ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಶಬರಿಮಲೆ ಯಾತ್ರೆಗೆ ವೃತ ಕೈಗೊಂಡ ಪಾದ್ರಿ ಚರ್ಚ್ ಪರವಾನಿಗೆ ರಿಟರ್ನ್ ಮಾಡಿದ್ದೇಕೆ?

Posted by Vidyamaana on 2023-09-10 18:31:35 |

Share: | | | | |


ಶಬರಿಮಲೆ ಯಾತ್ರೆಗೆ ವೃತ ಕೈಗೊಂಡ ಪಾದ್ರಿ ಚರ್ಚ್ ಪರವಾನಿಗೆ ರಿಟರ್ನ್ ಮಾಡಿದ್ದೇಕೆ?

ತಿರುವನಂತಪುರಂ: ಪ್ರಸಿದ್ಧ ಧಾರ್ಮಿಕ ಕೇಂದ್ರ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಅನುಸರಿಸಿದ 41 ದಿನಗಳ ವ್ರತವನ್ನು ಕೈಗೊಂಡುದಕ್ಕೆ ಕೇರಳದ ಕ್ರಿಶ್ಚಿಯನ್ ಪಾದ್ರಿಯೊಬ್ಬರು ಧಾರ್ಮಿಕ ಸೇವೆಗಳನ್ನು ನಿರ್ವಹಿಸುವುದಕ್ಕಾಗಿ ಚರ್ಚ್ ನೀಡಿದ್ದ ಪರವಾನಗಿಯನ್ನೇ ಹಿಂದಿರುಗಿಸಿ ಸುದ್ದಿಯಾಗಿದ್ದಾರೆ.

ಆಂಗ್ಲಿಕನ್ ಚರ್ಚ್ ಆಫ್ ಇಂಡಿಯಾದಲ್ಲಿ ಪಾದ್ರಿಯಾಗಿರುವ ರೆವ್ ಮನೋಜ್ ಕೆ.ಜಿ. ಅವರು ಈ ತಿಂಗಳ ಕೊನೆಯಲ್ಲಿ ದೇವಾಲಯಕ್ಕೆ ತೀರ್ಥಯಾತ್ರೆಗೆ ಹೋಗುವ ಸಲುವಾಗಿ 41 ದಿನಗಳ ಸಾಂಪ್ರದಾಯಿಕ ವ್ರತವನ್ನು ಆಚರಿಸುತ್ತಿದ್ದಾರೆ. ಚರ್ಚ್‌ಗೆ ಈ ಬಗ್ಗೆ ತಿಳಿದಾಗ, ಇಂತಹ ನಡವಳಿಕೆಯು ಸ್ವೀಕಾರಾರ್ಹವಲ್ಲ ಎಂದು ಆಕ್ಷೇಪಿಸಿದೆ.


ನಾನು ಕ್ರಿಶ್ಚಿಯನ್ ಸಿದ್ಧಾಂತಗಳು ಮತ್ತು ನಿಯಮಗಳನ್ನು ಉಲ್ಲಂಘಿಸಿದ್ದೇನೆ ಎಂದು ನನ್ನಿಂದ ವಿವರಣೆಯನ್ನು ಕೇಳಿದರು. ವಿವರಣೆಯನ್ನು ನೀಡುವ ಬದಲು, ನಾನು ಪಾದ್ರಿಯಾದಾಗ ಸ್ವೀಕರಿಸಿದ, ಚರ್ಚ್ ನನಗೆ ನೀಡಿದ ಗುರುತಿನ ಚೀಟಿ ಮತ್ತು ಪರವಾನಗಿಯನ್ನು ಹಿಂದಿರುಗಿಸಿದೆ” ಎಂದು ಮನೋಜ್ ಕೆ.ಜಿ. ಪಿಟಿಐಗೆ ತಿಳಿಸಿದ್ದಾರೆ.


ತಾನು ಮಾಡಿದ್ದು ಆಂಗ್ಲಿಕನ್ ಚರ್ಚ್ ಆಫ್ ಇಂಡಿಯಾದ ನಿಯಮಗಳು ಮತ್ತು ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ನನ್ನ ಕೆಲಸವು ಚರ್ಚ್‌ನ ಸಿದ್ಧಾಂತಗಳನ್ನು ಆಧರಿಸಿಲ್ಲ, ಬದಲಿಗೆ ಅದು “ಲಾರ್ಡ್ಸ್” ಸಿದ್ಧಾಂತಗಳನ್ನು ಆಧರಿಸಿದೆ ಎಂದು ಮನೋಜ್ ಹೇಳಿದ್ದಾರೆ.


“ದೇವರು ಪ್ರತಿಯೊಬ್ಬರನ್ನು ಅವರ ಜಾತಿ, ಮತ, ಧರ್ಮ ಅಥವಾ ನಂಬಿಕೆಗಳನ್ನು ಲೆಕ್ಕಿಸದೆ ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಇತರರನ್ನು ಪ್ರೀತಿಸುವುದು ಅವರ ಚಟುವಟಿಕೆಗಳಲ್ಲಿ ಸೇರುವುದನ್ನು ಒಳಗೊಂಡಿರುತ್ತದೆ. ಆದ್ದರಿಂದ ನೀವು ಚರ್ಚ್ ಸಿದ್ಧಾಂತ ಅಥವಾ ದೇವರ ಸಿದ್ಧಾಂತವನ್ನು ಅನುಸರಿಸಲು ಬಯಸುತ್ತೀರಾ ಎಂದು ನಿರ್ಧರಿಸಬಹುದು.ನೀವು ದೇವರನ್ನು ಪ್ರೀತಿಸುತ್ತೀರಾ ಅಥವಾ ಚರ್ಚ್ ಅನ್ನು ಪ್ರೀತಿಸುತ್ತೀರಾ, ನೀವು ನಿರ್ಧರಿಸಬಹುದು. ‘ಚರ್ಚ್’ ಎಂದರೆ ಸಾಂಪ್ರದಾಯಿಕ, ನಿರ್ಮಿತ ಪದ್ಧತಿಗಳು” ಎಂದು 41 ದಿನಗಳ ವ್ರತ ಕೈಗೊಳ್ಳುವ ನಿರ್ಧಾರವನ್ನು ಟೀಕಿಸಿದವರಿಗೆ ಫೇಸ್‌ಬುಕ್‌ನಲ್ಲಿ ಸ್ಪಷ್ಟವಾದ ವಿಡಿಯೋ ಪ್ರತಿಕ್ರಿಯೆ ನೀಡಿದ್ದಾರೆ.

ಮನೋಜ್ ಪಾದ್ರಿಯಾಗುವ ಮೊದಲು ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು.ಆಧ್ಯಾತ್ಮಿಕ ಬೋಧನೆಗಳಿಗೆ ಅಧಿಕೃತತೆಯನ್ನು ನೀಡುವ ಸಲುವಾಗಿ ಅವರು ಪಾದ್ರಿಯಾದೆ ಎಂದು ಹೇಳಿದರು

ರಾಜ್ಯ ರಾಜಕಾರಣದಲ್ಲಿ ವಸಂತ್ ಬಂಗೇರರ ಹೆಸರು ಮತ್ತೆ ಮುನ್ನೆಲೆಗೆ

Posted by Vidyamaana on 2023-05-24 12:47:41 |

Share: | | | | |


ರಾಜ್ಯ ರಾಜಕಾರಣದಲ್ಲಿ ವಸಂತ್ ಬಂಗೇರರ ಹೆಸರು ಮತ್ತೆ ಮುನ್ನೆಲೆಗೆ

ಬೆಳ್ತಂಗಡಿ: ಖಡಕ್ ರಾಜಕಾರಣಿ ಎಂದೇ ಖ್ಯಾತಿ ಪಡೆದ ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರರನ್ನು ರಾಜಕೀಯದಲ್ಲಿ ಸಕ್ರೀಯವಾಗಿಸಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸುಕರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಖಡಕ್ ವ್ಯಕ್ತಿತ್ವದಿಂದ ಜನಾನುರಾಗಿಯಾಗಿದ್ದ ವಸಂತ್ ಬಂಗೇರರನ್ನು ಎಂ.ಎಲ್.ಸಿ. ಮಾಡಿ, ಸಚಿವರನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ಸಿಎಂ ಇಂಗಿತ. ಈ ಮೂಲಕ ಕರಾವಳಿ ರಾಜಕೀಯವನ್ನು ಮತ್ತೆ ಸಕ್ರೀಯಗೊಳಿಸುವುದು ಚಾಣಕ್ಯ ಸಿದ್ದರಾಮಯ್ಯರ ತಂತ್ರ ಎಂದು ಹೇಳಲಾಗಿದೆ.

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಅನಿತಾ ಆತ್ಮಹತ್ಯೆ - ಡೆತ್ ನೋಟ್ ಪತ್ತೆ

Posted by Vidyamaana on 2024-07-04 12:06:21 |

Share: | | | | |


ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಅನಿತಾ ಆತ್ಮಹತ್ಯೆ - ಡೆತ್ ನೋಟ್ ಪತ್ತೆ

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ

ತುಮಕೂರಿನಲ್ಲಿ ಭೀಕರವಾಗಿ ಹತ್ಯೆಯಾದ ದುರ್ದೈವಿಗಳ ಮನೆಗಳಿಗೆ ಇನಾಯತ್ ಅಲಿ ಭೇಟಿ

Posted by Vidyamaana on 2024-03-24 21:08:22 |

Share: | | | | |


ತುಮಕೂರಿನಲ್ಲಿ ಭೀಕರವಾಗಿ ಹತ್ಯೆಯಾದ ದುರ್ದೈವಿಗಳ ಮನೆಗಳಿಗೆ ಇನಾಯತ್ ಅಲಿ ಭೇಟಿ

ಬೆಳ್ತಂಗಡಿ: ಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಇನಾಯತ್ ಅಲಿ, ಘಟನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಲ್ಲಿ ಮಾತನಾಡಿದ್ದೇನೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿಯೂ ಮನವಿ ಮಾಡಿದ್ದೇನೆ. ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕಳೆದುಕೊಂಡು ತೀವ್ರ ಆಘಾತಕ್ಕೊಳಕ್ಕಾಗಿರುವ ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಒದಗಿಸುವಂತೆಯೂ ಮುಖ್ಯಮಂತ್ರಿಗಳಲ್ಲಿ ಕೋರಿದ್ದೇನೆಂದು ಎಂದು ತಿಳಿಸಿದ್ದಾರೆ.

ಇದೆಂಥ ವಿಚಿತ್ರ..? ಮುಸ್ಲಿಂ ಗೆಳತಿಯ ಮನೆಯಲ್ಲಿ ಅಡಗಿಕೊಂಡಿದ್ದ ಚೈತ್ರಾ!

Posted by Vidyamaana on 2023-09-13 13:21:50 |

Share: | | | | |


ಇದೆಂಥ ವಿಚಿತ್ರ..? ಮುಸ್ಲಿಂ ಗೆಳತಿಯ ಮನೆಯಲ್ಲಿ ಅಡಗಿಕೊಂಡಿದ್ದ ಚೈತ್ರಾ!

ಉಡುಪಿ : ಬಿಜೆಪಿ ಎಂಎಲ್‌ಎ ಟಿಕೆಟ್ ಗಾಗಿ ಐದು ಕೋಟಿ ಡೀಲ್ ಪ್ರಕರಣಆರೋಪದಡಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ‌ ಪೊಲೀಸರು ನಿನ್ನೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ. ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪದ ಮೇಲೆ ಬಂಧಿಸಲಾಗಿದೆ.


ಚೈತ್ರಾ ಕುಂದಾಪುರ ಅರೆಸ್ಟ್​ ಆದ್ಮೇಲೂ ಹೈಡ್ರಾಮಾ ಮಾಡಿದ್ದು, CCB ಪೊಲೀಸರು ಚೈತ್ರಾನಾ ಬೆಂಗಳೂರಿಗೆ ಕರೆತರುತ್ತಿದ್ದ ವೇಳೆ ಸೂಸೈಡ್​ ಪ್ರಯತ್ನ ಮಾಡಿದ್ದಾರೆ. ಕಾರಿನ ಗಾಜು ಹೊಡೆದು ಹಾರಲು ಯತ್ನ, ಕೈನಲ್ಲಿದ್ದ ಉಂಗುರ ನುಂಗಿ ಸೂಸೈಡ್​ ಅಟೆಂಪ್ಟ್​ ನಡೆಸಿದ್ದಾರೆ. ಸಿಸಿಬಿ ಪೊಲೀಸರು ಆತ್ಮಹತ್ಯೆಯನ್ನು ತಡೆದಿದ್ದಾರೆ.ಚೈತ್ರಾಗೆ ಆಶ್ರಯ ನೀಡಿದ್ದ ಮುಸ್ಲಿಂ ಮಹಿಳೆ : ಚೈತ್ರಾ ಕುಂದಾಪುರ ಉಡುಪಿಯ ಕಾಂಗ್ರೆಸ್​ನ ಮುಸ್ಲಿಂ ನಾಯಕಿ ಅಂಜುಂ ಎಂಬವರ ಮನೆಯಲ್ಲಿ ಆಶ್ರಯ ಪಡೆದಿರುವುದು ಬೆಳಕಿಗೆ ಬಂದಿದೆ.

ಉಡುಪಿಯ ಅಪಾರ್ಟ್​ಮೆಂಟ್​ನಲ್ಲಿ 7 ದಿನದಿಂದ ಚೈತ್ರಾ ಕುಂದಾಪುರ ಅಡಗಿದ್ದರು. ಈಗಾಗಲೇ ಉಡುಪಿ ಮಹಿಳೆಗೆ ಪೊಲೀಸರು ನೋಟಿಸ್​ ಸಹ ನೀಡಿದ್ದಾರೆ. ಸದಾ ಮುಸ್ಲೀಂರ ಮೇಲೆ ದ್ವೇಷ ಕಾರೋ ಭಾಷಣ ಮಾಡುವ ಚೈತ್ರಾ ಆಶ್ರಯ ಪಡೆದಿದ್ದು ಮುಸ್ಲಿಂ ಭಾಂದವರ ಮನೆಯಲ್ಲಿ ಎಂಬುದು ಬಹಿರಂಗವಾಗಿದೆ. ಸಿಸಿಬಿ ಪೊಲೀಸರು ಅರೆಸ್ಟ್ ಮಾಡ್ತಾರೆ ಎಂದು ತಿಳಿಯುತ್ತಿದ್ದಂತೆ ಅಲರ್ಟ್ ಆಗಿದ್ದ ಚೈತ್ರಾ ಮುಸ್ಲಿಂ ಲೀಗ್ ನ ಅಂಜುಂ ಎಂಬ ಮಹಿಳೆ ಮನೆಯಲ್ಲಿ ಆಶ್ರಯ ಪಡೆದಿದ್ದರು.


ಉದ್ಯಮಿ ಗೋವಿಂದ ಬಾಬು ಪೂಜಾರಿ ಪೊಲೀಸರಿಗೆ ನೀಡಿದ ದೂರಿನ ವಿವರ : "ನಾನು ಉಡುಪಿಯ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಕಳೆದ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ಸಂದರ್ಭದಲ್ಲಿ ಕೆಲವು ಬೆಂಬಲಿಗರು ಚೈತ್ರಾ ಕುಂದಾಪುರ ಅವರನ್ನು ನನಗೆ ಪರಿಚಯಿಸಿದ್ದರು. ನನ್ನ ಮುಗ್ಧತೆಯನ್ನು ಬಳಸಿಕೊಂಡ ಚೈತ್ರಾ, ತಾನುಹಿಂದೂಪರ ಸಂಘಟನೆಯಲ್ಲಿರುವುದರಿಂದ ಆರ್​ಎಸ್​ಎಸ್‌ಎಸ್ ವರಿಷ್ಠರಿಗೂ ಹತ್ತಿರ, ಪ್ರಧಾನಿ ಕಚೇರಿಯಲ್ಲಿಯೂ ಪ್ರಭಾವಿಯಾಗಿದ್ದೇನೆ. ಈ ಎಲ್ಲ ಪ್ರಭಾವಗಳನ್ನು ಬಳಸಿ ಟಿಕೆಟ್ ಕೊಡಿಸುವುದಾಗಿ ನಂಬಿಸಿದ್ದರು. ನಂತರ ಕೇಂದ್ರದ ಆರ್​ಎಸ್​ಎಸ್​ ಪ್ರಮುಖ ಎಂದು ವಿಶ್ವನಾಥ್ ಎಂಬಾತನನ್ನು ಪರಿಚಯಿಸಿದ್ದರು. ಅವರ ನಿರ್ದೇಶನದ ಮೇರೆಗೆ 3 ಹಂತಗಳಲ್ಲಿ ಸುಮಾರು 7 ಕೋಟಿ ರೂಪಾಯಿ ಹಣ ಪಡೆದಿದ್ದರು."


"ಒಂದು ವೇಳೆ ಟಿಕೆಟ್ ಕೈ ತಪ್ಪಿದರೆ ಹಣ ವಾಪಸ್ ನೀಡುವ ಭರವಸೆ ನೀಡಿದ್ದರು. ಆದರೆ ಮಾರ್ಚ್ ಆರಂಭದಲ್ಲಿ ಗೋವಿಂದ ಬಾಬು ಅವರಿಗೆ ಕರೆ ಮಾಡಿದ್ದ ಆರೋಪಿ ಗಗನ್ ಕಡೂರು, ವಿಶ್ವನಾಥ್ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದರು. ಅನುಮಾನಗೊಂಡ ಗೋವಿಂದ್ ಬಾಬು ಕಾಶ್ಮೀರದಲ್ಲಿರುವ ತಮ್ಮ ಸ್ನೇಹಿತ, ನಿವೃತ್ತ ಸೇನಾಧಿಕಾರಿಯೊಬ್ಬರಿಗೆ ಕರೆ ಮಾಡಿ ವಿಚಾರಿಸಿದಾಗ ಆರ್​​ಎಸ್​​ಎಸ್​ನಲ್ಲಿ ವಿಶ್ವನಾಥ್ ಹೆಸರಿನ ಯಾವ ಹಿರಿಯ ನಾಯಕರೂ ಇಲ್ಲ ಎಂಬುದು ಖಚಿತವಾಗಿತ್ತು. ಈ ಬಗ್ಗೆ ವಿಚಾರಿಸಿ ಹಣ ವಾಪಸ್ ಕೇಳಿದಾಗ ವಿಷದ ಬಾಟಲಿ ತೋರಿಸಿ ಆತ್ಮಹತ್ಯೆಯ ನಾಟಕವಾಡಿದ್ದ ಚೈತ್ರಾ ಬಳಿಕ ಹಣ ವಾಪಸ್ ನೀಡಲು ಸಮಯಾವಕಾಶ ಕೇಳಿದ್ದರು".ಈ ಬಗ್ಗೆ ಮತ್ತಷ್ಟು ವಿಚಾರಿಸಿದಾಗ ಕೆ.ಆರ್.ಪುರಂನಲ್ಲಿ ರಸ್ತೆ ಬದಿ ಕಬಾಬ್ ಮಾರುವವನನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ತೋರಿಸಿರುವುದು ಹಾಗೂ ಚಿಕ್ಕಮಗಳೂರಿನಲ್ಲಿ ಸಾಮಾನ್ಯ ವ್ಯಕ್ತಿಗೆ ಆರ್​ಎಸ್​ಎಸ್​ ಪ್ರಚಾರಕನಂತೆ ಮೇಕಪ್ ಮಾಡಿಸಿ ತಮಗೆ ಪರಿಚಯಿಸಿ ವಂಚಿಸಿರುವುದು ತಿಳಿದು ಬಂದಿತ್ತು. ತಕ್ಷಣ ಚೈತ್ರಾ ಕುಂದಾಪುರ, ಗಗನ್ ಕಡೂರು, ಅಭಿನವ ಹಾಲಶ್ರೀ ಸ್ವಾಮೀಜಿ, ರಮೇಶ್, ಧನರಾಜ್, ನಾಯ್ಕ್, ಶ್ರೀಕಾಂತ್, ಪ್ರಸಾದ್ ಬೈಂದೂರು ಎಂಬವರ ವಿರುದ್ಧ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಲಾಯಿತು."


ನಾಲ್ವರು ಆರೋಪಿಗಳು ವಶಕ್ಕೆ : ಪ್ರಕರಣ ದಾಖಲಿಸಿಕೊಡಿದ್ದ ಪೊಲೀಸರು ಈವರೆಗೆ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್ ಹಾಗೂ ಪ್ರಸಾದ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ ನಾಯಕ್ ಅವರನ್ನು ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿನಿ ಸಾವು!

Posted by Vidyamaana on 2023-11-26 11:23:14 |

Share: | | | | |


ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿನಿ ಸಾವು!

ಪುತ್ತೂರು : ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.


ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ (17) ಮೃತ ಯುವತಿ.


ಈ ಬಗ್ಗೆ ನಿಶಾ ರವರ ಸಹೋದರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದ್ದು ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದು, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದು, ನಿಶಾನನ್ನು ಪರೀಕ್ಷಿಸಿ ಒಳ ರೋಗಿಯನ್ನಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.


ನ.25 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಶಾ ಬಿ ಎಮ್ ರವರು ಮೃತಪಟ್ಟಿದ್ದು, ಸದ್ರಿ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ UDR .No: 43/2023 ಕಲo: 174 CRPC ರಂತೆ ಪ್ರಕರಣ ದಾಖಲಾಗಿದೆ.

Recent News


Leave a Comment: