ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಉಡುಪಿ ಪಡುಕೆರೆ ಬೀಚ್​ನಲ್ಲಿ ಬಿಕಿನಿ ಫೋಟೋಶೂಟ್​!

Posted by Vidyamaana on 2024-08-31 07:59:29 |

Share: | | | | |


ಉಡುಪಿ ಪಡುಕೆರೆ ಬೀಚ್​ನಲ್ಲಿ ಬಿಕಿನಿ ಫೋಟೋಶೂಟ್​!

ಉಡುಪಿ: ಇಲ್ಲಿನ ಪಡುಕೆರೆ ಬೀಚ್​ನಲ್ಲಿ ಬಿಕಿನಿ ಫೋಟೋಶೂಟ್​ ಮಾಡುವುದನ್ನು ತಡೆದ ಪೊಲೀಸರ ಕ್ರಮದ ವಿರುದ್ಧ ಯುವತಿಯೊಬ್ಬಳು ತನ್ನ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾಳೆ. ಆದರೆ, ಯುವತಿಯ ನಡೆಯ ವಿರುದ್ಧವೂ ನೆಟ್ಟಿಗರು ಟೀಕಾ ಪ್ರಹಾರ ನಡೆಸಿದ್ದಾರೆ.ಫೋಟೋಶೂಟ್​ಗೆ ಯತ್ನಿಸಿದ ಯುವತಿಯ ಹೆಸರು ಖ್ಯಾತಿ ಶ್ರೀ ಇನ್​​ಸ್ಟಾಗ್ರಾಂ ಪ್ರೊಫೈಲ್​ ಪ್ರಕಾರ ಈಕೆ ಡಿಜಿಟಲ್​ ಕ್ರಿಯೇಟರ್​. ಪ್ರವಾಸಿ ತಾಣಗಳಲ್ಲಿ ಅಡ್ಡಾಡುವುದು ಈಕೆ ಹವ್ಯಾಸಗಳಲ್ಲಿ ಒಂದು ಎಂಬುದು ಆಕೆಯ ಇನ್​ಸ್ಟಾಗ್ರಾಂ ಪೇಜ್​ ನೋಡಿದರೆ ಗೊತ್ತಾಗುತ್ತದೆ. ಇನ್ನು ಎಕ್ಸ್​ ಖಾತೆಯ ಮಾಹಿತಿ ಪ್ರಕಾರ ಈಕೆ ದೆಹಲಿ ಮೂಲದವಳು. ತಾನೊಬ್ಬ ಸ್ತ್ರೀವಾದಿ, ವರ್ಣವಿರೋಧಿ ಹಾಗೂ ಕೋಮುವಾದದ ಶತ್ರು ಎಂದು ಬರೆದುಕೊಂಡಿದ್ದಾಳೆ. ಅಲ್ಲದೆ, ತನ್ನದೇಯಾದ ಓನ್ಲಿ ಫ್ಯಾನ್ಸ್​ ಖಾತೆಯನ್ನು ಸಹ ಈಕೆ ಹೊಂದಿದ್ದಾಳೆ.

ಬೆಳ್ತಂಗಡಿ : ಡ್ರಾಯಿಂಗ್ ಶಿಕ್ಷಕ ರೂಪೇಶ್ ನ ಅಶ್ಲೀಲ ಮೆಸೇಜ್ ; ಮನನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

Posted by Vidyamaana on 2024-02-12 21:19:40 |

Share: | | | | |


ಬೆಳ್ತಂಗಡಿ : ಡ್ರಾಯಿಂಗ್ ಶಿಕ್ಷಕ ರೂಪೇಶ್ ನ ಅಶ್ಲೀಲ ಮೆಸೇಜ್ ; ಮನನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ, ಫೆ.12: ಡ್ರಾಯಿಂಗ್ ಶಿಕ್ಷಕನೊಬ್ಬ ತನ್ನ ಬಗ್ಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು ಧರ್ಮಸ್ಥಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. 


ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ. 


ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪ್ರಜ್ಞೆ ಕಳಕೊಂಡಿದ್ದಳು.‌ ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ IPC 354D, 509, POSO Act 12 , 75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರಸಭಾ ಉಪಚುನಾವಣೆ : ತೆರವಾದ ಎರಡು ಸ್ಥಾನಗಳಿಗೆ ಇಂದು (ಡಿ. 27)ಚುನಾವಣೆ

Posted by Vidyamaana on 2023-12-27 10:05:49 |

Share: | | | | |


ಪುತ್ತೂರು ನಗರಸಭಾ ಉಪಚುನಾವಣೆ : ತೆರವಾದ ಎರಡು ಸ್ಥಾನಗಳಿಗೆ ಇಂದು (ಡಿ. 27)ಚುನಾವಣೆ

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ (ಡಿ.27) ಉಪಚುನಾವಣೆ ನಡೆಯಲಿದೆ.ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆಗೆ ಕೆಲ ಗಂಟೆಗಳಷ್ಟೇ ಬಾಕಿಯಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಪಕ್ಷೇತರರಾಗಿ ಚುನಾವಣಾ ಕಣದಲ್ಲಿದ್ದಾರೆ.


ವಾರ್ಡ್-11 ನೆಲ್ಲಿಕಟ್ಟೆಯ ಉಪಚುನಾವಣೆಯು ಕೊಂಬೆಟ್ಟು ಶಾಲೆಯಲ್ಲಿ ಹಾಗೂ ವಾರ್ಡ್-1 ರಕ್ತೇಶ್ವರಿ ವಠಾರದ ಉಪಚುನಾವಣೆಯು ಸುದಾನಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.ಅಭ್ಯರ್ಥಿಗಳ ವಿವರ :


ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ, ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಕಣದಲ್ಲಿದ್ದಾರೆ.

ಕಾಂಗ್ರೆಸ್ ನಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ದಿನೇಶ್ ಶೇವಿರೆ ಹಾಗೂ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ದಾಮೋದರ ಭಂಡಾರ್ಕರ್ ಕಣದಲ್ಲಿದ್ದಾರೆ.

ಪುತ್ತಿಲ ಪರಿವಾರದಿಂದ ವಾರ್ಡ್ 11 ರ ಅಭ್ಯರ್ಥಿಯಾಗಿ ಚಿಂತನ್ ಪಿ., ವಾರ್ಡ್ 1 ರ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ. ಕಣದಲ್ಲಿದ್ದಾರೆ.



(ಡಿ.27) ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದ್ದು, ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

ಕೆಲಸ ಕೇಳಿ ಬಳಿ ಬಂದ ಯುವತಿ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಪಂಜಾಬ್ ಆಪ್ ಸಚಿವ: ವೀಡಿಯೊ ವೈರಲ್

Posted by Vidyamaana on 2024-05-27 21:56:03 |

Share: | | | | |


ಕೆಲಸ ಕೇಳಿ ಬಳಿ ಬಂದ ಯುವತಿ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಪಂಜಾಬ್ ಆಪ್ ಸಚಿವ: ವೀಡಿಯೊ ವೈರಲ್

ನವದೆಹಲಿ: ಕೆಲಸ ಕೇಳಿ ಬಳಿ ಬಂದ ಯುವತಿ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಪಂಜಾಬ್ ಆಪ್ ಸಚಿವನ ವಿಡಿಯೋವನ್ನು ಬಿಜೆಪಿ ನಾಯಕ ತಜಿಂದರ್ ಬಗ್ಗಾ ಹಂಚಿಕೊಂಡಿದ್ದಾರೆ.

ವಿಡಿಯೋ ಭಾರಿ ವೈರಲ್ ಆಗಿದ್ದು, ವಿಡಿಯೋ ಹಂಚಿಕೊಂಡ ಬಿಜೆಪಿ, ತಕ್ಷಣವೇ ಸಚಿವರನ್ನು ವಜಾಗೊಳಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಪುತ್ತೂರು : ಯುವ ವಿಜ್ಞಾನಿ ಭರತ್ ಕಲ್ಲರ್ಪೆ ಆತ್ಮಹತ್ಯೆ

Posted by Vidyamaana on 2023-12-14 12:43:20 |

Share: | | | | |


ಪುತ್ತೂರು : ಯುವ ವಿಜ್ಞಾನಿ ಭರತ್ ಕಲ್ಲರ್ಪೆ ಆತ್ಮಹತ್ಯೆ

ಪುತ್ತೂರು : ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. 


ಆರ್ಯಾಪು ಕಲ್ಲರ್ಪೆಯ ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡವರು.  


ಹೈದರಾಬಾದಿನಲ್ಲಿ ವಿಜ್ಞಾನಿಯಾಗಿದ್ದ ಭರತ್ ನಿನ್ನೆ ರಾತ್ರಿ ಮನೆಗೆ ಬಂದಿದ್ದು,  ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ವಿದ್ಯಾಭ್ಯಾಸ ಮುಗಿಸಿ ಕಳೆದ ತಿಂಗಳಷ್ಟೇ ಉದ್ಯೋಗ ಪಡೆದಿದ್ದರು. 


ಮೃತರು ಸಹೋದರ ಪತ್ರಕರ್ತ ಗಣೇಶ್ ಕಲ್ಲರ್ಪೆ ಸಹೋದರಿ ಹಾಗೂ ತಂದೆಯನ್ನು ಅಗಲಿದ್ದಾರೆ.

ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

Posted by Vidyamaana on 2024-04-24 04:30:45 |

Share: | | | | |


ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

ಪುತ್ತೂರು : 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ನಡೆಯುವ ಚಿನ್ನೋತ್ಸವಕ್ಕೆ ಈ ಬಾರಿ ಚಿನ್ನದ ಹಬ್ಬ ” ಮುಳಿಯ ಚಿನ್ನೋತ್ಸವ” ಕ್ಕೆ ಎ.22 ರಂದು ಚಾಲನೆ ನೀಡಲಾಯಿತು.

ಮೇ.20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ನ ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು ಅನಾವರಣಗೊಳಿಸಿದರು.

ಆಭರಣದಲ್ಲಿ ಹೊಸ ವಿನ್ಯಾಸದ ಆಕಾಂಕ್ಷೆಯನ್ನು ಮುಳಿಯ ಪೂರೈಸುತ್ತಿದೆ :


ಮುಳಿಯ ಚಿನ್ನೋತ್ಸವವನ್ನು ಉದ್ಘಾಟಿಸಿದ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಇದರ ಪ್ರೊ. ಡಾ. ಸೌಮ್ಯ ಅವರು ಮಾತನಾಡಿ ನನ್ನ ಸುಮಾರು 30 ವರ್ಷದ ಅನುಭವದಲ್ಲಿ ಮುಳಿಯ ಜ್ಯುವೆಲ್ಸ್ನೊಂದಿಗೆ ಉತ್ತಮ ಸಂಬಂಧವಿದೆ. ಯಾಕೆಂದರೆ ನಮ್ಮ ಕಟುಂಬ ಸಮೇತ ಇಲ್ಲಿನ ಗ್ರಾಹಕರಾಗಿದ್ದೇವೆ. ಇದಕ್ಕೆ ಕಾರಣ ಮುಳಿಯ ನಂಬಿಕೆಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಪ್ರತಿಯೊಬ್ಬರಿಗೂ ನನ್ನ ಆಭರಣ ಇತರರಿಗಿಂತ ಭಿನ್ನ ಹೊಸತನ ಹೊಸ ಶೈಲಿಯಲ್ಲಿರಬೇಕೆಂಬ ಆಸೆ ಇರುತ್ತದೆ. ಅದಕ್ಕೆ ತಕ್ಕಂತೆ ಮುಳಿಯ ಜ್ಯುವೆಲ್ಸ್ ಆ ಹೊಸತನದ ಆಕಾಂಕ್ಷೆಯನ್ನು ಪೂರೈಸುತ್ತಿದೆ ಎಂದ ಅವರು ಇದರ ಜೊತೆಗೆ ಸಿಬ್ಬಂದಿಗಳ ನಗುಮೊಗದ ಸೇವೆ ನಾವು ಚಿನ್ನಾಭರಣ ನೋಡಲು ಬಂದವರು ಖರೀದಿಸುವಷ್ಟರ ಮಟ್ಟಿಗೆ ಹೋಗುತ್ತೇವೆ ಎಂದರು

Recent News


Leave a Comment: