ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಪುತ್ತೂರು : ಶಾಲಾ ಪರಿಸರದ ಸೇತುವೆಯ ಕೆಳಗೆ ಕೊಳೆತ ಕುರಿಗಳ ಶವ ಪತ್ತೆ

Posted by Vidyamaana on 2024-05-17 12:15:08 |

Share: | | | | |


ಪುತ್ತೂರು : ಶಾಲಾ ಪರಿಸರದ ಸೇತುವೆಯ ಕೆಳಗೆ ಕೊಳೆತ ಕುರಿಗಳ ಶವ ಪತ್ತೆ

ಪುತ್ತೂರು:ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತೆಂಕಿಲ ವಿವೇಕಾನಂದ ಶಾಲಾ ಪರಿಸರದ ಸಮೀಪದ ಸೇತುವೆಯ ಕೆಳಗೆ ಕೊಳೆತ ಸ್ಥಿತಿಯಲ್ಲಿ ಕುರಿಗಳ ಶವಪತ್ತೆಯಾಗಿದೆ.

ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಡ್ರೆಸ್ ಮಳಿಗೆಯಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ

Posted by Vidyamaana on 2023-06-16 06:46:10 |

Share: | | | | |


ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಡ್ರೆಸ್ ಮಳಿಗೆಯಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ

ಪುತ್ತೂರು: ಪುತ್ತೂರಿನ ಡ್ರೆಸ್ ಮಳಿಗೆಗಳ ಪೈಕಿ ಪ್ರಸಿದ್ಧಿಯನ್ನು ಪಡೆದುಕೊಂಡಿರುವ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಜೂನ್ 16ರಿಂದ ನಡೆಯಲಿದೆ.

ಅತೀ ಕಡಿಮೆ ಬೆಲೆಗೆ ಡ್ರೆಸ್ ಗಳ ಮಾರಾಟ ಇಲ್ಲಿ ನಡೆಯಲಿದ್ದು, ಗ್ರಾಹಕರ ನಿರೀಕ್ಷೆಯಂತೆಯೇ ಶುಕ್ರವಾರದಿಂದ ಈ ಸೇಲ್ ಗೆ ಚಾಲನೆ ನೀಡಲಾಗಿದೆ.

ಪುತ್ತೂರು ಕೋಟಿ – ಚೆನ್ನಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದ ಶಾಲಿಮಾರ್ ಬಿಲ್ಡಿಂಗ್ ನ ಎದುರುಗಡೆ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಕಾರ್ಯಾಚರಿಸುತ್ತಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಚೀನಾ ವೈರಸ್ ಅಲರ್ಟ್; ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

Posted by Vidyamaana on 2023-11-30 13:11:32 |

Share: | | | | |


ಚೀನಾ ವೈರಸ್ ಅಲರ್ಟ್; ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

ನವದೆಹಲಿ: ಚೀನಾದ ಮಕ್ಕಳಲ್ಲಿ ಉಸಿರಾಟ ಸಂಬಂಧಿ ಕಾಯಿಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳಿಗೆ ಅನುಗುಣವಾಗಿ ಕರ್ನಾಟಕ ಸಹಿತ ಐದು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಾಖಂಡ ಮತ್ತು ತಮಿಳುನಾಡು ರಾಜ್ಯಗಳು ಉಸಿರಾಟದ ಸಮಸ್ಯೆಗಳನ್ನು ನಿರ್ವಹಿಸಲು ತಯಾರಾಗಿರುವಂತೆ ಆಸ್ಪತ್ರೆಗಳು ಮತ್ತು ಆರೋಗ್ಯಸೇವಾ ಸಿಬ್ಬಂದಿಗೆ ನಿರ್ದೇಶನ ನೀಡಿವೆ. ಕರೊನಾ ನಿಯಂತ್ರಣಕ್ಕೆ ಹೊರಡಿಸಲಾದ ಪರಿಷ್ಕೃತ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಕರೊನಾ ಸಂದರ್ಭದಲ್ಲಿ ಆದ ತಪುಪಗಳು ಪುನರಾವರ್ತನೆ ಆಗಬಾರದೆಂಬ ಕಾರಣಕ್ಕೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ರಾಜ್ಯದಲ್ಲಿ ಶೀತಜ್ವರ (ಐಎಲ್​ಐ), ಉಸಿರಾಟದ ಸಮಸ್ಯೆ(ಸಾರಿ) ಪ್ರಕರಣಗಳು ಉಲ್ಬಣಿಸಿಲ್ಲ.


ಹೀಗಾಗಿ ಸದ್ಯಕ್ಕಂತೂ ಆತಂಕಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ ವಹಿಸಬೇಕಿದೆ ಎಂದು ಸರ್ಕಾರ ರಚಿಸಿರುವ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ವಿಜಯವಾಣಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೀರ್ಘಾವಧಿ ಹಾಗೂ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಆದ್ಯತೆ ಮೇಲೆ ಮುನ್ನೆಚ್ಚರಿಕೆ ವಹಿಸಬೇಕು. ಜನದಟ್ಟಣೆ ಹಾಗೂ ಶೀತ ಪ್ರದೇಶಕ್ಕೆ ಭೇಟಿ ನೀಡುವುದನ್ನು ನಿಯಂತ್ರಿಸುವುದು ಮತ್ತು ಮಕ್ಕಳು,ವೃದ್ಧರು, ಗರ್ಭಿಣಿಯರು ಸಹ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಇಲಾಖೆ ಸ್ಪಷ್ಟ ಎಚ್ಚರಿಕೆ ನೀಡಿದೆ.


ಬುಧವಾರ ಆರೋಗ್ಯ ಸಚಿವರು ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಸೂಚನೆ ನೀಡಲಾಗಿದೆ. ಇನ್ನೊಂದೆಡೆ ಕೇಂದ್ರದ ಅಧಿಕಾರಿಗಳು ವಿಡಿಯೋ ಕಾನ್ಪರೆನ್ಸ್ ಮೂಲಕ ರಾಜ್ಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬೆಳವಣಿಗೆ ಕುರಿತು ಮಾಹಿತಿ ಹಂಚಿಕೊಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚೀನಾ ವೈರಸ್ ಬಗ್ಗೆ ಸಾರ್ವಜನಿಕರು ಆತಂಕಪಡುವುದು ಬೇಡ. ಸರ್ಕಾರ ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಸಾಧಾರಣವಾಗಿ ನವೆಂಬರ್, ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಚಳಿಗಾಲದ ಕಾರಣಕ್ಕಾಗಿ ಉಸಿರಾಟದ ಸಮಸ್ಯೆ ಪ್ರಕರಣಗಳು ವರದಿಯಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಆದರೆ, ಇದನ್ನು ಚೀನಾ ವೈರಸ್​ಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದರು.


ಎಚ್ಚರಿಕೆ ಕ್ರಮಗಳೇನು?: ಚೀನಾ ವೈರಸ್ ಹಿನ್ನೆಲೆಯಲ್ಲಿ: ಆರೋಗ್ಯ ಇಲಾಖೆ ಆಸ್ಪತ್ರೆಗಳು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಾರ್ವ ಜನಿಕರು ಮುಖ್ಯವಾಗಿ ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರಅಥವಾ ಟಿಶ್ಯುವಿನಿಂದ ಮುಚ್ಚಿಕೊಳ್ಳಬೇಕು, ಸಾಬೂನು ಮತ್ತು ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳಬೇಕು, ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಮುಟ್ಟಿಕೊಳ್ಳಬಾರದು, ಜನ ದಟ್ಟಣೆ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಜ್ವರಪೀಡಿತ ವ್ಯಕ್ತಿಯಿಂದ ಕನಿಷ್ಠ ಅಂತರ ಕಾಪಾಡಿಕೊಳ್ಳಬೇಕು. ಸಮರ್ಪಕ ವಾಗಿ ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು, ಸಾಕಷ್ಟು ನೀರು ಕುಡಿಯಬೇಕು, ಪೌಷ್ಟಿಕ ಆಹಾರವನ್ನು ಸೇವಿಸಬೇಕು ಎಂದು ಸಲಹೆ ನೀಡಲಾಗಿದೆ. ಸಾರ್ವಜನಿಕವಾಗಿ ಉಗುಳುವುದು, ಸೀನುವುದು ಮಾಡಬಾರದು. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷಿಸದೆ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂಬ ಅಂಶ ಮಾರ್ಗಸೂಚಿಯಲ್ಲಿದೆ.


ಮಾಸ್ಕ್ ಕಡ್ಡಾಯ: ಆಸ್ಪತ್ರೆಯಲ್ಲಿ ವರದಿಯಾಗುವ ಶೀತಜ್ವರ (ಐಎಲ್​ಐ) ಮತ್ತು ಉಸಿರಾಟದ ತೊಂದರೆ (ಸಾರಿ) ಪ್ರಕರಣಗಳ ಕುರಿತು ಐಡಿಎಸ್​ಪಿ-ಐಎಚ್​ಐಪಿ ಪೋರ್ಟಲ್​ನಲ್ಲಿ ದಾಖಲಿಸುವಂತೆ ತಿಳಿಸಲಾಗಿದೆ. ಅಗತ್ಯಔಷಧಗಳ ದಾಸ್ತಾನು ಮಾಡಿಕೊಳ್ಳುವಂತೆ ಮತ್ತು ಎಲ್ಲ ಆರೋಗ್ಯ ಸೇವೆಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ಬಳಸಿಕೊಳ್ಳುವಂತೆ, ವೈದ್ಯರು, ಶುಶ್ರೂಷಕರು ಸೇರಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಗೊತ್ತುಪಡಿಸಿದ ಎಲ್ಲ ಆಸ್ಪತ್ರೆಗಳು ತಕ್ಷಣವೇ ವೈದ್ಯಕೀಯ ಮೂಲಸೌಕರ್ಯ, ವೈದ್ಯಕೀಯ ಮತ್ತು ಅರೆವೈದ್ಯಕೀಯ ಮಾನವಶಕ್ತಿ, ಆಮ್ಲಜನಕ ಹಾಸಿಗೆಗಳು, ಪ್ರತ್ಯೇಕ ಹಾಸಿಗೆಗಳು, ವೆಂಟಿಲೇಟರ್​ಗಳು, ಪಿಎಸ್​ಎ ಪ್ಲಾಂಟ್​ಗಳು, ಎಲ್​ಎಂಒ ಪ್ಲಾಂಟ್​ಗಳ ಸಂಪನ್ಮೂಲಗಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಲಾಗಿದೆ.


ಆಮ್ಲಜನಕ ಸಿಲಿಂಡರ್​ಗಳು, ಔಷಧಗಳು, ಪಿಪಿಇ ಕಿಟ್ಗಳು, ಪರೀಕ್ಷಾ ಕಿಟ್​ಗಳು ಮತ್ತು ಲ್ಯಾಬ್ ಸೌಲಭ್ಯಗಳು, ಆಂಬ್ಯುಲೆನ್ಸ್ ಸೇರಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳು ವಂತೆಯೂ ಸೂಚಿಸಲು ಸಭೆಯಲ್ಲಿ ತಿಳಿಸಲಾಗಿದೆ. ಕೋವಿಡ್, ಇನ್ಪೂಯೇನ್ಝಾ ವೈರಸ್, ಅಡೆನೋ ವೈರಸ್ ಸೇರಿ ಯಾವುದೇ ಸೋಂಕು ಮಾದರಿಗಳನ್ನು ಹತ್ತಿರದ ಪ್ರಯೋಗಾಲಯಗಳಿಗೆ ಕಳುಹಿಸಬೇಕು ಹಾಗೂ ರಾಜ್ಯದ ಎಲ್ಲ ವೈರಾಣುಸಂಶೋಧನೆ ಮತ್ತು ರೋಗಪತ್ತೆ ಪ್ರಯೋಗಾಲಯಗಳು ಐಎಚ್​ಐಪಿ ಪೋರ್ಟಲ್​ನಲ್ಲಿ ಪರೀಕ್ಷಾ ವರದಿ ದಾಖಲಿಸಲು ಸೂಚಿಸಲಾಗಿದೆ.


ಮುನ್ನೆಚ್ಚರಿಕೆ ಕ್ರಮಗಳು


ನಿಯಮಿತವಾಗಿ ಕೈಗಳನ್ನು ತೊಳೆಯಿರಿ

ಮಾಸ್ಕ್ ಸರಿಯಾಗಿ ಬಳಸಿ

ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕ ತಪ್ಪಿಸಿ

ನಿಮ್ಮ ಸುತ್ತಲೂ ಶುದ್ಧ, ಉತ್ತಮ ವಾತಾವರಣ ಇರಲಿ

ಪರೀಕ್ಷೆ ಮಾಡಿಕೊಂಡು, ವೈದ್ಯರ ಸಲಹೆಯನ್ನು ತೆಗೆದುಕೊಳ್ಳಿ.

ಅನಾರೋಗ್ಯದಿಂದ ಬಳಲುತ್ತಿದ್ದರೆ, ರೋಗಲಕ್ಷಣಗಳನ್ನು ಹೊಂದಿದ್ದರೆ ಮನೆಯಲ್ಲೇ ಇರಿ

ಪರ್ಲಡ್ಕ : ಮಿನಿ ಪಿಕಪ್ ಗೆ ಆಕ್ಟಿವಾ ಡಿಕ್ಕಿ

Posted by Vidyamaana on 2023-11-24 04:43:28 |

Share: | | | | |


ಪರ್ಲಡ್ಕ : ಮಿನಿ ಪಿಕಪ್ ಗೆ ಆಕ್ಟಿವಾ ಡಿಕ್ಕಿ

ಪುತ್ತೂರು: ಪರ್ಲಡ್ಕ ಜಂಕ್ಷನ್ ನಲ್ಲಿ ರಿಕ್ಷಾವನ್ನು ಹಿಂದಿಕ್ಕಲು ಹೋದ ದ್ವಿಚಕ್ರ ವಾಹನವೊಂದು ಪಿಕಪ್  ಗೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪರ್ಲಡ್ಕದಲ್ಲಿ ನ 23 ರಂದು ನಡೆದಿದೆ. ಡಿಕ್ಕಿಯಾದ ರಬಸಕ್ಕೆ   ದ್ವಿಚಕ್ರವಾಹನ ಛಿದ್ರವಾಗಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾರೆ.


ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿ ಹೋದ ನಿಸಾನ್ ಕಾರಿಗೆ ಪೊಲೀಸರು ಲಾಕ್ ಹಾಕಿದ್ದು, ಇದನ್ನು ತಪ್ಪಿಸಲು ರಿಕ್ಷಾ ಹೋಗಿದ್ದು, ಈ ಸಂದರ್ಭ ಹಿಂಭಾಗದಿಂದ ಬರುತ್ತಿದ್ದ ದ್ವಿಚಕ್ರವಾಹನ ರಸ್ತೆಯ ಬಲ ಬದಿಗೆ ಬಂದಿದೆ. ಇದರಿಂದ ಮಡಿಕೇರಿ ಭಾಗದಿಂದ ಬರುತ್ತಿದ್ದ ಮಿನಿ ಪಿಕಪ್ ಗೆ ಡಿಕ್ಕಿಯಾಗಿದೆ.

ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024

Posted by Vidyamaana on 2024-01-14 15:24:25 |

Share: | | | | |


ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ನೀವು ರಸ್ತೆ ಸುರಕ್ಷತಾ ಹೀರೋ ಆಗಿರಿ ಎನ್ನುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ನಡೆಯಿತು.

ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್. ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಪುತ್ತೂರು ನಗರ ಠಾಣೆ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ, ನಿಮ್ಮ ಆಟೋದಲ್ಲಿ ಬರುವ ಒಂದು ಮಗು ಮುಂದಿನ ಮುಖ್ಯ ಮಂತ್ರಿ, ಪ್ರಧಾನ ಮಂತ್ರಿ ಅಥವಾ ರಾಷ್ಟ್ರಪತಿ  ಆಗಿರಬಹುದು. ಆದ್ದರಿಂದ ಪೋಷಕರು ಮಕ್ಕಳನ್ನು ಕರೆತರುವ ವಾಹನದ ಚಾಲಕರ ಮೇಲೆ ಇಟ್ಟಿರುವ ನಂಬಿಕೆಗೆ ಚ್ಯುತಿ ಬಾರದಂತೆ ವಾಹನವನ್ನು ರಸ್ತೆ ನಿಯಮ ಉಲ್ಲಂಘನೆ ಮಾಡದೆ ಚಲಾಯಿಸಿ ನಿಮ್ಮನ್ನು, ನಿಮ್ಮನ್ನು ನಂಬಿರುವ ಕುಟುಂಬವನ್ನು ರಕ್ಷಿಸಿ ಎಂದರು.

ಶಾಲಾ ಸಂಚಾಲಕ ವಂದನೀಯ ಭಗಿನಿ ಪ್ರಶಾಂತಿ ಬಿ.ಎಸ್, ಪುತ್ತೂರು ನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ಕರಿಯ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ವಿದೂಷಿ ನಯನಾ ವಿ ರೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ಸತೀಶ್ ಆರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅಸ್ಮಾ ಹಾಗೂ ಗೈಡ್ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಬೆಥನಿ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ವಾಮಂಜೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಟ್ಲ್ ಫ್ಲವರ್ ಹಾಗೂ ಬೆಥನಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳ ವತಿಯಿಂದ ನಡೆದ ನೃತ್ಯ ರೂಪಕವನ್ನು ರಚಿಸಿ ನಿರ್ದೇಶಿಸಿದ ಶಾಲಾ ಶಿಕ್ಷಕರಾದ ಬಾಲಕೃಷ್ಣ ಪೊರ್ದಾಲ್, ನೃತ್ಯ ಸಂಯೋಜನೆ ಮಾಡಿದ ವಿದೂಷಿ ಸ್ವಸ್ತಿಕಾ ಆರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಹಾಡು ರಚಿಸಿದ ಸಾಹಿತಿ, ಸಂಜಯ ನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ರಮೇಶ್ ಉಳಯ ಅವರನ್ನು ಅವರ ಶಾಲೆಗೆ ತೆರಳಿ ಸನ್ಮಾನಿಸಲಾಯಿತು. ಬಳಿಕ ಜನಸ್ನೇಹಿ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ಶಾಲಾ ಗೈಡ್ಸ್ ವಿದ್ಯಾರ್ಥಿನಿಯರಾದ ದ್ರಿಶಾ, ಆರಾಧನಾ, ತನ್ವಿ ಹಾಗೂ ಬೃಂದಾ ಪ್ರಾರ್ಥಿಸಿ, ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ರವರು ಸ್ವಾಗತಿಸಿದರು. ಕಬ್ ಶಿಕ್ಷಕಿ ದಿವ್ಯ ವಂದಿಸಿ, ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

ಹಿಂದು ಕಾರ್ಯಕರ್ತರ ಗಡಿಪಾರು ಪ್ರಕರಣ – ಬಿಜೆಪಿ ಮೇಲೆ ಹರಿಹಾಯ್ದ ಶಾಸಕ ಅಶೋಕ್ ರೈ

Posted by Vidyamaana on 2023-11-20 17:29:09 |

Share: | | | | |


ಹಿಂದು ಕಾರ್ಯಕರ್ತರ ಗಡಿಪಾರು ಪ್ರಕರಣ – ಬಿಜೆಪಿ ಮೇಲೆ ಹರಿಹಾಯ್ದ ಶಾಸಕ ಅಶೋಕ್ ರೈ

ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು ಈಗ ಬಿಜೆಪಿಯವರು ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದು ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವಿಚಾರದಲ್ಲಿ ಬಿಜೆಪಿ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಉತ್ತಮ. ಯುವಕರನ್ನು ಬಳಕೆ ಮಾಡಿ ಅವರ ಮೇಲೆ ಕೇಸು ಹಾಕಿಸಿ ಅವರನ್ನು ಗಡಿಪಾರುಮಾಡುವಂತೆ ಮಾಡಿ ಆ ಬಳಿಕ ಅವರ ಪರ ಪ್ರತಿಭಟನೆಯ ನಾಟಕವಾಡುವುದು ಇವರ ಕೆಲಸವಾಗಿದೆ. ಇವರ ಸರಕಾರ ಇರುವಾಗಲೇ ಯುವಕರ ಮೇಲೆ ಕೇಸು ಹಾಕಿಸಿದ್ದಾರೆ ಬಿಜೆಪಿಯವರೇ ಕೇಸ್ ಹಿಂಪಡೆಸಬೇಕಿತ್ತು. ಇವರ ಲಾಭಕ್ಕಾಗಿ ಯುವಕರ ಮೇಲೆ ಕೇಸು ಹಾಕಿಸಿದ್ದಾರಲ್ಲ ಯುವಕರು ಆಲೋಚನೆ ಮಾಡಬೇಕು. ಈಗ ಕಾಂಗ್ರೆಸ್ ಸರಕಾರ ಗಡಿಪಾರು ಮಾಡಿದ್ದಾರೆ ಎಂದು ಬಿಜೆಪಿಯವರು ಪ್ರತಿಭಟನೆ ಮಾಡಲು ಮುಂದಾಗಿರುವುದು ಹೇಸಿಗೆಯ ವಿಚಾರವಾಗಿದೆ. ಯುವಕರನ್ನು ಅವರ ಲಾಭಕ್ಕಾಗಿ ಬಳಕೆ ಮಾಡಿ ಅವರಿಗೆ ದಿಕ್ಕು ದೆಸೆಯಿಲ್ಲದೆ ಮಾಡಿದ್ದಾರೆ. ಗಡಿಪಾರಾದ ಯುವಕರು ಕೃತ್ಯದಲ್ಲಿ ಭಾಗಿಯಾಗಿದ್ದಾರಾ ಎಂಬುದನ್ನು ಇಲಾಖೆ ಕೂಲಂಕುಶವಾಗಿ ತನಿಖೆ ಮಾಡುತ್ತದೆ ಈ ಬಗ್ಗೆ ನಾನು ಇಲಾಖೆಗೆ ಸೂಚನೆಯನ್ನು ನೀಡಿದ್ದೇನೆ. ಬಿಜೆಪಿಯವರು ನಾಟಕ ಮಾಡುವುದನ್ನು ಮೊದಲು ನಿಲ್ಲಿಸಬೇಕು ಮತ್ತು ಯುವಕರನ್ನು ಕೆಟ್ಟ ಕೆಲಸಗಳಿಗೆ ಬಳಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Recent News


Leave a Comment: