ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಸುಳ್ಳು ಭರವಸೆಯನ್ನು ಕೊಡುವುದಿಲ್ಲ. ಕೊಟ್ಟ ಮಾತಿಗೆ ತಪ್ಪಲಾರೆ: ಅಶೋಕ್ ರೈ

Posted by Vidyamaana on 2023-05-04 11:51:21 |

Share: | | | | |


ಸುಳ್ಳು ಭರವಸೆಯನ್ನು ಕೊಡುವುದಿಲ್ಲ. ಕೊಟ್ಟ ಮಾತಿಗೆ ತಪ್ಪಲಾರೆ: ಅಶೋಕ್ ರೈ

ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು.

ಚಲಿಸ್ತಿದ್ದ ಬಸ್ಸಲ್ಲೇ ಕಾಮದಾಟ ಆಡ್ತಿದ್ದ ಕಂಡಕ್ಟರ್ ಮಾಮ ರೆಂಡ್ ಹ್ಯಾಂಡ್ ಆಗಿ ಕ್ಯಾಚ್

Posted by Vidyamaana on 2023-07-04 21:58:42 |

Share: | | | | |


ಚಲಿಸ್ತಿದ್ದ ಬಸ್ಸಲ್ಲೇ ಕಾಮದಾಟ ಆಡ್ತಿದ್ದ ಕಂಡಕ್ಟರ್ ಮಾಮ ರೆಂಡ್ ಹ್ಯಾಂಡ್ ಆಗಿ ಕ್ಯಾಚ್

ಲಕ್ನೋ: ಈಗ ಎಲ್ಲಿ ನೋಡಿದರೂ ‘ಮಂಚ’ದ್ದೇ ಸುದ್ದಿ! ಈ ಮಂಚದ ಸಹವಾಸ ರಾಜಕಾರಣಿಗಳ ಪದವಿಗೆ ಕುತ್ತು ತಂದರೆ, ಮರ್ಯಾದಸ್ಥರೆಣಿಸಿಕೊಂಡವರ ಮಾನವನ್ನೇ ಮೂರಾಬಟ್ಟೆಯನ್ನಾಗಿಸುತ್ತದೆ. ಮನೆಯಲ್ಲಿ, ಲಾಡ್ಜ್ ನಲ್ಲಿ, ಆಫೀಸಿನಲ್ಲಿ, ಶಾಲೆ-ಕಾಲೇಜುಗಳಲ್ಲಿ, ಪಾರ್ಕ್’ನ ಸಂಧುಗೊಂದಿಗಳಲ್ಲಿ.. ಹೀಗೆ ಈ ಕಾಮದಾಟಕ್ಕೆ ಅದೇ ಜಾಗ ಇದೇ ಸ್ಥಳ ಎಂದೇನಿಲ್ಲ! ‘ಒಲ್ಪಲಾ ಆಪುಂಡು..’ ಅನ್ನೋ ರೀತಿ ನಡೆಯಿತ್ತಿರುವುದನ್ನು ನಾವಲ್ಲಾ ಪ್ರತೀನಿತ್ಯ ಓದುತ್ತಿರುತ್ತೇವೆ ಮತ್ತು ವಿಡಿಯೋ ಸಿಕ್ಕಿದ್ರಂತೂ ಎಲ್ಲವನ್ನೂ ‘ನೆಟ್ಟಗಾಗಿಸಿಕೊಂಡು’ ನೆಟ್ ಖಾಲಿ ಆಗೋವರ್ಗೂ ನೋಡ್ತಿರ್ತೇವೆ!


ಈಗ ವಿಷ್ಯ ಏನಪ್ಪಾ ಅಂದ್ರೆ ಚಲಿಸ್ತಿದ್ದ ಬಸ್ಸಿನಲ್ಲೇ ಮಹಿಳೆಯೊಂದಿಗೆ ಕಾಮದಾಟವಾಡ್ತಿದ್ದ ಕಂಡಕ್ಟರ್ ಒಬ್ಬ ಪ್ರಯಾಣಿಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರೋದು ಮಾತ್ರವಲ್ಲದೇ ಈತನ ಈ ರಾಸ ಲೀಲೆಯನ್ನು ವಿಡಿಯೋ ಮಾಡಿರುವ ಪ್ರಯಾಣಿಕರು ಅದನ್ನೀಗ ಎಲ್ಲೆಡೆ ವೈರಲ್ ಮಾಡ್ತಿದ್ದಾರೆ.


‘ಆ ವಿಡಿಯೋ ತಿಕ್ಕುವಾ..?’ ಅಂತ ಮಾತ್ರ ಕೇಳ್ಬೇಡಿ ಯಾಕಂದ್ರೆ ಇದು ನಡೆದಿರೋದು ದೂರದ ಉತ್ತರ ಪ್ರದೇಶದಲ್ಲಿ. ಇಲ್ಲಿ ಲಕ್ನೋ ಕಡೆ ಸಂಚರಿಸ್ತಿದ್ದ ಹತ್ರಾಸ್ ಡಿಪೋಗೆ ಸೇರಿದ ಬಸ್ಸಿನಲ್ಲಿ ಅದೇ ಬಸ್ಸಿನ ಕಂಡಕ್ಟರ್ ಮಹಿಳಾ ಪ್ರಯಾಣಿಕಳೊಬ್ಬಳ ಜೊತೆ ಕಂಬಳಿ ಹೊದ್ದುಕೊಂಡು ‘ಕಾಮದಾಟ’ಕ್ಕೆ ಇಳಿದಿದ್ದಾನೆ, ಹೇಗೂ ಬಸ್ಸು ಹೋಗ್ತಿತ್ತಲ್ಲ, ಕೆಲಸ ಸುಲಭ ಆಗ್ತದೆ ಅಂತ ಬಸ್ಸಿನ ಸೀಟಲ್ಲೇ ಆಟ ಶುರು ಮಾಡಿದ್ದಾನೆ ಈ ಪುಣ್ಯಾತ್ಮ!


ಆದ್ರೆ ಅವ್ನ ದುರಾದೃಷ್ಟಕ್ಕೆ ಇದನ್ನು ಗಮನಿಸಿದ ಪ್ಯಾಸೆಂಜರ್ಸ್ ಈ ಪೋಲಿ ಕಂಡಕ್ಟರ್ ನ ಕಾಮದಾಟವನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರೋದು ಮಾತ್ರವಲ್ಲದೇ ಯಾರೋ ಒಬ್ರು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಬೇರೆ ಮಾಡ್ಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗಲಿಬಿಲಿಗೊಂಡ ಕಂಡಕ್ಟರ್ ಮಾಮ ಕಂಬಳಿಯಿಂದ್ಲೇ ತನ್ನ ಮಾನ ಮುಚ್ಚಿಕೊಳ್ಳೋ ಪ್ರಯತ್ನ ಮಾಡಿರೋದು ಮಾತ್ರವಲ್ಲದೇ ವಿಡಿಯೋ ಮಾಡ್ತಿದ್ದವರ ಕೆಮರಾ ಕಿತ್ಕೊಳ್ಳೋಕೋ ಮುಂದಾಗಿದ್ದಾನೆ, ಆದ್ರೆ ಏನನ್ನೂ ಕಿತ್ಕೊಳ್ಳೋಕಾಗ್ದೇ ಕಡೆಗೆ ತನ್ನ ಮಾನವನ್ನೂ ಕಳ್ಕೊಂಡಿರುವ ಈ ಕಂಡಕ್ಟರ್ ಇದೀಗ ‍ಕೆಲಸದಿಂದ ಸಸ್ಪೆಂಡ್ ಕೂಡಾ ಆಗಿರುವ ಮಾಹಿತಿ ಲಭಿಸಿದೆ.

ಒಟ್ಟಿನಲ್ಲಿ ‘ಓಲ್ ಲಾ ಆಪುಂಡು..’ ಅಂತ ತನ್ನ ಚಟ ತೀರ್ಸೋಕೆ ಹೋದ್ರೆ ಕೊನೆಗೆ ಮಾನ-ಮರ್ಯಾದಿ ಜೊತೆಯಲ್ಲಿ ಇರೋ ಕೆಲಸಾನೂ ಹೋಗುತ್ತೇ ಅನ್ನೋದಕ್ಕೆ ಈ ಕಂಡಕ್ಟರ್ ಮಾಮ ಉದಾಹರಣೆಯಾಗಿದ್ದಾನೆ.

ನಮ್ಮ ಸಂಕಷ್ಟಕ್ಕೆ ಸ್ಪಂದಿಸದೆ ಈಗ ಬಂದು ಏನು ಪ್ರಯೋಜನ ?ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

Posted by Vidyamaana on 2024-08-17 04:59:32 |

Share: | | | | |


ನಮ್ಮ ಸಂಕಷ್ಟಕ್ಕೆ ಸ್ಪಂದಿಸದೆ ಈಗ ಬಂದು ಏನು ಪ್ರಯೋಜನ ?ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

ಬೆಳ್ತಂಗಡಿ: ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಪಿಲಿಕಲ ರಸ್ತೆ ವ್ಯಾಪಕವಾಗಿ ಬಿರುಕು ಬಿಟ್ಟು ಜನ, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಆ ಪ್ರದೇಶಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಸ್ಥಳೀಯ ಜನರು ತರಾಟೆಗೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆಯಿತು.

ದ.ಕ ಜಿಲ್ಲೆಯಾದ್ಯಂತ ಕಳೆದ ಒಂದು ತಿಂಗಳಿಂದ ಭಾರೀ ಮಳೆಯಾಗಿ ತಾಲೂಕಿನಾದ್ಯಂತ ವ್ಯಾಪಕವಾಗಿ ಪ್ರಾಕೃತಿಕ ವಿಕೋಪ ಸಂಭವಿಸಿತ್ತು. ಸವಣಾಲು ಗ್ರಾಮದ ಪಿಲಿಕಲ ಪ್ರದೇಶ ಸೇರಿದಂತೆ ವಿವಿಧೆಡೆ ದ.ಕ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳ ತಂಡ ಭೇಟಿ ನೀಡಿದ್ದರು. ಆದರೆ ಶಾಸಕ ಹರೀಶ್ ಪೂಂಜ ಅವರು ಮಾತ್ರ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಬಳಿಕ ಈ ಪ್ರದೇಶದ ಜನರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಹೋಗಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದರೂ ಅಲ್ಲಿನ ಜನರು ಸಾಕುಪ್ರಾಣಿಗಳನ್ನು ಬಿಟ್ಟು ನಾವು ಕಾಳಜಿ ಕೇಂದ್ರಕ್ಕೆ ಬರಲು ಸಾಧ್ಯವಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದ್ದರು. ಬಳಿಕ ಅಧಿಕಾರಿಗಳು ಪರ್ಯಾಯ ರಸ್ತೆ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಇಂಜಿನಿಯರ್ ಗಳು ಆಗಮಿಸಿ ಅಂದಾಜು ಪಟ್ಟಿ ತಯಾರಿಸಿದ್ದರು.

ಅಕ್ರಮ ಜಾನುವಾರು ಸಾಗಾಟ ವಿಚಾರದಲ್ಲಿ ವೈಷಮ್ಯ

Posted by Vidyamaana on 2023-09-29 20:45:17 |

Share: | | | | |


ಅಕ್ರಮ ಜಾನುವಾರು ಸಾಗಾಟ ವಿಚಾರದಲ್ಲಿ ವೈಷಮ್ಯ

ಮಂಗಳೂರು: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.


ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34), 

ಹೈದರಾಲಿ @ ಹೈದು(26)  ಎಂಬವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ.  ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 






ಹತ್ತು ದಿನಗಳ ಹಿಂದಷ್ಟೆ ಜೈಲಿನಿಂದ ಬಿಡುಗಡೆ 


ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. 


ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

Posted by Vidyamaana on 2023-08-25 15:23:01 |

Share: | | | | |


ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಹರಡದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಆಫ್ರಿಕನ್ ಹಂದಿ ಜ್ವರವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ದೇಶೀಯ ಮತ್ತು ಕಾಡು ಹಂದಿಗಳಿಂದ ಹರಡುತ್ತದೆ. ಈ ಕಾಯಿಲೆಯಿಂದ ಹಂದಿಗಳು ಸಾಯುತ್ತವೆ. ಈ ಜ್ವರಕ್ಕೆ ಯಾವುದೇ ನಿರ್ದಿಷ್ಟ ವ್ಯಾಕ್ಸಿನೇಷನ್ ಲಭ್ಯವಿಲ್ಲ. ಜ್ವರ ದೃಢಪಟ್ಟ ಸ್ಥಳದ ಒಂದು ಕಿ.ಮೀ. ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ಹಂದಿಗಳನ್ನು ಕೊಲ್ಲುವುದು ಮಾತ್ರ ಸದ್ಯ ಅನುಸರಿಸುವ ವಿಧಾನವಾಗಿದೆ. ಇದರಿಂದ ಹಂದಿ ಸಾಕಾಣಿಕೆದಾರರಿಗೆ ಭಾರಿ ಆರ್ಥಿಕ ನಷ್ಟವಾಗುತ್ತದೆ.


ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಪಶುಸಂಗೋಪನಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕೇರಳದ ಗಡಿಯಲ್ಲಿರುವ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕ ಚೆಕ್ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸಲಾಗಿದೆ. ದಕ್ಷಿಣ ಕನ್ನಡದಿಂದ ಕೇರಳಕ್ಕೆ ಹಂದಿ ಮಾಂಸವನ್ನು ಹೆಚ್ಚಿನ ಪ್ರಮಾಣದಲ್ಲಿ ಕಳುಹಿಸಲಾಗುತ್ತದೆ. ಕೇರಳಕ್ಕೆ ಹಂದಿ ಮಾಂಸ ಪೂರೈಸಿ ಹಿಂತಿರುಗುತ್ತಿರುವ ವಾಹನಗಳಿಗೆ ರಾಸಾಯನಿಕ ಸಿಂಪಡಿಸಲಾಗುತ್ತದೆ. ಹಂದಿಗಳು ಮತ್ತು ಹಂದಿ ಸಾಗಣೆಯ ಮೇಲೂ ನಿಗಾ ವಹಿಸಲಾಗಿದೆ. ಎಲ್ಲಾ ಪಶುವೈದ್ಯರು ತಮ್ಮ ವ್ಯಾಪ್ತಿಯ ಹಂದಿ ಸಾಕಣೆ ಕೇಂದ್ರಗಳಿಗೆ ಭೇಟಿ ನೀಡಿ ಹಂದಿ ಸಾಕಣೆದಾರರಿಗೆ ಸೂಕ್ತ ಸಲಹೆ ನೀಡುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಆಫ್ರಿಕನ್ ಹಂದಿ ಜ್ವರ ಹಂದಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಇದು ಮನುಷ್ಯರಿಗೆ ಹರಡುವುದಿಲ್ಲ. ಈ ವಿಷಯದಲ್ಲಿ ಹಲವರಿಗೆ ಗೊಂದಲವಿದೆ. ಸ್ಥಳೀಯವಾಗಿ ಹಂದಿ ಸಾಕಾಣಿಕೆ ಮಾಡುವವರು ಪಶುಸಂಗೋಪನಾ ಇಲಾಖೆ ಸೂಚಿಸಿದ ಮುನ್ನೆಚ್ಚರಿಕೆ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಸೂಚನೆ ನೀಡಿದ್ದಾರೆ.


ಮೈಸೂರು ವ್ಯಾಪ್ತಿಯ ಕೇರಳ ಗಡಿಗಳಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ವಿಶೇಷ ತಂಡ ರಚನೆ ಮಾಡಿ, ತಪಾಸಣೆ ಮಾಡಲಾಗುತ್ತಿದೆ

ಶನಿವಾರ ಈದುಲ್ ಫಿತ್ರ್ ಉಡುಪಿ ಉಳ್ಳಾಲ ಭಟ್ಕಳ ಖಾಝಿಗಳಿಂದ ಘೋಷಣೆ

Posted by Vidyamaana on 2023-04-20 15:56:57 |

Share: | | | | |


ಶನಿವಾರ ಈದುಲ್ ಫಿತ್ರ್ ಉಡುಪಿ ಉಳ್ಳಾಲ ಭಟ್ಕಳ ಖಾಝಿಗಳಿಂದ ಘೋಷಣೆ

ಮಂಗಳೂರು: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಎಲ್ಲೂ ಆಗಿಲ್ಲ. ಶುಕ್ರವಾರ  ಅಸ್ತಮಿಸಿದ ಶನಿವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಲಿರುವುದರಿಂದ ಪಶ್ಚಿಮ ಕರಾವಳಿ ತೀರದಲ್ಲಿ ಶನಿವಾರ (ಎ.22) ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಮತ್ತು ಭಟ್ಕಳ ಖಾಝಿ ಪ್ರತ್ಯೇಕ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.

Recent News


Leave a Comment: