ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಲಿಸ್ಟ್‌ ಫೈನಲ್‌ ಮುಜುಗರ; ಯತೀಂದ್ರ ಮೇಲೆ ಸಿದ್ದರಾಮಯ್ಯ ಕೆಂಡಾಮಂಡಲ

Posted by Vidyamaana on 2023-11-16 13:15:42 |

Share: | | | | |


ಲಿಸ್ಟ್‌ ಫೈನಲ್‌ ಮುಜುಗರ; ಯತೀಂದ್ರ ಮೇಲೆ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ʻನನ್ನದೇ ಲಿಸ್ಟ್‌ ಫೈನಲ್‌ ಮಾಡಬೇಕುʼ ಎಂದು ನೇರ ಆದೇಶ ನೀಡುವ ಮೂಲಕ ಸುದ್ದಿಯಲ್ಲಿರುವ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರ ಮೇಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಗರಂ ಆಗಿದ್ದಾರೆ.


ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿದ್ದ ವೇಳೆ ಸಿದ್ದರಾಮಯ್ಯ ಅವರಿಂದ ಬಂದ ಫೋನ್‌ ಕರೆಗೆ ಉತ್ತರಿಸುವ ವೇಳೆ ಯತೀಂದ್ರ ಸಿದ್ದರಾಮಯ್ಯ ಲಿಸ್ಟ್‌ ಬಗ್ಗೆ ಮಾತನಾಡಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯ ಅವರು ಮಾಡಿದ ಕರೆಗೆ ಪ್ರತ್ಯುತ್ತರ ನೀಡಿದ ಯತೀಂದ್ರ ಅವರು, ಸಿಎಂ ಅವರ ವಿಶೇಷಾಧಿಕಾರಿ ಮಹದೇವ್‌ ನೀಡಿದ ಪಟ್ಟಿಯಲ್ಲಿ ವಿವೇಕಾನಂದ ಎಂಬ ಹೆಸರು ಹೇಗೆ ಸೇರಿಕೊಂಡಿತು ಎಂದು ಕೇಳಿದ್ದಾರೆ. ಸಿದ್ದರಾಮಯ್ಯ ಅವರ ಕೈಯಿಂದ ಮಹದೇವ್‌ ಅವರಿಗೆ ಫೋನ್‌ ಕೊಡಿಸಿ ʼಮಹದೇವ್​ ಯಾಕೆ ಯಾವ್ದ್ಯಾವುದು ಕೊಡ್ತಾ ಇದ್ದೀರಿ? ಮತ್ತೆ ಇದೆಲ್ಲ ಯಾರು ಕೊಡ್ತಿರೋದುʼ ಅಂತ ಪ್ರಶ್ನೆ ಮಾಡಿದ್ದಾರೆ. ʼಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿʼ ಅಂತ ಯತೀಂದ್ರ ಸೂಚಿಸಿರುವ ವಿಡಿಯೊ ಈಗ ವೈರಲ್‌ ಆಗಿದೆ.


ಇದು ವರ್ಗಾವಣೆಗೆ ಸಂಬಂಧಿಸಿದ ಪಟ್ಟಿ ಎಂದು ಸುದ್ದಿಯಾಗಿದೆ. ಯತೀಂದ್ರ ಸಿದ್ದರಾಮಯ್ಯ ಅವರು ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪಗಳಿಗೂ ಈ ವಿಡಿಯೊಗೂ ತಾಳೆ ಹಾಕಲಾಗುತ್ತಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.ಕಾವೇರಿಯಲ್ಲಿ ಜತೆಯಾಗಿರುವ ಸಿದ್ದರಾಮಯ್ಯ, ಪುತ್ರ ಯತೀಂದ್ರ


ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಈ ಘಟನೆಯ ವಿಡಿಯೊ ಗುರುವಾರ ವೈರಲ್‌ ಆಗಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಬ್ರೇಕ್‌ ಆದಾಗ ಸಿದ್ದರಾಮಯ್ಯ ಮತ್ತು ಯತೀಂದ್ರ ಅವರು ಕಾವೇರಿ ನಿವಾಸದಲ್ಲೇ ಇದ್ದರು. ಅಲ್ಲಿ ಅವರಿಬ್ಬರು ಮುಖಾಮುಖಿಯಾದಾಗ ಸಿದ್ದರಾಮಯ್ಯ ಅವರು ಯತೀಂದ್ರ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳ ಸುದ್ದಿ ಪ್ರಸ್ತಾಪಿಸಿ ಏನಿದು ಎಂದು ಸಿದ್ದರಾಮಯ್ಯ ಗರಂ ಆದರೆನ್ನಲಾಗಿದೆ.


ಇದಕ್ಕೆ ಯತೀಂದ್ರ ಕೊಟ್ಟ ಸ್ಪಷ್ಟನೆ ಏನು?


ʻʻಅದು ಕ್ಷೇತ್ರ ಮತ್ತು ಜಿಲ್ಲೆಯ ಕೆಲಸಗಳ ಪಟ್ಟಿಯನ್ನು ನಾನು ಕೊಟ್ಟಿದ್ದೆ. ನಾನು ಕೊಟ್ಟಿದ್ದು ಮಾಡಿ ಎಂದು ನಿಮ್ಮ ಜತೆ ಮಾತನಾಡಿದ್ದು. ಆದರೆ ಮಾಧ್ಯಮಗಳಲ್ಲಿ ಏನೇನೋ ಸುದ್ದಿ ಬರ್ತಿದೆʼʼ ಎಂದು ಯತೀಂದ್ರ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.ʻʻನೀವು ಮಹದೇವ್‌ ಅವರು ಪಟ್ಟಿ ಫೈನಲ್ ಮಾಡಿದ್ದಕ್ಕೆ ನನಗೆ ಬೇಸರ ಆಗಿತ್ತು. ಕ್ಷೇತ್ರದ ಕೆಲಸಕ್ಕಾಗಿ ಜಿಲ್ಲೆಯ ಕಾರ್ಯಕರ್ತರನ್ನು ಪರಿಗಣಿಸುವ ಸಲುವಾಗಿ ನನ್ನ ಪಟ್ಟಿ ಫೈನಲ್ ಮಾಡಿ ಎಂದು ಹೇಳಿದ್ದೆʼʼ ಎಂದು ಯತೀಂದ್ರ ಸಮಜಾಯಿಷಿ ನೀಡಿದರು ಎನ್ನಲಾಗಿದೆ.


ಆದರೆ, ಅದನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಹೇಳ್ತಾರಾ? ಎಲ್ಲಿ ಏನು ಮಾತನಾಡಬೇಕು ಅಂತ ಗೊತ್ತಾಗಲ್ವಾ ಎಂದು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ.


ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್‌


ಇವೆಲ್ಲ ಬೆಳವಣಿಗೆಗಳ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ. ಅಲ್ಲಿ ಹಲವು ವಿಚಾರಗಳ ಚರ್ಚೆ ನಡೆಯಲಿದೆ.

ಬ್ಲೂಟೂತ್ ಬಳಸಿ ಕೆಪಿಎಸ್ ಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ

Posted by Vidyamaana on 2023-10-28 16:07:26 |

Share: | | | | |


ಬ್ಲೂಟೂತ್ ಬಳಸಿ ಕೆಪಿಎಸ್ ಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ

ಯಾದಗಿರಿ: ಇಂದು ರಾಜ್ಯಾದ್ಯಂತ ಕೆಪಿಎಸ್ ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆಯುತ್ತಿದೆ. ಯಾದಗಿರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಕಲು ಅಭ್ಯರ್ಥಿಯೇ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಬಂದಿದ್ದಾಗಿ ಮಾಹಿತಿ ಸಿಕ್ಕಿದೆ.

ಪೊಲೀಸರು ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ

Posted by Vidyamaana on 2023-06-23 11:14:14 |

Share: | | | | |


ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ

ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯೋರ್ವರನ್ನು ಮಹಿಳೆಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ, ಆ ವ್ಯಕ್ತಿ ಬಸ್ಸಿನಿಂದ ಇಳಿದು ಹೋದ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿತ್ತು. ಜಾಲತಾಣದ ವೀಡಿಯೋ ಆಧರಿಸಿ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿತರನ್ನು ಕೆಮ್ಮಿಂಜೆಯ ಸುಬ್ರಹ್ಮಣ್ಯ ಭಟ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಸುಬ್ರಹ್ಮಣ್ಯ ಭಟ್ ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲು ಮಾಡಲಾಯಿತು. ಬಳಿಕ ಜಾಮೀನಿನಲ್ಲಿ ಬಿಡುಗಡೆ ಮಾಡಲಾಯಿತು.

ಉಪ್ಪಳ – ಪುತ್ತೂರು ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಮಹಿಳೆಯರು ಕುಳಿತುಕೊಳ್ಳುವ ಸೀಟಿನ ಹಿಂಬದಿಯಲ್ಲಿ ಕುಳಿತುಕೊಂಡಿದ್ದ ವ್ಯಕ್ತಿ, ಅನುಚಿತವಾಗಿ ವರ್ತಿಸಿದ್ದ ಎಂದು ಆರೋಪಿಸಿ ಮಹಿಳೆಯರು ವ್ಯಕ್ತಿಯನ್ನು ತರಾಟೆಗೆತ್ತಿಕೊಂಡರು. ಮಹಿಳೆಯರ ಆಕ್ರೋಶ ಕಂಡ ವ್ಯಕ್ತಿ ಬಸ್ಸಿನಿಂದ ಇಳಿದು ಹೋಗಿದ್ದರು.

ಈ ಘಟನೆಗೆ ಸಂಬಂಧಪಟ್ಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇಂತಹ ಅಸಭ್ಯ ವರ್ತನೆ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಅಡ್ಯಾರ್ ಬಳಿ ಬೈಕ್ ಅಪಘಾತ : ವಿಟ್ಲ ಮೂಲದ ಕಾರ್ತಿಕ್ ಮೃತ್ಯು.!

Posted by Vidyamaana on 2023-02-11 04:31:42 |

Share: | | | | |


ಅಡ್ಯಾರ್ ಬಳಿ ಬೈಕ್ ಅಪಘಾತ : ವಿಟ್ಲ ಮೂಲದ ಕಾರ್ತಿಕ್ ಮೃತ್ಯು.!

ವಿಟ್ಲ: ಬೈಕ್ ಅಪಘಾತ ಸಂಭವಿಸಿ ವಿಟ್ಲ ಮೂಲದ ಯುವಕನೋರ್ವ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮೃತ ಯುವಕನನ್ನು ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾನಿ ಮತ್ತು ಸುಧಾಮಣಿ ದಂಪತಿಗಳ ಪುತ್ರ ಕಾರ್ತಿಕ್ ಮಣಿಯಾನಿ (24) ಎಂದು ಗುರುತಿಸಲಾಗಿದೆ.

ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ.

ಮೃತರು ತಂದೆ, ತಾಯಿ, ಓರ್ವ ಸಹೋದರ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ

ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

Posted by Vidyamaana on 2024-01-13 21:27:38 |

Share: | | | | |


ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

ಪುತ್ತೂರು : ಆರಂಭದ ಒಂದು ಮಳೆಗೆ ಕೊಡೆ ಹರಿದಂತೆ ಎಂಬ ಗಾದೆಯಂತೆ ಶಾಸಕರಾಗಿ ಮೊದಲ ಅರ್ಧ ವರ್ಷದಲ್ಲಿಯೇ ಈ ಹಿಂದಿನ ಶಾಸಕರು ತಂದಿರುವ ಅನುದಾನದ ಕಾಮಗಾರಿಯು ಶಿಲಾನ್ಯಾಸವಾಗಿ ಕೆಲಸ ಪ್ರಗತಿಯಲ್ಲಿರುವಾಗಲೇ ಹಾಲಿ ಶಾಸಕರು ಮತ್ತೊಮ್ಮೆ ಶಂಕುಸ್ಥಾಪನೆ ಮಾಡುತ್ತಾ ಇರುವುದು ಜನಸಾಮಾನ್ಯರ ನಡುವಿನಲ್ಲಿ ನಗೆಪಾಟಲಿಗೀಡಾಗಿರುವುದಂತು ಸತ್ಯ ಎಂದು ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷರಾದ ರಾಧಕೃಷ್ಣ ಆಳ್ವ ಹೇಳಿದರು.


ಪುತ್ತೂರು ಕ್ಷೇತ್ರಾದ್ಯಂತ ಈಗ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಅದರಲ್ಲಿಯೂ ಉಪ್ಪಿನಂಗಡಿಯ ದ್ವಿಪದ ರಸ್ತೆಯಾಗಿರಲಿ., ಬಿಳಿಯೂರುಕಟ್ಟೆ-ಸಾಜ-ಕುದ್ದುಪದವು ರಸ್ತೆಯ ಕಾಮಗಾರಿಯಾಗಿರಲಿ.., ಎಲ್ಲವೂ ಕೂಡ ಬಿಜೆಪಿ ಸರಕಾರ ಇರುವಾಗ ಬಂದಿರುವಂತ ಅನುದಾನಗಳು ಆದರೆ ಹಾಲಿ ಶಾಸಕರು ಹೋದಲ್ಲಿ ಎಲ್ಲಾ ಮಾಜಿ ಶಾಸಕರನ್ನು ಅವಹೇಳನಕಾರಿಯಾಗಿ ಮಾತಾನಾಡುವುದು ಮತ್ತು ಜನರಿಗೆ ಸುಳ್ಳು ಮಾಹಿತಿಯನ್ನು ನೀಡುವುದು ಘನತೆಗೆ ತಕ್ಕುದಲ್ಲ ಎಂದು ಹೇಳಿದರು.ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಜನವರಿ14ರಿಂದ 21ರವರೆಗೆ ದೇವಸ್ಥಾನ, ದೈವಸ್ಥಾನ, ಮಠ ಮಂದಿರಗಳ ಸ್ವಚ್ಛತೆಯಲ್ಲಿ ಕಾರ್ಯಕರ್ತರು ,ಪದಾಧಿಕಾರಿಗಳು ಭಾಗವಹಿಸಬೇಕು ಮತ್ತು ಜ.22 ಪ್ರತಿಷ್ಠಾ ದಿನದಂದು ಎಲ್ಲಾ ಹಿಂದೂ ಮನೆಗಳಲ್ಲಿ ಪ್ರಧಾನಿಯವರ ಆಶಯದಂತೆ ದೀಪ ಬೆಳಗಿಸುವಂತೆ ಈ ಸಂದರ್ಭದಲ್ಲಿ ವಿನಂತಿಸಿದರು.


ಮಂಡಲದ ಪ್ರ.ಕಾರ್ಯದರ್ಶಿ ನಿತೀಶ್ ಶಾಂತಿವನ ಸ್ವಾಗತಿಸಿದರು.


ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ , ಮುಕುಂದ ಬಜತ್ತೂರು, ಅರುಣ್ ವಿಟ್ಲ, ಮೀನಾಕ್ಷಿ ಮಂಜುನಾಥ್,ಉಷಾ ಮುಳಿಯ,ವಿಜಯ ಕೋರಂಗ, ಖಜಾಂಜಿ ರಮೇಶ್ ಭಟ್, ಕಾರ್ಯದರ್ಶಿ ರಮಣಿ ಗಾಣಿಗ, ಲೋಹಿತ್ ಅಮ್ಚಿನಡ್ಕ, ವಿವಿಧ ಮೋರ್ಚಾ ಅಧ್ಯಕ್ಷ ಕಾರ್ಯದರ್ಶಿಗಳಾದ ಯಶಸ್ವಿನಿ ಶಾಸ್ತ್ರಿ, ಯಶೋಧ ಗೌಡ, ಸುರೇಶ್ ಕಣ್ಣರಾಯ, ಪುನೀತ್ ಮಾಡತ್ತಾರು, ನವೀನ್ ಪಡ್ನೂರು,ಸುನೀಲ್ ದಡ್ಡು, ಮಹಾಶಕ್ತಿ ಕಾರ್ಯದರ್ಶಿಗಳಾದ ಸುರೇಶ್ ಅತ್ರಮಜಲು, ದಯಾನಂದ ಶೆಟ್ಟಿ ಉಜ್ರೆಮಾರು ಮೊದಲಾದವರು ಉಪಸ್ಥಿತರಿದ್ದರು.ಮಂಡಲ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮಂಗ್ಲಿಮನೆ ಧನ್ಯವಾದ ಸಲ್ಲಿಸಿದರು.

ಶಿರಾಡಿ ಘಾಟ್ ನಲ್ಲಿ ಮತ್ತೆ ಭಾರಿ ಭೂಕುಸಿತ : ಟ್ಯಾಂಕರ್ ಸೇರಿ ಮಣ್ಣಿನಡಿ ಸಿಲುಕಿದ 6 ವಾಹನಗಳು

Posted by Vidyamaana on 2024-07-30 17:08:05 |

Share: | | | | |


ಶಿರಾಡಿ ಘಾಟ್ ನಲ್ಲಿ ಮತ್ತೆ ಭಾರಿ ಭೂಕುಸಿತ : ಟ್ಯಾಂಕರ್ ಸೇರಿ ಮಣ್ಣಿನಡಿ ಸಿಲುಕಿದ 6 ವಾಹನಗಳು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತು. ಇದೀಗ ಇಂದು ಮತ್ತೆ ಭಾರಿ ಬಭೂಕುಸಿತವಾಗಿದ್ದು ಟ್ಯಾಂಕರ್ ಸೇರಿ ಮಣ್ಣಿನ ಅಡಿ ಸುಮಾರು 6 ವಾಹನಗಳು ಸಿಲುಕಿರುವ ಘಟನೆ ನಡೆದಿದೆ.ಹೌದು ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

Recent News


Leave a Comment: