ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಸಿರಾಜುದ್ದೀನ್ ಮೃತ್ಯು

Posted by Vidyamaana on 2023-04-21 11:46:41 |

Share: | | | | |


ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಸಿರಾಜುದ್ದೀನ್ ಮೃತ್ಯು

ರಿಯಾದ್: ಸೌದಿ ಅರೇಬಿಯಾದಲ್ಲಿ ಮಸೀದಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಂಗಳೂರಿನ ಯುವಕ ಮೃತಪಟ್ಟಿರೋ ಘಟನೆ ನಡೆದಿದೆ.

ಸಜಿಪದ ಕೋಣೆಕಣಿ ಮೂಲದ ಖಾಸಿಮ್ ಮತ್ತು ಮೈನಬಾ ದಂಪತಿ ಪುತ್ರ ಸಿರಾಜುದ್ದೀನ್ ಮೃತಪಟ್ಟ ಯುವಕ. ಈತ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಕಾಲೇಜು ಅವರಣದಲ್ಲೇ ಬರ್ಬರ ಹತ್ಯೆ

Posted by Vidyamaana on 2024-04-18 20:51:23 |

Share: | | | | |


ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಕಾಲೇಜು ಅವರಣದಲ್ಲೇ ಬರ್ಬರ ಹತ್ಯೆ

ಹುಬ್ಬಳ್ಳಿ, ಏ 18:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಮಗಳನ್ನು  ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.


ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಕಾಲೇಜ್ ಅವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ  ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. 

ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ‌ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಬಂಧಿಸಿದ್ದಾರೆ.

ಸುಳ್ಯ : ವಾಹನ ಅಡ್ಡ ಗಟ್ಟಿ ಯುವಕರಿಂದ ಹಲ್ಲೆ ಆರೋಪ : ಯುವಕ ಆಸ್ಪತ್ರೆಗೆ

Posted by Vidyamaana on 2023-08-12 16:33:37 |

Share: | | | | |


ಸುಳ್ಯ : ವಾಹನ ಅಡ್ಡ ಗಟ್ಟಿ   ಯುವಕರಿಂದ ಹಲ್ಲೆ ಆರೋಪ : ಯುವಕ ಆಸ್ಪತ್ರೆಗೆ

ಸುಳ್ಯ : ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಅನ್ಯಕೋಮಿನ ಯುವತಿಯೊಬ್ಬಳನ್ನು ತನ್ನ ಕಾರಲ್ಲಿ


ಸುತ್ತಾಡಿಸುತ್ತಿದ್ದಾನೆಂದು ಕೆಲವು ಯುವಕರು ಅನುಮಾನದಿಂದ ಹಿಂಬಾಲಿಸುತ್ತಿದ್ದರೆನ್ನಲಾಗಿದೆ.


ಇಂದು ಸಂಜೆ ಆತ ಯುವತಿಯನ್ನು ಸುಳ್ಯಕ್ಕೆ ಬಿಟ್ಟು ತೊಡಿಕಾನ ಕಡೆಗೆ ಬರುತ್ತಿದ್ದಾನೆಂಬ ಮಾಹಿತಿ ದೊರೆತ ಸಂಘಟನೆಯ ಕೆಲವು ಯುವಕರು ಕಾರನ್ನು ಅಡ್ಡಗಟ್ಟಿ


ತಡೆದುನಿಲ್ಲಿಸಿದರೆಂದೂ, ಸುಳ್ಯದಿಂದ ಬಂದ ಸಂಘಡನೆಯ ಇಬ್ಬರು ಯುವಕರು ಆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದರೆಂದೂ ತಿಳಿದುಬಂದಿದೆ.


ಹಲ್ಲೆಯಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ

ಸುಳ್ಯ : ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ: ರಿಕ್ಷಾ ಚಾಲಕ ಬಾಬು ಪಾಟಾಲಿ ಮೃತ್ಯು

Posted by Vidyamaana on 2023-11-06 07:11:18 |

Share: | | | | |


ಸುಳ್ಯ : ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ: ರಿಕ್ಷಾ ಚಾಲಕ ಬಾಬು ಪಾಟಾಲಿ ಮೃತ್ಯು

ಸುಳ್ಯ: ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.


ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು

ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಲೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರುಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸಹ ಪ್ರಯಾಣಿಕ ಗಾಯಗೊಂಡಿದ್ದು,ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಲೇಷ್ಯಾದಲ್ಲಿ ಎರಡು ಮಿಲಿಟರಿ ಹೆಲಿಕಾಪ್ಟ‌ರ್ ಪತನಗೊಂಡು 10 ಮಂದಿ ಸಾವು! ವಿಡಿಯೋ ವೈರಲ್

Posted by Vidyamaana on 2024-04-23 12:13:34 |

Share: | | | | |


ಮಲೇಷ್ಯಾದಲ್ಲಿ ಎರಡು ಮಿಲಿಟರಿ ಹೆಲಿಕಾಪ್ಟ‌ರ್ ಪತನಗೊಂಡು 10 ಮಂದಿ ಸಾವು! ವಿಡಿಯೋ ವೈರಲ್

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪೆರಾಕ್ ನ ಲುಮುಟ್ ನಲ್ಲಿ ಮಂಗಳವಾರ ನಡೆದಿದೆ.ಫ್ರೀ ಮಲೇಷ್ಯಾ ಟುಡೇ ವರದಿಯ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಮತ್ತು ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಅವರ ಸಾವುಗಳನ್ನು ದೃಢಪಡಿಸಿದ್ದಾರೆ ಎಂದು ಹೇಳಿದರು.

ಅಳಿಯನಿಗೆ ಅನೈತಿಕ ಸಂಬಂಧ; ಬಿಯರ್‌ ಕುಡಿಸಿ ಚಾಕುವಿನಿಂದ ಇರಿದು ಕೊಂದ ಮಾವ ಹೈದರ್

Posted by Vidyamaana on 2024-02-24 13:19:36 |

Share: | | | | |


ಅಳಿಯನಿಗೆ ಅನೈತಿಕ ಸಂಬಂಧ; ಬಿಯರ್‌ ಕುಡಿಸಿ ಚಾಕುವಿನಿಂದ ಇರಿದು ಕೊಂದ ಮಾವ ಹೈದರ್

ಹಾವೇರಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಘಟನೆ ನಡೆದಿದೆ. ಸಲೀಂ ದಾದಾಫೀರ್ ಒಲೆಕಾರ್ (29) ಕೊಲೆಯಾದ ವ್ಯಕ್ತಿ.

ಹೈದರ ಚಮನಸಾಬ್ ಹಲಗೇರಿ ಎಂಬುವವನು ಕೊಲೆ ಆರೋಪಿ ಆಗಿದ್ದಾನೆ. ನಗರದ ಹೊರವಲಯಕ್ಕೆ ಸಲೀಂ ಕರೆದು ಹೋದ ಹೈದರ್‌ ಚೆನ್ನಾಗಿ ಬಿಯರ್ ಕುಡಿಸಿದ್ದಾನೆ. ನಂತರ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.ಕೊಲೆ ಮಾಡಿ ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದರು. ಆರೋಪಿ ಹಾಗೂ ಕೊಲೆಯಾದ ವ್ಯಕ್ತಿ ಇಬ್ಬರು ಮಾಗೋಡ ಗ್ರಾಮದವರು ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Recent News


Leave a Comment: