ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಪುರುಷರಕಟ್ಟೆ: ಕೆ ಎಸ್‌ ಆರ್ ಟಿ ಸಿ- ಬೈಕ್ ಡಿಕ್ಕಿ ಬೈಕ್‌ ಸವಾರ ಮೋಕ್ಷಿತ್ ಗೌಡ ಮೃತ್ಯು

Posted by Vidyamaana on 2024-05-15 09:52:02 |

Share: | | | | |


ಪುರುಷರಕಟ್ಟೆ: ಕೆ ಎಸ್‌ ಆರ್ ಟಿ ಸಿ- ಬೈಕ್ ಡಿಕ್ಕಿ  ಬೈಕ್‌ ಸವಾರ ಮೋಕ್ಷಿತ್ ಗೌಡ ಮೃತ್ಯು

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ನಡೆದಿದೆ. 

ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ಮುಂಗಾರಿಗೆ ಮೆರುಗು

Posted by Vidyamaana on 2023-06-26 01:55:32 |

Share: | | | | |


ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ಮುಂಗಾರಿಗೆ ಮೆರುಗು

ಪುತ್ತೂರು: ಸ್ವರ್ಣೋದ್ಯಮದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಜಿ.ಎಲ್. ಜ್ಯುವೆಲ್ಲರ್ಸ್ನ ಪುತ್ತೂರು ಮಳಿಗೆಯಲ್ಲಿ ಜೂ. 26ರಿಂದ ಕಿವಿಯೋಲೆ ಮತ್ತು ಉಂಗುರಗಳ ಹಬ್ಬ ನಡೆಯಲಿದೆ.

ಜನರ ಮನಗೆದ್ದಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಜ್ಯುವೆಲರ್ಸ್ 

ಸ್ವರ್ಣೋದ್ಯಮದಲ್ಲಿ 66 ವರ್ಷಗಳಿಂದ ಜನಮನ ಗೆದ್ದು ಚಿನ್ನಾಭರಣ ಪ್ರಿಯರ ಮನೆಮಾತಾಗಿ ಕರಾವಳಿ ಹಾಗೂ ಮಲೆನಾಡುಗಳಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನ ಪುತ್ತೂರು ಚಿನ್ನಾಭರಣ ಮಳಿಗೆಯಲ್ಲಿ ಜೂ.26 ರಿಂದ ಸೀಮಿತ ಆವಧಿಯ ವರೆಗೆ ‘ಕಿವಿಯೋಲೆ ಮತ್ತು ಉಂಗುರಗಳ ಹಬ್ಬ’ ಆಯೋಜಿಸಲಾಗಿದೆ.

ಮುಂಗಾರಿನ ಮೆರುಗನ್ನು ವೃದ್ಧಿಸಲು ಆಯೋಜಿಸಲಾದ ಈ ವಿಶೇಷ ಮಾರಾಟದಲ್ಲಿ ಆಕರ್ಷಕ ವಿನ್ಯಾಸದ ಕಿವಿಯೋಲೆ ಮತ್ತು ಉಂಗುರಗಳು ಕನಿಷ್ಠ ಮೇಕಿಂಗ್ ಜಾರ್ಜ್‌ನಲ್ಲಿ (10% ರಿಂದ ಆರಂಭ) ಲಭ್ಯವಿದ್ದು ಎಲ್ಲಾ ವಯೋಮಾನದ ಮಹಿಳೆಯರ ಮಕ್ಕಳ ಹಾಗೂ ಪುರುಷರಿಗೊಪ್ಪುವ ವೈವಿಧ್ಯಮಯ ಚಿನ್ನದೊಡವೆಗಳ ಸಂಗ್ರಹ ಇಲ್ಲಿದೆ.

ಅರ್ಧ ಗ್ರಾಂನಿಂದ ಮೊದಲ್ಗೊಂಡು 32 ತೂಕದ ವರೆಗೆ ವಿವಿಧ ವಿನ್ಯಾಸಗಳ ಕಿವಿಯೋಲೆಗಳ ಸಂಗ್ರಹ ಲಭ್ಯ, ಸ್ಥಳೀಯ ನುರಿತ ಕುಶಲಕರ್ಮಿಗಳಿಂದ ತಯಾರಿಸಿದ ಕಿವಿಯೋಲೆಗಳು ಮಾತ್ರವಲ್ಲದೆ ಗಿಳಿಯೋಲೆ, ಚಾಂದ್‌ಬಾಲಿ, ಕೊಲ್ಕತ್ತಾ, ರಾಜ್‌ಕೋಟ್, ಕಾರವಾರ ಮುಂತಾದ 2,900 ಮಿಕ್ಕಿ ಕಿವಿಯೋಲೆಗಳು ಹಾಗೂ 2,500ಕ್ಕೂ ಮಿಕ್ಕಿ ವಿವಿಧ ವಿನ್ಯಾಸದ ಉಂಗುರಗಳ ಸಂಗ್ರಹ ಗ್ರಾಹಕರ ಆಯ್ಕೆಗೆ ಲಭ್ಯವಿದೆ.

ಕಳೆದ ಮೇ ತಿಂಗಳಿನಲ್ಲಿ ಚಿನ್ನದ ದರ ಪ್ರತಿ ಗ್ರಾಂ ಗೆ ರೂ 5,720/- ತನಕ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲಿ ಪ್ರತಿ ಗ್ರಾಂ ಗೆ ರೂ 300/- ರಷ್ಟು ಇಳಿಕೆಯಾಗಿ ಚಿನ್ನದ ದರ ಇಳಿಕೆಯ ಪ್ರಯೋಜನವನ್ನು ಸಹ ಗ್ರಾಹಕರು ಪಡೆಯಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

Posted by Vidyamaana on 2024-03-12 10:00:00 |

Share: | | | | |


ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಹೌದು.ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ.


ಅವರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ ಕಳಂಜಿಬೈಲ್ ನಿವಾಸಿ ಜಾಫರ್ ಮೃತ್ಯು.

Posted by Vidyamaana on 2023-04-22 11:58:16 |

Share: | | | | |


ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ  ಕಳಂಜಿಬೈಲ್ ನಿವಾಸಿ ಜಾಫರ್ ಮೃತ್ಯು.

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಇದೀಗ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ.



ಈದುಲ್ ಫಿತ್ರ್ ಸಂಭ್ರಮದಲ್ಲಿ ನೆಂಟರಸ್ಥರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ರಾಂಗ್ ಸೈಡ್ ನಲ್ಲಿ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕ್ಯೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ.ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಹಬ್ಬದ ಸಂಭ್ರಮದಲ್ಲಿ ಈ ಅಪಘಾತ ನಿಜಕ್ಕೂ ಆಘಾತ ಮೂಡಿಸಿದೆ.

ಪುತ್ತೂರು ನಗರ ಸಭೆ ಉಪಚುನಾವಣೆ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್

Posted by Vidyamaana on 2023-12-14 20:44:12 |

Share: | | | | |


ಪುತ್ತೂರು ನಗರ ಸಭೆ ಉಪಚುನಾವಣೆ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್

ಪುತ್ತೂರು : ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ತಿಳಿದು ಬಂದಿದೆ.ಕಾಂಗ್ರೆಸ್ ನಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ದಿನೇಶ್ ಶೇವಿರೆ ಹಾಗೂ ಅದೇ ರೀತಿ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ದಾಮೋದರ ಭಂಡಾರ್ಕರ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ್ ರೈ ಅವರು ತಿಳಿಸಿದ್ದಾರೆ.


ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

ಅಕ್ರಮ ಆಸ್ತಿ ಗಳಿಕೆ:ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ

Posted by Vidyamaana on 2023-06-30 11:45:49 |

Share: | | | | |


ಅಕ್ರಮ ಆಸ್ತಿ ಗಳಿಕೆ:ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ

ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಶುಕ್ರವಾರ ಆದೇಶ ನೀಡಿದೆ.

24 ಗಂಟೆಗಳಿಗೂ ಹೆಚ್ಚು ಕಾಲ ನಡೆದ ದಾಳಿ, ಶೋಧ ಕಾರ್ಯದ ವೇಳೆ ತಹಶೀಲ್ದಾರ್ ಅವರ ನಿವಾಸ ಮತ್ತು ಇತರ ಕಡೆಗಳಲ್ಲಿ ಆಸ್ತಿಗಳಲ್ಲಿ ಅಕ್ರಮ ಆಸ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಗುರುವಾರ ಅವರನ್ನು ಬಂಧಿಸಿದ್ದರು.

Recent News


Leave a Comment: