ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಸುದ್ದಿಗಳು News

Posted by vidyamaana on 2024-07-08 14:36:42 |

Share: | | | | |


ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು.

ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

 Share: | | | | |


ಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್

Posted by Vidyamaana on 2024-06-02 18:29:49 |

Share: | | | | |


ಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್

ಕೆಲವೊಮ್ಮೆ ಪ್ರಾಕೃತಿಕವಾಗಿ ಎದುರಾಗುವ ಆಘಾತಕಾರಿ ಸನ್ನಿವೇಶಗಳು ಜೀವನವನ್ನೇ ಕಸಿದುಕೊಳ್ಳುತ್ತವೆ. ಇದೀಗ ಅದೇ ರೀತಿಯ ಘಟನೆಯೊಂದು ನಡೆದಿದ್ದು, ಬೀಚ್‌ನಲ್ಲಿ ಖುಷಿಖುಷಿಯಾಗಿ ಆಟವಾಡುತ್ತಿದ್ದ ಮೂವರು ಮಕ್ಕಳ ಮೇಲೆ ಸಿಡಿಲು ಬಡಿದಿದೆ. ಈ ಆಘಾತಕಾರಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.ಮಳೆಗಾಲದಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮಿಂಚುಗಳು ಬರುವುದು ಸಾಮಾನ್ಯ. ಆದರೆ ಗಾಳಿ ಮಳೆಯೊಂದಿಗೆ ಬರುವ ಭಯಾನಕ ಗುಡುಗು ಮಿಂಚುಗಳು ಎದೆಯಲ್ಲಿ ನಡುಕ ಹುಟ್ಟಿಸುವುದು ಮಾತ್ರವಲ್ಲದೆ, ಅನೇಕ ಪ್ರಾಣ ಹಾನಿಯನ್ನೂ ಕೂಡಾ ಉಂಟುಮಾಡುತ್ತದೆ. ಹೀಗೆ ಸಿಡಿಲು ಬಡಿದು ಪ್ರಾಣಿ-ಪಕ್ಷಿಗಳು, ಮನುಷ್ಯರು ಸಾವನ್ನಪ್ಪಿದ ಅನೇಕ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಭೀಕರ ಘಟನೆಯೊಂದು ನಡೆದಿದ್ದು, ಬೀಚ್‌ನಲ್ಲಿ ಸಂತೋಷವಾಗಿ ಆಟವಾಡುತ್ತಿದ್ದ ಮೂವರ ಮಕ್ಕಳ ಮೇಲೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಿದೆ. ಈ ಆಘಾತಕಾರಿ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ

ಟಿಪ್ಪರಿಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು | ಮೃತ ಸವಾರನ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-06-10 03:37:31 |

Share: | | | | |


ಟಿಪ್ಪರಿಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು | ಮೃತ ಸವಾರನ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ಟಿಪ್ಪರ್ ಹಾಗೂ ದ್ವಿಚಕ್ರ ನಡುವೆ ಜೂ 2 ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತ ಸವಾರ ಮಹಮ್ಮದ್ ಅನೀಸ್ ಮೃತಪಟ್ಟವರು. ಸಹಸವಾರ ಹಮೀದ್ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.


ಬಿಸಿರೋಡ್ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಗೆ ನೀರಕಟ್ಟೆಯಿಂದ ಬಿಸಿರೋಡ್ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಅನೀಸ್ ಅವರ ಮುಖಕ್ಕೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಸಹಸವಾರ ಹಮೀದ್ ಅವರ ಕಾಲಿಗೆ ಗಾಯವಾಗಿತ್ತು.

ಗಂಭೀರ ಗಾಯಗೊಂಡಿದ್ದ ಅನೀಸ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅನೀಸ್ ಅವರು ಮುಂಭಾಗದಿಂದ ಬರುತ್ತಿದ್ದ ಬೇರೆ ನಂಬರ್  ನ ಮೋಟಾರ್ ಸೈಕಲ್ ಸವರನಿಗೆ  ನಮಸ್ಕಾರ ಮಾಡುತ್ತಾ, ರಾಂಗ್ ಸೈಡಿನಿಂದ ವಾಹನ ಚಲಾಯಿಸುತ್ತಿದ್ದರು. ಇದರಿಂದಾಗಿ ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಟಿಪ್ಪರ್ ಚಾಲಕ ಆಶಿಫ್ ದೂರಿನಲ್ಲಿ ತಿಳಿಸಲಾಗಿದೆ. ಆದ್ದರಿಂದ ಮೃತಪಟ್ಟ ಅನೀಸ್ ವಿರುದ್ಧ ಐಪಿಸಿ ಕಲಂ 279, 337, 304(ಎ) ಅಡಿಯಲ್ಲಿ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Posted by Vidyamaana on 2024-06-22 11:31:59 |

Share: | | | | |


ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ ಯೋಜನೆ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿಸಿದರು. ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ) ಅನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾದ ಕಾರ್ಯತಂತ್ರದ ಹೂಡಿಕೆ ಯೋಜನೆಯಾಗಿ ಪರಿಚಯಿಸಲಾಯಿತು.

ಸುಕನ್ಯಾ ಸಮೃದ್ಧಿ ಯೋಜನೆ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅನುವು ಮಾಡಿಕೊಡುತ್ತದೆ, ಖಾತೆಯು 21 ವರ್ಷಗಳ ನಂತರ ಪರಿಪಕ್ವಗೊಳ್ಳುತ್ತದೆ. ಮುಕ್ತಾಯದ ನಂತರ, ಮಗಳ ಶಿಕ್ಷಣ ಅಥವಾ ಮದುವೆಯ ವೆಚ್ಚಗಳನ್ನು ಬೆಂಬಲಿಸಲು ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು.

ಪೆರಾಜೆ:ರಾಘವೇಶ್ವರ ಭಾರತೀ ಸ್ವಾಮೀಜಿಯ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Posted by Vidyamaana on 2023-10-15 14:23:19 |

Share: | | | | |


ಪೆರಾಜೆ:ರಾಘವೇಶ್ವರ ಭಾರತೀ ಸ್ವಾಮೀಜಿಯ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಬಂಟ್ವಾಳ : ನವರಾತ್ರಿಯ ನಿಮಿತ್ತ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಆಗಮಿಸಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶೈಲಜಾ ಭಟ್ ಕೊಂಕೋಡಿ, ಹವ್ಯಕ ಪರಿಷತ್ತಿನ ಶ್ರೀಪ್ರಕಾಶ್ ಕುಕ್ಕಿಲ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು.

ಇಸ್ರೇಲ್ ನಲ್ಲಿ ವೆಸ್ಟ್ ನೈಲ್‌ ಜ್ವರಕ್ಕೆ ಮತ್ತೊಂದು ಬಲಿ : ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

Posted by Vidyamaana on 2024-07-10 11:27:00 |

Share: | | | | |


ಇಸ್ರೇಲ್ ನಲ್ಲಿ ವೆಸ್ಟ್ ನೈಲ್‌ ಜ್ವರಕ್ಕೆ ಮತ್ತೊಂದು ಬಲಿ : ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

ಜೆರುಸಲೇಂ : ಇಸ್ರೇಲ್ ನಲ್ಲಿ ವೆಸ್ಟ್ ನೈಲ್ ಜ್ವರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಒಂದು ಹೊಸ ಸಾವು ಸಂಭವಿಸಿದೆ ಎಂದು ದೇಶದ ಆರೋಗ್ಯ ಸಚಿವಾಲಯ ತಿಳಿಸಿದೆ.

ಮೇ ಆರಂಭದಿಂದ ದೃಢಪಡಿಸಿದ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 299 ಕ್ಕೆ ತಲುಪಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಮಂಗಳವಾರ ವರದಿ ಮಾಡಿದೆ.ಹೆಚ್ಚಿನ ಪ್ರಕರಣಗಳು ಇಸ್ರೇಲ್ನ ಕೇಂದ್ರ ಪ್ರದೇಶದಲ್ಲಿ ಪತ್ತೆಯಾಗಿದ್ದರೂ, ಉತ್ತರದ ನಗರ ಹೈಫಾದ ರಂಬಾಮ್ ಆಸ್ಪತ್ರೆ ಗುರುವಾರ ವೈರಸ್ ಸೋಂಕಿಗೆ ಒಳಗಾದ ಆಸ್ಪತ್ರೆಗೆ ದಾಖಲಾದ ಇಬ್ಬರು ರೋಗಿಗಳನ್ನು ವರದಿ ಮಾಡಿದೆ, ಇದರಲ್ಲಿ ಮಧ್ಯಮ-ತೀವ್ರ ಸ್ಥಿತಿಯಲ್ಲಿರುವ 50 ವರ್ಷದ ವ್ಯಕ್ತಿ ಸೇರಿದ್ದಾರೆ.

ಮಂಗಳೂರು: ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

Posted by Vidyamaana on 2023-05-10 17:27:33 |

Share: | | | | |


ಮಂಗಳೂರು: ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ನಗರದ ಮೂಡುಶೆಡ್ಡೆ ಬಳಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ಮೂವರು ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಮೀಷನ್ ತಿಳಿಸಿದ್ದಾರೆ

Recent News


Leave a Comment: