KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಮೋದಿ ರೀತಿಯ ಜಾಗತಿಕ ನಾಯಕ ಹುಟ್ಟುವುದಕ್ಕೆ ಸಾಧ್ಯವಿಲ್ಲ:ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ

Posted by Vidyamaana on 2024-04-03 16:35:43 |

Share: | | | | |


ಮೋದಿ ರೀತಿಯ ಜಾಗತಿಕ ನಾಯಕ ಹುಟ್ಟುವುದಕ್ಕೆ ಸಾಧ್ಯವಿಲ್ಲ:ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ


ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು : ಸಂಸದ ನಳಿನ್ ಕುಮಾರ್ ಕಟೀಲ್| ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದ್ದು, ಭಾರತೀಯ ಜನತಾ ಪಾರ್ಟಿಯ ಕನಸುಗಳು ನನಸಾಗುವ ಕಾಲಘಟ್ಟದಲ್ಲಿದ್ದು, ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಶತಸಿದ್ಧ ಎಂದು ಹೇಳಿದ ಅವರು, ಕಳೆದ ಬಾರಿ 2.70 ಲಕ್ಷ ಮತಗಳಿಂದ ಸಂಸದನಾಗಿ ನಾನು ಆಯ್ಕೆಯಾಗಿದ್ದು, ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಜತೆಗೆ ಪುತ್ತೂರಿನಲ್ಲಿ 70 ಸಾವಿರ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಡುವ ಪ್ರಯತ್ನವನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.


ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

Posted by Vidyamaana on 2024-08-10 13:56:28 |

Share: | | | | |


ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ವಯನಾಡ್: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು(ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು.

ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕೈ- ಚೂರಲ್ಮಲ-ಪುಂಚಿರಿಮಟ್ಟಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಯಿತು.

ಪುತ್ತೂರು ನಗರಸಭೆ:2ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ- ಅಧ್ಯಕ್ಷರಾಗಿ ಲೀಲಾವತಿ, ಉಪಾಧ್ಯಕ್ಷರಾಗಿ ಬಾಲಚಂದ್ರ

Posted by Vidyamaana on 2024-09-03 16:00:32 |

Share: | | | | |


ಪುತ್ತೂರು ನಗರಸಭೆ:2ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ- ಅಧ್ಯಕ್ಷರಾಗಿ ಲೀಲಾವತಿ, ಉಪಾಧ್ಯಕ್ಷರಾಗಿ ಬಾಲಚಂದ್ರ

ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ಲೀಲಾವತಿ ಅಣ್ಣು ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಲು ಸೂಚನೆಯಂತೆ ಅವರು ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಸ್ಥಳ ಪತ್ತೆಹಚ್ಚಿದ ಬೆಂಗಳೂರು ಪೊಲೀಸರು

Posted by Vidyamaana on 2023-11-26 22:18:38 |

Share: | | | | |


ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಸ್ಥಳ ಪತ್ತೆಹಚ್ಚಿದ ಬೆಂಗಳೂರು ಪೊಲೀಸರು

ಮಂಡ್ಯ, ನ.26: ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಪತ್ತೆಹಚ್ಚಿದ ಆಲೆಮನೆಯಲ್ಲಿ ಲಿಂಗ ಪತ್ತೆ ಮಾತ್ರವಲ್ಲ, ಅಲ್ಲಿ ಹೆಣ್ಣು ಭ್ರೂಣ ಹತ್ಯೆ(Female Feticide) ಕೂಡ ಮಾಡಲಾಗುತ್ತಿತ್ತು ಎಂಬ ವಿಚಾರ ಬಯಲಿಗೆ ಬಂದಿದೆ.


ಅಲೆಮನೆ ಸುತ್ತಲೂ ಕಬ್ಬಿನಗದ್ದೆಗಳು, ಓಡಾಡಲು ಬಂಡಿಜಾಡು. ಆರೋಪಿ ನವೀನ್​ಗೆ ಸಂಬಂಧಿ ಜಾಗ ಇದಾಗಿದೆ. ಕಬ್ಬಿನಗದ್ದರೆ ಒಳಭಾಗದ ಅಲೆಮನೆ ಪಕ್ಕಸಲ್ಲಿ ಭ್ರೂಣ ಪತ್ತೆ ಜೊತೆ ಹೆಣ್ಣು ಭ್ರೂಣ ಹತ್ಯೆ ಕೂಡ ನಡೆಯುತ್ತಿತ್ತು. ಸಣ್ಣ ಸುಳಿವೂ ಬಿಡದೆ ಆಲೆಮನೆಯಲ್ಲಿ ಕಳೆದ 2 ವರ್ಷಗಳಿಂದ ಭ್ರೂಣ ಲಿಂಗ ಪತ್ತೆ ದಂಧೆ ನಡೆಯುತ್ತಿತ್ತು.ಆರೋಪಿಗಳು ಮಧ್ಯವರ್ತಿಗಳಿಂದ ಗರ್ಭಿಣಿಯರ ಸಂಪರ್ಕ‌ ಮಾಡುತ್ತಿದ್ದರು. ಆಲೆಮನೆ ಕೊಠಡಿವೊಂದರಲ್ಲಿ ಸ್ಕ್ಯಾನಿಂಗ್ ಮಷಿನ್ ಇಡಲಾಗಿತ್ತು. ತಮ್ಮ ಸ್ವಂತ ವಾಹನದಲ್ಲಿ ಆಲೆಮನೆಗೆ ಕರೆತಂದು ಸ್ಕ್ಯಾನಿಂಗ್ ನಡೆಸುತ್ತಿದ್ದರು. ಸ್ಕ್ಯಾನಿಂಗ್ ವೇಳೆ ಹೆಣ್ಣು ಭ್ರೂಣ ಎಂದು ತಿಳಿದಾಕ್ಷಣವೇ ಅಬಾರ್ಷನ್ ಮಾಡಲಾಗುತ್ತದೆ.


ಈ ಬಗ್ಗೆ ಆರೋಪಿಗಳು ತನಿಖೆ ವೇಳೆ ಭಯಾನಕ ಸಂಗತಿ ಬಾಯಿ ಬಿಟ್ಟಿದ್ದಾರೆ. ಪೊಲೀಸರು ಈಗಾಗಲೇ ಮಂಡ್ಯದ‌ ನಯನ್, ನವೀನ್ ಹಾಗೂ ಶಿವನಂಜೇಗೌಡ, ವಿರೇಶ್ ಎಂಬವರನ್ನು ಬಂಧಿಸಿದ್ದು, ತನಿಖೆ ಮುಂದುವರಿದಂತೆ ಇಬ್ಬರು ವೈದ್ಯರು ಸೇರಿದಂತೆ ಐವರು ಅರೆಸ್ಟ್ ಆಗಿದ್ದಾರೆ. ಚೆನೈ ಮೂಲದ ಡಾ ತುಳಸಿರಾಮ್, ಮೈಸೂರಿನ ಡಾ. ಚಂದನ್ ಬಲ್ಲಾಳ್, ಚಂದನ್ ಪತ್ನಿ ಮೀನಾ, ಲ್ಯಾಬ್ ಟೆಕ್ನಿಶಿಯನ್ ನಿಸ್ಸಾರ್, ರಿಸಪ್ಷನಿಸ್ಟ್ ರಿಜ್ಮಾ ಬಂಧಿತರಾಗಿದ್ದಾರೆ.

ಫಲಿಸಿದ ಪ್ರಾರ್ಥನೆ | ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಿದ ಕಾಂಗ್ರೆಸ್ | ಕಣಕ್ಕೆ ಧುಮುಕಿದ ಅಶೋಕ್ ಕುಮಾರ್ ರೈ

Posted by Vidyamaana on 2023-04-11 07:41:52 |

Share: | | | | |


ಫಲಿಸಿದ ಪ್ರಾರ್ಥನೆ | ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಿದ ಕಾಂಗ್ರೆಸ್ | ಕಣಕ್ಕೆ ಧುಮುಕಿದ ಅಶೋಕ್ ಕುಮಾರ್ ರೈ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಕೋಡಿಂಬಾಡಿ ಅಶೋಕ್ ಕುಮಾರ್ ರೈ ಅವರ ಹೆಸರು ಅಂತಿಮಗೊಂಡಿದೆ.

ಕೊನೆಕ್ಷಣದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೆಸರು ಕೇಳಿಬಂದಿತ್ತಾದರೂ, ಇದೀಗ ಅಶೋಕ್ ಕುಮಾರ್ ರೈ ಅವರ ಹೆಸರನ್ನೇ ಅಂತಿಮಗೊಳಿಸಲಾಗಿದೆ.

ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಹಾಗೂ ಯುವಕರಿಗೆ ಆದ್ಯತೆ ನೀಡುವ ಸುಳಿವು ಕಾಣುವ ಹಿನ್ನೆಲೆಯಲ್ಲಿ, ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಅಶೋಕ್ ಕುಮಾರ್ ರೈ ಪರವಾಗಿ ಅವರ ಅಭಿಮಾನಿಗಳು ದೇವಸ್ಥಾನ, ಮಸೀದಿ, ಚರ್ಚ್, ಬಸದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವುದನ್ನು ಸ್ಮರಿಸಬಹುದು.

ಅಶೋಕ್ ಕುಮಾರ್ ರೈ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಾರೆ ಎಂದು ವಿದ್ಯಮಾನ ಈ ಹಿಂದೆಯೇ ವರದಿ ಮಾಡಿತ್ತು.

ಗೋದಾಮಿನಲ್ಲಿ ಕಾರ್ಮಿಕರ ಮೇಲೆ ಮೆಕ್ಕೆಜೋಳದ ನಿಟ್ಟು ಕುಸಿತ

Posted by Vidyamaana on 2023-12-04 21:38:52 |

Share: | | | | |


ಗೋದಾಮಿನಲ್ಲಿ ಕಾರ್ಮಿಕರ ಮೇಲೆ ಮೆಕ್ಕೆಜೋಳದ ನಿಟ್ಟು ಕುಸಿತ

ವಿಜಯಪುರ : ನಗರದ ಖಾಸಗಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೆಕ್ಕೆಜೋಳ ತುಂಬಿದ್ದ ಚೀಲ ನಿಟ್ಟು ಕುಸಿದು ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಚೀಲದ ಅಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾತ್ರಿ ವೇಳೆ ಕತ್ತಲಲ್ಲೂ ರಕ್ಷಣ ಕಾರ್ಯಾಚರಣೆ ಮುಂದುವರೆದಿದೆ.



ಸೋಮವಾರ ಸಂಜೆ ಬಿಹಾರ ಮೂಲದ ಕಾರ್ಮಿಕರು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಸ್ ಸಂಸ್ಥೆಯ ಗೋದಾಮಿನಲ್ಲಿ ಧಾನ್ಯಗಳ ಚೀಲಗಳನ್ನು ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದರು.ಈ ಹಂತದಲ್ಲಿ ಚೀಲಗಳ ನಿಟ್ಟು ಜೋಡಿಸುವ ಕೆಲಸದಲ್ಲಿ ತೊಡಗಿದ್ದಾಗಲೇ ಏಕಾಏಕಿ ತುಂಬಿದ ಚೀಲಗಳ ನಿಟ್ಟು ಕುಸಿದು ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಬಿದ್ದಿದೆ. ಇದರಿಂದಾಗಿ ಸುಮಾರು 20-25 ಕಾರ್ಮಿಕರು ಕುಸಿದ ಚೀಲಗಳ ಅಡಿಯಲ್ಲಿ ಸಿಲುಕಿದ್ದು, ಜೀವನ್ಮರಣದೊಂದಿಗೆ ಹೋರಾಟ ನಡೆಸಿದ್ದಾಗಿ ಪ್ರತ್ಯಕ್ಷದರ್ಶಿ ಕಾರ್ಮಿಕರು ವಿವರಿಸಿದ್ದಾರೆ.


ಬಿಹಾರ ಮೂಲದ ಸುಮಾರು 50ಕ್ಕೂ ಹೆಚ್ಚು ಕಾರ್ಮಿಕರು ರಾಜಗುರು ಇಂಡಸ್ಟ್ರೀಸ್ ಅವರ ಫುಡ್ ಪ್ರೊಸೆಸಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಸೋಮವಾರ ಸಂಜೆ ಮೆಕ್ಕೆಜೋಳ ತುಂಬಿದ್ದ ಚೀಲಗಳನ್ನು ನಿಟ್ಟಿನಂತೆ ಜೋಡಿಸುವ ಕೆಲಸದಲ್ಲಿ ತೊಡಗಿದ್ದರು.


ಸ್ಥಳದಲ್ಲಿರುವ ಕಾರ್ಮಿಕರು ಹೇಳುವ ಪ್ರಕಾರ ಮೆಕ್ಕೆಜೋಳದ ಚೀಲಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿದ್ದು, 3-4 ಕಾರ್ಮಿಕರು ರಕ್ಷಣೆಗೆ ಕೂಗಿಕೊಳ್ಳುವ ಧ್ವನಿ ಕೇಳಿಸುತ್ತಿದೆ ಎಂದು ವಿವರಿಸಿದ್ದಾರೆ.ಘಟನೆಯಲ್ಲಿ ಗಾಯಗೊಂಡಿರುವ ಸುಮಾರು 3 ಕಾರ್ಮಿಕರರನ್ನು ನಗರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿದ್ದು, ರಕ್ಷಣಾ ಕಾರ್ಯಾಚರಣೆ ಸಂಸರ್ಭದಲ್ಲಿ ಸೊಂಟದ ವರೆಗೆ ಚೀಲದ ನಿಟ್ಟಿಯಲ್ಲಿ ಸಿಲಕುರಿತು ಮೂವರು ಕಾರ್ಮಿಕರು ಪತ್ತೆಯಾಗಿದ್ದಾರೆ. ಆತಂಕದಲ್ಲಿರುವ ಕಾರ್ಮಿಕರಿಗೆ ಆತ್ಮ ಸ್ಥೈರ್ಯ ತುಂಬುತ್ತಿರುವ ಅಧಿಕಾರಿಗಳು, ಕುಡಿಯಲು ನೀರು ಒದಗಿಸಿದ್ದಾರೆ.ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, 3 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಇರಿಸಸಲಾಗಿದೆ. 5 ಜೆಸಿಬಿ ಯಂತ್ರಗಳ ಸಹಾಯದಿಂದ ಅಪಾಯದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಿಸುವ ಕಾರ್ಯಾಚರಣೆ ನಡೆದಿದೆ.



ರಕ್ಷಿಸಲ್ಪಡುವ ಕಾರ್ಮಿಕರನ್ನು ತುರ್ತಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲು ಸ್ಥಳದಲ್ಲಿ 5 ಅಂಬ್ಯುಲೆನ್ಸ್‍ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಗೋದಾಮುಗಳಲ್ಲಿ ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲ. ಹೀಗಾಗಿ ರಾತ್ರಿ ವೇಳೆ ಕಾರ್ಯಾರಣೆಗೆ ಹೆಚ್ಚಿನ ಬೆಳಕಿಗಾಗಿ 2 ಜನರೇಟರ್ ತರಿಸಲಾಗಿದೆ.


ಕಾರ್ಯಚರಣೆಯಲ್ಲಿ ತೊಡಗಿರುವ ತಂಡಗಳ ಅಧಿಕಾರಿಗಳ ಮಾಹಿತಿ ಪ್ರಕಾರ ಮೂವರು ಕಾರ್ಮಿಕರು ಚೀಲಗಳ ಅಡಿಯಲ್ಲಿ ಸಿಲುಕಿದ್ದರೂ ಸುರಕ್ಷಿತವಾಗಿರುವುದು ಗೋಚರಿಸುತ್ತಿದೆ. ಇನ್ನೂ ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಚೀಲಗಳ ಅಡಿಯಲ್ಲಿ ಇರುವ ಸಾಧ್ಯತೆ. ಪೂರ್ಣ ಕಾರ್ಯಾಚರಣೆಯ ಬಳಿಕವೇ ಅಪಾಯಕ್ಕೆ ಸಿಲುಕಿರುವ ಕಾರ್ಮಿಕರ ನಿಖರ ಸಂಖ್ಯೆ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.


ಅವಘಡ ಸಂಭಸಿರುವ ಗೋದಾಮಿನಲ್ಲಿ ಭಾರಿ ಪ್ರಮಾಣ ಧಾನ್ಯ ತುಂಬಿರುವ ಚೀಲಗಳನ್ನು ನಿಟ್ಟಾಗಿ ಒಟ್ಟಿದ್ದು, ಕಾರ್ಯಾಚರಣೆ ವೇಳೆ ಮತ್ತೆ ಕುಸಿಯುವ ಭೀತಿ ಇದೆ. ಹೀಗಾಗಿ ಮನುಷ್ಯರು ನೇರವಾಗಿ ಕಾರ್ಯಚರಣೇ ನಡೆಸದೆ ಜೆಸಿಬಿ ಯಂತ್ರಗಳ ಸಹಾಯದಿಂದ ಸೂಕ್ಷ್ಮವಾಗಿ ರಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ.


ವಿಷಯ ತಿಳಿಯುತ್ತಲೇ ಸ್ಥಳಕ್ಕೆ ತೆರಳಿ ಬೀಡುಬಿಟ್ಟಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್, ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಮೇಲೆ ನಿಗಾ ವಹಿಸಿದ್ದಾರೆ.

Recent News


Leave a Comment: