ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ವಕ್ಫ್ ಅಧ್ಯಕ್ಷರ ರಾಜೀನಾಮೆ ವರದಿಯ ಶೀರ್ಷಿಕೆ ತಿರುಚಿ ಶೇರಿಂಗ್

Posted by Vidyamaana on 2023-07-06 07:23:25 |

Share: | | | | |


ವಕ್ಫ್ ಅಧ್ಯಕ್ಷರ ರಾಜೀನಾಮೆ ವರದಿಯ ಶೀರ್ಷಿಕೆ ತಿರುಚಿ ಶೇರಿಂಗ್

ಪುತ್ತೂರು: ವಕ್ಫ್ ಅಧ್ಯಕ್ಷ ಶಾಫಿ ಸ ಅದಿ ಅವರ ರಾಜೀನಾಮೆ ವರದಿಯನ್ನು ವಸ್ತುನಿಷ್ಠವಾಗಿ ವಿದ್ಯಮಾನದಲ್ಲಿ ವರದಿ ಮಾಡಲಾಗಿತ್ತು. ಆದರೆ ಈ ವರದಿಯ ಶೇರಿಂಗ್ ಹೆಡ್ಡಿಂಗನ್ನು ಕಿಡಿಗೇಡಿಗಳು ತಿರುಚಿ ಶೇರ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಕೃತ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡುತ್ತಿದ್ದು, ಇಂತಹ ಪೋಸ್ಟರನ್ನು ಯಾರೂ ಶೇರ್ ಮಾಡಬಾರದಾಗಿ ಕೇಳಿಕೊಳ್ಳುತ್ತಿದ್ದೇವೆ.

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

Posted by Vidyamaana on 2024-04-23 21:54:22 |

Share: | | | | |


ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

ಚಿತ್ರದುರ್ಗ, ಏ.23: ಫೋಕ್ಸೋ (POCSO) ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(Murugha Mutt Swamiji) ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ಸುಪ್ರೀಂ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.


ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಪುತ್ತೂರು : ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿ ಕರ್ಕುಂಜ ನಿವಾಸಿ ಹರೀಶ್ ನಿಧನ

Posted by Vidyamaana on 2023-08-22 09:47:35 |

Share: | | | | |


ಪುತ್ತೂರು : ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿ ಕರ್ಕುಂಜ ನಿವಾಸಿ ಹರೀಶ್ ನಿಧನ

ಪುತ್ತೂರು : ಕಳೆದ 25 ವರುಷಗಳಿಂದ ತಾಲೂಕು ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಇತ್ತೀಚೆಗೆ ಅನಾರೋಗ್ಯ ಕಾರಣದಿಂದಾಗಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರೀಶ್ ಚಿಕಿತ್ಸೆ ಫಲಿಸದೆ ಇಂದು ನಿಧನರಾದರು.


ಮೃತರು ತಂದೆ ಲೋಕಯ್ಯ ನಾಯ್ಕ್, ತಾಯಿ ಸೀತಾ ಲೋಕಯ್ಯ, ಪತ್ನಿ ರಮ್ಯ, ಪುತ್ರ ಶ್ರೇಯಸ್ ಹಾಗೂ ಸಹೋದರರಾದ ವಿಜಯ್, ದಿನೇಶ್ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ

Posted by Vidyamaana on 2023-07-04 05:47:56 |

Share: | | | | |


ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ

ಪುತ್ತೂರು: ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಬಗ್ಗೆ ಹವಾಮಾನ ಇಲಾಖೆ ಸೂಚನೆಯನ್ನು ನೀಡಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ಶಾಸಕರಾದ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.

ಮಳೆ ಈ ಬಾರಿ ತಡವಾಗಿ ಆರಂಭಗೊಂಡಿದ್ದರೂ ಜುಲೈ ಪ್ರಾರಂಭದಲ್ಲೇ ಹೆಚ್ಚಿನ ಮಳೆಯಾಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೇಯಾಗಲಿದೆ. ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಯಾವುದೇ ಅನಾಹುತಗಳು ಸಂಭವಿಸುವ ಸಾಧ್ಯತೆ ಇದ್ದು ಅಧಿಕಾರಿಗಳು ದಿನದ ೨೪ ಗಂಟೆಯೂ ಸದಾ ಎಚ್ಚರದಿಂದ ಇರಬೇಕು ಎಂದು ಶಾಸಕರು ಸೂಚನೆಯನ್ನು ನೀಡಿದ್ದಾರೆ. ಮರಗಳು ಬಿದ್ದು ಹಾನಿಯಾಗುವುದು, ವಿದ್ಯುತ್ ಅವಘಡ ಸೇರಿದಂತೆ ಯಾವುದೇ ಅನಾಹುತ ನಡೆದರೂ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಅನಾಹುತದಿಂದ ಯಾರೇ ಆಗಲಿ ಗಾಯಗೊಂಡರೆ ಅಂಥವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಯ ಚಿಕಿತ್ಸೆ ಕೊಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಮರ ಬಿದ್ದು ಅಥವ ಧರೆ ಜರಿದು ಮನೆಗಳಿಗೆ ಹಾನಿಯಾದರೆ ಆ ಮನೆಗಳಲ್ಲಿ ಕುಟುಂಬಗಳಿಗೆ ವಾಸ್ತವ್ಯ ಮಾಡಲು ಸಾಧ್ಯವಿಲ್ಲದೇ ಹೋದಲ್ಲಿ ಅಥವಾ ವಾಸ್ತವ್ಯವಾಗಲು ಅಪಾಯಕಾರಿ ಸ್ಥಳ ಎಂದು ಗೊತ್ತಾದಲ್ಲಿ ತಕ್ಷಣ ಅವರಿಗೆ ವಾಸ್ತವ್ಯದ ವ್ಯವಸ್ಥೆಯನ್ನು ಮಾಡಬೇಕು. ಕುಡಿಯುವ ನೀರು , ವಿದ್ಯುತ್  ಸಮರ್ಪಕವಾಗಿರಬೇಕು. ನಗರಸಭಾ ವ್ಯಾಪ್ತಿಯಲ್ಲಿ ಎಚ್ಚರದಿಂದ ಕಾರ್ಯನಿರ್ವಹಿಸುವಂತೆಯೂ ನಗರಸಭಾ ಅದಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಪುತ್ತೂರು ಸಹಾಯಕ ಆಯುಕ್ತರು, ತಹಸಿಲ್ದಾರ್, ಕಂದಾಯ ನಿರೀಕ್ಷಕರು , ಅಗ್ನಿ ಶಾಮಕದಳ, ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸದಾ ಕಟ್ಟೆಚ್ಚರದಿಂದ ಇರುವಂತೆ ಶಾಸಕರು ಸೂಚನೆಯನ್ನು ನೀಡಿದ್ದಾರೆ.

ವಿಧಾನಸಭಾ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ನಾನು ಅಧಿವೇಶನದಲ್ಲಿ ಭಾಗವಹಿಸುತ್ತಿದ್ದು ಕ್ಷೇತ್ರದ ಆಗುಹೋಗುಗಳ ಬಗ್ಗೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಶಾಸಕರು ತಿಳಿಸಿದ್ದಾರೆ.


ತಡರಾತ್ರಿ ಕರೆ ಮಾಡಿದ ಶಾಸಕರು

ನಗರದ ಹೊರವಲಯದ ಸಿಂಹವನದಲ್ಲಿ ಭಾರೀ ಗಾತ್ರದಮರವೊಂದು ಗಾಳಿಗೆ ಉರುಳಿ ಬಿದ್ದಿದ್ದು ಮನೆಯೊಂದಕ್ಕೆ ಬಾಗಶ: ಹಾನಿಯಾಗಿದೆ. ವಿಷಯ ತಿಳಿದ ಶಾಸಕರು ತಡರಾತ್ರಿ ಸಹಾಯಕ ಆಯುಕ್ತರಿಂದ ಮಾಹಿತಿ ಪಡೆದುಕೊಂಡಿದ್ದು ತಕ್ಷಣವೇ ಮರವನ್ನು ತೆರವುಗೊಳಿಸಿ ಮನೆಗೆ ಹಾನಿಯಾಗಿದ್ದಲ್ಲಿ ತಕ್ಷಣ ದುರಸ್ಥಿಗೆ ನೆರವು ನೀಡುವಂತೆಯೂ ಸೂಚವನೆಯನ್ನು ನೀಡಿದ್ದಾರೆ. ಶಸಕರ ಸೂಚನೆಯ ಬಳಿಕ ತಡರಾತ್ರಿಯೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು ಮನೆಗೆ ಬಿದ್ದಿದ್ದ ಮರದ ಗೆಲ್ಲುಗಳನ್ನು ತೆರವು ಮಾಡಲಾಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ಮರವನ್ನು ಬೆಳಿಗ್ಗೆ ಅರಣ್ಯ ಇಲಾಖಾ ಅಧಿಕಾರಿಗಳ ಜೊತೆಗೆ ಶಾಸಕ ಅಶೋಕ್ ರೈ ಅಭಿಮಾನಿಬಳಗದ ತಂಡದ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ - ಹಮಾಸ್ ಬೆಂಬಲಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿಯ ಪೊಲೀಸ್ ವಶಕ್ಕೆ

Posted by Vidyamaana on 2023-10-14 18:59:44 |

Share: | | | | |


ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ - ಹಮಾಸ್ ಬೆಂಬಲಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿಯ ಪೊಲೀಸ್ ವಶಕ್ಕೆ

ಮಂಗಳೂರು : ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್ ​ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್  ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ ಬಂಧಿತ ಆರೋಪಿ.


ಹಮಾಸ್ ಬೆಂಬಲಿಸಿ, ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ಜಾಕಿರ್ ವೀಡಿಯೋ ಹರಿಬಿಟ್ಟಿದ್ದ. ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.


ಈ ಕೃತ್ಯದ ಬಗ್ಗೆ ಸಮಾಜದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ವಿನಾಯಕ ತೋರಗಲ್ ಅವರು ಸ್ವಯಂ ದೂರು ದಾಖಲಿಸಿ ಆರೋಪಿ ಜಾಕಿರ್ ಯಾನ ಜಾಕಿ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಇನ್ನು ಈ ಆರೋಪಿತನ ಮೇಲೆ ಈ ಹಿಂದ ಕೂಡ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು 7 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಮೋದಿ ನಿಮ್ಗೆ ಸೆಲ್ಯೂಟ್ ಯುವಕರು ನಿಮ್ಮಿಂದ ಕಲಿಯಬೇಕು : ನಮೋ ಈ ಕಾರ್ಯವೈಖರಿಗೆ ನೆಟ್ಟಿಗರು ಫಿದಾ ಕಾರಣವೇನು ಗೊತ್ತಾ.?

Posted by Vidyamaana on 2024-03-01 19:26:40 |

Share: | | | | |


ಮೋದಿ ನಿಮ್ಗೆ ಸೆಲ್ಯೂಟ್ ಯುವಕರು ನಿಮ್ಮಿಂದ ಕಲಿಯಬೇಕು : ನಮೋ ಈ ಕಾರ್ಯವೈಖರಿಗೆ ನೆಟ್ಟಿಗರು ಫಿದಾ ಕಾರಣವೇನು ಗೊತ್ತಾ.?

ನವದೆಹಲಿ : ಪ್ರಧಾನಿ ಮೋದಿ ಅವರು ಸಾರ್ವಜನಿಕರಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಹತ್ತು ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ, ಸಾರ್ವಜನಿಕರೊಂದಿಗಿನ ಮೋದಿಯವರ ಅದ್ಭುತ ಸಂಪರ್ಕ ಉಳಿಸಿಕೊಂಡಿದ್ದಾರೆ. ಯಾಕಂದ್ರೆ, ಅವ್ರು ಕೇವಲ ಪ್ರಧಾನಿಯಾಗಿಲ್ಲ, ದೇಶಕ್ಕೆ ಅವರ ಅಚಲ ಸಮರ್ಪಣೆ ಇದೆ.ಏತನ್ಮಧ್ಯೆ, ಪಿಎಂ ಮೋದಿ ಈ ಉತ್ಸಾಹಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಪ್ರಶಂಸೆ ಪಡೆಯುತ್ತಿದ್ದಾರೆ.


ತಡರಾತ್ರಿ ಸಭೆ, ನಂತರ ಬೆಳಿಗ್ಗೆ ಕೆಲಸಕ್ಕೆ ಹಿಂತಿರುಗಿದ ಮೋದಿ.!

ವಾಸ್ತವವಾಗಿ, ಜನರು ನಿನ್ನೆ ಮತ್ತು ಇಂದು ಪ್ರಧಾನಿ ಮೋದಿಯವರ ಬಿಡುವಿಲ್ಲದ ವೇಳಾಪಟ್ಟಿಯನ್ನು ಶ್ಲಾಘಿಸುತ್ತಿದ್ದಾರೆ. ನಿನ್ನೆ, ಪಿಎಂ ಮೋದಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಮ್ಯಾರಥಾನ್ ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಅಲ್ಲಿಂದ ಮುಂಜಾನೆ 3.30ರ ಸುಮಾರಿಗೆ ಮರಳಿದರು. ಇದಾದ ನಂತರ, ಬೆಳಿಗ್ಗೆ 8 ಗಂಟೆಗೆ ಅವರು ಜಾರ್ಖಂಡ್, ಬಿಹಾರ ಮತ್ತು ಬಂಗಾಳದ ಎರಡು ದಿನಗಳ ಪ್ರವಾಸಕ್ಕೆ ತೆರಳಿದರು, ಅಲ್ಲಿ ಅವರು ಸಾವಿರಾರು ಕೋಟಿ ಮೌಲ್ಯದ ಯೋಜನೆಗಳನ್ನ ಉದ್ಘಾಟಿಸಲಿದ್ದಾರೆ.ಪ್ರಧಾನಿ ಮೋದಿ ಉತ್ಸಾಹಕ್ಕೆ ನೆಟ್ಟಿಗರು ಫಿದಾ.!

73ನೇ ವಯಸ್ಸಿನಲ್ಲಿ, ಪ್ರಧಾನಿಯವರ ಉತ್ಸಾಹವು ಜನರನ್ನು ದಿಗ್ಭ್ರಮೆಗೊಳಿಸಿದ್ದು, ಅದಕ್ಕಾಗಿಯೇ ನೆಟ್ಟಿಗರು ಅವರನ್ನ ಸಾಕಷ್ಟು ಹೊಗಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅನೇಕ ಜನರು ಪ್ರಧಾನಿಯನ್ನ ಶ್ಲಾಘಿಸುತ್ತಿದ್ದರೆ, ಕೆಲವರು ರಾಷ್ಟ್ರದ ಬಗ್ಗೆ ಅವರ ಸಮರ್ಪಣೆ ಮತ್ತು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ.


ತಡರಾತ್ರಿಯವರೆಗೆ ಮತ್ತು ನಂತರ ಬೆಳಿಗ್ಗೆ ಕೆಲಸ ಮಾಡಲು ಸಭೆ ಸೇರಿದರೆ, ಮೋದಿ ಮಾತ್ರ ಇದನ್ನ ಮಾಡಬಹುದು ಎಂದು ಜನರು ಹೇಳುತ್ತಿದ್ದಾರೆ.


ಏತನ್ಮಧ್ಯೆ, ಎಕ್ಸ್ ಬಳಕೆದಾರರೊಬ್ಬರು "ಪ್ರಧಾನಿ ಮೋದಿಗೆ ಸೆಲ್ಯೂಟ್, ನಾನು ಎಚ್ಚರಗೊಳ್ಳುವ ಮೊದಲೇ ಅವರ ಕೆಲಸವನ್ನ ಪ್ರಾರಂಭಿಸಿ, ಬಿಜೆಪಿ ಗೆಲ್ಲಲು ಮತ್ತು ಭಾರತ ಗೆಲ್ಲಲು ಇದು ಒಂದು ಕಾರಣವಾಗಿದೆ" ಎಂದು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರ "ಪ್ರಧಾನ ಸೇವಕ" ಎಂಬ ತಮ್ಮ ಹೇಳಿಕೆಯನ್ನ ಮೋದಿ ಈಡೇರಿಸುತ್ತಿದ್ದಾರೆ ಎಂದು ಹೇಳಿದರು.


ಗೆಲುವಿನ ಪೂರ್ಣ ಅವಕಾಶ, ಆದರೆ ಉತ್ಸಾಹ ಕಡಿಮೆಯಾಗಿಲ್ಲ.!

ಚಲನಚಿತ್ರ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿ, "ತಮ್ಮ ಗೆಲುವು ಖಚಿತವಾಗಿದ್ದರೂ, ಪ್ರಧಾನಿಯವರ ಸಮರ್ಪಣೆ, ಉತ್ಸಾಹ ಮತ್ತು ಮಾಡು ಅಥವಾ ಮಡಿ ಎಂಬ ಸ್ಪರ್ಧಾತ್ಮಕ ಮನೋಭಾವವು ಅವರನ್ನ ಎದ್ದು ಕಾಣುವಂತೆ ಮಾಡುತ್ತದೆ ಎಂದು ಹೇಳಿದರು. ಪ್ರತಿಯೊಬ್ಬ ಯುವಕರು ಪ್ರಧಾನಿ ಮೋದಿಯಿಂದ ಕಲಿಯಬೇಕು" ಎಂದರು.

Recent News


Leave a Comment: