ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; ಮೂರು ತಿಂಗಳಲ್ಲಿ ಮೂರನೇ ಸಾವು

Posted by Vidyamaana on 2023-05-09 13:30:27 |

Share: | | | | |


ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; ಮೂರು ತಿಂಗಳಲ್ಲಿ ಮೂರನೇ ಸಾವು

ಭೋಪಾಲ್: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಹೆಣ್ಣು ಚೀತಾ ದಕ್ಷ ಉದ್ಯಾನವನದೊಳಗೆ ಇತರ ಚೀತಾಗಳೊಂದಿಗೆ ಕಾದಾಟದಲ್ಲಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.ಮೂಲಗಳ ಪ್ರಕಾರ, ಪುರುಷ ಚೀತಾಗಳೊಂದಿಗಿನ ಗಲಾಟೆಯಲ್ಲಿ ದಕ್ಷ ಚೀತಾ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಚೀತಾಗಳನ್ನು ತಂದ ನಂತರ ಕುನೋದಲ್ಲಿ ಸಾವನ್ನಪ್ಪಿದ ಮೂರನೇ ಚೀತಾ ಇದಾಗಿದೆ.ಕಳೆದ ವರ್ಷದಿಂದ ಇಪ್ಪತ್ತು ಚೀತಾಗಳನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿದ್ದು, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಎರಡು ಚೀತಾಗಳು ಸಾವನ್ನಪ್ಪಿವೆ.ಸಶಾ ಎಂಬ ಹೆಸರಿನ ಚೀತಾ ಭಾರತಕ್ಕೆ ಕರೆತರುವ ಮೊದಲು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿತ್ತು. ಎಪ್ರಿಲ್‌ನಲ್ಲಿ ಎರಡನೇ ಚೀತಾಉದಯ್ ರಾಷ್ಟ್ರೀಯ ಉದ್ಯಾನವನದಲ್ಲಿ ಅಸ್ವಸ್ಥಗೊಂಡಿದ್ದು ಚಿಕಿತ್ಸೆ ವೇಳೆ ಸಾವನ್ನಪ್ಪಿತ್ತು.ಇಂದು ಮುಂಜಾನೆ, ಕೇಂದ್ರ ಪರಿಸರ ಸಚಿವಾಲಯವು ಜೂನ್‌ ನಲ್ಲಿ ಮಾನ್ಸೂನ್ ಪ್ರಾರಂಭವಾಗುವ ಮೊದಲು ಐದು ಚೀತಾಗಳನ್ನು (ಮೂರು ಹೆಣ್ಣು ಮತ್ತು ಎರಡು ಗಂಡು) ಕ್ವಾರಂಟೈನ್ ನಿಂದ ಶಿಬಿರಗಳಿಂದ ಕುನೋ ರಾಷ್ಟ್ರೀಯ ಉದ್ಯಾನವನದ ಮುಕ್ತ ಪರಿಸ್ಥಿತಿಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ.

ಫಿಲೋಮಿನಾ ಕಾಲೇಜು 4 ನೇ ಗಣೇಶೋತ್ಸವ ಸಂಭ್ರಮ

Posted by Vidyamaana on 2023-09-20 14:02:54 |

Share: | | | | |


ಫಿಲೋಮಿನಾ ಕಾಲೇಜು 4 ನೇ ಗಣೇಶೋತ್ಸವ ಸಂಭ್ರಮ

ಪುತ್ತೂರು: ಕೇಸರಿ ಶಾಲು ಧರ್ಮದ ಸಂಕೇತವಾಗಿದೆ ವಿನಾ ಯಾವುದೇ ರಾಜಕೀಯ ಪಕ್ಷದ ಸೊತ್ತಲ್ಲ, ಕೆಲವರು ಅದು ನಮ್ಮದೇ ಎಂದು ಹೇಳುತ್ತಿದ್ದಾರೆ, ಧರ್ಮದ ಹಾದಿಯಲ್ಲಿ ನಡೆಯುವ ಪ್ರತೀಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಣೆ ಮಾಡುವುದರ ಜೊತೆ ಸಹೋದರ ಧರ್ಮವನ್ನು ಗೌರವಿಸುತ್ತಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಬಳಿ ಸಂತಫಿಲೋಮಿನಾ ವಿದ್ಯಾ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಗಣೇಶೋತ್ಸವ ಸೇವಾ ಟ್ರಸ್ಟ್ , ಫಿಲೋಮಿನ ಕಾಲೇಜು ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಲ್ಲಿ ಪ್ರತೀಯೊಬ್ಬರೂ ಪರಸ್ಪರ ಸಹೋದರರಂತೆ ಬಾಳಬೇಕು, ಇಲ್ಲಿ ಯಾರೂ ಮೇಲೂ ಇಲ್ಲ ಕೀಳೂ ಇಲ್ಲ, ನಮ್ಮ ದೇಹದಲ್ಲಿ ಹರಿಯುವ ರಕ್ತ ಒಂದೇ, ಉಸಿರಾಡುವ ಗಾಳಿಯೂ ಒಂದೇ, ಕುಡಿಯುವ ನೀರೂ ಒಂದೇ ಹೀಗಿರುವಾಗ ನಮ್ಮಲ್ಲಿ ಧರ್ಮದ ಹೆಸರಲ್ಲಿ ಬೇದ ಭಾವ ಯರೂ ಮಾಡಬಾರದು. ಪರಸ್ಪರ ಶಾಂತಿ ಸೌಹಾರ್ಧತೆಯಿಂದ ಬಾಳಿ ಬದುಕಿದರೆ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ಹಿಂಸೆಗೆ ನಾವು ಎಂದೂ ಪ್ರಚೋಧನೆ ಕೊಡಬಾರದು, ಹಿಂಸೆಯಿಂಸ ಸಾಧಿಸಿದ್ದು ಏನೂ ಇಲ್ಲ. ಒಂದೇ ತಾಯಿ ಮಕ್ಕಳಂತೆ ಬಾಳಿ ಬದಕುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವು ಕಾರಣ ಕರ್ತರಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿರುವ ಬಹುತೇಕ ದೇವಸ್ಥಾನ, ದೈವಸ್ಥಾಮ ಮಸೀದಿ, ಚರ್ಚುಗಳು ಸರಕಾರಿ ಜಾಗದಲ್ಲಿದೆ. ಸರಕಾರ ಜಾದಲ್ಲಿರುವ ಆರಾಧನಾ ಸ್ಥಳಗಳನ್ನು ಸಕ್ರಮ ಮಾಡಲು ಅಥವಾ ಮಂದಿರದ ಹೆಸರಿನಲ್ಲಿ ಮಾಡಲು ಇದುವರೆಗೂ ಯಾರೂ ಮುಂದಾಗಿಲ್ಲ. ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ್ದೇನೆ ಮುಂದಿನ ದಿನಗಳಲ್ಲಿ ಅದು ಕಾನೂನಾಗಿ ಕಾರ್ಯರೂಪಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದರು.

ವೇದಿಕೆಯಲ್ಲಿ ಫಿಲೋಮಿನಾ ಪದವಿ ಕಾಲೇಜು ಪ್ರಾಂಶುಪಾಲರಾದ ಆಂಟನಿ ಪ್ರಕಾಶ್ ಮೊಂತೆರೋ, ಪಿಯು ಕಾಲೇಜು ಪ್ರಾಂಶುಪಾಲರಾದ ಅಶೋಕ್ ರಾಯನ್ ಕ್ರಾಸ್ತಾ, ಕಾಲೇಜು ವಾರ್ಡನ್ ರುಪೇಶ್ ತಾವ್ರೋ,  ಕಾರ್ಯದರ್ಶಿ ಹೃದಯ್ ಎಸ್, ಜೊತೆ ಕಾರ್ಯದರ್ಶಿ ರಕ್ಷಾ ಅಂಚನ್, ಟ್ರಸ್ಟ್ ಗೌರವಾಧ್ಯಕ್ಷ ಪ್ರಕಾಶ್ ಮುಕ್ರಂಪಾಡಿ ಉಪಸ್ಥಿತರಿದ್ದರು.ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಕ್ರಂ ಆಳ್ವ ಸ್ವಾಗತಿಸಿದರು.ವರ್ಷಾ ಕಾರ್ಯಕ್ರಮ ನಿರೂಪಿಸಿದರು.

ಪುಣಚ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ರಸ್ತೆ ದುರಸ್ಥಿಗೆ ಶಾಸಕರಿಂದ ಶಿಲಾನ್ಯಾಸ

Posted by Vidyamaana on 2024-03-12 17:07:16 |

Share: | | | | |


ಪುಣಚ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ರಸ್ತೆ ದುರಸ್ಥಿಗೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: ಪುಣಚಾ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ತೆರಳುವ ರಸ್ತೆ ವಿವಾದಕ್ಕೆ ಅನೇಕ ವರ್ಷಗಳ ಬಳಿಕ ತೆರೆ ಎಳೆಯಲಾಗಿದ್ದು ಪುತ್ತೂರು ಶಾಸಕರಾದ ಅಶೋಕ್‌ ರೈ ಯವರ ಸಂಧಾನ ಮಾತುಕತೆ ಸಫಲವಾಗಿದ್ದು ,ಈ ರಸ್ತೆಗೆ ೫೦ ಲಕ್ಷ ರೂ ಅನುದಾನವನ್ನು ಒದಗಿಸಿ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು.


ದೇವಸ್ಥಾನಕ್ಕೆ ತೆರಳುವ ಪ್ರಮುಖ ಪ್ರವೇಶದ್ವಾಋದ ಬಳಿ ಜಾಗದ ತಕರಾರು ಇರುವ ಕಾರಣ ರಸ್ತೆ ಅಭಿವೃದ್ದಿಗೆ ಅಡ್ಡಿಯಾಗಿತ್ತು. ಜಾಗದ ಮಾಲಕರಾದ ಸದಾನಂದ ಎಂಬವರನ್ನು ಕರೆಸಿ ಮಾತುಕತೆ ನಡೆಸಿದ ಶಸಕರು ದೇವಸ್ಥಾನದ ರಸ್ತೆ ಅಭಿವೃದ್ದಿಗೆ ಸಹಕಾರ ಮಾಡುವಂತೆ ಮತ್ತು ಈ ಹಿಂದೆ ಇದೇ ವಿಚಾರದಲ್ಲಿ ಮಾಡಲಾಗಿರುವ ಕೇಸುಗಳನ್ನು ಹಿಂಪಡೆದು ಭಕ್ತರಿಗೆ ನೆರವಾಗಲು ರಸ್ತೆ ವಿವಾದವನ್ನು ಇತ್ಯರ್ಥ ಪಡಿಸಬೇಕು ಮತ್ತು ಈ ವಿಚಾರದಲ್ಲಿ ಸಹಕಾರ ನೀಡುವಂತೆ ಶಾಸಕರು ಕೇಳಿಕೊಂಡಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಜಾಗದ ಮಾಲಿಕ ಸದಾನಂದ ರವರು ಪುತ್ತೂರು ಶಾಸಕರು ಹೇಳುವುದಾದರೆ ನಾನು ಏನು ಮಾಡಲು ಬೇಕಾದರೂ ಸಿದ್ದ ಎಂದು ಹೇಳಿ ಅನೇಕ ವರ್ಷಗಳಿಂದ ತಕರಾರಿನಿಂದ ಬಾಕಿಯಾಗಿದ್ದ ರಸ್ತೆ ಕಾಮಗಾರಿಗೆ ಚಾಲನೆ ಸಿಕ್ಕಂತಾಗಿದೆ.


ಪುಣಚಾ ಗ್ರಾಮಕ್ಕೆ ಒಟ್ಟು ೧. ೯೫ ಕೋಟಿ ರೂ ಕಾಮಗಾರಿಗೆ ಶಾಸಕರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು ದೇವಸ್ಥಾನದ ರಸ್ತೆ ಅಭಿವೃದ್ದಿಯಾಗದೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ವಿವಾದ ಇತ್ಯರ್ಥಪಡಿಸಿ ರಸ್ತೆ ಅಭಿವೃದ್ದಿಗೂ ಅನುದಾನ ಇರಿಸಿದ್ದೇನೆ, ಅದೇ ರೀತಿ ಪುಣಚಾ ಗ್ರಾಮದ ವಿವಿಧ ವಾರ್ಡುಗಳ ರಸ್ತೆಗೂ ಅನುದಾನವನ್ನು ನೀಡಿದ್ದೇನೆ ಎಂದು ಹೇಳಿದ ಶಾಸಕರು ಗ್ಯಾರಂಟಿ ಯೋಜನೆ ಹೇಗೆ ಜನರ ಮನೆ ಮನೆಗೆ ತಲುಪಿದೆಯೋ ಅದೇ ರೀತಿ ಅಭಿವೃದ್ದಿ ಕೆಲಸಗಳು ಪ್ರತೀ ಗ್ರಾಮಗಳಿಗೂ ತಲುಪಿದೆ ಎಂದು ಹೇಳಿದರು.

ದೇವಳದ ರಸ್ತೆಗೆ ಮೊದಲ ಬಾರಿಗೆ ಹಣ ಇಟ್ಟದ್ದು ನಾನು: ಎಂ ಎಸ್ ಮಹಮ್ಮದ್

ನಾನು ಜಿಪಂ ಉಪಾಧ್ಯಕ್ಷನಾಗಿದ್ದ ವೇಳೆ ಈ ದೇವಳದ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಇಟ್ಟಿದ್ದೆ ಆ ಬಳಿಕ ಇಲ್ಲಿಗೆ ಯಾರೂ ಅನುದಾನವನ್ನು ನೀಡಿಲ್ಲ. ಅನುದಾನ ಕೊಟ್ಟ ನನ್ನನ್ನು ದೇವಳದ ವತಿಯಿಂದ ಸನ್ಮಾನವನ್ನು ಮಾಡಿದ್ದರು. ಇದೀಗ ಈ ರಸ್ತೆ ಸಂಪೂರ್ಣ ದುರಸ್ಥಿ ಯಾಗಲಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದರು.ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟ ಸದಾನಂದ ಅವ ರಿಗೆ ಅಭಿನಂದನೆ ಸಲ್ಲಿಸುವುದಾಗಿ ಎಂ ಎಸ್ ಮಹಮ್ಮದ್ ತಿಳಿಸಿದರು.


ಕಾರ್ಯಕ್ರಮದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ  ಡಾಟ. ರಾಜಾರಾಂ ಕೆ.ಬಿ, ಡಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಲ್ವಾ, ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ  ಬೈಲುಗುತ್ತು, ಕಾರ್ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಪರಿಯಾಲ್ತಡ್ಕ ಶಾಲಾ ನಿವೃತ್ತ ಮುಖ್ಯ ಗುರು ಹರ್ಷಶಾಸ್ತ್ರಿ ಮಣಿಲ, ರಮಾನಾಥ್ ವಿಟ್ಲ, ರಶೀದ್ ವಿಟ್ಲ, ನವೀನ್ ರೈ ಚೆಲ್ಯಡ್ಕ, ಅಶ್ರಫ್, ರೈತ ಸೇನಾ ಮುಖಂಡ ಶ್ರೀಧರ ಶೆಟ್ಟಿ ಬೈಲುಗುತ್ತು, ವಲಯ ಕಾರ್ಯದರ್ಶಿ ಮಹಮ್ಮದ್ ಸಿರಾಜ್ ಮನಿಲ, ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಸದಸ್ಯರಾದ ಲಲಿತಾ, ಗಿರಿಜ, ಹರೀಶ್, ಪ್ರಮುಖರಾದ ಪ್ರತಿಭಾ ಶ್ರೀಧರ್ ಶೆಟ್ಟಿ, ರಾಜೇಂದ್ರ ರೈ ಬೈಲುಗುತ್ತು, ನಾರಾಯಣ ಪೂಜಾರಿ ನೀರುಮಜಲು, ಜಯರಾಂ ಶಾಸ್ತ್ರೀ ಮಣಿಲ,  ನಾರಾಯಣ ನಾಯ್ಕ, ಅಲ್ಬರ್ಟ್ ಡಿಸೋಜಾ, ಕ್ಷೇವಿಯರ್ ಡಿಸೋಜಾ, ವೆಂಕಪ್ಪ ಗೌಡ ಅಜೇರು ಮಜಲು, ಕುಂಞಣ್ಣ ರೈ, ಸೀತಾರಾಮ ಪಟಿಕಲ್ಲು, ಮಹಾಲಿಂಗ ನಾಯ್ಕ, ಕರೀಂ ಕುದ್ದುಪದವು, ಮೌರಿಸ್‌ಟೆಲ್ಲಿಸ್, ದಿವಾಕರ ತೋರಣಕಟ್ಟೆ, ಮೋಹನ ಎಚ್, ಶಿವರಾಮ ನಾಯ್ಕ ಪಾವಳುಮೂಲೆ, ಪೂವಪ್ಪ ಎರ್ಮೆತೊಟ್ಟಿ, ಗೋವಿಂದ ನಾಯ್ಕ ಆಜೇರು, ಹಮೀದ್ ಎಂ.ಎಸ್, ಇಸ್ಮಾಯಿಲ್ ಪಾಲಸ್ತಡ್ಕ, ಮುಸ್ತಫ ಗರಡಿ, ಅಬ್ದುಲ್ಲ ಕೆಪಿ, ವಾಮನ ನಾಯ್ಕ, ಹರೀಶ್ ಕುಮಾರ್ ಆಜೇರುಮಜಲು, ಶರೀಫ್ ಕೊಲ್ಲಪದವು, ರಮೇಶ್ ದಂಬೆ, ಶ್ರೀನಿವಾಸ ನಾರ್ಣಡ್ಕ ಸೇರಿದಂತೆ ಹಲವು ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪುಣಚ ವಲಯಾದ್ಯಕ್ಷ ಬಾಲಕೃಷ್ಣ ಪೂಜಾರಿ ಹಿತ್ತಿಲು ಸ್ವಾಗತಿಸಿ, ವಂದಿಸಿದರು.

Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

Posted by Vidyamaana on 2024-04-22 21:31:47 |

Share: | | | | |


Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

ಬೆಂಗಳೂರು; ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

ವಿಟ್ಲ ಯುವಕನ ಮೇಲೆ ಹಲ್ಲೆ ಪ್ರಕರಣ: ದೂರು-ಪ್ರತಿದೂರು ದಾಖಲು

Posted by Vidyamaana on 2024-04-03 12:03:39 |

Share: | | | | |


ವಿಟ್ಲ  ಯುವಕನ ಮೇಲೆ ಹಲ್ಲೆ ಪ್ರಕರಣ: ದೂರು-ಪ್ರತಿದೂರು ದಾಖಲು

ವಿಟ್ಲ: ಅಡ್ಯನಡ್ಕ ಸಮೀಪದ ನಡೆದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಅಡ್ಯನಡ್ಕ ನಿವಾಸಿ ಮಹಮ್ಮದ್ ಅಲಿ ಎ (36)ಎಂಬವರ ದೂರಿನಂತೆ ಮಧ್ಯಾಹ್ನ, ಗಣೇಶ್ ಎಂಬಾತನು ಮನೆಯ ಬಳಿಗೆ ಬಂದು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದು, ಅವ್ಯಾಚವಾಗಿ ಬೈದು, ತಾನು ತಂದಿದ್ದ ಕತ್ತಿಯಿಂದ ಹಲ್ಲೆ ನಡೆಸಿರುತ್ತಾನೆ. ಈ ವೇಳೆ ಸ್ಥಳೀಯರು ಬರುವುದನ್ನು ಕಂಡು ಆರೋಪಿಯು ಜೀವ ಬೆದರಿಕೆ ಹಾಕಿ ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಚೈತ್ರಾ ಕುಂದಾಪುರ ವಂಚನೆ ಕೇಸ್: ಉದ್ಯಮಿ ಗೋವಿಂದಬಾಬು ಪೂಜಾರಿಗೆ ಸಿಸಿಬಿ ಬುಲಾವ್

Posted by Vidyamaana on 2023-09-18 11:48:14 |

Share: | | | | |


ಚೈತ್ರಾ ಕುಂದಾಪುರ ವಂಚನೆ ಕೇಸ್: ಉದ್ಯಮಿ ಗೋವಿಂದಬಾಬು ಪೂಜಾರಿಗೆ ಸಿಸಿಬಿ ಬುಲಾವ್

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ದೂರುದಾರ ಗೋವಿಂದ ಬಾಬು ಪೂಜಾರಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದಾರೆ.


ಸಿಸಿಬಿ ಪೊಲೀಸರು ಗೋವಿಂದ ಬಾಬು ಬಳಿ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ.  ಹಣದ ಮೂಲವನ್ನು ತಿಳಿಸದಿದ್ರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ ಎದುರಾಗಲಿದೆ. ಈಗಾಗಲೇ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ವಿಜಯನಗರದ ನಿವಾಸ, ಕೆಕೆ ಗೆಸ್ಟ್ ಹೌಸ್, ಗೋವಿಂದ ಬಾಬು ಪೂಜಾರಿ ಕಚೇರಿ ಸೇರಿ ಹಲವೆಡೆ ಮಹಜರು ನಡೆಸಲಾಗಿದೆ. ಸದ್ಯ ಐದು ಕೋಟಿ ಮೂಲದ ಹುಡುಕಾಟದಲ್ಲಿ ಸಿಸಿಬಿ ಇದೆ

Recent News


Leave a Comment: