KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಬಾಡಿಗೆ ಆಸೆಗೆ ಬಿದ್ದು ಕೋಟ್ಯಾಂತರ ರೂ ವೆಚ್ಚದ ಮನೆ, ಫ್ಲಾಟ್ ಕಳೆದುಕೊಂಡ ಮಾಲೀಕರು: ವಂಚಿಸಿ ಪರಾರಿಯಾದ ಆಲಿ ಬೇಗ್

Posted by Vidyamaana on 2024-06-25 07:59:41 |

Share: | | | | |


ಬಾಡಿಗೆ ಆಸೆಗೆ ಬಿದ್ದು ಕೋಟ್ಯಾಂತರ ರೂ ವೆಚ್ಚದ ಮನೆ, ಫ್ಲಾಟ್ ಕಳೆದುಕೊಂಡ ಮಾಲೀಕರು: ವಂಚಿಸಿ ಪರಾರಿಯಾದ ಆಲಿ ಬೇಗ್

ಬೆಂಗಳೂರು, ಜೂನ್​ 24: ಬಾಡಿಗೆ ಆಸೆಗೆ ಬಿದ್ಧ ಮನೆ ಮಾಲೀಕರಿಗೆ ಬ್ರೋಕರ್ (broker) ಕಂಪನಿ ಹೆಸರಲ್ಲಿ ಕೋಟಿ ಕೋಟಿ ರೂ. ಪಂಗನಾಮ (cheated) ಹಾಕಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಯೂ ಹೋಮ್ಸ್ ಎಂಬ ಕಂಪನಿ ಹೆಸರಲ್ಲಿ ಮನೆಗಳು, ಫ್ಲಾಟ್​ಗಳನ್ನು ಡೀಲ್ ಮಾಡಲಾಗಿದೆ. ಬಾಡಿಗೆಗೆ ಕೊಡಿಸುತ್ತೇನೆ ಎಂದು ಮಧ್ಯಸ್ಥಿಕೆ ವಹಿಸಿದ್ದ ಆಸಾಮಿ ಅಹಮದ್ ಆಲಿ ಬೇಗ್, ಮಾಲೀಕರಿಂದ ಮನೆ ಪಡೆದು ನನ್ನದೇ ಅಂತ ನಂಬಿಸಿ ಲಕ್ಷ ಲಕ್ಷ ರೂ. ಹಣ ಪಡೆದು ಲೀಸ್​ಗೆ ಕೊಟ್ಟಿದ್ದಾರೆ.

ಕೇಂದ್ರದ ಖಡಕ್ ಕ್ರಮ : ಅಕ್ರಮ ಸಾಲ, ಬೆಟ್ಟಿಂಗ್ ಜಾಹೀರಾತುಗಳಿಗೆ ನಿಷೇಧ ತಕ್ಷಣದಿಂದ್ಲೇ ಜಾರಿ

Posted by Vidyamaana on 2023-12-28 14:08:13 |

Share: | | | | |


ಕೇಂದ್ರದ ಖಡಕ್ ಕ್ರಮ : ಅಕ್ರಮ ಸಾಲ, ಬೆಟ್ಟಿಂಗ್ ಜಾಹೀರಾತುಗಳಿಗೆ ನಿಷೇಧ ತಕ್ಷಣದಿಂದ್ಲೇ ಜಾರಿ

ನವದೆಹಲಿ : ನಕಲಿ ಲೋನ್ ಅಪ್ಲಿಕೇಶನ್ಗಳು ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ಗಳ ವಿರುದ್ಧ ಸರ್ಕಾರ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ಆಯಪ್ಗಳನ್ನ ನಿಷೇಧಿಸಲಾಗುತ್ತಿದೆ. ಮಂಗಳವಾರ, ಸಚಿವಾಲಯವು ಅಕ್ರಮ ಸಾಲ ಅಪ್ಲಿಕೇಶನ್ಗಳು ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ಗಳನ್ನ ತೆಗೆದುಹಾಕಲು ಸೂಚನೆಗಳನ್ನ ನೀಡಿದೆ.ನಕಲಿ ಸಾಲ ಅಪ್ಲಿಕೇಶನ್ಗಳ ಜಾಹೀರಾತುಗಳನ್ನ ತಡೆಗಟ್ಟಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಅನೇಕ ಪ್ಲಾಟ್ ಫಾರ್ಮ್ಗಳಲ್ಲಿ ಇಂತಹ ನಕಲಿ ಸಾಲ ಅಪ್ಲಿಕೇಶನ್ಗಳ ಜಾಹೀರಾತುಗಳಿವೆ. 


ಕೆವೈಸಿ ಪ್ರಕ್ರಿಯೆಯನ್ನು ಬ್ಯಾಂಕುಗಳಿಗೆ ಹೆಚ್ಚು ಸಮಗ್ರಗೊಳಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು RBI ಒತ್ತಾಯಿಸಿದೆ. ಈ ಪ್ರಸ್ತಾವಿತ KYC ಪ್ರಕ್ರಿಯೆಗೆ ನೋ ಯುವರ್ ಡಿಜಿಟಲ್ ಫೈನಾನ್ಸ್ ಆಯಪ್ (KYDFA) ಎಂದು ಹೆಸರಿಸಲಾಗಿದೆ.


ಇತ್ತೀಚಿನ ದಿನಗಳಲ್ಲಿ, ನಕಲಿ ಸಾಲ ಅಪ್ಲಿಕೇಶನ್ಗಳ ಜಾಲವು ಸಾಕಷ್ಟು ಹರಡಿದೆ. ಇಂತಹ ಆಯಪ್ಗಳಿಗೆ ಬಲಿಯಾಗುವ ಜನರು ಸಾಲದ ಸುಳಿಯಲ್ಲಿ ಸಿಲುಕುವುದು ಮಾತ್ರವಲ್ಲ, ಅನೇಕ ಸಂದರ್ಭಗಳಲ್ಲಿ ಸಂತ್ರಸ್ತರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಈ ವಿಷಯವು ದೀರ್ಘಕಾಲದಿಂದ ಚರ್ಚೆಯಲ್ಲಿದೆ ಮತ್ತುಇಲ್ಲಿಯವರೆಗೆ ಸರ್ಕಾರವು ಅಂತಹ ಎಲ್ಲಾ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ.


ಆದಾಗ್ಯೂ, ಈ ಅಪ್ಲಿಕೇಶನ್ಗಳು ಒಂದಲ್ಲ ಒಂದು ರೂಪದಲ್ಲಿ ಹೊಸ ಹೆಸರಿನೊಂದಿಗೆ ಹಿಂತಿರುಗುತ್ತವೆ. ಅಂತಹ ಅಪ್ಲಿಕೇಶನ್ಗಳಲ್ಲಿ, ಮೊದಲನೆಯದಾಗಿ, ಗ್ರಾಹಕರಿಗೆ ಒಂದು ಕ್ಲಿಕ್ ಮತ್ತು ದಾಖಲೆಗಳಿಲ್ಲದೆ ಸಾಲವನ್ನ ನೀಡಲಾಗುತ್ತದೆ. ಅನೇಕ ಜನರು ಈ ರೀತಿಯ ಸಾಲದ ಬಲೆಗೆ ಬೀಳುತ್ತಾರೆ, ಆದರೆ ಈ ಲೋನ್ ಅಪ್ಲಿಕೇಶನ್ಗಳು ಸ್ಪೈವೇರ್ನಂತೆ ಕಾರ್ಯನಿರ್ವಹಿಸುತ್ತವೆ.


ಜನರು ಹೇಗೆ ಸಿಕ್ಕಿಹಾಕಿಕೊಳ್ಳುತ್ತಾರೆ.? 

ಈ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಿದ ತಕ್ಷಣ, ಸಾಲ ನೀಡುಗರು ಬಳಕೆದಾರರ ಎಲ್ಲಾ ಫೋಟೋಗಳು ಮತ್ತು ಸಂಪರ್ಕ ವಿವರಗಳಿಗೆ ಪ್ರವೇಶವನ್ನ ಪಡೆಯುತ್ತಾರೆ. ನಂತರ ಅವರ ನಿಜವಾದ ಆಟವು ಸಾಲ ವಸೂಲಾತಿ ಹೆಸರಿನಲ್ಲಿ ಪ್ರಾರಂಭವಾಗುತ್ತದೆ. ಈ ನಕಲಿ ಅಪ್ಲಿಕೇಶನ್ಗಳು ಸಾಧ್ಯವಾದಷ್ಟು ಬೇಗ ಸಾಲವನ್ನು ಪಾವತಿಸುವಂತೆ ಸಂತ್ರಸ್ತರ ಮೇಲೆ ನಿರಂತರವಾಗಿ ಒತ್ತಡಹೇರುತ್ತವೆ. ಅನೇಕ ಬಾರಿ ಅವರ ಫೋಟೋಗಳನ್ನು ಮಾರ್ಫಿಂಗ್ ಮಾಡಲಾಗುತ್ತದೆ ಮತ್ತು ವೈರಲ್ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತದೆ.

ಅಡ್ಕಾರಿನಲ್ಲಿ ಆಕ್ಸಿಡೆಂಟ್ ಫಿಲಂ ರೀತಿಯ ಭೀಕರ ಅಪಘಾತ – ಮೂವರ ದುರ್ಮರಣ

Posted by Vidyamaana on 2023-08-31 07:00:42 |

Share: | | | | |


ಅಡ್ಕಾರಿನಲ್ಲಿ ಆಕ್ಸಿಡೆಂಟ್ ಫಿಲಂ ರೀತಿಯ ಭೀಕರ ಅಪಘಾತ – ಮೂವರ ದುರ್ಮರಣ

ಸುಳ್ಯ : ಅಡ್ಕಾರಿನಲ್ಲಿ ಹೊಟೇಲ್ ಕರಾವಳಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಗಾಯಗೊಂಡ ಕಾರ್ಮಿಕರ ಪೈಕಿ ಮೂವರು ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಸ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಇಂದು ಬೆಳಿಗ್ಗೆ ಅವರಲ್ಲಿ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರು ಕಾರ್ಮಿಕರು ರಸ್ತೆ ಬದಿ ನಿಂತಿದ್ದರೆನ್ನಲಾಗಿದೆ.


ಬೆಳಗ್ಗೆ ಹುಣಸೂರು ಕಡೆಯಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಂದು ರಸ್ತೆ ಬದಿ ನಿಂತಿದ್ದ ಈ ಕಾರ್ಮಿಕರಿಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆಯಿತು.


ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರಿಗೂ ಗಾಯಗಳಾಗಿದ್ದು ಮೂವರಿಗೆ ಗಂಭೀರ ಗಾಯಗಳಾಗಿತ್ತು. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಈ ಪೈಕಿ ಚಂದ್ರಪ್ಪ ಅಲ್ಲಿ ಸಾವನ್ನಪ್ಪಿದ್ದರು. ವೆಂಕಪ್ಪರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಅವರಿಗೆ ಸುಳ್ಯದಲ್ಲೇ ಚಿಕಿತ್ಸೆ ಕೊಡಿಸಲಾಯಿತು. ರೇಗಪ್ಪ, ಮಾಂತೇಶ್ ಅವರನ್ನು ಮಂಗಳೂರಿಗೆ ಕೊಂಡೊಯ್ಯಲಾಗಿದ್ದು, ಅವರಿಬ್ಬರೂ  ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ

ಮಂಗಳೂರು ಪೊಲೀಸರ ಕಾರ್ಯಾಚರಣೆ

Posted by Vidyamaana on 2023-09-26 20:55:03 |

Share: | | | | |


ಮಂಗಳೂರು ಪೊಲೀಸರ ಕಾರ್ಯಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ನಗರದ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕ್ಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ‌ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.


ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡ್ರಗ್ಸ್ ದಂಧೆ ವಿರುದ್ಧ ಪೊಲೀಸರಿಂದ ಜಾಗೃತಿ

ನಗರದಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು, ಡ್ರಗ್ಸ್ ಮುಕ್ತ ಮಂಗಳೂರನ್ನಾಗಿಸಲು ಅಖಾಡಕ್ಕಿಳಿದಿದ್ದಾರೆ. ವಿದ್ಯಾರ್ಥಿಗಳು ಕೂಡ ಮಾದಕ ಲೋಕದಲ್ಲಿ ತೇಲಾಡುತ್ತಿರುವುದರಿಂದ ಶಾಲಾ ಕಾಲೇಜುಗಳಲ್ಲಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.

ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ!!!

Posted by Vidyamaana on 2023-06-09 03:21:43 |

Share: | | | | |


ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ!!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ.

ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿಯ ನಿವಾಸಿ ಬಾಲಕೃಷ್ಣ (58) ಎಂಬವರು ಆತ್ಮಹತ್ಯೆಗೈದ ಚಾಲಕ. ಬಾಲಕೃಷ್ಣ ಗುರುವಾರ(ಜೂ.8) ತಮ್ಮ ಮನೆ ರಾಘವೇಂದ್ರ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಶ್ವರಮಂಗಲದಿಂದ ಗಾಳಿಮುಖತನಕ ಅಶೋಕ್‌ರೈ ಪರ ರೋಡ್‌ಶೋ

Posted by Vidyamaana on 2023-05-05 16:44:06 |

Share: | | | | |


ಈಶ್ವರಮಂಗಲದಿಂದ ಗಾಳಿಮುಖತನಕ ಅಶೋಕ್‌ರೈ ಪರ ರೋಡ್‌ಶೋ

ಪುತ್ತೂರು:ಬಡವರ ಸೇವೆ ಮಾಡಬೇಕು, ಅನ್ಯಾಯಕ್ಕೊಳಗಾದವರಿಗೆ ನ್ಯಾಯಕೊಡಿಸಬೇಕು, ನೊಂದವರಿಗೆ ಸಾಂತ್ವನ ಹೇಳಬೇಕು, ಕಷ್ಟದಲ್ಲಿರುವವರಿಗೆ ನೆರವಾಗಬೇಕು ಮತ್ತು ಪುತ್ತೂರು ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ಖಂಡಿತವಾಗಿಯೂ ನ್ಯಾಯ ಕೊಡಿಸುವೆ ನನ್ನನ್ನು ಗೆಲ್ಲಿಸಿಕೊಡಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮನವಿ ಮಾಡಿದರು.

Recent News


Leave a Comment: