ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಆ. 15ರಂದು ಮಿನಾಜ್ ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ

Posted by Vidyamaana on 2023-08-14 15:02:31 |

Share: | | | | |


ಆ. 15ರಂದು ಮಿನಾಜ್ ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ

ಬೆಂಗಳೂರು: ಇಲ್ಲಿನ ಮಿನಾಜ್’ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. 15ರಂದು ಬೆಳಿಗ್ಗೆ 9 ಗಂಟೆಗೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನಡೆಯಲಿದೆ. ಲೋಕಾಯುಕ್ತ ನಿವೃತ್ತ ಸರ್ಕಾರಿ ಅಭಿಯೋಜಕ ಟಿ.ಆರ್. ಅಲಾವುದ್ದೀನ್ ಎಕ್’ಸಾಂಬಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ, ನಾಡ ಗೀತೆ, ಕೀರತ್, ಹುಮ್ದ ಮತ್ತು ನಾಟ್ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಅತಿಥಿಗಳಿಗೆ ಗೌರವಾರ್ಪಣೆ, ಪ್ರಶಸ್ತಿ ವಿತರಣೆ, ಮೆರವಣಿಗೆ ನಡೆಯಲಿದೆ.

ರಾಜ್ಯ ಸರ್ಕಾರದ ಕೆ.ಎಂ.ಡಿ.ಸಿ. ಆಡಳಿತ ನಿರ್ದೇಶಕ ಮೊಹಮ್ಮದ್ ನಜೀರ್ ಮುಖ್ಯ ಅತಿಥಿಯಾಗಿರುವರು.

ಲೋಕಾಯುಕ್ತ ನಿವೃತ್ತ ಸರ್ಕಾರಿ ಅಭಿಯೋಜಕ ಟಿ.ಆರ್. ಅಲಾವುದ್ದೀನ್ ಎಕ್ಸಂಬಿ, ಮಿನ್ಜಾ ವೆಲ್ಫೇರ್ ಅಸೋಸಿಯೇಶನ್ ಉಪಾಧ್ಯಕ್ಷ ಟಿ.ಆರ್. ಅಬ್ದುಲ್ ಗಫೂರ್, ಖಲೀಲ್ ಉರ್ ರೆಹಮಾನ್, ಮಿನ್ಜಾ ವೆಲ್ಫೇರ್ ಅಸೋಸಿಯೇಶನ್ ಕಾರ್ಯದರ್ಶಿ ನಜೀರ್ ಬೇಗ್, ಸಯ್ಯದ್ ಸಾಜಿದ್ ಹುಸೈನ್, ನಯಾಜ್ ಪಾಶಾ, ಇಂಜಿನಿಯರ್ ಹುಲಿವಾನ ಶಿವರಾಮ್, ಎಂಡಬ್ಲ್ಯೂಇಡಿ ಟ್ರಸ್ಟಿನ ಉಪಾಧ್ಯಕ್ಷ ನಯಾಜ್ ಬೇಗ್, ಕನ್ನಡ ಶಿಕ್ಷಕಿ ರಾಧಾ, ಮುಖ್ಯಶಿಕ್ಷಕಿ ಕೌಸರ್ ತಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕೋಣಾಲು ಕೋಲ್ಪೆ ಭಾಗದಲ್ಲಿ ಸರ್ಕಾರಿ ಜಾಗ ಕಬಳಿಕೆ

Posted by Vidyamaana on 2023-08-06 10:23:46 |

Share: | | | | |


ಕೋಣಾಲು ಕೋಲ್ಪೆ ಭಾಗದಲ್ಲಿ ಸರ್ಕಾರಿ ಜಾಗ ಕಬಳಿಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಕೇರಳ ಮೂಲದ ಉದ್ಯಮಿಯೊಬ್ಬ ಎಕರೆಗಟ್ಟಲೆ ಸರ್ಕಾರಿ ಭೂಮಿಯನ್ನು ಕಬಳಿಸಿದ ಆರೋಪ ಕೇಳಿಬಂದಿದೆ. ಸ್ಥಳೀಯರ ದೂರಿನಂತೆ ಸ್ಥಳಕ್ಕೆ ಬಂದ ಪುತ್ತೂರು ಸಹಾಯಕ ಕಮಿಷನರ್ ಆರೋಪಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಿದ್ದಾರೆ. 

ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣಾಲು, ಕೋಲ್ಪೆ ಗ್ರಾಮದಲ್ಲಿ ಏಳೆಂಟು ಎಕ್ರೆ ಸರ್ಕಾರಿ ಭೂಮಿಯನ್ನು ಕೇರಳ ಮೂಲದ ಉದ್ಯಮಿಯೊಬ್ಬ ಕಬಳಿಸಿರುವ ಆರೋಪ ಕೇಳಿಬಂದಿದೆ. ಸೆಬಾಸ್ಟಿಯನ್ ಎಂಬ ಕೊಚ್ಚಿ ಮೂಲದ ವ್ಯಕ್ತಿ ಎರಡು ವರ್ಷಗಳ ಹಿಂದೆ ಕಡಬದಲ್ಲಿ ಖಾಸಗಿ ಜಾಗ ಖರೀದಿಸಿ ಪ್ಲಾಸ್ಟಿಕ್ ಬ್ಯಾಗ್ ತಯಾರಿಕೆ ಕಂಪನಿಯನ್ನು ಆರಂಭಿಸಿದ್ದ. ಇದೀಗ ಆಸುಪಾಸಿನ ಸರಕಾರಿ ಜಾಗವನ್ನು ಕಬಳಿಸಿದ್ದು, ಕೋಣಾಲು, ಕೋಲ್ಪೆ ಭಾಗದ ನೂರಾರು ಜನರು ಬಳಸುತ್ತಿದ್ದ ಜಿಪಂ ರಸ್ತೆಯನ್ನೇ ಮಣ್ಣು ಹಾಕಿ ನುಂಗಿ ಹಾಕಿದ್ದಾನೆ. ರಸ್ತೆಗೆ ಪೂರ್ತಿ ಮಣ್ಣು ಹಾಕಿದ್ದು, ಅದು ತನ್ನದೆಂದು ಹಕ್ಕು ಸ್ಥಾಪಿಸಿದ್ದಾನೆ ಎಂದು ಸ್ಥಳೀಯರು ದೂರಿದ್ದಾರೆ.‌ ಸ್ಥಳೀಯರು ಈ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್ ಅವರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಿ ಅಕ್ರಮವಾಗಿ ಭೂಮಿ ಕಬಳಿಸಿದ ವಿಚಾರದಲ್ಲಿ ಗೋಳಿತೊಟ್ಟು ಪಂಚಾಯತ್ ಪಿಡಿಓಗೆ ತರಾಟೆಗೆತ್ತಿಕೊಂಡಿದ್ದಾರೆ. ಜಿಲ್ಲಾ ಪಂಚಾಯತ್ ರಸ್ತೆಗೆ ಮಣ್ಣು ಹಾಕಿದ್ದು, ಈ ಭಾಗದ ನಿವಾಸಿಗಳಿಗೆ ರಸ್ತೆ ಇಲ್ಲದಾಗಿದೆ. ಅಲ್ಲದೆ, ಆಸುಪಾಸಿನ ಜಾಗದಲ್ಲಿ ಬಡ ಜನರನ್ನು ಒಕ್ಕಲೆಬ್ಬಿಸಿದ್ದಾನೆಂದು ಸ್ಥಳೀಯ ಉಸ್ಮಾನ್ ಎಂಬವರು ದೂರಿದ್ದಾರೆ.

ಅಧಿಕಾರಿಗಳ ಭೇಟಿ ವೇಳೆ ಮೇಲ್ನೋಟಕ್ಕೆ ಜಿಪಂ ರಸ್ತೆಯನ್ನು ಕಡಿದು ಹಾಕಿದ್ದು, ಸರಕಾರಿ ಜಾಗ ಕಬಳಿಸಿರುವುದು ಕಂಡುಬಂದಿದೆ. ಇದೇ ವೇಳೆ, ಸ್ಥಳದಲ್ಲಿ ಸರ್ವೆ ನಡೆಸುವುದಲ್ಲದೆ, ಅಕ್ರಮವಾಗಿ ಜಾಗ ಕಬಳಿಸಿದ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಪಿಡಿಓಗೆ ಸೂಚನೆ ನೀಡಿದ್ದಾರೆ.


ಕಡಬದ ನೆಲ್ಯಾಡಿ, ಉಪ್ಪಿನಂಗಡಿ, ಉದನೆ ಭಾಗದಲ್ಲಿ ಕೇರಳ ಮೂಲದ ವ್ಯಕ್ತಿಗಳು ಅಕ್ರಮವಾಗಿ ಜಾಗ ಕಬಳಿಸಿ ನೆಲೆಯೂರಿದ್ದು, ಇದಕ್ಕೆಲ್ಲ ಸ್ಥಳೀಯ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆಂಬ ಆರೋಪ ಇದೆ. ಇದೀಗ ಕಡಬದ ಕೋಣಾಲು ಗ್ರಾಮದಲ್ಲಿ ಏಳೆಂಟು ಎಕ್ರೆ ಸರಕಾರಿ ಜಾಗ ಕಬಳಿಸಿದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. .

ಪುತ್ತೂರು :ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶ

Posted by Vidyamaana on 2024-04-10 11:38:40 |

Share: | | | | |


ಪುತ್ತೂರು :ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶ

ಪುತ್ತೂರು, ಎ.9: ನಿಮ್ಮೆಲ್ಲರ ಕೈ ಕೊಯ್ದರೆ ರಕ್ತ ಕೆಂಪಿನದ್ದಿಲ್ಲ, ಕೇಸರಿ ಇರೋದು ಅಂತ ಗೊತ್ತಿದೆ. ನಿಮ್ಮವರಿಗೆ ಬಿಜೆಪಿ ಬಗ್ಗೆ, ಹಿಂದುತ್ವದ ಬಗ್ಗೆ ಪಾಠ ಹೇಳಲು ಬಂದಿಲ್ಲ. ಆದರೆ ನಾಡಿದ್ದು ಎಪ್ರಿಲ್ 26ರಂದು ಮದುವೆ ಇದೆ, ಮೋದಿ ಹೇಗೂ ಗೆಲ್ಲುತ್ತಾರೆಂದು ನಿರ್ಲಕ್ಷ್ಯ ಮಾಡಬೇಡಿ. ಮೋದಿಯವರು ಈ ದೇಶದ ಮಹಿಳೆಯರಿಗೆ ಶಕ್ತಿ ಕೊಟ್ಟಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ಎಷ್ಟೆಲ್ಲಾ ಯೋಜನೆ ಮಾಡಿದ್ದಾರೆ. ಅದಕ್ಕಾಗಿ ನಾವು ಹಿಂತಿರುಗಿ ಕೊಡೋದು, ಒಂದು ಮತವಷ್ಟೇ. ಅದನ್ನು ತಪ್ಪದೆ ಮಾಡಬೇಕು ಎಂದು ಬಿಜೆಪಿ ನಾಯಕಿ, ಚಿತ್ರನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

ಪುತ್ತೂರಿನಲ್ಲಿ ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ನಮಗೆ ಮೋದಿ ಗೆಲ್ಲುವ ಬಗ್ಗೆ ಸಂಶಯ ಇಲ್ಲ. ಇಲ್ಲಿ ಬೃಜೇಶ್ ಗೆಲ್ಲುವುದರಲ್ಲೂ ಸಂಶಯ ಇಲ್ಲ. ಗೆಲ್ಲೋದು ಖಚಿತ. ಆದರೆ ಇಲ್ಲಿ ಎಷ್ಟು ಅಂತರದಿಂದ ಗೆಲ್ಲಿಸಿ ಕಳಿಸುತ್ತೇವೆ ಅನ್ನುವುದು ಮುಖ್ಯ. ಮೂರು ಲಕ್ಷನಾ, ನಾಲ್ಕು ಲಕ್ಷನಾ ಎಂದು ನಾವು ಈಗಲೇ ಸಂಕಲ್ಪ ಮಾಡಬೇಕು. ನಿಮಗೆಲ್ಲ ಗೊತ್ತಿದೆ, ಪರೀಕ್ಷೆಯಲ್ಲಿ ರಿವಿಶನ್ ಮಾಡೋದಕ್ಕಷ್ಟೇ ನಾನು ಬಂದಿದ್ದೇನೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

Posted by Vidyamaana on 2024-04-21 15:46:43 |

Share: | | | | |


ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

ನವದೆಹಲಿ: ಗುಜರಾತ್‌ನ ಗಾಂಧಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ ಕೇಂದ್ರ ಗೃಹ ಸಚಿವ ಅಮಿತ್ ಶಾ. ಈ ನಡುವೆ ಅವರ ಈ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 36 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ.

ಇದೇ ವೇಳೆ ಅವರು ತಮ್ಮ ಬಳಿಯಲ್ಲಿ ಯಾವುದೇ ಕಾರಿಲ್ಲ ಎಂದು ಹೇಳಿರುವ ಶಾ, ಅವರ ಪತ್ನಿ ಬಳಿ ಇದೆ 31 ಕೋಟಿ ರೂ. ಮೌಲ್ಯದ ಆಸ್ತಿ ಇರುವುದಾಗಿ ತಿಳಿಸಿದ್ದಾರೆ. 

ಅಫಿಡವಿಟ್ ಪ್ರಕಾರ, ಶಾ ಮತ್ತು ಅವರ ಪತ್ನಿ ಒಟ್ಟು 65.67 ಕೋಟಿ ರೂ. ಗಮನಾರ್ಹವಾಗಿ, ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವರದಿಯಾದ 30.49 ಕೋಟಿ ರೂ.ಗಿಂತ ಗಮನಾರ್ಹ ಹೆಚ್ಚಳವನ್ನು ಸೂಚಿಸುತ್ತದೆ, ಕಳೆದ ಐದು ವರ್ಷಗಳಲ್ಲಿ ಶೇಕಡಾ 100 ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ತೋರಿಸುತ್ತದೆ.

ತೆಂಗಿನ ಮರದಿಂದ ಬಿದ್ದು ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

Posted by Vidyamaana on 2024-01-22 21:17:53 |

Share: | | | | |


ತೆಂಗಿನ ಮರದಿಂದ ಬಿದ್ದು  ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

ಉಳ್ಳಾಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.


ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ದಲ್ಲಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು.ಎಂದಿನಂತೆ ಇಂದು ಬೆಳಿಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲುಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗನ ಕಾಯಿಲೆಗೆ ಶಿವಮೊಗ್ಗದ ಯುವತಿ ಬಲಿ

Posted by Vidyamaana on 2024-01-09 09:59:52 |

Share: | | | | |


ಮಂಗನ ಕಾಯಿಲೆಗೆ ಶಿವಮೊಗ್ಗದ ಯುವತಿ ಬಲಿ

ಶಿವಮೊಗ್ಗ, ಜ 09: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.


ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್​ಲೆಟ್ ಕಡಿಮೆಯಾಗಿತ್ತು. ಆರ್​ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್​ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್​ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.


ಯುವತಿಯಲ್ಲಿ ರಕ್ತದಲ್ಲಿ‌ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್​ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್​ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್​ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್​ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.

Recent News


Leave a Comment: