ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಟಾಟಾ ಸುಮೋ - ಬಸ್‌ ನಡುವೆ ಭೀಕರ ಅಪಘಾತ 5 ಮಂದಿ ಸ್ಥಳದಲ್ಲೇ ಸಾವು

Posted by Vidyamaana on 2023-10-16 16:10:38 |

Share: | | | | |


ಟಾಟಾ ಸುಮೋ - ಬಸ್‌ ನಡುವೆ ಭೀಕರ ಅಪಘಾತ 5 ಮಂದಿ ಸ್ಥಳದಲ್ಲೇ ಸಾವು

ಗದಗ ಅ.16: ಕೆಎಸ್​ಆರ್​ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.


ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 




ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್‌ ಕ್ಲಿಯರ್ ಮಾಡಿದರು.


ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ಹಾನಿ ಅದರಲ್ಲಿದ್ದ ಪ್ರಯಾಣಿಕರ ಮುಖ, ದೇಹದ ಭಾಗಗಳು ಗುರುತಿಸದಷ್ಟು ಹಾನಿಯಾಗಿವೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ

ನಾಪತ್ತೆತೆಯಾಗಿದ್ದ ವಿದ್ಯಾರ್ಥಿ ಮಂಗಳೂರಿನಲ್ಲಿ ಪತ್ತೆ

Posted by Vidyamaana on 2024-01-23 15:50:14 |

Share: | | | | |


ನಾಪತ್ತೆತೆಯಾಗಿದ್ದ ವಿದ್ಯಾರ್ಥಿ ಮಂಗಳೂರಿನಲ್ಲಿ ಪತ್ತೆ


ಸುಳ್ಯ ; ಕಾಣಿಯೂರು ಖಾಸಗಿ   ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್   (15 ವ ) ಜ .23 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.

ಬಾಲಕನನ್ನು ಬಂದರು ಪೊಲೀಸರು ಪತ್ತೆ ಹಚ್ಚಿದ್ದು, ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ರೈ ಕೈ ಅಭ್ಯರ್ಥಿಯಾಗಲು ಮತ್ತು ಜಯಶಾಲಿಯಾಗಲು ದೇವರ ಮೊರೆ

Posted by Vidyamaana on 2023-04-03 11:48:56 |

Share: | | | | |


ರೈ ಕೈ ಅಭ್ಯರ್ಥಿಯಾಗಲು ಮತ್ತು ಜಯಶಾಲಿಯಾಗಲು ದೇವರ ಮೊರೆ

ಪುತ್ತೂರು: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಯವರಿಗೆ ಅವಕಾಶ ದೊರೆಯಬೇಕು ಹಾಗೂ ಅಶೋಕ್ ಕುಮಾರ್ ರೈಯವರು ಚುನಾವಣೆಯಲ್ಲಿ ಜಯಗಳಿಸಬೇಕು ಎಂದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

Posted by Vidyamaana on 2023-12-24 12:17:35 |

Share: | | | | |


ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಕಲ್ಪಿಸಿದಂತೆ ಉನ್ನತ ಶಿಕ್ಷಣದೊಂದಿಗೆ ತಡೆರಹಿತ ಏಕೀಕರಣವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತನ್ನ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ(1 nation, 1 student ID) ಉಪಕ್ರಮವನ್ನು ಶೀಘ್ರದಲ್ಲೇ ಶಾಲೆಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಉಪಕ್ರಮದ ಅಡಿಯಲ್ಲಿ, 12-ಅಂಕಿಯ ವಿಶಿಷ್ಟ ID ಯೊಂದಿಗೆ ಸ್ವಯಂಚಾಲಿತ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಕಾರ್ಡ್ ಅನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ಕೇಂದ್ರವು ಉನ್ನತ ಶಿಕ್ಷಣದಲ್ಲಿ ಈ ಉಪಕ್ರಮವನ್ನು ಪ್ರಾರಂಭಿಸಿದೆ ಮತ್ತು ಇದೀಗ 22 ಮಿಲಿಯನ್ ವಿದ್ಯಾರ್ಥಿಗಳಿಗೆ APAAR ID ಗಳನ್ನು ನೀಡಲಾಗುತ್ತಿದೆ.


APAAR, ಆಧಾರ್-ದೃಢೀಕರಿಸಿದ ಐಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬ್ಯಾಂಕ್ ಆಫ್ ಕ್ರೆಡಿಟ್ (ABC) ಗೆ ಗೇಟ್‌ವೇ ಆಗಿದೆ. ಇದು ಕ್ರೆಡಿಟ್‌ಗಳ ಡಿಜಿಟಲ್ ರೆಪೊಸಿಟರಿಯಾಗಿದೆ. ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಬಹುದಾದ ಡಿಜಿಟಲ್ ಲಾಕರ್ ಡಿಜಿಲಾಕರ್ ಅನ್ನು ಪ್ರವೇಶಿಸಲು ಸಹ ಇದನ್ನು ಬಳಸಲಾಗುತ್ತದೆ. APAAR ಅಂತಿಮವಾಗಿ ಪೂರ್ವ ಪ್ರಾಥಮಿಕದಿಂದ PhD ವರೆಗಿನ ವಿದ್ಯಾರ್ಥಿಗಳಿಗೆ ಜೀವಮಾನದ ID ಆಗಿರುತ್ತದೆ.ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ, NEP 2020 ರ ಅಡಿಯಲ್ಲಿ ರಾಜ್ಯಗಳು ಯಾವುದೇ ಉಪಕ್ರಮವನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ.


ಶಾಲೆಗಳಲ್ಲಿ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ಉಪಕ್ರಮದ ಅನುಷ್ಠಾನದ ಕುರಿತು ವಿವಿಧ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಶಿಕ್ಷಣ ಸಚಿವಾಲಯದ ಅಡಿಯಲ್ಲಿರುವ ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆಯ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದರು.


"ಇದು ವಿದ್ಯಾರ್ಥಿಗಳು, ಶಾಲೆಗಳು ಮತ್ತು ಸಂಪೂರ್ಣ ಶಿಕ್ಷಣ ವ್ಯವಸ್ಥೆಗೆ ವಿಷಯಗಳನ್ನು ಸುಲಭಗೊಳಿಸುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪತ್ತೆಹಚ್ಚಲು ಇದು ಅವರಿಗೆ ಸಹಾಯ ಮಾಡುತ್ತದೆ. ಪೋಷಕರು ವರ್ಗಾವಣೆ ಮಾಡಬಹುದಾದ ಉದ್ಯೋಗದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಸಹಾಯ ಮಾಡುತ್ತದೆ. ಅವರು ತಮ್ಮ ಶಾಲೆಗಳನ್ನು ಅಧಿವೇಶನದ ಮಧ್ಯದಲ್ಲಿ ಬದಲಾಯಿಸಿದರೆ, ಇತರ ಶಾಲೆಗಳು ತಮ್ಮ ABC ಖಾತೆಗೆ ಅನನ್ಯ ID ಯನ್ನು ಬಳಸಿಕೊಂಡು ಲಾಗ್ ಇನ್ ಮಾಡುವ ಮೂಲಕ ತಮ್ಮ ಪ್ರಗತಿಯನ್ನು ಪ್ರವೇಶಿಸಬಹುದು ಎಂದು ಹೇಳಿದರು.


ಈ ವರ್ಷ ಕೇಂದ್ರ ಸರ್ಕಾರವು ರಾಷ್ಟ್ರೀಯ ಸಾಲ ಚೌಕಟ್ಟನ್ನು (NCrF) ಪರಿಚಯಿಸಿದೆ. ಅದರಲ್ಲಿ ಶಾಲೆ ಮತ್ತು ವೃತ್ತಿಪರ ಶಿಕ್ಷಣವನ್ನು ಸೇರಿಸಲಾಗಿದೆ. NCrF ಅಡಿಯಲ್ಲಿ, ವಿದ್ಯಾರ್ಥಿಗಳು ಶಾಲೆಯಿಂದಲೇ ಕ್ರೆಡಿಟ್‌ಗಳನ್ನು ಗಳಿಸುತ್ತಾರೆ. ಅದನ್ನು ಅವರ ABC ಖಾತೆಗಳಲ್ಲಿ ಸಂಗ್ರಹಿಸಲಾಗುತ್ತದೆ.

ಪುಣಚಾದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-01 12:26:40 |

Share: | | | | |


ಪುಣಚಾದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಸತ್ಯ,‌ನ್ಯಾಯಕ್ಕೆ ಎಂದೆಂದೂ ಸಾವಿಲ್ಲ, ಯಾರೇ ಆಗಲಿ ಅನ್ಯಾಯ ಮಾಡಿದರೆ ಅದರ ಶಾಪ ತಟ್ಟಿಯೇ ತಟ್ಟುತ್ತದೆ ಎಂಬುದಕ್ಕೆ ಪುತ್ತೂರಿನ ಬಿಜೆಪಿಯೇ ಸಾಕ್ಷಿಯಾಗಿದೆ, ಪುತ್ತೂರು ಬಿಜೆಪಿಗೆ ಬಡವನ ಶಾಪ ತಟ್ಟಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಪುಣಚಾದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. 

ಗೋರಕ್ಷಣೆ ಹೆಸರಿನಲ್ಲಿ ಅಮಾಯಕರ ಮೇಲೆ ನಡೆದ ಹಲ್ಲೆ, ಅವಮಾನ ಅದು ಶಾಪವಾಗಿ ತಟ್ಟಿದೆ. ಸಾಕಲು ಕೊಂಡೊಯ್ಯುವ ದನವನ್ನು ತಡೆದು ಹಲ್ಲೆ ನಡೆಸಿ ಅವರ ಕುಟುಂಬದ ಕಣ್ಣೀರು ಸುರಿಸಿದ್ದ ಬಿಜೆಪಿ ಇಂದು ಅದರ ಪರಿಣಾಮವನ್ನು ಅನುಭವಿಸುತ್ತಿದೆ. ಹಿಂದುತ್ವ ಹೆಸರಿನಲ್ಲಿ ಅದೆಷ್ಟು‌ಮಂದಿಗೆ ಇವರು ಹಲ್ಲೆ ನಡೆಸಿದ್ದಾರೆ ಎಂಬುದನ್ನು ಮೆಲುಕು ಹಾಕಲಿ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಪುತ್ತೂರು ಬಿಜೆಪಿ ಮುಕ್ತವಾಗಲಿದೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸಿ ಕಾಂಗ್ರೆಸ್  ಪ್ರಣಾಳಿಕೆಯನ್ನು ಬಿಡುಗಡೆ‌ಮಾಡಿದೆ. ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು. ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

Posted by Vidyamaana on 2024-04-22 21:31:47 |

Share: | | | | |


Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

ಬೆಂಗಳೂರು; ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.



Leave a Comment: