ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಶಿವಮೊಗ್ಗ ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ: ನಳಿನ್ ಕುಮಾರ್

Posted by Vidyamaana on 2023-10-04 20:58:11 |

Share: | | | | |


ಶಿವಮೊಗ್ಗ  ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ: ನಳಿನ್ ಕುಮಾರ್

ಬೆಂಗಳೂರು: ಶಿವಮೊಗ್ಗ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಬಿಜೆಪಿಯು ಪಕ್ಷದ ಹಿರಿಯ ಮುಖಂಡರನ್ನು ಒಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಗುರುವಾರ ಶಿವಮೊಗ್ಗದ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತಂಡ ಭೇಟಿ ನೀಡಲಿದೆ.


ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಸಿ.ಎನ್.ಅಶ್ವಥ್ ನಾರಾಯಣ್, ಮಾಜಿ ಸಚಿವ ಆರಗ ಜನೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂ.ಎಲ್.ಸಿ ಎನ್. ರವಿಕುಮಾರ್, ಶಾಸಕ ಚನ್ನಬಸಪ್ಪ, ಎಂಎಲ್ಸಿಗಳಾದ ಎಸ್.ರುದ್ರೇಗೌಡ, ಡಿ ಎಸ್ ಅರುಣ್ ಮತ್ತು ಭಾರತಿ ಶೆಟ್ಟಿ ತಂಡದಲ್ಲಿದ್ದಾರೆ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಸಾವಿಗೆ ಶರಣು

Posted by Vidyamaana on 2023-08-17 05:46:19 |

Share: | | | | |


ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಸಾವಿಗೆ ಶರಣು

ಮಂಗಳೂರು: ಮಗನ ಸಾವಿನಿಂದ ಮನನೊಂದು ಸಮುದ್ರಕ್ಕೆ ಹಾರಿ ಮೃತಪಟ್ಟ ಕಾಸರಗೋಡು ಜಿಲ್ಲೆಯ ಕುಂಬಳೆ ಬಂಬ್ರಾಣ ನಿವಾಸಿಯ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇವರ ಸಾವಿಗೆ ಪತ್ನಿಯ ಅನೈತಿಕ ಸಂಬಂಧ ಪ್ರಕರಣವೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಈ ಬಗ್ಗೆ ಮೃತ ಲೋಕೇಶ್ ಕಾಸರಗೋಡು ಎಸ್ಪಿ ಕಚೇರಿಗೆ ದೂರು ನೀಡಿರುವುದು ಮತ್ತು ಇವರ ಅಣ್ಣ ಸುಧಾಕರ ಉಳ್ಳಾಲ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.  


ಕುಂಬಳೆಯ ಬಂಬ್ರಾಣ ನಿವಾಸಿಯಾಗಿದ್ದ ಲೋಕೇಶ್ ತನ್ನ ಪತ್ನಿ ಪ್ರಭಾವತಿ ಮತ್ತು ಆಕೆಯ ಪ್ರಿಯಕರ ಎನ್ನಲಾದ ಸಂದೀಪ್ ಆರಿಕ್ಕಾಡಿ ಎಂಬಾತನ ವಿರುದ್ಧ ಕಾಸರಗೋಡು ಎಸ್ಪಿ ಕಚೇರಿಗೆ ಆಗಸ್ಟ್ 11ರಂದು ದೂರು ನೀಡಿದ್ದಾರೆ. ತನ್ನ ಮಗ ರಾಜೇಶ್ ಸಾವಿಗೆ ಇವರ ಅಕ್ರಮ ಸಂಬಂಧ ಮತ್ತು ಅದರ ವಿಚಾರದಲ್ಲಿ ನಡೆದಿದ್ದ ಗಲಾಟೆಯೇ ಕಾರಣ. ತಾಯಿ ಜೊತೆಗೆ ಸಂದೀಪ್ ಅಕ್ರಮ ಸಂಬಂಧ ಹೊಂದಿರುವುದನ್ನು ರಾಜೇಶ್ ಆಕ್ಷೇಪಿಸಿದ್ದು, ಅದಕ್ಕೆ ಪ್ರತಿಯಾಗಿ ಸಂದೀಪ್ ಬೆದರಿಕೆ ಹಾಕಿದ್ದ. ಇದರಿಂದ ನೊಂದು ರಾಜೇಶ್ ಉಳ್ಳಾಲಕ್ಕೆ ಬಂದು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈದಿದ್ದ. ಈ ಬಗ್ಗೆ ಪ್ರಭಾವತಿ ಮತ್ತು ಆಕೆಯ ತಂಗಿ ಬೇಬಿ ಹಾಗೂ ಪ್ರಿಯಕರ ಸಂದೀಪ್ ಆರಿಕ್ಕಾಡಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಲೋಕೇಶ್ ಕಾಸರಗೋಡು ಎಸ್ಪಿ ಕಚೇರಿಗೆ ನೀಡಿದ್ದ ದೂರಿನಲ್ಲಿ ಒತ್ತಾಯಿಸಿದ್ದರು.


ಜುಲೈ 10ರಂದು ಲೋಕೇಶ್(51) ಅವರ ಮಗ ರಾಜೇಶ್(26) ಉಳ್ಳಾಲ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಶವದ ಮರಣೋತ್ತರ ಪರೀಕ್ಷೆ, ಅಂತ್ಯಕ್ರಿಯೆ ಬಳಿಕ ಪ್ರಭಾವತಿ ಗಂಡನ ಮನೆ ತೊರೆದು ತನ್ನ ತಂಗಿಯ ಮನೆಯಲ್ಲಿ ಸೇರಿದ್ದರೆ, ಇತ್ತ ಲೋಕೇಶ್ ತನ್ನ ಸೋದರ ಸುಧಾಕರ್ ಅವರ ತೊಕ್ಕೊಟ್ಟಿನ ಮನೆಯಲ್ಲಿ ವಾಸ ಮಾಡಲಾರಂಭಿಸಿದ್ದರು. ತನ್ನ ಮಗನ ಸಾವಿನಿಂದ ತೀವ್ರ ನೊಂದುಕೊಂಡಿದ್ದ ಲೋಕೇಶ್, ತನ್ನ ಗೆಳೆಯರಿಗೆ ಪತ್ನಿಯ ಕಿರುಕುಳ, ಕೆಟ್ಟ ನಡತೆಯ ಬಗ್ಗೆ ಹೇಳಿಕೊಂಡಿದ್ದರು. ಮೊನ್ನೆ ಆಗಸ್ಟ್ 14ರಂದು ಇಷ್ಟೆಲ್ಲ ಆದಮೇಲೆ ಅಂತಹ ಪತ್ನಿಯೊಂದಿಗೆ ವಾಸ ಮಾಡಲು ಸಾಧ್ಯವಾಗದು. ಆಕೆಯ ಮುಖವನ್ನೂ ನೋಡುವುದಿಲ್ಲ. ನನ್ನ ಮೃತದೇಹ ಸೋಮೇಶ್ವರ ಸಮುದ್ರದಲ್ಲಿ ಸಿಗಬಹುದು ಎಂದು ತನ್ನ ಗೆಳೆಯರಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದು ಫೋನನ್ನು ಸೋದರನ ತೊಕ್ಕೊಟ್ಟಿನ ಮನೆಯಲ್ಲಿಟ್ಟು ತೆರಳಿದ್ದರು. ವಾಯ್ಸ್ ಕೇಳಿದ ಗೆಳೆಯರು ಕೂಡಲೇ ಫೋನ್ ಮಾಡಿದ್ದು, ಫೋನನ್ನು ಮನೆಯಲ್ಲಿ ಬಿಟ್ಟು ಲೋಕೇಶ್ ತೆರಳಿರುವುದು ಗೊತ್ತಾಗಿತ್ತು.


ಇತ್ತ ಗೆಳೆಯರು ಮತ್ತು ಸೋದರ ಉಳ್ಳಾಲದಲ್ಲಿ ಹುಡುಕಾಡುತ್ತಿದ್ದಂತೆ, ಅದೇ ದಿನವೇ ಲೋಕೇಶ್ ಮೃತದೇಹ ಉಳ್ಳಾಲ ಸಮುದ್ರದಲ್ಲಿ ಪತ್ತೆಯಾಗಿತ್ತು. ಮೃತರ ಸೋದರ ಸುಧಾಕರ ಮತ್ತು ಲೋಕೇಶ್ ಅವರ ಇನ್ನೊಬ್ಬ ಮಗ ಶುಭಂ ತಂದೆಯದ್ದೇ ಶವ ಎಂದು ಗುರುತಿಸಿದ್ದಾರೆ. ಸುಧಾಕರ ಅವರು ಉಳ್ಳಾಲ ಠಾಣೆಗೆ ನೀಡಿರುವ ದೂರಿನಲ್ಲಿ ಪ್ರಭಾವತಿ, ಸಂದೀಪ್ ಆರಿಕ್ಕಾಡಿ, ಶುಭಂ, ಬೇಬಿ ಎಂಬವರ ಹೆಸರನ್ನು ಉಲ್ಲೇಖಿಸಿದ್ದು ಇವರ ಚಿತಾವಣೆಯಿಂದಲೇ ನನ್ನ ತಮ್ಮ ಲೋಕೇಶ್ ಸಾವಿಗೆ ಶರಣಾಗಿದ್ದಾರೆಂದು ತಿಳಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

Posted by Vidyamaana on 2023-12-02 14:06:13 |

Share: | | | | |


ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

ಪುತ್ತೂರು: ಡಿ.ಸಿ.ಆ‌ರ್.ಬಿ. ಚಿಕ್ಕಮಗಳೂರು

ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ.


ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು.ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.

ಏಶ್ಯಕಪ್ ಫೈನಲ್: ಸಿರಾಜ್ ಮಾರಕ ಬೌಲಿಂಗ್ ದಾಳಿ: ಶ್ರೀಲಂಕಾ 50 ರನ್‌ಗೆ ಆಲೌಟ್

Posted by Vidyamaana on 2023-09-17 17:37:11 |

Share: | | | | |


ಏಶ್ಯಕಪ್ ಫೈನಲ್: ಸಿರಾಜ್ ಮಾರಕ ಬೌಲಿಂಗ್ ದಾಳಿ: ಶ್ರೀಲಂಕಾ 50 ರನ್‌ಗೆ ಆಲೌಟ್

ಕೊಲಂಬೊ: ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮಾರಕ ಬೌಲಿಂಗ್(6-21)ದಾಳಿಗೆ ಧೂಳೀಪಟವಾದ ಶ್ರೀಲಂಕಾ ಕ್ರಿಕೆಟ್ ತಂಡ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಕೇವಲ 15.2 ಓವರ್‌ಗಳಲ್ಲಿ 50 ರನ್‌ಗೆ ಆಲೌಟಾಗಿದೆ.


ರವಿವಾರ ಪ್ರೇಮದಾಸ ಸ್ಟೇಡಿಯಮ್‌ನಲ್ಲಿ ಟಾಸ್ ಜಯಿಸಿದ ಶ್ರೀಲಂಕಾದ ನಾಯಕ ದಸುನ್ ಶನಕ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಬ್ಯಾಟಿಂಗ್ ಆರಂಭಕ್ಕೆ ಮೊದಲೇ ಮಳೆ ಬಂದ ಕಾರಣ ಪಂದ್ಯವು ವಿಳಂಬವಾಗಿ ಅರಂಭವಾಯಿತು.


ಸಿರಾಜ್‌ ಒಂದೇ ಓವರ್‌ನಲ್ಲಿ 4 ವಿಕೆಟ್‌ಗಳನ್ನು ಕಬಳಿಸಿ ಶ್ರೀಲಂಕಾದ ಬ್ಯಾಟಿಂಗ್ ಬೆನ್ನಲುಬು ಮುರಿದರು. ಹಾರ್ದಿಕ್ ಪಾಂಡ್ಯ(3-3) ಮೂರು ವಿಕೆಟ್ ಪಡೆದರು.

ಸುಲಭ ಗುರಿ ಬೆನ್ನತ್ತಿದ ಭಾರತ ತಂಡದ ಪರ ಗಿಲ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಿದರು. ಇವರಿಬ್ಬರ ಆಕರ್ಷಕ ಬ್ಯಾಟಿಂಗ್ ನಿಂದ ತಂಡವು ವಿಕೆಟ್ ಕಳೆದುಕೊಳ್ಳದೆ ಕೇವಲ ಓವರ್ ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಗಿಲ್ ಅಜೇಯ 27 ಮತ್ತು ಇಶಾನ್ ಕಿಶನ್ 23 ರನ್ ಮಾಡಿದರು. ಭಾರತ ತಂಡ ಹತ್ತು ವಿಕೆಟ್ ಗಳ ಅಂತರ ಗೆಲುವು ಕಂಡಿತು.



ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ

Posted by Vidyamaana on 2024-03-11 09:37:04 |

Share: | | | | |


ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ

ಹೈದರಾಬಾದ್: ಹೈದರಾಬಾದ್ ಮೂಲದ ಮಹಿಳೆಯೊಬ್ಬರ ಶವವೊಂದು ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.


ಮೃತ ಮಹಿಳೆಯನ್ನು ಹೈದರಾಬಾದ್ ಮೂಲದ ಚೈತನ್ಯ ಮದಗಣಿ (೩೬) ಎನ್ನಲಾಗಿದ್ದು ಈಕೆಯ ಶವ ಶನಿವಾರ ಆಸ್ಟ್ರೇಲಿಯಾದ ಬಕ್ಲಿಯ ರಸ್ತೆಯ ಬದಿಯಲ್ಲಿ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.

ಚೈತನ್ಯ ಅವರು ಅವರು ಹಲವು ವರ್ಷಗಳಿಂದ ತನ್ನ ಪತಿ ಅಶೋಕ್ ಅವರೊಂದಿಗೆ ಆಸ್ಟ್ರೇಲಿಯಾದ ಪಾಯಿಂಟ್​ ಕುಕ್ಕ್​ ಎಂಬಲ್ಲಿ ವಾಸವಾಗಿದ್ದರು ಇವರಿಗೆ ಒಂದು ಗಂಡು ಮಗು ಇದೆ.

ಕಳೆದ ಶನಿವಾರ ಆಸ್ಟ್ರೇಲಿಯಾದ ಪೊಲೀಸರು ಮಹಿಳೆಯ ಶವವನ್ನು ಪತ್ತೆಹಚ್ಚಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ ಆದರೆ ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ ಪತಿಯೇ ಮಹಿಳೆಯ ಕತ್ಯೆಗೈದು ಬಳಿಕ ಕಸದ ತೊಟ್ಟಿಗೆ ಎಸೆದು ಭಾರತಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.ಅಶೋಕ್ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬ:

ಚೈತನ್ಯ ಸಾವಿನ ಸುದ್ದಿ ಗೊತ್ತಾಗುತ್ತಿದ್ದಂತೆ ಚೈತನ್ಯ ಪೋಷಕರು ಅಳಿಯನ ವಿರುದ್ಧವೇ ಅನುಮಾನ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ, ಅಲ್ಲದೆ ಪತ್ನಿ ಸಾವಿನ ಬಳಿಕ ಪತಿ ಭಾರತಕ್ಕೆ ಓಡಿ ಬಂದಿರುವ ವಿಚಾರದಲ್ಲಿ ಪತಿಯೇ ಈ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ಆರೋಪ ಮಾಡಲಾಗಿದೆ.

ಘಟನೆ ಸಂಬಂಧ ಉಪ್ಪಳ ಶಾಸಕ ಬಂಡಾರಿ ಲಕ್ಷ್ಮ ರೆಡ್ಡಿ ಮಾತನಾಡಿ, ಮಹಿಳೆ ತನ್ನ ಕ್ಷೇತ್ರದವಳಾದ ಕಾರಣ, ವಿಷಯ ತಿಳಿದ ನಂತರ ಇಂದು ಆಕೆಯ ಪೋಷಕರನ್ನು ಭೇಟಿ ಮಾಡಿದ್ದೇನೆ ಮಹಿಳೆಯ ಪೋಷಕರ ಕೋರಿಕೆಯ ಮೇರೆಗೆ ಮಹಿಳೆಯ ಮೃತದೇಹವನ್ನು ಹೈದರಾಬಾದ್‌ಗೆ ತರಲು ವಿದೇಶಾಂಗ ಕಚೇರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರ ಕಚೇರಿಗೂ ತಿಳಿಸಿರುವುದಾಗಿ ಶಾಸಕರು ಹೇಳಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಯಾರನ್ನೂ ಬಂಧಿಸಿಲ್ಲ, ತನಿಖೆ ನಡೆಯುತ್ತಿದೆ.

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ

Posted by Vidyamaana on 2024-05-24 17:22:27 |

Share: | | | | |


ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ‌ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇ.18 ರಂದು ಸಂಜೆ  ದಾಳಿ ಮಾಡಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ.18 ರಂದು ಒಂದು ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ಪೊಲೀಸರು ಮತ್ತು ಬೆಳ್ತಂಗಡಿ ತಹಶೀಲ್ದಾರ್ ನೀಡಿದ ವರದಿಯ ಆಧಾರದಲ್ಲಿ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಮೇ.20 ರಂದು ಸ್ಥಳ ಮಹಜರು ಮಾಡಿ ಪ್ರಮೋದ್ ಗೌಡ ದಿಡುಪೆ, ಶಶಿರಾಜ್ ಶೆಟ್ಟಿ , ಸೂರಪ್ಪ ಪೂಜಾರಿ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಮೇ.23 ರಂದು ಪ್ರಕರಣ ದಾಖಲಿಸಿದ್ದಾರೆ.

Recent News


Leave a Comment: