ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಪುತ್ತೂರು: ಕುರಿಯ ಜಾಗದ ತಕರಾರು ಅಕ್ರಮ ಪ್ರವೇಶ ಮನೆ ಧ್ವಂಸ ಲಕ್ಷಾಂತರ ರೂ. ನಷ್ಟ ದೂರು ದಾಖಲು

Posted by Vidyamaana on 2024-03-10 15:42:26 |

Share: | | | | |


ಪುತ್ತೂರು: ಕುರಿಯ ಜಾಗದ ತಕರಾರು ಅಕ್ರಮ ಪ್ರವೇಶ ಮನೆ ಧ್ವಂಸ ಲಕ್ಷಾಂತರ ರೂ. ನಷ್ಟ ದೂರು ದಾಖಲು

ಪುತ್ತೂರು:ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಪುತ್ತೂರು ಆದರ್ಶ ಆಸ್ಪತ್ರೆ ಬಳಿಯಿರುವ ಹೊಟೇಲ್ ಶ್ರೀಲಕ್ಷ್ಮೀ ಇದರ ಮಾಲಕ, ಕುರಿಯ ಹೊಸಮಾರು ನಿವಾಸಿ ವಸಂತ ಪೂಜಾರಿ ಎಂಬವರು ಘಟನೆ ಕುರಿತು ಸಂಪ್ಯ ಪೊಲೀಸರಿಗೆ ದೂರು ನೀಡಿ. ನಮ್ಮ ಸ್ವಾಧೀನದಲ್ಲಿರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯೊಳಗೆ ಜೆಸಿಬಿ ನುಗ್ಗಿಸಿ ಮನೆಯನ್ನು ಕೆಡವಿ ಮನೆಯ ವಸ್ತುಗಳನ್ನೆಲ್ಲಾ ನಾಶ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.ಶಶಿಕಲಾ ರೈ,ಮತ್ತವರ ಮಗ ಉಜ್ವಲ್ ರೈ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ಅವರು ದೂರು ನೀಡಿದ್ದಾರೆ.ಪೊಲೀಸರು ಕಲಂ 447,448,427,34 ಐಪಿಸಿಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ IDTU ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

Posted by Vidyamaana on 2023-12-12 11:56:38 |

Share: | | | | |


ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ  IDTU ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮಾಹಿತಿ ತಿರುಚುವಿಕೆ ಪತ್ತೆ ಘಟಕದ (IDTU) ಕಾರ್ಯ ನಿರ್ವಹಣೆಗೆ ಐದು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.ರಾಜ್ಯ ಸರ್ಕಾರವು ಇನ್ಫೋ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌, ಗೌರಿ ಮೀಡಿಯಾ ಟ್ರಸ್ಟ್‌, ಟೈಲೈಕ್‌ ಟೆಕ್ನಾಲಜಿ ಲಿಮಿಟೆಡ್‌, ನ್ಯೂಸ್‌ ಪ್ಲಸ್‌ ಕಮ್ಯುನಿಕೇಷನ್‌ ಮತ್ತು ಒಡಬ್ಲ್ಯೂ ಡಾಟಾ ಲೀಡ್ಸ್‌ ಸಂಸ್ಥೆಗಳನ್ನು ಸುಳ್ಳು ಸುದ್ದಿ ಪತ್ತೆಗೆ ಆಯ್ಕೆ ಮಾಡಲಾಗಿದೆ.ರಾಜ್ಯ ಸರ್ಕಾರವು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಪೊಲೀಸ್‌ ಮಹಾನಿರ್ದೇಶಕರ ನೇತೃತ್ವದಲ್ಲಿ ಐಡಿಟಿಯು ಕಾರ್ಯನಿರ್ವಹಿಸಲಿದ್ದು, ಶೀಘ್ರವೇ ಕಾರ್ಯಾಚರಣೆ ಆರಂಭಿಸಲಿದೆ.

ಮಲ್ಪೆ ಬಂದರಿನಲ್ಲಿ ನದಿಗೆ ಬಿದ್ದಿದ್ದ ಐಫೋನ್ ಮೊಬೈಲ್ ಹುಡುಕಿ ತೆಗೆದ ಮುಳುಗು ತಜ್ಞ ಈಶ್ವರ್ ಮಲ್ಪೆ - ವಿಡಿಯೋ ವೈರಲ್

Posted by Vidyamaana on 2023-08-11 01:46:09 |

Share: | | | | |


ಮಲ್ಪೆ ಬಂದರಿನಲ್ಲಿ ನದಿಗೆ ಬಿದ್ದಿದ್ದ ಐಫೋನ್ ಮೊಬೈಲ್ ಹುಡುಕಿ ತೆಗೆದ ಮುಳುಗು ತಜ್ಞ ಈಶ್ವರ್ ಮಲ್ಪೆ - ವಿಡಿಯೋ ವೈರಲ್

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಅಪಾಯಕಾರಿ ನೀರಿನಲ್ಲಿ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐಫೋನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ. 


ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. ಮೌಲ್ಯದ ಐ ಫೋನ್ ಮೊಬೈಲ್ ಜೆಟ್ಟಿ ಬಳಿ ಬೋಟ್ ನಿಲ್ಲುವ ನದಿ ನೀರಿಗೆ ಬಿದ್ದಿತ್ತು. ಮೊಬೈಲ್ ಕಳೆದುಕೊಂಡು ಚಿಂತಿತರಾದ ಅವರು ಬೇರೆಯವರ ಸಹಾಯದಿಂದ ಈಶ್ವ‌ರ್ ಮಲ್ಪೆ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.ತಕ್ಷಣ ಧಾವಿಸಿ ಬಂದ ಈಶ್ವ‌ರ್  ಮಲ್ಪೆ ನೀರಿನ ಆಳದಲ್ಲಿ ಹುಡುಕಾಟ ನಡೆಸಿದ್ದು ಮೊಬೈಲ್ ಪತ್ತೆ ಹಚ್ಚಿ ಹೊರತೆಗೆದು ವಾರಸುದಾರರಿಗೆ ನೀಡಿದ್ದಾರೆ. ನೆರೆದಿದ್ದ ಜನ ಈಶ್ವರ್ ಅವರ ಚಾಕಚಕ್ಯತೆಯನ್ನು ಕೊಂಡಾಡಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ

ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Posted by Vidyamaana on 2024-04-22 10:48:39 |

Share: | | | | |


ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ

ಬೆಳ್ತಂಗಡಿ: ವಿದ್ಯುತ್ ತಗುಲಿ ಕಬಡ್ಡಿ ಆಟಗಾರ ಹರೀಶ ಮೃತ್ಯು

Posted by Vidyamaana on 2024-07-15 16:01:09 |

Share: | | | | |


ಬೆಳ್ತಂಗಡಿ: ವಿದ್ಯುತ್ ತಗುಲಿ ಕಬಡ್ಡಿ ಆಟಗಾರ ಹರೀಶ ಮೃತ್ಯು

ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Posted by Vidyamaana on 2024-05-20 14:34:59 |

Share: | | | | |


ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

ಲಕ್ನೋ: ವ್ಯಕ್ತಿಯೊಬ್ಬ ಮತದಾನ ಮಾಡುವಾಗ ಬಿಜೆಪಿ ಅಭ್ಯರ್ಥಿಗೆ ಹಲವು ಬಾರಿ ಮತದಾನ ಮಾಡಿದ್ದು, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ವೈರಲ್ ಆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೃತ್ಯವೆಸಗಿದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ರಾಜನ್ ಸಿಂಗ್ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳ ಹಲವು ನಾಯಕರು ಎಕ್ಸ್ ನಲ್ಲಿ ವಿಡಿಯೋ ಹಂಚಿ ಆಗ್ರಹಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಯಿತು.

Recent News


Leave a Comment: