ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಚಪ್ಪ್ ಡಿ ಕೆಲಸಕ್ಕೆ ಬ್ರೇಕ್ ಹಾಕಿದ‌ ಶಾಸಕರು: ವಿಟ್ಲದಲ್ಲಿ ರಸ್ತೆ ಕಾಮಗಾರಿ ಕಳಪೆ

Posted by Vidyamaana on 2024-01-15 16:57:42 |

Share: | | | | |


ಚಪ್ಪ್ ಡಿ ಕೆಲಸಕ್ಕೆ ಬ್ರೇಕ್ ಹಾಕಿದ‌ ಶಾಸಕರು: ವಿಟ್ಲದಲ್ಲಿ ರಸ್ತೆ ಕಾಮಗಾರಿ  ಕಳಪೆ

ಪುತ್ತೂರು: ರೋಡ್ ರೋಲರ್ ಬಳಸದೆ ರಸ್ತೆಗೆ ಜಲ್ಲಿ ಹಾಕಿ ಚಪ್ ಡಿ ( ತೇಪೆ ) ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ವಿಟ್ಲ ಬೊಬ್ಬೆಕೇರಿಯಲ್ಲಿ ನಡೆದಿದೆ.

ಮಂಗಳೂರಿನಿಂದ‌ವಿಟ್ಲಕ್ಕೆ ತೆರಳುತ್ತಿದ್ದ ವೇಳೆ ಕಾರ್ಮಿಕರು ಹಾರೆಯ ಮೂಲಕ ರಸ್ತೆ ಹೊಂಡಗಳಿಗೆ ಜಲ್ಲಿ‌ಮಿಶ್ರಣವನ್ನು ಕೈಯಿಂದ ಗಟ್ಟಿ ಮಾಡುತ್ತಿದ್ದರು. ಇದನ್ನು ನೋಡಿದ ಶಾಸಕರು ಕಾರು ನಿಲ್ಲಿಸಿ ಕಾಮಗಾರಿ ಮಾಹಿತಿ ಪಡೆದರು. ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಪ್ರೀತಮ್ ರಿಗೆ ಕರೆ ಮಾಡಿ ಕಳಪೆ ಕಾಮಗಾರಿ ಅಥವಾ ಚಪ್ಪ್ ಡಿ ಕೆಲಸ‌ಮಾಡುವುದು ಬೇಡ. ರೋಡ್ ರೋಲರ್ ಬಳಸಿ ಗುಣಮಟ್ಟದ ಜಲ್ಲಿ ಡಾಮಾರು ಬಳಸಿ ಕಾಮಗಾರಿ ನಡೆಸಿ ಎಂದು ಸೂಚನೆ ನೀಡಿದರು.‌ಶಾಸಕರ ಎಚ್ಚರಿಕೆಯ ಬಳಿಕ‌ಕಾಮಗಾರಿ ಸ್ಥಗಿತಗೊಳಿಸಲಾಗಿದೆ

ಮಂಗಳೂರು| ವಕೀಲೆಗೆ ಮಾನಸಿಕ ಕಿರುಕುಳ: ಬಸ್ ಚಾಲಕ ಕಂಡೆಕ್ಟರ್ ಬಂಧನ

Posted by Vidyamaana on 2023-10-13 20:00:19 |

Share: | | | | |


ಮಂಗಳೂರು|  ವಕೀಲೆಗೆ ಮಾನಸಿಕ ಕಿರುಕುಳ: ಬಸ್ ಚಾಲಕ ಕಂಡೆಕ್ಟರ್ ಬಂಧನ

ಮಂಗಳೂರು: ವಕೀಲೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರ ಮುಂದೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕ ಮತ್ತು ಚಾಲಕ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಭರತ್ ಸಾಲಿಯ್ಯಾನ್ ಮತ್ತು ಶಶಿಕುಮಾರ್ ಬಂಧಿತರು. ಇಂದು ಬೆಳಿಗ್ಗೆ ಮಂಗಳೂರು ಪೂರ್ವ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಮಧ್ಯಾಹ್ನ ಮಾನ್ಯ 6 ನೇ ಜೆ ಎಂ ಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇಬ್ಬರಿಗೂ ಮಂಗಳೂರು ಆರನೇ ಜೆಎಂಎಫ್ ಸಿ ನ್ಯಾಯಾಲಯ 14ದಿನ ನ್ಯಾಯಾಂಗ ಬಂಧನ ವಿಧಿಸಿದೆ.



ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳುವ ರೂಟ್ ನಂಬರ್ 19, ಆಶೆಲ್ ಬಸ್ ನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಬಸ್ ಡ್ರೈವರ್ ಎಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಸಾರ್ವಜನಿಕರ ಎದುರೇ ”ನೀಮ್ಮ ಸಮುದಾಯದ ಹೆಂಗಸರಿಗೆ ತುಂಬಾ ಅಹಂಕಾರ, ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತಂತೆ ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು

ಹೌದು! ಇದು ಪುತ್ತೂರು ಇನ್ನು ಕೇಳುವಂತಿಲ್ಲ ಇದೇನು ಮಿತ್ತೂರೇ? ಕಿತ್ತೂರೇ? ಹತ್ತೂರೇ? ಪುತ್ತೂರೇ? ಎಂದು | ಸ್ವಾಗತ ಗೋಪುರ ನವೀಕರಿಸುತ್ತಿರುವ ನಗರಸಭೆ

Posted by Vidyamaana on 2023-02-19 14:38:18 |

Share: | | | | |


ಹೌದು! ಇದು ಪುತ್ತೂರು ಇನ್ನು ಕೇಳುವಂತಿಲ್ಲ ಇದೇನು ಮಿತ್ತೂರೇ? ಕಿತ್ತೂರೇ? ಹತ್ತೂರೇ? ಪುತ್ತೂರೇ? ಎಂದು | ಸ್ವಾಗತ ಗೋಪುರ ನವೀಕರಿಸುತ್ತಿರುವ ನಗರಸಭೆ

ಪುತ್ತೂರು: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಮುರ ಸಮೀಪ ಎದುರಾಗುವ ಸ್ವಾಗತ ಗೋಪುರದ ನವೀಕರಣಕ್ಕೆ ಪುತ್ತೂರು ನಗರಸಭೆ ಮುಂದಾಗಿದೆ.

ಪುತ್ತೂರಿಗೆ ಸ್ವಾಗತ ಎನ್ನುವ ಒಕ್ಕಣೆ ಇರುವ ಈ ಬೋರ್ಡಿನಲ್ಲಿದ್ದ ಹೆಸರು ಮಾಸಿ ಹೋಗಿತ್ತು. ಮಳೆ, ಬಿಸಿಲಿಗೆ ಸೊರಗಿ, ಬೋರ್ಡಿನಲ್ಲಿದ್ದ ಅಕ್ಷರಗಳು ಅಳಿಸಿ ಹೋಗಿದ್ದವು. ಇದರಿಂದಾಗಿ ಹೊರ ಊರಿನಿಂದ ಆಗಮಿಸುವ ಪ್ರವಾಸಿಗರು, ಯಾತ್ರಾರ್ಥಿಗಳು ಇದೇನು ಮಿತ್ತೂರೇ? ಕಿತ್ತೂರೇ? ಹತ್ತೂರೇ? ಪುತ್ತೂರೇ? ಎಂದು ಪ್ರಶ್ನಿಸುವಂತಾಗಿತ್ತು ಎಂದು ‘ವಿದ್ಯಮಾನ’ ವರದಿ ಮಾಡಿತ್ತು. ಈ ವರದಿಗೆ ಸ್ಪಂದಿಸಿರುವ ಪುತ್ತೂರು ನಗರಸಭೆ, ಬೋರ್ಡ್ ನವೀಕರಣಕ್ಕೆ ಮುಂದಾಗಿದೆ. ಇನ್ನು ಮುಂದೆ ಆಗಮಿಸುವ ಯಾತ್ರಾರ್ಥಿಗಳು, ಪ್ರವಾಸಿಗರಿಗೆ ‘ಇದು ಪುತ್ತೂರೇ’ ಎನ್ನುವ ಸ್ಪಷ್ಟ ಮಾಹಿತಿ ಸಿಗುವಂತಾಗಲಿದೆ.

ಇನ್ನೊಂದೆರಡು ದಿನಗಳಲ್ಲಿ ಸ್ವಾಗತ ಕಮಾನಿನ ನವೀಕರಣ ಕಾಮಗಾರಿ ಪೂರ್ಣಗೊಳ್ಳಲಿದೆ. ಮುಂದೆ ಇದನ್ನು ಸಕಾಲಿಕವಾಗಿ ನಿರ್ವಹಿಸುವ ಜವಾಬ್ದಾರಿಯನ್ನು ಮುಂದುವರಿಸಿದರೆ ಅಷ್ಟೇ ಸಾಕು.

ಮಂಗಳೂರು: ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಅರೋಪ; ಮಹಿಳೆಯರಿಂದ ವ್ಯಕ್ತಿಗೆ ಬಿತ್ತು ಗೂಸಾ

Posted by Vidyamaana on 2024-07-14 21:14:28 |

Share: | | | | |


ಮಂಗಳೂರು: ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಅರೋಪ; ಮಹಿಳೆಯರಿಂದ ವ್ಯಕ್ತಿಗೆ ಬಿತ್ತು ಗೂಸಾ

ಮಂಗಳೂರು : ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಕೊಂಡು ಬಸ್​ನಲ್ಲೇ ಗೂಸಾ ಕೊಟ್ಟ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿ ಆರೋಪಿ ಪ್ರಯಾಣ ಮಾಡುತ್ತಿದ್ದ

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

Posted by Vidyamaana on 2024-03-23 15:52:34 |

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

Posted by Vidyamaana on 2023-04-11 20:45:43 |

Share: | | | | |


ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಪುತ್ತೂರು: ರಾಜಕೀಯ ಜಂಜಾಟಕ್ಕೆ ಕಾರಣವಾಗಿದ್ದ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಅವರನ್ನು ಕಣಕ್ಕಿಳಿಸಲಾಗಿದೆ.

Recent News


Leave a Comment: