ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಮೋದಿ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ ಪ್ರಿಯಾಂಕಾ ಗಾಂಧಿ ಎಂಟ್ರಿ: ಯಾವಾಗ, ಎಲ್ಲಿ ಪ್ರಚಾರ?

Posted by Vidyamaana on 2024-04-16 21:44:15 |

Share: | | | | |


ಮೋದಿ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ  ಪ್ರಿಯಾಂಕಾ ಗಾಂಧಿ ಎಂಟ್ರಿ: ಯಾವಾಗ, ಎಲ್ಲಿ ಪ್ರಚಾರ?

ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ

ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಬಂಟ್ವಾಳ : ಯುವತಿಯರು ಮಲಗಿದ್ದ ಕೋಣೆಗೆ ಕಿಟಕಿ ಮೂಲಕ ಇಣುಕು ನೋಡಿದ ನೆರೆಮನೆಯ ವಿಶ್ವನಾಥ

Posted by Vidyamaana on 2023-09-21 21:42:48 |

Share: | | | | |


ಬಂಟ್ವಾಳ : ಯುವತಿಯರು ಮಲಗಿದ್ದ ಕೋಣೆಗೆ ಕಿಟಕಿ ಮೂಲಕ ಇಣುಕು ನೋಡಿದ ನೆರೆಮನೆಯ ವಿಶ್ವನಾಥ

ಬಂಟ್ವಾಳ : ಇಲ್ಲಿನ ನಗರ ಠಾಣಾ ವ್ಯಾಪ್ತಿಯಲ್ಲಿ ಸಹೋದರಿಯರೇ ಮಲಗಿದ್ದ ಕೋಣೆಗೆ ರಾತ್ರಿ ವೇಳೆ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ಕಿಟಕಿಯಿಂದ ಇಣುಕು ನೋಡಿ ನೆರೆಮನೆ ನಿವಾಸಿ ವಿಶ್ವನಾಥ ಎಂಬಾತನ ವಿರುದ್ದ ಠಾಣೆಯಲ್ಲಿ ಸಂತ್ರಸ್ತೆ ಯುವತಿ ದೂರು ದಾಖಲಿಸಿದ್ದಾಳೆ. 


ಬುಧವಾರ ಸಂತ್ರಸ್ಥ ಯುವತಿಯು ತನ್ನ ಮನೆಯಲ್ಲಿ ಊಟ ಮುಗಿಸಿ, ಮನೆಯ ಕೋಣೆಯಲ್ಲಿ ತನ್ನ ತಂಗಿಯರೊಂದಿಗೆ ಮಲಗಿದ್ದಾಗ, ಕೋಣೆಯ ಕಿಟಕಿಯಿಂದ ಆರೋಪಿ ವಿಶ್ವನಾಥ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಕಲಂ 354(ಸಿ) ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕಾಂತೇಶ್‌ಗೆ ಟಿಕೆಟ್‌ ಸಂಶಯ: ಈಶ್ವರಪ್ಪ ಮನೆ ಮುಂದೆ ಅಭಿಮಾನಿಗಳ ದಂಡು

Posted by Vidyamaana on 2024-03-09 14:39:38 |

Share: | | | | |


ಕಾಂತೇಶ್‌ಗೆ ಟಿಕೆಟ್‌ ಸಂಶಯ: ಈಶ್ವರಪ್ಪ ಮನೆ ಮುಂದೆ ಅಭಿಮಾನಿಗಳ ದಂಡು

ಶಿವಮೊಗ್ಗ: ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್‌ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಟಿಕೆಟ್‌ ಸಿಗುವುದು ಅನುಮಾನ ಎಂಬ ಸುದ್ದಿಗಳು ಹರಿದಾಡುತ್ತಿರುವುದರಿಂದ ಅವರ ಅಭಿಮಾನಿಗಳು ಶುಕ್ರವಾರ ಮನೆ ಮುಂದೆ ಜಮಾಯಿಸಿದ್ದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂತೇಶ್‌, ಸದ್ಯ ಗೊಂದಲ ಸೃಷ್ಟಿಯಾಗಿರುವುದರಿಂದ ನಮ್ಮ ಮನೆಗೆ ಬೆಂಬಲಿಗರು ಬಂದಿದ್ದಾರೆ. ಯಡಿಯೂರಪ್ಪ ಅವರು ಆಶೀರ್ವಾದ ಮಾಡಿದ್ದರು. ಹೀಗಾಗಿ ಹಾವೇರಿಯಲ್ಲಿ ಟಿಕೆಟ್‌ ಸಿಗುತ್ತದೆ ಹಾಗೂ ಕ್ಷೇತ್ರದಲ್ಲಿ ಓಡಾಡುವಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಓಡಾಟ ಮಾಡಿದ್ದೆ. ಈಗ ಬಸವರಾಜ ಬೊಮ್ಮಾಯಿ ಹೆಸರು ಕೇಳಿಬರುತ್ತಿದೆ.ಹಾಗಾಗಿ ಕೆಲ ಗೊಂದಲಗಳು ಸೃಷ್ಟಿಯಾಗಿವೆ. ಈಗಲೂ ನನಗೆ ವಿಶ್ವಾಸ ಇದೆ. ಟಿಕೆಟ್‌ ನನಗೆ ಸಿಕ್ಕೇ ಸಿಗುತ್ತದೆ ಎಂದರು.ವಿಜಯೇಂದ್ರ, ರಾಘಣ್ಣ ಅವರು ನನಗೆ ಟಿಕೆಟ್‌ ಕೊಡಿಸಲು ಪ್ರಯತ್ನ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಟಿಕೆಟ್‌ ಮಿಸ್‌ ಆಗುವುದಿಲ್ಲ. ಹಾವೇರಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲುತ್ತದೆ. ಹಾವೇರಿ-ಗದಗ ಕ್ಷೇತ್ರಕ್ಕೆ ನನಗೆ ಟಿಕೆಟ್‌ ಸಿಗುವುದು ಖಚಿತ.ಹೈಕಮಾಂಡ್‌ ಸೂಚನೆ ಮೇರೆಗೆ ನಮ್ಮ ತಂದೆ ರಾಜಕೀಯ ನಿವೃತ್ತಿ ಹೊಂದಿದ್ದರು. ಇದೀಗ ನಮ್ಮ ಕುಟುಂಬಕ್ಕೆ ಲೋಕಸಭಾ ಟಿಕೆಟ್‌ ಸಿಕ್ಕೇ ಸಿಗುತ್ತದೆ. ನಾವು ಬಿಜೆಪಿಯನ್ನು ತಾಯಿಯಂತೆ ಪ್ರೀತಿಸುತ್ತೇವೆ. ಹಾಗಾಗಿ ಪಕ್ಷದ ಮೇಲೆ ನಮಗೆ ಗೌರವವಿದೆ ಎಂದರು.

ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

Posted by Vidyamaana on 2023-07-01 16:00:10 |

Share: | | | | |


ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

ಪುತ್ತೂರು : ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.

ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತಿ, ಪತ್ನಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಅರುಣ್ ಪುತ್ತಿಲ ಭೇಟಿ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.

40 ವರ್ಷ ಇತಿಹಾಸದ ನ್ಯೂ ಗಣೇಶ್ ಪ್ರಸಾದ್ ಹೋಟೆಲ್ ಇನ್ನು ನೆನಪು ಮಾತ್ರ!!

Posted by Vidyamaana on 2024-06-25 22:06:47 |

Share: | | | | |


40 ವರ್ಷ ಇತಿಹಾಸದ ನ್ಯೂ ಗಣೇಶ್ ಪ್ರಸಾದ್ ಹೋಟೆಲ್ ಇನ್ನು ನೆನಪು ಮಾತ್ರ!!

ಪುತ್ತೂರು: ಬೋನಂತಾಯ ಆಸ್ಪತ್ರೆ ಬಳಿ, ಎಸ್.ಪಿ.ಟಿ. ಸೇತುವೆ ಪಕ್ಕದಲ್ಲಿರುವ ನ್ಯೂ ಗಣೇಶ್ ಪ್ರಸಾದ್ ಹೋಟೆಲ್ ತನ್ನ 40 ವರ್ಷಗಳ ಪಯಣವನ್ನು ಕೊನೆಗೊಳಿಸುತ್ತಿದೆ.ಜೂನ್ 28ರ ಬಳಿಕ ಅಂದರೆ ಶುಕ್ರವಾರದ ನಂತರ ಈ ಹೋಟೆಲ್ ಇರುವುದಿಲ್ಲ.

1979ರಲ್ಲಿ ಪುತ್ತೂರಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಳದ ಕೆರೆ ಪಕ್ಕದಲ್ಲಿದ್ದ ದೇವಸ್ಥಾನದ ಕಟ್ಟಡದಲ್ಲಿ ಗಣೇಶ್ ಪ್ರಸಾದ್ ಹೋಟೆಲ್ ಪರಿಚಯಿಸಲ್ಪಟ್ಟಿತು. 1984ರ ಫೆಬ್ರುವರಿ 12ರಂದು ಅಲ್ಲೇ ಎದುರಿನ ಕಟ್ಟಡದಲ್ಲಿ ನ್ಯೂ ಗಣೇಶ್ ಪ್ರಸಾದ್ ಎಂಬ ಹೆಸರಿನಲ್ಲಿ ಹೋಟೆಲ್ ಉದ್ಯಮದ ಇನ್ನೊಂದು ಶಾಖೆಯನ್ನು ತೆರೆಯಲಾಯಿತು.

ಮಂಗಳೂರು ವಿವಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಗೊಂದಲ ಸುಖಾಂತ್ಯ..!

Posted by Vidyamaana on 2023-09-15 04:31:22 |

Share: | | | | |


ಮಂಗಳೂರು ವಿವಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಗೊಂದಲ ಸುಖಾಂತ್ಯ..!

ಮಂಗಳೂರು : ಕಳೆದ ಕೆಲ ದಿನಗಳಿಂದ ಹಾಟ್ ಟಾಪಿಕ್ ಆಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವ ವಿವಾದ ಸುಖಾಂತ್ಯ ಕಂಡಿದೆ.


ವಿವಿಯ ಮಂಗಳ ಸಭಾಂಗಣದಲ್ಲಿ ಈ ಬಾರಿಯ ಗಣೇಶ ಚತುರ್ಥಿಯನ್ನು ನಡೆಸಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಕುಲಪತಿಗಳಾದ ಪ್ರೋ.ಜಯರಾಜ್ ಅಮಿನ್ ಹೇಳಿಕೆ ನೀಡಿದ್ದಾರೆ.


ಈ ಹಿಂದಿನ ವರ್ಷಗಳಲ್ಲಿ ವಿಶ್ವವಿದ್ಯಾನಿಲಯದ ಪುರುಷರ ಹಾಸ್ಟೆಲ್​ನಲ್ಲಿ ಗಣೇಶೋತ್ಸವವವನ್ನು ಆಚರಣೆ ಮಾಡಲಾಗುತ್ತಿತ್ತು.


ಈ ಬಾರಿ ಮಂಗಳಾ ಸಭಾಂಗಣದಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಲು ಯೋಜನೆ ರೂಪಿಸಿದಾಗ ಇದಕ್ಕೆ ವಿರೋಧ ವ್ಯಕ್ತವಾಗಿ ಅವಕಾಶ ನೀಡಲ್ಲ ಎಂದು ಕುಲಪತಿಗಳು ಹೇಳಿದ್ದರು.


ಇದು ತೀವ್ರ ಆಕ್ರೋಶಕ್ಕೆ ಮತ್ತು ಅಸಮಾಧಾನಕ್ಕೆ ಕಾರಣವಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಮಧ್ಯ ಪ್ರವೇಶಿಸಿ ಕುಲಪತಿಗಳನ್ನು ಭೇಟಿ ಮಾಡಿ ಮಂಗಳ ಸಭಾಂಗಣದಲ್ಲೇ ಮಾಡಬೇಕು ಮತ್ತು ಇದರ ಖರ್ಚು ವೆಚ್ಚ ವಿವಿ ಆಡಳಿತ ನೀಡಬೇಕೆಂದು ಒತ್ತಾಯ ಮಾಡಿದ್ದರು.ಬಗ್ಗೆ ಕುಲಪತಿಗಳು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಲಹೆ ಸೂಚನೆ ನೀಡುವಂತೆ ಕೋರಿದ್ದರು.


ಬಳಿಕ ವಿವಾದ ದಿನ ಕಳೆದಂತೆ ಭುಗಿಲೆದ್ದು ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿತ್ತು.


ಸ್ಥಳಿಯ ಶಾಸಕ ವಿಧಾನ ಸಭಾ ಸಭಾಪತಿ ಯುಟಿ ಖಾದರ್ ಗಣೇಶೋತ್ಸವ ಮಾಡುವ ಬಗ್ಗೆ ವಿವಿ ಕುಲಪತಿಗಳೆ ನಿರ್ಧಾರ ಕೈಗೊಳ್ಳಲಿ ಹೊರಗಿನವರ ಅಗತ್ಯವಿಲ್ಲವೆಂದಿದ್ದರು.


ಇದಕ್ಕೆ ಪ್ರತಿಯಾಗಿ ಅಸೈಗೋಳಿಯಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಗಣೇಶ ಚತುರ್ಥಿಯನ್ನು ಮಂಗಳ ಸಭಾಂಗಣದಲ್ಲಿ ನಡೆಸುವಂತೆ ಆಗ್ರಹಿಸಿದ್ದರು.ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಆರ್​ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಗಣೇಶ ಚತುರ್ಥಿ ಮಾಡಿಯೇ ಸಿದ್ದ ಸಾಧ್ಯವಿದ್ದರೆ ತಡೆಯಲಿ ಎಂದು ಸವಾಲು ಹಾಕಿದ್ದರು.


ಈ ಎಲ್ಲಾ ಗೊಂದಲಗಳಿಂದ ಸರ್ಕಾರಕ್ಕೆ ಮುಜುಗರ ಆಗುವ ಮತ್ತು ಕರಾವಳಿಯಲ್ಲಿ ಕೋಮುಭಾವನೆ ಕೆರಳಿ ಕಾನೂನು ಸುವ್ಯವಸ್ಥೆ ಹದಗಡುವ ಪರಿಸ್ಥಿತಿ ನಿರ್ಮಾಣವಾಗುವ ಲಕ್ಷಣಗಳು ಗೋಚರಿಸಿದ್ದರಿಂದ ಕುಲಪತಿಗಳಾದ ಪ್ರೊ. ಜಯರಾಜ್ ಅಮೀನ್ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿಯೇ ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಿದ್ದಾರೆ.

Recent News


Leave a Comment: