂಬರ್ 22ರಂದು ಶಿಕ್ಷಣ ಸಂಸ್ಥೆಯ ದಿವಾಳಿತನದ ಅರ್ಜಿಯನ್ನೂ ಸಲ್ಲಿಸಲಾಗಿದೆಯಂತೆ. ಇದರ ನಡುವೆ ಕಮಲ್ ದಂಪತಿ 2019 ರಲ್ಲಿ ಪ್ರತಿಷ್ಠಿತರು ವಾಸಿಸುವ ಮ್ಯಾಸಚೂಸೆಟ್ಸ್‌ನಲ್ಲಿ 4 ಮಿಲಿಯನ್ ಡಾಲರ್ ಕೊಟ್ಟು ಬೃಹತ್​ ಬಂಗಲೆ ಖರೀದಿಸಿದ್ದರು. 19 ಸಾವಿರ ಚದರ ಮೀಟರ್ ವಿಸ್ತೀರ್ಣ ಹೊಂದಿರುವ ಈ ಕಟ್ಟಡದಲ್ಲಿ 11 ಮಲಗುವ ಕೋಣೆಗಳಿದ್ದವು. ಈಗ ಆ ಕಟ್ಟಡದ ಮೌಲ್ಯ 5 ಮಿಲಿಯನ್ ಡಾಲರ್ (ರೂ. 41.26 ಕೋಟಿ). ಸದ್ಯ ಈ ಬಂಗಲೆಯಲ್ಲೇ ಕಮಲ್ ದಂಪತಿ ವಾಸವಿದ್ದರು.ಎರಡು ದಿನವಾದರೂ ಕಮಲ್ ದಂಪತಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಅವರ ಸಂಬಂಧಿಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಪೊಲೀಸರು ಕಟ್ಟಡಕ್ಕೆ ತೆರಳಿ ಪರಿಶೀಲಿಸಿದಾಗ ಮೂರು ಶವಗಳು ಪತ್ತೆಯಾಗಿವೆ. ಘಟನೆ ವೇಳೆ ಯಾರೂ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಅವರ ಸಾವಿಗೆ ಕೌಟುಂಬಿಕ ಕಲಹಗಳೇ? ಹಣಕಾಸಿನ ತೊಂದರೆಗಳು ಕಾರಣವೇ? ಅಥವಾ ಹೊರಗಿನವರಿಗೆ ಸಂಬಂಧವಿದೆಯೇ? ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ತನಿಖೆ ನಡೆಸುತ್ತಿದ್ದಾರೆ.

ಭಾರತಕ್ಕೆ 302 ರನ್ ಗಳ ಗೆಲುವು: ಶಮಿ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಲಂಕಾ

Posted by Vidyamaana on 2023-11-02 21:07:57 |

Share: | | | | |


ಭಾರತಕ್ಕೆ 302 ರನ್ ಗಳ  ಗೆಲುವು: ಶಮಿ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಲಂಕಾ

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂ ನಲ್ಲಿ ಗುರುವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಅಬ್ಬರಕ್ಕೆ ನಲುಗಿ ಹೋದ ಶ್ರೀಲಂಕಾ ವಿಶ್ವಕಪ್ ಆಸೆ ಕೈಬಿಟ್ಟಿತು. 302 ರನ್‌ಗಳ ದಾಖಲೆಯ ಜಯ ಸಾಧಿಸಿದ ಭಾರತ ಅಜೇಯ ಯಾತ್ರೆ ಮುಂದುವರಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮತ್ತೆ ವಿರಾಜಮಾನವಾಗಿದೆ. ಲಂಕಾ ಆಡಿದ 7 ಪಂದ್ಯಗಳಲ್ಲಿ 5 ನೇ ಸೋಲು ಅನುಭವಿಸಿತು.

ಭಾರತ ತಂಡ ನೀಡಿದ 358 ರನ್ ಗಳ ದೊಡ್ಡ ಮೊತ್ತ ಬೆನ್ನಟ್ಟಿದ್ದ ಲಂಕಾ ಆರಂಭದಿಂದಲೇ ಭಾರತದ ವೇಗಿಗಳ ದಾಳಿ ತಡೆಯಲಾಗದೆ ನಡುಗಿತು. ಒಬ್ಬರಾದ ಬಳಿಕ ಒಬ್ಬರು ಪೆವಿಲಿಯನ್ ಪರೇಡ್ ನಡೆಸಿದರು. 14ಕ್ಕೆ 6 ವಿಕೆಟ್ ಕಳೆದುಕೊಂಡ ಲಂಕಾ ಕೊನೆಗೂ 55 ರನ್ ಗಳಿಸುವಲ್ಲಿ ಯಶಸ್ವಿಯಾಗಿ ಏಷ್ಯಾ ಕಪ್ ಫೈನಲ್ ನಲ್ಲಿ ಅನುಭವಿಸಿದ ಸೋಲಿನ ಕೆಟ್ಟ ದಾಖಲೆಯಿಂದ ದೂರವಾಯಿತು. ಏಷ್ಯಾ ಕಪ್ ನಲ್ಲಿ ಸಿರಾಜ್ ದಾಳಿಗೆ ನಲುಗಿ 50 ಕ್ಕೆ ಆಲೌಟಾಗಿ ಹೀನಾಯ ಸೋಲು ಅನುಭವಿಸಿತ್ತು. 19.4 ಓವರ್ ಗಳಲ್ಲಿ 55 ರನ್ ಗಳಿಗೆ ಆಲೌಟಾಯಿತು.


ಶಮಿ ಮತ್ತೆ ಮೋಡಿ

ಹಾರ್ದಿಕ್ ಪಾಂಡ್ಯ ಗಾಯಾಳಾಗಿ ತಂಡದಿಂದ ಹೊರ ಬಿದ್ದ ಕಾರಣ ಆಡುವ ಬಳಗದಲ್ಲಿ ಕಾಣಿಸಿಕೊಂಡ ವೇಗಿ ಮೊಹಮ್ಮದ್ ಶಮಿ ವಿಶ್ವಕಪ್ ನಲ್ಲಿ ಮತ್ತೊಮ್ಮೆ ಐದು ವಿಕೆಟ್ ಸಾಧನೆ ಮಾಡಿದರು. 5 ಓವರ್ ಎಸೆದು 1 ಮೇಡನ್ ಸಹಿತ 18 ರನ್ ನೀಡಿ 5 ವಿಕೆಟ್ ಕಬಳಿಸಿ ತಂಡದಲ್ಲಿ ತನ್ನ ಸಾಮರ್ಥ್ಯ ಮೆರೆದರು.


ಶಮಿ ಏಕದಿನ ಇತಿಹಾಸದಲ್ಲಿ ಸತತ ಮೂರು ಬಾರಿ 4 ಪ್ಲಸ್ ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡರು. 2019 ರ ವಿಶ್ವಕಪ್‌ನಲ್ಲಿ ಸತತ ಮೂರು ಇನ್ನಿಂಗ್ಸ್‌ಗಳಲ್ಲಿ 4/40, 4/16 ಮತ್ತು 5/69 ರ ನಂತರ ಇದು ಅವರ ಎರಡನೇ ಸರಣಿಯಾಗಿದೆ. ವಕಾರ್ ಯೂನಿಸ್ ಮಾತ್ರ ಈ ಸಾಧನೆಯನ್ನು ಸಾಧಿಸಿದ್ದರು ಮೂರು ಬಾರಿ (1990 ರಲ್ಲಿ ಎರಡು ಬಾರಿ ಮತ್ತು 1994 ರಲ್ಲಿ ಒಮ್ಮೆ). ವಿಶ್ವಕಪ್‌ನಲ್ಲಿ ಭಾರತದ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮೊಹಮ್ಮದ್ ಶಮಿ ಅವರ ಹೆಸರಿನಲ್ಲಿ ದಾಖಲಾಯಿತು. ಒಟ್ಟು 45 ವಿಕೆಟ್ ಪಡೆದಿದ್ದಾರೆ. ಜಹೀರ್ ಖಾನ್ 44 ವಿಕೆಟ್ ಪಡೆದಿದ್ದರು.

ಮೌಲಾನಾ ಅಬ್ದುಲ್ ರಝಾಕ್ ಉಸ್ತಾದ್ (ಮಲೇಶಿಯಾ ) ನಿಧನ

Posted by Vidyamaana on 2023-05-02 23:26:01 |

Share: | | | | |


ಮೌಲಾನಾ ಅಬ್ದುಲ್ ರಝಾಕ್ ಉಸ್ತಾದ್ (ಮಲೇಶಿಯಾ ) ನಿಧನ


ಪುತ್ತೂರು : ಹಿರಿಯ ವಿದ್ವಾಂಸ, ಕಬಕ ಸಮೀಪದ ನಿವಾಸಿ ಮೌಲಾನಾ ಅಬ್ದುಲ್ ರಝಾಕ್ ಹಾಜಿ ಮಲೇಷಿಯಾ (61) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ತನ್ನ  ಮನೆಯಲ್ಲಿ ನಡೆಯುವ ಮೌಲನಾ ಹಲ್ಕಾ ದ್ಸಿಕ್ರ್  ಆಧ್ಯಾತ್ಮಿಕ ಸಭೆಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಸಹಿತ ದೇಶ ವಿದೇಶಗಳ ಹಲವಾರು ಗಣ್ಯರು ಆಗಮಿಸುತ್ತಿದ್ದರು. ಮಲೇಷ್ಯಾ, ಸಿಂಗಾಪುರ, ದುಬೈ ಸಹಿತ ವಿವಿಧ ರಾಷ್ಟಗಳಲ್ಲಿ ಆಧ್ಯಾತ್ಮಿಕ ಸಭೆಗಳನ್ನು ನಡೆಸಿ ಹಲವಾರು ಅಭಿಮಾನಿ ವರ್ಗವನ್ನು ಹೊಂದಿದ್ದರು. ಕೊಡುಗೈದಾನಿಯೂ ಪರೋಪಕಾರಿಯೂ ಆಗಿದ್ದ ಅವರು ಜನಾನುರಾಗಿದ್ದರು.

ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿಯ ಗೌರವಾಧ್ಯಕ್ಷರಾಗಿ,  10 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಅಭಿಮಾನಿಗಳು, ಬಂದು ಬಳಗವನ್ನು ಅಗಲಿದ್ದಾರೆ.

ಮೃತರ ಮನೆಗೆ ಸಮಸ್ತ ದ ಪ್ರಧಾನ ಕಾರ್ಯದರ್ಶಿ ಶೈಖುನಾ ಆಲಿ ಕುಟ್ಟಿ ಉಸ್ತಾದ್, ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ, ದ.ಕ.ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಬಂಬ್ರಾಣ ಉಸ್ತಾದ್, ಉಸ್ಮಾನುಲ್ ಫೈಝಿ ತೋಡಾರ್, ಸಿ.ಕೆ.ಕೆ. ಮಾಣಿಯೂರ್, ಚೆಂಗಳ ಅಬ್ದುಲ್ಲಾ ಫೈಝಿ, ಮಾಣಿ ದಾರುಲ್ ಎಜುಕೇಶನ್ ಟ್ರಸ್ಟ್ ಸಂಸ್ಥಾಪಕ, ಖಾಝಿ ಹಾಜಿ. ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಸಹಿತ  ಹಲವಾರು ನಾಯಕರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು




ಸುಳ್ಯ: ನೇಣು ಬಿಗಿದು ಹನ್ಸೀಫ್ ಆತ್ಮಹತ್ಯೆ

Posted by Vidyamaana on 2023-08-01 11:32:17 |

Share: | | | | |


ಸುಳ್ಯ: ನೇಣು ಬಿಗಿದು ಹನ್ಸೀಫ್ ಆತ್ಮಹತ್ಯೆ

ಸುಳ್ಯ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ.

ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ.

ಹನ್ಸೀಫ್ ಅವರ ತಾಯಿ ಮತ್ತು ಮನೆಯವರು ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೆ ಇದ್ದನು. ಸಂಜೆ ಅರಂತೋಡಿನ ತನ್ನ ಅಜ್ಜಿಗೆ ಹೋಗಿ ಮಾತನಾಡಿ ಮನೆಗೆ ಬಂದಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು ಬಳಿಕ ತಾಯಿ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ. ಬಳಿಕ ಅರಂತೋಡಿನ ಅಜ್ಜಿ ಮನೆಗೆ ಫೋನ್ ಮಾಡಿ ಹನ್ಸೀಫ್ ಫೋನ್ ರಿಸೀವ್ ಮಾಡುತ್ತಿಲ್ಲ ಎಂದು ಹೇಳಿದರು. ಆತನ ಮಾವ ಬಿಳಿಯಾರಿಗೆ ಬಂದು ನೋಡಿದಾಗ ಈತ ಫ್ಯಾನಿಗೆ ನೇಣು ಹಾಕಿರುವುದು ಕಂಡು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಟೀಲು ದೇವಳದ ಮುಂಭಾಗ ಹೊತ್ತಿ ಉರಿದ ಬಸ್

Posted by Vidyamaana on 2023-05-17 10:52:40 |

Share: | | | | |


ಕಟೀಲು ದೇವಳದ ಮುಂಭಾಗ ಹೊತ್ತಿ ಉರಿದ ಬಸ್

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಳದ ಮುಂಭಾಗದಲ್ಲಿ  ಬಸ್ ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ವರದಿಯಾಗಿದೆ.

ಬೆಂಕಿಗೆ ಆಹುತಿಯಾದ ಬಸ್ ಎಂಆರ್‌ಪಿಯಲ್ ಗೆ ಸೇರಿದ್ದು ಎನ್ನಲಾಗಿದೆ. ಇದು ಕಟೀಲು ದೇವಸ್ಥಾನದ ಮುಂಭಾಗವಾಗಿ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಬಸ್ಸಿನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


Recent News


Leave a Comment: