ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಬಿದ್ದು ಸಿಕ್ಕಿದ ಬ್ಯಾಗನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಭರತ್ ಚನಿಲ

Posted by Vidyamaana on 2024-03-21 13:48:33 |

Share: | | | | |


ಬಿದ್ದು ಸಿಕ್ಕಿದ ಬ್ಯಾಗನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಭರತ್ ಚನಿಲ

ಪುತ್ತೂರು : ಪರ್ಲಡ್ಕ ಶಾಲಾ ಬಳಿಯಲ್ಲಿ ಬಿದ್ದು ಸಿಕ್ಕಿದ ದಾಖಲೆ ಹಾಗೂ ನಗದು ಇರುವ ಬ್ಯಾಗ್ ನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.


ಬಲ್ನಾಡು ವಿನಾಯಕ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾಗಿರುವ ಭರತ್ ಚನಿಲ ಅವರಿಗೆ ಇಂದು ಪರ್ಲಡ್ಕ ಶಾಲಾ ಬಳಿಯಲ್ಲಿ ನೌಸೀನ ಎಂಬವರಿಗೆ ಸೇರಿದ ಕೈಚೀಲವು ಬಿದ್ದು ಸಿಕ್ಕಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಕೆಲವು ಮುಖ್ಯ ದಾಖಲೆಗಳು ಹಾಗೂ 37150 ನಗದು ಪತ್ತೆಯಾಗಿದೆ.ಕೈಚೀಲದಲ್ಲಿ ಇದ್ದ ಆಧಾರ್ ಕಾರ್ಡ್ ನಲ್ಲಿರುವ ದೂರವಾಣಿಗೆ ಕರೆಮಾಡಿ, ದಾಖಲೆ ಹಾಗೂ ಹಣ ಕಳೆದುಕೊಂಡ ವಾರಸುದಾರರಿಗೆ ಕೈಚೀಲ ತಲುಪಿಸಿದ್ದಾರೆ.

ನೇಣು ಬಿಗಿದು ನೆಟ್ಟಾರು ನಿವಾಸಿ ಚರಣ್ ಆತ್ಮಹತ್ಯೆ

Posted by Vidyamaana on 2024-05-13 17:08:28 |

Share: | | | | |


ನೇಣು ಬಿಗಿದು  ನೆಟ್ಟಾರು ನಿವಾಸಿ ಚರಣ್ ಆತ್ಮಹತ್ಯೆ

ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ.

ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್ (22) ಆತ್ಮಹತ್ಯೆಗೆ ಶರಣಾದ ಯುವಕ.

ಬಸ್ಸಿನಲ್ಲಿ ಮಹಿಳೆಯ ಜಡೆ ಸವರಿದ ಹಮೀದ್: ಪ್ರಕರಣ ದಾಖಲು

Posted by Vidyamaana on 2023-05-27 10:06:27 |

Share: | | | | |


ಬಸ್ಸಿನಲ್ಲಿ ಮಹಿಳೆಯ ಜಡೆ ಸವರಿದ ಹಮೀದ್: ಪ್ರಕರಣ ದಾಖಲು

ಬಂಟ್ವಾಳ: ಬಸ್ಸಿನ ಎದುರು ಸೀಟಿನಲ್ಲಿ ಕುಳಿತಿದ್ದ ಹೆಂಗಸೊಬ್ಬರ ಜಡೆಯನ್ನು ಸವರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ನಾವೂರು ಸಮೀಪದ ಪಲ್ಲಿಗುಡ್ಡೆ ಮನೆ ನಿವಾಸಿ ಹಮೀದ್ ಆರೋಪಿ.

ಹಿಂದೂ ಜಾಗರಣ ವೇದಿಕೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನಿಂದ ಈ ಬಸ್ಸು ಹೊರಟ್ಟಿದ್ದು, ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ತಲುಪಿದಾಗ ಮಹಿಳೆಯ ಹಿಂಬದಿಯ ಸೀಟಿನಲ್ಲಿ ಕೂತಿದ್ದ ಹಮೀದ್ ಎಂಬಾತ ಮಹಿಳೆಯೋರ್ವರ ಜಡೆಯನ್ನು ಸವರುವ ಹಾಗೂ ಹಿಡಿದೆಳೆಯುವ ಕೃತ್ಯ ನಡೆಸಿದ್ದಾನೆ. ಇದನ್ನು ಗಮನಿಸಿದ ಸಹ ಪ್ರಯಾಣಿಕರು ವಿಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್‌ ಮಾಡಿದ್ದಾರೆ.

ಘಟನೆ ಬೆಳಕಿಗೆ ಬರುತ್ತಲೇ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಬಂಟ್ವಾಳ ನಗರ ಠಾಣೆಗೆ ದೂರು ನೀಡಿ, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಲಾಗಿತ್ತು.

ಮಹಿಳೆಯ ಚಿನ್ನದ ಸರ ಎಗರಿಸಿದ್ದ ಬಿಸಿರೋಡ್ ಮೂಲದ ಜುಬೈರ್ ಸಹಿತ ಕುಖ್ಯಾತ ಕಳ್ಳರಿಬ್ಬರ ಸೆರೆ

Posted by Vidyamaana on 2024-02-24 21:28:02 |

Share: | | | | |


ಮಹಿಳೆಯ ಚಿನ್ನದ ಸರ ಎಗರಿಸಿದ್ದ ಬಿಸಿರೋಡ್ ಮೂಲದ ಜುಬೈರ್ ಸಹಿತ  ಕುಖ್ಯಾತ ಕಳ್ಳರಿಬ್ಬರ ಸೆರೆ

ಮಂಗಳೂರು, ಫೆ.24: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ.

ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತರು.


ಇವರು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು., ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಉಜಿರೆ ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ

Posted by Vidyamaana on 2023-04-04 22:43:37 |

Share: | | | | |


ಉಜಿರೆ ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ

ಬೆಳ್ತಂಗಡಿ: ಯುವತಿಯೊಬ್ಬಳೊಂದಿಗೆ ಬಸ್ಸಿನಲ್ಲಿ ಮಾತನಾಡಿದ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ಎ.4ರಂದು ನಡೆದಿದೆ. ಕಕ್ಕಿಂಜೆ ನಿವಾಸಿ ಸಾಹಿಲ್(22.ವ)ಹಲ್ಲೆಗೊಳಗಾದ ಯುವಕ.ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಸಾಹಿಲ್ ಇಂದು ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಬಸ್ಸಿನಿಂದ ಇಳಿದಿದ್ದಾಳೆ.ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದೀಗ ಹಲ್ಲೆಗೆ ಒಳಗಾಗಿರುವ ಸಾಹಿಲ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದು,

ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಲೋಕ ಸಮರ ಶಾಕಿಂಗ್ ನ್ಯೂಸ್ - ರಾಜ್ಯದಿಂದ ಸ್ಪರ್ಧೆಗಿಳಿತಿದ್ದಾರೆ ಸೆಂಟ್ರಲ್ ಮಿನಿಸ್ಟರ್ಸ್

Posted by Vidyamaana on 2024-01-13 04:36:09 |

Share: | | | | |


ಲೋಕ ಸಮರ ಶಾಕಿಂಗ್ ನ್ಯೂಸ್ - ರಾಜ್ಯದಿಂದ ಸ್ಪರ್ಧೆಗಿಳಿತಿದ್ದಾರೆ ಸೆಂಟ್ರಲ್ ಮಿನಿಸ್ಟರ್ಸ್

ಬೆಂಗಳೂರು ಜನವರಿ 13: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಬಾರಿ ಮ್ಯಾಜಿಕ್ ಮಾಡಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೇಂದ್ರ ನಾಯಕರನ್ನು ಕರ್ನಾಟಕದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಹೌದು.... ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ.ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಿಜೆಪಿ ಬಯಸಿದೆ. ಅದರಂತೆ ನಿರ್ಮಲಾ, ಜೈಶಂಕರ್ ಅವರಂಥವರಿಗೆ ಸೂಕ್ತ ಸೀಟುಗಳನ್ನು ಹುಡುಕಲಾಗುತ್ತಿದೆ. ನಿರ್ಮಲಾ ಅವರು ಕರ್ನಾಟಕ ಮತ್ತು ಜೈಶಂಕರ್ ಬೆಂಗಳೂರು ದಕ್ಷಿಣದಿಂದ ಪ್ರತಿನಿಧಿಸುವ ಚಿಂತನೆಗಳು ನಡೆಯುತ್ತಿವೆ. ಮೂಲಗಳ ಪ್ರಕಾರ, ಪ್ರಸ್ತುತ ಕೇಸರಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಿಂದ ನಿರ್ಮಲಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಜೊತೆಗೆ ಜೈಶಂಕರ್‌ಗೆ ಹಲವು ಆಯ್ಕೆಗಳಿವೆ. ಹಿಂದುತ್ವದ ಫೈರ್‌ಬ್ರಾಂಡ್ ಅನಂತಕುಮಾರ್ ಹೆಗಡೆ ಪ್ರಸ್ತುತ ಸಂಸದರಾಗಿರುವ ಉತ್ತರ ಕನ್ನಡ ಬಿಜೆಪಿಯ ಮತ್ತೊಂದು ಭದ್ರಕೋಟೆಯಾಗಿದ್ದು, ರಾಜತಾಂತ್ರಿಕ-ರಾಜಕಾರಣಿ ಇಲ್ಲಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಪಕ್ಷ ಚಿಂತಿಸುತ್ತಿದೆ. BJP Candidate List: ಲೋಕಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ್ಯಾರು? ಇಲ್ಲಿದೆಸಂಭವನೀಯ ಪಟ್ಟಿ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳು ಜೈಶಂಕರ್‌ಗೆ ಸುರಕ್ಷಿತವಾಗಿರುತ್ತವೆ ಎಂದು ಬಿಜೆಪಿ ಭಾವಿಸಿದೆ. ಹೀಗಾಗಿ ಜೈಶಂಕರ್ ಅವರು ಬೆಂಗಳೂರಿಗೆ ಆಗಾಗ್ಗೆ ಬರುತ್ತಿದ್ದಾರೆ. ಈ ನಗರದೊಂದಿಗೆ ಅವರು ದೀರ್ಘ ವೈಯಕ್ತಿಕ ಒಡನಾಟ ಹೊಂದಿದ್ದಾರೆಂದು ಹೇಳಲಾಗುತ್ತಿದೆ. ಅವರು ಇಲ್ಲಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ಬಿಜೆಪಿಯ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಜೈಶಂಕರ್ ಬೆಂಗಳೂರಿಗೆ ಹಲವು ಬಾರಿ ಭೇಟಿ ನೀಡಿದ್ದರು. ಅವರು ಶಿಕ್ಷಣ ಸಂಸ್ಥೆಗಳು, ಕಬ್ಬನ್ ಪಾರ್ಕ್‌ಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿದ್ದರು ಮತ್ತು ಪ್ರಸಿದ್ಧ ವಿವಿ ಪುರಂ ಫುಡ್ ಸ್ಟ್ರೀಟ್‌ನಲ್ಲಿಯೂ ತಿನ್ನಲು ಅವರು ಹೋಗಿರುವುದಿದೆ. ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಅವರು ಕಳೆದ ವಾರ ಇಲ್ಲಿಗೆ ಬಂದಿದ್ದರು. ಬೆಂಗಳೂರು ದಕ್ಷಿಣಕ್ಕೆ ಕರ್ನಾಟಕ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೆಸರು ಕೇಳಿಬರುತ್ತಿದೆ ಎಂದುಹೇಳಲಾಗುತ್ತಿದೆ. ತೇಜಸ್ವಿನಿ ದಿವಂಗತ ಎಚ್‌ಎನ್ ಅನಂತಕುಮಾರ್ ಅವರು ಪತ್ನಿ, ಅನಂತಕುಮಾರ್ 1996 ರಿಂದ ಸತತ ಆರು ಅವಧಿಗೆ ಬೆಂಗಳೂರು ದಕ್ಷಿಣವನ್ನು ಪ್ರತಿನಿಧಿಸಿದ ಬಿಜೆಪಿ ಧೀಮಂತರು. 2018 ರಲ್ಲಿ ಅವರ ಅಕಾಲಿಕ ಮರಣದ ನಂತರ, ತೇಜಸ್ವಿನಿ ಅವರು 2019 ರ ಲೋಕಸಭಾ ಅಭ್ಯರ್ಥಿಯಾಗಿ ಉತ್ತರಾಧಿಕಾರಿಯಾಗುತ್ತಾರೆ ಎಂದು ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು. ಆದರೆ ಬಿಜೆಪಿಯು ರಾಜಕೀಯವಾಗಿ ಹಸಿರು ನಿಶಾನೆ ತೋರಿದ್ದ ಸೂರ್ಯ ಅವರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿತು.

Recent News


Leave a Comment: