ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


BREAKING : ಇನ್ಮುಂದೆ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ

Posted by Vidyamaana on 2024-02-21 16:50:51 |

Share: | | | | |


BREAKING : ಇನ್ಮುಂದೆ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.

ಏನಿದೆ ತಿದ್ದುಪಡಿ ಆದೇಶದಲ್ಲಿ..?

ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ.ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ.


ಮುಂದುವರೆದು ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ “(ಇ) ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಆದೇಶಿಸಿದೆ.ಸ್ಪಷ್ಟನೆ ನೀಡಿದ ಸಚಿವರು


ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಈ ಮೊದಲು ಆದೇಶ ಹೊರಡಿಸಿತ್ತು, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದರು.

ಇದು ಪ್ರಿಂಟ್ ಮಿಸ್ಟೇಕ್ ಆಗಿದೆ. ಇದನ್ನು ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಎಂದು ಬದಲಾವಣೆ ಮಾಡಿ ಸರ್ಕಾರ ಮರು ಆದೇಶ ಹೊರಡಿಸಲಿದೆ. ಸಣ್ಣ ತಪ್ಪಿನಿಂದ ಗೊಂದಲ ಆಗಿದೆ.ಎಲ್ಲವನ್ನು ಸರಿ ಮಾಡಿ ಆದೇಶ ಹೊರಡಿಸುತ್ತೇವೆ ಎಂದಿದ್ದರು.

ಪುತ್ತೂರು : ಎ.16 ರಂದು ನಡೆಯಬೇಕಿದ್ದ ಸಿಎಂ,ಡಿಸಿಎಂ ಕಾರ್ಯಕ್ರಮ ಮುಂದೂಡಿಕೆ

Posted by Vidyamaana on 2024-04-13 16:21:25 |

Share: | | | | |


ಪುತ್ತೂರು : ಎ.16 ರಂದು ನಡೆಯಬೇಕಿದ್ದ ಸಿಎಂ,ಡಿಸಿಎಂ ಕಾರ್ಯಕ್ರಮ ಮುಂದೂಡಿಕೆ

ಪುತ್ತೂರಿನಲ್ಲಿ ಎ.16 ರಂದು ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾ‌ರ್ ಅವರ ಚುನಾವಣಾ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ!

Posted by Vidyamaana on 2023-02-21 04:05:24 |

Share: | | | | |


ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ!

ಪುತ್ತೂರು: ವಿಧಾನಸಭಾ ಚುನಾವಣೆಯ ಗುಂಗು ಹೆಚ್ಚುತ್ತಿದ್ದಂತೆ, ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆಯೂ ಬಹುತೇಕ ಸ್ಪಷ್ಟವಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಮಾರ್ಚ್ 24ರಂದೇ ಚುನಾವಣಾ ದಿನಾಂಕ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಚುನಾವಣೆಗಾಗಿ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಆಕಾಂಕ್ಷಿ ಅಭ್ಯರ್ಥಿಗಳಂತೂ ಭರ್ಜರಿಯಾಗಿಯೇ ತಯಾರಾಗುತ್ತಿದ್ದಾರೆ. ಇದರ ನಡುವೆ ರಾಜಕೀಯ ಊಹಾಪೋಹಗಳು, ಅಭ್ಯರ್ಥಿಗಳ ಕುರಿತಾದ ಅಂತೆ-ಕಂತೆಗಳ ಸುದ್ದಿಗಳು ಎಗ್ಗಿಲ್ಲದೆ ಹರಿದಾಡುತ್ತಿದೆ. ಇದಕ್ಕೆಲ್ಲಾ ಮಾರ್ಚ್ 24ರ ಹೊತ್ತಿಗೆ ತೆರೆ ಬೀಳಲಿದೆ.

ಒಂದು ವೇಳೆ ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟವಾದರೆ, ಮುಂದೆ ಅಂತಿಮ ಸಿದ್ಧತೆಗಳಿಗಷ್ಟೇ ಸಮಯ ಮೀಸಲು. ಪ್ರಚಾರದ ಅಂತಿಮ ದಿನ, ನಾಮಪತ್ರ ಸಲ್ಲಿಕೆಯಿಂದ ಹಿಡಿದು, ಚುನಾವಣಾ ಫಲಿತಾಂಶದವರೆಗಿನ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟ ಮಾಡಲಿದೆ. ರಾಜಕೀಯ ಕುರಿತಾಗಿ ಈಗ ಮೂಡಿರುವ ಎಲ್ಲಾ ಪ್ರಶ್ನೆಗಳಿಗೆ, ಕುತೂಹಲಗಳಿಗೆ ಮಾರ್ಚ್ 24ರಂದೇ ತೆರೆಬೀಳುವ ಸಾಧ್ಯಾತೆ ದಟ್ಟವಾಗಿದೆ.

ತುಮಕೂರು ಪ್ರಚಾರ ವೇಳೆ ಡಾ ಜಿ ಪರಮೇಶ್ವರ್​ ಮೇಲೆ ಕಲ್ಲೆಸೆತ ; ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Posted by Vidyamaana on 2023-04-28 13:44:17 |

Share: | | | | |


ತುಮಕೂರು ಪ್ರಚಾರ ವೇಳೆ ಡಾ ಜಿ ಪರಮೇಶ್ವರ್​ ಮೇಲೆ ಕಲ್ಲೆಸೆತ ; ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ತುಮಕೂರು : ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಪ್ರಚಾರ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಡಾ ಜಿ ಪರಮೇಶ್ವರ್​ ಮೇಲೆ ಕಲ್ಲೆಸೆತ ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ಬೆಳಕಿಗೆ ಬಂದಿದೆ.ವಿಧಾನ ಸಭೆ ಚುನಾವಣೆ ಹಿನ್ನೆಲೆ ತುಮಕೂರಿನ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಪ್ರಚಾರ ಕಾರ್ಯದಲ್ಲಿ ಭರ್ಜರಿಯಾಗಿ ತೊಡಗಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನು ಎತ್ತಿಕೊಂಡು ಕುಣಿಯುತ್ತಿದ್ದರು. ಬಳಿ ಹೂವಿನ ಹಾರವನ್ನು ಕಾರ್ಯಕರ್ತರು ಹಾಕೋದಕ್ಕೆ ಮುಂದಾಗುತ್ತಿದ್ದಂತೆ ಗುಂಪಿನಲ್ಲಿದ್ದ ಜನರು ಕಲ್ಲುಗಳನ್ನು ತೂರಾಟ ನಡೆಸಿದ್ದಾರೆತಲೆಗೆ ತಾಗಿದ್ದು, ಗಂಭೀರ ಗಾಯಗೊಂಡು ರಕ್ತಸ್ರಾವಗೊಂಡಿದ್ದು ತಲೆಯ ಮೇಲೆ ಕೈಯನ್ನು ಇಟ್ಟೇ, ನಡೆದುಕೊಂಡು ಬರುವುದನ್ನು ಕಂಡ ಕಾರ್ಯಕರ್ತರು ಓಡೋಡಿ ಬಂದು ನೋಡಿದಾಗ ರಕ್ತ ಹರಿಯುತ್ತಿರೋದನ್ನು ಕಂಡು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ಕರೆದುಕೊಂಡಿದ್ದಾರೆ. ಬಳಿಕ ಅಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಯಾರೋ ದುಷ್ಕರ್ಮಿಗಳಿಂದ ಈ ಕೃತ್ಯ ಎಸಗಲಾಗಿದೆ ಎಂದು ವರದಿಯಾಗಿದೆ.

ವಿಟ್ಲ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಗಾಂಜಾ ಸಹಿತ ಆರೋಪಿ ಸುಳ್ಯ ಮೂಲದ ಕಲಂದರ್ ಶಾ ಪೊಲೀಸ್ ವಶಕ್ಕೆ

Posted by Vidyamaana on 2023-09-17 04:30:01 |

Share: | | | | |


ವಿಟ್ಲ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಗಾಂಜಾ ಸಹಿತ ಆರೋಪಿ  ಸುಳ್ಯ ಮೂಲದ ಕಲಂದರ್ ಶಾ ಪೊಲೀಸ್ ವಶಕ್ಕೆ

ಬಂಟ್ವಾಳ: ತಾಲೂಕಿನ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಶನಿವಾರ ಅಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಹಿತ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. 


ಬಂಧಿತ ಆರೋಪಿಯನ್ನು ಸುಳ್ಯ ಕಸಬಾ ಗ್ರಾಮದ ನಿವಾಸಿ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ಎಂದು ಹೆಸರಿಸಲಾಗಿದೆ. ಕಲಂದರ್ ಶಾ ಶನಿವಾರ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ತನ್ನ ಕೆಎ21 ಬಿ7248 ನೋಂದಣಿ ಸಂಖ್ಯೆಯ ಅಟೋ ರಿಕ್ಷಾದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಿಸುತ್ತಿರುವ ಬಗ್ಗೆ ಖಚಿತ ವರ್ತಮಾನದ ಮೇರೆಗೆ ವಿಟ್ಲ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. 


ಕಾರ್ಯಾಚರಣೆ ವೇಳೆ ಅಟೋ ರಿಕ್ಷಾ ಸಹಿತ ರಿಕ್ಷಾದಲ್ಲಿದ್ದ 1.35 ಲಕ್ಷ ರೂಪಾಯಿ ಮೌಲ್ಯದ 6.110 ಕೆ ಜಿ ತೂಕದ ಗಾಂಜಾ, ಮೊಬೈಲ್ ಫೋನ್, 900 ರೂಪಾಯಿ ನಗದು ಹಾಗೂ ರಿಕ್ಷಾ ಚಾಲಕನ ಚಾಲನಾ ಪರವಾನಗಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,96,900/- ಎಂದು ಅಂದಾಜಿಸಲಾಗಿದೆ. ಆರೋಪಿ ವಿರುದ್ದ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 162/2023 ಕಲಂ 8(ಸಿ),20(ಬಿ) (3) (ಬಿ) ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

ಪುರುಷರಕಟ್ಟೆ: ಹೊತ್ತಿ ಉರಿದ ವಿಶ್ವಸ್ ಹಾರ್ಡ್ ವೇ‌ರ್ ಅಂಗಡಿ

Posted by Vidyamaana on 2024-09-01 07:29:08 |

Share: | | | | |


ಪುರುಷರಕಟ್ಟೆ: ಹೊತ್ತಿ ಉರಿದ ವಿಶ್ವಸ್ ಹಾರ್ಡ್ ವೇ‌ರ್ ಅಂಗಡಿ

ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

Recent News


Leave a Comment: