ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಅ.22ರಂದು ನಡೆಯಲಿದೆ ಪುತ್ತೂರುದ ಪಿಲಿಗೊಬ್ಬು

Posted by Vidyamaana on 2023-09-23 13:10:28 |

Share: | | | | |


ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಅ.22ರಂದು ನಡೆಯಲಿದೆ ಪುತ್ತೂರುದ ಪಿಲಿಗೊಬ್ಬು

ಪುತ್ತೂರು : ವಿಜಯ ಸಾಮ್ರಾಟ್  ಪುತ್ತೂರು ಇದರ ಆಶ್ರಯದಲ್ಲಿ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಪುತ್ತೂರುದ ಪಿಲಿಗೊಬ್ಬು  ಕಾರ್ಯಕ್ರಮ  ಅ.22 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ಪಿಲಿಗೊಬ್ಬು ಸ್ಪರ್ಧೆಯು ನಡೆಯಲಿದ್ದು, ಈ ಸ್ಪರ್ಧೆಯ ಯಶಸ್ವಿಗೆ ದರ್ಬೆ ಶ್ರೀರಾಮ ಸೌಧದಲ್ಲಿ ಸಮಿತಿಯನ್ನು ರಚಿಸಲಾಯಿತು.

ಶ್ರೀರಾಮ ಸೌಧದ ಮಾಲಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಸಂಚಾಲಕರಾಗಿ ನಾಗರಾಜ್ ನಡುವಡ್ಕ ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಆಳ್ವ ಕೂರೇಲು, ಉಪಾಧ್ಯಕ್ಷರುಗಳಾಗಿ ಸಂದೀಪ್ ರೈ ನಂಜೆ ಹಾಗೂ ದೇವಿಪ್ರಕಾಶ್ ಭಂಡಾರಿ, ಕಾರ್ಯದರ್ಶಿಗಳಾಗಿ ಸುರೇಶ್ ಪಿದಪಟ್ಲ ಹಾಗೂ ಶರತ್ ಕುಮಾರ್ ಮಾಡಾವು, ಜೊತೆ ಕಾರ್ಯದರ್ಶಿಯಾಗಿ ಶಂಕರ್ ಭಟ್, ಈಶಾನ್ಯ, ಕೋಶಾಧಿಕಾರಿಯಾಗಿ ರಾಜೇಶ್ ಕೆ. ಗೌಡ ಹಾಗೂ ಅಶೋಕ್ ಅಡೂರು, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ರೈ ಹಾಗೂ ಉದಯ್ ಪಾಟಾಳಿ ಬೆಳ್ಳಾರೆ.


ಕಾರ್ಯಕಾರಿ ಸಮಿತಿ ಸದಸ್ಯರಾಗಿ ದಯಾನಂದ ಶೆಟ್ಟಿ ಉಜೈಮಾರ್, ಪ್ರೀತಂಶೆಟ್ಟಿ ಪೆರ್ನೆ, ಆದರ್ಶ್ ಶೆಟ್ಟಿ ಉಪ್ಪಿನಂಗಡಿ, ಪ್ರಮೀತ್ ರಾಜ್ ಕಟ್ಟತ್ತಾರು, ವಿನಯ ರೈ ಕೋರಿಕ್ಕಾರು, ಆನಂದ ತೆಂಕಿಲ, ದಿನೇಶ್ ವಾಸುಕಿ, ಚಂದ್ರಶೇಖರ ರೈ ಸಣಂಗಲ, ಸತೀಶ್ ರೈ ದೇವಿನಗರ, ಕಿಶೋರ್ ಕೊಳಿಗೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ಸಚಿನ್ ಶೆಟ್ಟಿ ನರಿಮೊಗರು, ಸಾಯಿರಾಂ ಬಾಳಿಲ, ಸುಬ್ಬು ಸಂಟ್ಯಾರ್, ವಸಂತ ಕುಮಾರ್ ಪುತ್ತೂರು, ಸತೀಶ್ ಬಲಮುರಿ, ಪ್ರದೀಪ್ ರೈ ಕರ್ನೂರ್, ಪ್ರಶಾಂತ್ ಸವಣೂರು, ಯಶು ಸಂಪ್ಯ, ಯತೀಶ್ ಕುರಿಯ, ಪುನೀತ್ ಕೆಯ್ಯರು, ಹರ್ಷಕುಮಾರ್ ಪುತ್ತೂರು, ಚರಣ್ ರೈ ಮಠ, ಸಚಿನ್ ಸವಣೂರು, ಪವನ್ ಶೆಟ್ಟಿ, ಪ್ರಗತ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮಣಿಪುರ ಬರಲು ಮೋದಿಗೆ ಮನವಿ: ಕುಸ್ತಿಪಟು ವೇದಿಕೆಯಲ್ಲೇ ಕಣ್ಣೀರು

Posted by Vidyamaana on 2024-03-12 11:07:46 |

Share: | | | | |


ಮಣಿಪುರ ಬರಲು ಮೋದಿಗೆ ಮನವಿ: ಕುಸ್ತಿಪಟು ವೇದಿಕೆಯಲ್ಲೇ ಕಣ್ಣೀರು

ಹೊಸದಿಲ್ಲಿ: ಮಣಿಪುರ ಹಿಂಸಾಚಾರ ಕುರಿತಂತೆ ಹಾಗೂ ಅಲ್ಲಿನ ಸಂತ್ರಸ್ತರ ನಿವಾಸಕ್ಕೆ ಒಮ್ಮೆಯಾದರೂ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಣಿಪುರ ಮೂಲದ ಮಿಕ್ಸಡ್‌ ಮಾರ್ಷಲ್‌ ಆರ್ಟ್ಸ್ನ ಕುಸ್ತಿಪಟು ಒಬ್ಬರು ಪಂದ್ಯದ ವೇದಿಕೆಯಲ್ಲೇ ಮನವಿ ಮಾಡಿರುವುದು ವರದಿಯಾಗಿದೆ.


ಮ್ಯಾಟ್ರಿಕ್ಸ್‌ ಫಿಕ್ಸ್‌ ನೈಟ್‌ ಸಂಸ್ಥೆಯಿಂದ ನಡೆಸಲಾಗುವ ಮಾರ್ಷಲ್‌ ಆರ್ಟ್ಸ್ ಪಂದ್ಯದಲ್ಲಿ ಚಾಂಪಿಯನ್‌ ಶಿಪ್‌ ಬೆಲ್ಟ್ ಅನ್ನು ಎದೆಗಿರಿಸಿಕೊಂಡಿದ್ದ ಕುಸ್ತಿಪಟು ಚುಂಗ್ರೆಂಗ್‌ ಕೊರೇನ್‌ ಮಾಧ್ಯಮಗಳ ಮುಂದೆ ಭಾವುಕರಾಗಿ ಮಾತನಾಡಿದ್ದಾರೆ. ” ಮಣಿಪು ರದಲ್ಲಿ ಹಿಂಸಾಚಾರವಾಗಿ ವರ್ಷವಾಗುತ್ತಾ ಬಂದಿದೆ. ಜನರು ದಿನವೂ ಸಾಯುತ್ತಿದ್ದಾರೆ. ಹಲವರು ನಿರಾಶ್ರಿತ ಶಿಬಿರಗಳಲ್ಲಿದ್ದಾರೆ. ಮಕ್ಕಳಿಗೆ ಓದಲಾಗು ತ್ತಿಲ್ಲ.ನಮಗೆ ಭವಿಷ್ಯದ ಚಿಂತೆ ಕಾಡುತ್ತಿದೆ. ಮೋದಿ ಜೀ ನಿಮ್ಮಲ್ಲಿ ಇದು ನನ್ನ ಕಳಕಳಿಯ ವಿನಂತಿ ಒಮ್ಮೆ ಮಣಿಪುರಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಶಾಂತಿ ಸ್ಥಾಪಿಸಿ’ ಎಂದಿದ್ದಾರೆ. ಈ ವಿಡಿಯೋ ವೈರಲ್‌ ಆಗಿದೆ.

ಅಶೋಕ್ ಕುಮಾರ್ ರೈ ಗೆ ಸಿಕ್ತು ಭರ್ಜರಿ ಗೆಲುವಿನ ರುಚಿ

Posted by Vidyamaana on 2023-05-13 08:01:56 |

Share: | | | | |


ಅಶೋಕ್ ಕುಮಾರ್ ರೈ ಗೆ  ಸಿಕ್ತು ಭರ್ಜರಿ ಗೆಲುವಿನ ರುಚಿ

ಪುತ್ತೂರು: ರಾಜ್ಯದ ಗಮನ ಸೆಳೆದಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಶೋಕ್ ಕುಮಾರ್ ರೈ 3351ಮತಗಳಿಂದ  ಜಯಭೇರಿ ಭಾರಿಸಿದ್ದಾರೆ.


ಜನಮತಗಣನೆಯಲ್ಲಿ ಮುನ್ನಡೆ ಸಾಧಿಸಿರುವ ಅಶೋಕ್ ಕುಮಾರ್ ರೈ ಅವರು, ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಿರೀಕ್ಷೆಯಂತೆ, ಪುತ್ತೂರಿನಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ.

ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ನಡುವಿನ ಪೈಪೋಟಿಯ ಲಾಭವನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡಿದೆ. ಬಿಜೆಪಿಯ ಮತಗಳು ವಿಭಜನೆಗೊಂಡಿದ್ದು ಹಾಗೂ ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗಿದ್ದರಿಂದ ಗೆಲುವಿನ ಪತಾಕೆ ಹಾರಿಸಲು ಸಾಧ್ಯವಾಯಿತು. ಅಶೋಕ್ ಕುಮಾರ್ ರೈ ಅವರ ಮುಂದಾಳುತ್ವ ಕಾಂಗ್ರೆಸಿಗೆ ವರದಾನವಾಗಿದೆ.

ಕೇದಾರನಾಥ| ವಾಯುಪಡೆಯ ಮೂಲಕ ಏರ್ ಲಿಫ್ಟ್ ಮಾಡುವಾಗ ಹಗ್ಗ ತುಂಡು; ಹೆಲಿಕಾಪ್ಟರ್ ಪತನ

Posted by Vidyamaana on 2024-09-02 06:55:51 |

Share: | | | | |


ಕೇದಾರನಾಥ| ವಾಯುಪಡೆಯ ಮೂಲಕ ಏರ್ ಲಿಫ್ಟ್ ಮಾಡುವಾಗ ಹಗ್ಗ ತುಂಡು; ಹೆಲಿಕಾಪ್ಟರ್ ಪತನ

ಹೊಸದಿಲ್ಲಿ: ಉತ್ತರಾಖಂಡದ ಕೇದಾರನಾಥದಿಂದ ಗೌಚಾರ್‌ಗೆ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಿ ಸಾಗಿಸುತ್ತಿದ್ದ ದೋಷಪೂರಿತ ಹೆಲಿಕಾಪ್ಟರ್ ಶನಿವಾರ ಬೆಳಗ್ಗೆ ಟೋಯಿಂಗ್ ಹಗ್ಗ ತುಂಡಾಗಿದ್ದರಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಪತನವಾಗಿದೆ ಎಂದು NDTV ವರದಿ ಮಾಡಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಲಿಂಚೋಲಿಯ ಮಂದಾಕಿನಿ ನದಿಯ ಬಳಿ ಪತನಗೊಂಡಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ್ದ ಆಶಿಕ್ ಪೊಲೀಸ್ ವಶಕ್ಕೆ‌

Posted by Vidyamaana on 2023-08-03 12:40:38 |

Share: | | | | |


ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ್ದ ಆಶಿಕ್  ಪೊಲೀಸ್ ವಶಕ್ಕೆ‌

ಉಡುಪಿ: ಮಣಿಪಾಲ ಡಿಸಿ ಕಚೇರಿ‌ ರಸ್ತೆಯಲ್ಲಿ ರೀಲ್ಸ್ ಶೋಕಿಗಾಗಿ ಯದ್ವಾ ತದ್ವಾ ಸ್ಕೂಟರ್ ಚಲಾಯಿಸಿ ಇತರೆ ವಾಹನ ಸವಾರರಿಗೆ ತೊಂದರೆ ನೀಡಿದ್ದ‌‌ ಯುವಕ ನನ್ನು ಮತ್ತು ಸ್ಕೂಟರ್ ವಶಕ್ಕೆ ಪಡೆದು ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪರ್ಕಳ ನಿವಾಸಿ ಆಶಿಕ್(19) ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡುತ್ತಿದ್ದ ಯುವಕ.


ಆಶಿಕ್ ಯದ್ವಾ ತದ್ವಾ ಸ್ಕೂಟಿ ಓಡಿಸಿ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ಕೂಟಿ ಉಡುಪಿಯ ನೋಂದಣಿ ಸಂಖ್ಯೆ ಹೊಂದಿದ್ದು ವಿಡಿಯೋದಲ್ಲಿ ಮಣಿಪಾಲದ ಡಿಸಿ ಆಫೀಸ್ ರಸ್ತೆ ಹಾಗೂ ಉಡುಪಿಯ ಭಾಗದ ರಸ್ತೆಯಲ್ಲಿ ಯದ್ವಾ ತದ್ವಾವಾಗಿ ಸಂಚರಿಸಿರುವುದು ಕಂಡು ಬಂದಿದೆ. ಒಂದು ಕಡೆ ಹೋಗುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆಯುವ ಸಂದರ್ಭವೂ ಎದುರಾಗಿರುವುದು ವಿಡಿಯೋದಲ್ಲಿ ಕಾಣಬಹುದು.

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

Posted by Vidyamaana on 2024-07-22 11:26:34 |

Share: | | | | |


ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಮುಕ್ಕೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



Recent News


Leave a Comment: