ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಮೈಸೂರು ದಸರಾ ; ವಿಶ್ವವಿಖ್ಯಾತ ಜಂಬೂ ಸವಾರಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ರಾಜ ನಡಿಗೆ 14 ಗಜಪಡೆಗಳ ಸಾಥ್

Posted by Vidyamaana on 2023-10-25 06:59:17 |

Share: | | | | |


ಮೈಸೂರು ದಸರಾ ; ವಿಶ್ವವಿಖ್ಯಾತ ಜಂಬೂ ಸವಾರಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ರಾಜ ನಡಿಗೆ 14 ಗಜಪಡೆಗಳ ಸಾಥ್

ಮೈಸೂರು: ವಿಜಯದಶಮಿಯ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯನ್ನು ಲಕ್ಷಾಂತರ ಜನರು ವೀಕ್ಷಿಸಿದರು. ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅರಮನೆ ಆವರಣದಿಂದ ಬನ್ನಿಮಂಟಪ ದವರೆಗೂ ಅಭಿಮನ್ಯು ಆನೆ ಯಶಸ್ವಿಯಾಗಿ ಹೊತ್ತು ಸಾಗಿತು. ಇತರ 14 ಗಜಪಡೆಗಳು ಅಭಿಮನ್ಯುವಿಗೆ ಸಾಥ್ ನೀಡಿದವು. ಕರ್ನಾಟಕದ ಅಶ್ವದಳ ಪೊಲೀಸರ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು.


ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ,ರಾಜವಂಶಸ್ಥ  ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ಕಲಾತಂಡಗಳು, ಸ್ತಬ್ಧಚಿತ್ರಗಳ ಮರವಣಿಗೆ ಆರಂಭವಾಯಿತು. 




ಅರಮನೆ ಮುಂಭಾಗದಿಂದ ನಡೆದ ಮೆರವಣಿಗೆಯಲ್ಲಿ ರಾಜ್ಯದ 31 ಜಿಲ್ಲೆಗಳು ಮತ್ತು ವಿವಿಧ ಪ್ರಮುಖ ಸರ್ಕಾರಿ ಇಲಾಖೆಗಳ ಭವ್ಯವಾದ ಸ್ತಬ್ಧಚಿತ್ರಗಳು ಆಕರ್ಷಣೀಯವಾಗಿದ್ದವು. ಬಳ್ಳಾರಿ ಜಿಲ್ಲೆ ಹಕ್ಕಿ-ಪಿಕ್ಕಿ ಬುಡಕಟ್ಟು ಜನಾಂಗದ ಸಾಂಸ್ಕೃತಿಕ ಅಂಶಗಳನ್ನು ಪ್ರದರ್ಶಿಸಿದರೆ, ಬೆಳಗಾವಿ ಜಿಲ್ಲೆ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನದ ಮಾದರಿಯನ್ನು ಪ್ರದರ್ಶಿಸಿತು.


ಬೆಂಗಳೂರು ನಗರ ಜಿಲ್ಲೆ ಇಸ್ರೋದ ಚಂದ್ರಯಾನ-3 ಸಾಧನೆಯನ್ನು ಪ್ರದರ್ಶಿಸಿತು. ಕೋಲಾರ ಗಾರುಡಿ ನೃತ್ಯವನ್ನು ಪ್ರಸ್ತುತಪಡಿಸಿದರೆ, ಬೀದರ್ ವಿಶಿಷ್ಟ ವನ್ಯಜೀವಿಗಳ ಮೇಲೆ ಕೇಂದ್ರೀಕರಿಸಿತು ಮತ್ತು ಚಾಮರಾಜನಗರ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನದ ಮಾದರಿಯನ್ನು ಪ್ರದರ್ಶಿಸಿತು.




ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ಪತ್ತಿಯಾಗುವ ವೈವಿಧ್ಯಮಯ ಸಸ್ಯ ಮತ್ತು ಪ್ರಾಣಿಗಳ ಜೊತೆಗೆ ಸುಗಂಧಭರಿತ ಕಾಫಿಯ ಪ್ರದರ್ಶನವನ್ನು ರಚಿಸಿತು. ಈ 10 ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಕುಸ್ತಿ ಕೂಡ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಮೆರವಣಿಗೆಯು ಅರಮನೆಯಿಂದ ಬನ್ನಿಮಂಟಪಕ್ಕೆ ತಲುಪುತ್ತಿದ್ದಂತೆ ಉತ್ಸವ ಮುಕ್ತಾಯವಾಯಿತು.


ದಸರಾ ಮಹೋತ್ಸವದ ಗ್ರ್ಯಾಂಡ್ ಫಿನಾಲೆ ವೀಕ್ಷಿಸಲು ಸಾವಿರಾರು ಜನರು ನೆರೆದಿದ್ದರು. ಪ್ರಪಂಚದಾದ್ಯಂತದ ಜನರು ಈ ಭವ್ಯವಾದ ದೃಶ್ಯಗಳನ್ನು ವೀಕ್ಷಿಸಲು ಮೈಸೂರಿಗೆ ಭೇಟಿ ನೀಡಿದರು. ಚಾಮುಂಡೇಶ್ವರಿ ದೇವಿಯು ಮಹಿಷಾಸುರನನ್ನು ಕೊಂದಿದ್ದರಿಂದ ಕೆಟ್ಟದ್ದರ ಮೇಲೆ ಒಳ್ಳೆಯದು ವಿಜಯ ಎಂಬುದರ ಸಂಕೇತವಾಗಿ ವಿಜಯದಶಮಿ ಅಥವಾ ದಸರಾವನ್ನು ಆಚರಿಸಲಾಗುತ್ತದೆ.

ದುಬೈನಲ್ಲಿ ರಸ್ತೆ ಅಪಘಾತ - ಕೋಟೆಕಾರು ಬೀರಿ ನಿವಾಸಿ ವಿದಿಶಾ ದುರ್ಮರಣ

Posted by Vidyamaana on 2024-02-23 15:57:28 |

Share: | | | | |


ದುಬೈನಲ್ಲಿ ರಸ್ತೆ ಅಪಘಾತ - ಕೋಟೆಕಾರು ಬೀರಿ ನಿವಾಸಿ ವಿದಿಶಾ ದುರ್ಮರಣ

ಉಳ್ಳಾಲ: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.


ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22 ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.

ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ಯಾಕ್ಟ್  ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.ಹೊಸ ಕಾರು ಖರೀದಿಸಿದ್ದರು: ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದರು. ತಂದೆ-ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.

ಕಡಬ : ಶಾಲೆಯ ಬಳಿಯಲ್ಲಿ ತಂಬಾಕು ಮಾರಾಟ

Posted by Vidyamaana on 2023-10-01 05:00:46 |

Share: | | | | |


ಕಡಬ : ಶಾಲೆಯ ಬಳಿಯಲ್ಲಿ ತಂಬಾಕು ಮಾರಾಟ

ಕಡಬ : ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ. 


ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು. 


ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್​ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ‌ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.

ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ವರ್ಗಾವಣೆ

Posted by Vidyamaana on 2023-07-04 04:28:04 |

Share: | | | | |


ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ವರ್ಗಾವಣೆ

ಬೆಂಗಳೂರು, ಜುಲೈ 3:  ಸರ್ಕಾರಿ ಸೇವೆ ಸಲ್ಲಿಸುವ ಅಧಿಕಾರಿ ಅಥವಾ ಯಾವುದೇ ನೌಕರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಎರಡಕ್ಕಿಂತ ಹೆಚ್ಚು ದಿನ ಬಂಧಿಸಿಟ್ಟಲ್ಲಿ ಆತನನ್ನು ಸರ್ಕಾರಿ ಸೇವೆಯಿಂದ ವಜಾ ಮಾಡಬಹುದು. ‌ಆದರೆ, ಲೋಕಾಯುಕ್ತಕ್ಕೆ ಸಿಕ್ಕಿಬಿದ್ದು ಬಂಧನಕ್ಕೊಳಗಾಗಿರುವ ಭ್ರಷ್ಟ ತಹಸೀಲ್ದಾರ್ ಅಜಿತ್ ರೈಯನ್ನು ಬಂಧನದಲ್ಲಿ ಇರುವಾಗಲೇ ರಾಜ್ಯ ಸರ್ಕಾರ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ‌


ಅಜಿತ್ ಕುಮಾರ್ ರೈ ಅವರನ್ನು ಬೆಂಗಳೂರು ಕೆಆರ್‌ ಪುರಂನಿಂದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಿದ್ದು ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರಿಂದ ಕಂದಾಯ ಇಲಾಖೆ ಅಜಿತ್ ರೈ ವಿರುದ್ಧ ಅಮಾನತು ಆದೇಶ ಹೊರಡಿಸಿತ್ತು. ಅಜಿತ್ ರೈ ಅಧಿಕಾರದಲ್ಲಿದ್ರೆ ಸಾಕ್ಷ್ಯನಾಶ, ಅಧಿಕಾರ ದುರ್ಬಳಕೆ, ತನಿಖೆಗೆ ಅಡ್ಡಿಯಾಗಬಹುದು ಎಂದು ಅಮಾನತಿನಲ್ಲಿಟ್ಟಿತ್ತು. ಅದ್ರೆ ಇದೀಗ ಅದೇ ಭ್ರಷ್ಟ ಅಧಿಕಾರಿ ಅಜಿತ್ ರೈಯನ್ನು ಬಂಧನದಿಂದ ಮುಕ್ತಗೊಳ್ಳುವ ಮೊದಲೇ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ. 


ಬೆಂಗಳೂರಿನ ತಹಸೀಲ್ದಾರ್ (ಗ್ರೇಡ್ 1) ಆಗಿದ್ದ ಅಜಿತ್ ರೈ ಬಳಿ ಅಪಾರ ಪ್ರಮಾಣದ ಬೇನಾಮಿ ಆಸ್ತಿ ಮತ್ತು ಅಕ್ರಮ ಹಣ ಪತ್ತೆಯಾಗಿತ್ತು. ಇದೀಗ ಗ್ರೇಡ್ -1 ಹುದ್ದೆಯಿಂದ ಗ್ರೇಡ್ - 2 ತಹಸೀಲ್ದಾರ್ ಆಗಿ ಹಿಂಬಡ್ತಿಗೊಳಿಸಿ ಸರ್ಕಾರ ವರ್ಗಾವಣೆ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಪತ್ತೆಯಾಗಿ ಸಾಕ್ಷ್ಯ ಸಮೇತ ಸಿಕ್ಕಿಬಿದ್ದಿದ್ರೂ ಸರ್ಕಾರ ಮಾತ್ರ ಅಮಾನತುಗೊಂಡ ತಹಸೀಲ್ದಾರರನ್ನ ತರಾತುರಿಯಲ್ಲಿ ರಾಯಚೂರಿಗೆ ವರ್ಗಾಯಿಸಿ ತನಿಖೆಗೆ ಅಡ್ಡಿ ಮಾಡದಂತಾಗಿದೆ

ನೌಕಾಪಡೆ ಕಮಾಂಡೋ ಗಳಿಂದ ಅಪಹರಣಕ್ಕೊಳಗಾದ ಹಡಗಿನಲ್ಲಿದ್ದ ಎಲ್ಲ15 ಭಾರತೀಯರ ರಕ್ಷಣೆ

Posted by Vidyamaana on 2024-01-05 20:36:21 |

Share: | | | | |


ನೌಕಾಪಡೆ ಕಮಾಂಡೋ ಗಳಿಂದ ಅಪಹರಣಕ್ಕೊಳಗಾದ ಹಡಗಿನಲ್ಲಿದ್ದ ಎಲ್ಲ15 ಭಾರತೀಯರ ರಕ್ಷಣೆ

ವದೆಹಲಿ: ಅರೇಬಿಯನ್ ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗಿನಿಂದ ಎಲ್ಲಾ 15 ಭಾರತೀಯರನ್ನು ಭಾರತೀಯ ನೌಕಾಪಡೆಯ ಕಮಾಂಡೋಗಳು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತಿಳಿದ ನಂತರ, ಯುದ್ಧನೌಕೆ ಐಎನ್‌ಎಸ್ ಚೆನ್ನೈ ಸೊಮಾಲಿ ಕರಾವಳಿಯಲ್ಲಿ ಅಪಹರಣಕ್ಕೊಳಗಾದ ಹಡಗು ಎಂವಿ ಲೀಲಾ ನಾರ್ಫೋಕ್ನ್ನ ಸಮೀಪಿಸುತ್ತಿತ್ತು ಮತ್ತು ಅಪಹರಣಕ್ಕೊಳಗಾದ ಹಡಗನ್ನ ಬಿಡುಗಡೆ ಮಾಡುವಂತೆ ಭಾರತೀಯ ನೌಕಾಪಡೆ ಕಡಲ್ಗಳ್ಳರಿಗೆ ಎಚ್ಚರಿಕೆ ನೀಡಿತು.ಹಡಗಿನಲ್ಲಿದ್ದ ಭಾರತೀಯ ತಂಡ ಸುರಕ್ಷಿತವಾಗಿದೆ ಮತ್ತು ದರೋಡೆಕೋರರು ನೇರವಾಗಿ ಕೇಳದಿದ್ದರೆ, ಮೆರೈನ್ ಕಮಾಂಡೋ ಮಾರ್ಕೋಸ್ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ.


ಸರಕು ಹಡಗು ಎಂವಿ ಲೀಲಾ ನಾರ್ಫೋಕ್ ಅನ್ನು ನಿನ್ನೆ ಸಂಜೆ ಸೊಮಾಲಿಯಾ ಕರಾವಳಿಯಲ್ಲಿ ಅಪಹರಿಸಲಾಗಿದೆ. ಇದ್ರಲ್ಲಿ 15 ಭಾರತೀಯರಿದ್ದರು.


ಹಡಗಿನಲ್ಲಿ ಐದರಿಂದ ಆರು ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಇದ್ದರು.!

ಅರೇಬಿಯನ್ ಸಮುದ್ರದಲ್ಲಿ ಈ ಕಡಲ ಘಟನೆಗೆ ಭಾರತೀಯ ನೌಕಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ, ಇದರಲ್ಲಿ ಲೈಬೀರಿಯನ್ ಧ್ವಜ ಹೊಂದಿರುವ ಹಡಗನ್ನು ಅಪಹರಿಸುವ ಪ್ರಯತ್ನ ನಡೆದಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಸುಮಾರು ಐದರಿಂದ ಆರು ಅಪರಿಚಿತ ಸಶಸ್ತ್ರ ವ್ಯಕ್ತಿಗಳು ಹಡಗನ್ನು ಹತ್ತಿದ್ದಾರೆ ಎಂದು ಹಡಗು ಯುಕೆಎಂಟಿಒ ಪೋರ್ಟಲ್ಗೆ ಸಂದೇಶ ಕಳುಹಿಸಿದೆ ಎಂದು ಅವರು ಹೇಳಿದರು.

BREAKING: ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ

Posted by Vidyamaana on 2024-06-15 14:38:42 |

Share: | | | | |


BREAKING: ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೆಂಗಳೂರು : ಸಂಸದರಾಗಿ ಆಯ್ಕೆಯಾದ ನಂತ್ರ, ಕೋಟಾ ಶ್ರೀನಿವಾಸ ಪೂಜಾರಿಯವರು ವಿಧಾನಪರಿಷತ್ ಸದಸ್ಯಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ವಿಧಾನ ಪರಿಷತ್ ವಿಪಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದಂತೆ ಆಗಿದೆ.

ಇಂದು ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿಯಾದಂತ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು, ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು.

Recent News


Leave a Comment: