ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ನಕಲಿ ಪೇಪರ್ ಕಟ್ಟಿಂಗ್: ಸ್ಪೀಕರ್ ಖಾದರ್ ಸ್ಪಷ್ಟನೆ

Posted by Vidyamaana on 2023-06-13 03:37:13 |

Share: | | | | |


ನಕಲಿ ಪೇಪರ್ ಕಟ್ಟಿಂಗ್: ಸ್ಪೀಕರ್ ಖಾದರ್ ಸ್ಪಷ್ಟನೆ

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರದ್ದು ಎನ್ನಲಾದ ಹೇಳಿಕೆಯ ಪೇಪರ್ ಕಟ್ಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.

. ನಕಲಿ ಸೃಷ್ಟಿಸಿ ಅಪಪ್ರಚಾರ ಮಾಡುವವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು‌ ರವಾನಿಸಿದ್ದಾರೆ‌

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕೋಮು ಸಂಘರ್ಷಕ್ಕೆ ಪ್ರಚೋದನೆ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.

ನೀವಿರುವ ವಾಟ್ಸಾಪ್ ನಲ್ಲಿ ಈ ಪೇಪರ್ ಕಟ್ಟಿಂಗ್ ಬಂದರೆ ಅವರ ಫೋನ್ ನಂಬರ್ ಕಾಣುವಂತೆ screen shot ತೆಗೆದು 9343346439 ನ ವಾಟ್ಸಾಪ್ ಗೆ ಕಳುಹಿಸುವಂತೆ ಕಾಂಗ್ರೇಸ್ ನ ಕಾನೂನು ಘಟಕ ಮನವಿ ಮಾಡಿದೆ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.

ಏನಿದೆ ಪೇಪರ್ ಕಟ್ಟಿಂಗ್ ನಲ್ಲಿ..?

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಅನುದಾನ ತಸ್ತೀಕ್ ರೂಪದಲ್ಲಿ ಮಸೀದಿಗಳಿಗೆ ಹೋಗುವುದನ್ನು ತಡೆದ ಬಿಜೆಪಿ ಸರ್ಕಾರದ ಕ್ರಮಕ್ಕೆ ಶಾಸಕ ಮತ್ತು ಮಾಜಿ ಮಂತ್ರಿ ಯು.ಟಿ.ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಇಲ್ಲಿ ಶುಕ್ರ ವಾರ ಮಾತನಾಡಿದ ಅವರು, ಜನರನ್ನು ಧರ್ಮದ ಹೆಸರಿನ ಮೇಲೆ ವಿಭಜಿಸುವ ಸರ್ಕಾರದ ಹುನ್ನಾರ ಇದಾಗಿದೆ. ಮುಜರಾಯಿ ಇಲಾಖೆ ಅನುದಾನ ಮಸೀದಿಗಳಿಗೆ ಹೋಗುವುದನ್ನು ತಡೆದಿರುವ ಕುರಿತಾದ ಗೊಂದಲ ನಿವಾರಿಸುವಂತೆ ಒತ್ತಾಯಿಸಿದರು. ಮುಜರಾಯಿ ಇಲಾಖೆ ಸ್ವಾಮ್ಯಕ್ಕೆ ಒಳಪಟ್ಟ ಮಂದಿರದ ಹುಂಡಿಯಲ್ಲಿನ ಹಣವನ್ನು ಆಯಾ ಮಂದಿರಕ್ಕಾಗಿ ಬಳಸಿಕೊಳ್ಳತಕ್ಕದ್ದು ಎಂದು ನಿಯಮವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಕ್ರಮ ಅಸಮಂಜಸದಿಂದ ಕೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಶಾಸಕ ರಹೀಮ್ ಖಾನ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


ಎಂಬ ಪೇಪರ್ ಕಟ್ಟಿಂಗ್ ಹರಿದಾಡುತ್ತಿದೆ. ಇಂತಹ ಹೇಳಿಕೆಯೂ ನೀಡಿಲ್ಲ ಎಂದು ಯುಟಿ ಖಾದರ್ ಸ್ಪಷ್ಟ ಪಡಿಸಿದ್ದಾರೆ.

ಹುಬ್ಬಳ್ಳಿ ಕೇಸ್‌ – ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಜಾಮೀನು

Posted by Vidyamaana on 2024-01-05 16:04:32 |

Share: | | | | |


ಹುಬ್ಬಳ್ಳಿ ಕೇಸ್‌ – ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಜಾಮೀನು

ಹುಬ್ಬಳ್ಳಿ: 31 ವರ್ಷದ ಬಳಿಕ ರಾಮಜನ್ಮಭೂಮಿ (Ram Janambhoomi) ಹೋರಾಟದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ದೇಶವ್ಯಾಪಿ ಸುದ್ದಿಯಾಗಿದ್ದ ಶ್ರೀಕಾಂತ್‌ ಪೂಜಾರಿಗೆ (Srikanth Poojari) ಕೋರ್ಟ್‌ (Court) ಜಾಮೀನು ಮಂಜೂರು ಮಾಡಿದೆ.ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ.


ಶ್ರೀಕಾಂತ್‌ ಪೂಜಾರಿ ಪರ ವಕೀಲರು ಪ್ರತಿಕ್ರಿಯಿಸಿ, ನಮಗೆ ಜಾಮೀನು ಸಿಗಬಹುದು ಎಂಬ ವಿಶ್ವಾಸವಿತ್ತು. ಇಂದು ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಯಾವ್ಯಾವ ಷರತ್ತು ವಿಧಿಸಿದ್ದಾರೆ ಎಂಬುದಕ್ಕೆ ಆದೇಶದ ಪ್ರತಿ ಇನ್ನೂ ನಮ್ಮ ಕೈ ಸೇರಿಲ್ಲ. ನಾಳೆ ಶ್ರೀಕಾಂತ್‌ ಪೂಜಾರಿ ಅವರ ಬಿಡುಗಡೆಯಾಗಲಿದೆ ಎಂದು ಹೇಳಿದರು.ಡಿಸೆಂಬರ್29 ರಂದು ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು. ಶ್ರೀಕಾಂತ್‌ ಪೂಜಾರಿ ಬಂಧನವನ್ನು ಖಂಡಿಸಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿತ್ತು.

ಆ.28 : ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

Posted by Vidyamaana on 2023-08-27 02:09:20 |

Share: | | | | |


ಆ.28 : ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ

ಉತ್ಪಾದಕರ ಕಂಪೆನಿ ಹಾಗೂ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಜಂಟಿ ಆಶ್ರಯದಲ್ಲಿ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ ಆ.28 ಸೋಮವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ.


ಮುಖ್ಯ ಅತಿಥಿಯಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಪಾಲ್ಗೊಳ್ಳಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ.ರಶ್ಮಿ ಆರ್. ಮಾಹಿತಿ ನೀಡಲಿದ್ದಾರೆ. ಅತಿಥಿಗಳಾಗಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ವಿಜಯ ಕರ್ನಾಟಕ ಸೂಪರ್ ಸ್ಟಾರ್ ಪ್ರಶಸ್ತಿ ಪುರಸ್ಕೃತ ಕೃಷಿಕ ಕಡಮಜಲು ಸುಭಾಷ್ ರೈ ಭಾಗವಹಿಸಲಿದ್ದಾರೆ.


ಪುತ್ತೂರು ಮಾನಸಗಂಗಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಎನ್. ಉಪಸ್ಥಿತರಿರುವರು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ

Posted by Vidyamaana on 2023-06-14 15:44:21 |

Share: | | | | |


ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ (Uniform Civil Code) ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ.ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿ ಕುರಿತು 22ನೇ ಭಾರತೀಯ ಕಾನೂನು ಆಯೋಗವು ಜನರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ದೇಶದ ನಾಗರಿಕರು, ಪ್ರಮುಖ ಧಾರ್ಮಿಕ ಸಂಸ್ಥೆಗಳು ಏಕರೂಪ ನಾಗರಿಕ ಸಂಹಿತೆ ಕುರಿತು 30 ದಿನಗಳಲ್ಲಿ ಅಭಿಪ್ರಾಯ ಸಲ್ಲಿಸಬೇಕು ಎಂದು ಕಾನೂನು ಆಯೋಗ ಸೂಚಿಸಿದೆ.


ದೇಶದ ನ್ಯಾಯಾಲಯಗಳು ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿಯೇ ಸಿದ್ಧ ಎಂದು ಈಗಾಗಲೇ ಹೇಳಿದ್ದಾರೆ. ಇದರ ಬೆನ್ನಲ್ಲೇ, ಕಾನೂನು ಆಯೋಗವು ಸಾರ್ವಜನಿಕರಿಂದ, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವುದು ಪ್ರಮುಖ ವಿಷಯವಾಗಿದೆ. ಜನ ಹಾಗೂ ಧಾರ್ಮಿಕ ಸಂಸ್ಥೆಗಳ ಸಹಮತದೊಂದಿಗೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಆಯೋಗ ಮುಂದಾಗಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಜಾತಿ, ಧರ್ಮ, ಪಂಥಗಳ ಭೇದ-ಭಾವ ಇಲ್ಲದೆ, ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂಬುದೇ ಏಕರೂಪ ನಾಗರಿಕ ಸಂಹಿತೆಯಾಗಿದೆ. ಸಂವಿಧಾನದ 44ನೇ ವಿಧಿಯು ಕೂಡ ಏಕರೂಪ ನಾಗರಿಕ ಸಂಹಿತೆ ಇರಬೇಕು ಎಂದು ಹೇಳುತ್ತದೆ. ಹಾಗಾಗಿ, ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಎಂದು 2019ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಎಲ್ಲರಿಗೂ ಒಂದೇ ಕಾನೂನು ಜಾರಿಗೆ ಬರುತ್ತದೆ. ಇದಕ್ಕಾಗಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬಾರದು ಎಂದು ಹಲವು ಧಾರ್ಮಿಕ ಸಂಸ್ಥೆಗಳು, ರಾಜಕಾರಣಿಗಳ ಒತ್ತಾಯವಾಗಿದೆ.ಜನರು ಹಾಗೂ ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯ ಪಡೆದುಕೊಂಡೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ತೀರ್ಮಾನಿಸಿದ ಕಾರಣ ಸಾಮಾನ್ಯ ಜನರು ಕೂಡ ಸಂಹಿತೆ ಜಾರಿ ಕುರಿತಂತೆ ಅಭಿಪ್ರಾಯ ಸಲ್ಲಿಸಬಹುದಾಗಿದೆ. ಭಾರತೀಯ ಕಾನೂನು ಆಯೋಗದ membersecretary-lci@gov.inಗೆ ಇ-ಮೇಲ್‌ ಮಾಡುವ ಮೂಲಕ ನಿಮ್ಮ ಅಭಿಪ್ರಾಯವನ್ನೂ ದಾಖಲಿಸಬಹುದು. ಅಂದಹಾಗೆ, ನೀವು ಅಭಿಪ್ರಾಯ ತಿಳಿಸಲು 30 ದಿನ ಮಾತ್ರ ಕಾಲಾವಕಾಶವಿದೆ. ಅಧಿಸೂಚನೆ ಹೊರಡಿಸಲಾದ 30 ದಿನಗಳೊಳಗೆ ಅಭಿಪ್ರಾಯ ಸಲ್ಲಿಸಬಹುದು.

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಂಚೆ ಜನ ಸಂಪರ್ಕ ಅಭಿಯಾನ

Posted by Vidyamaana on 2024-03-09 17:03:43 |

Share: | | | | |


ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಂಚೆ ಜನ ಸಂಪರ್ಕ ಅಭಿಯಾನ

ಪುತ್ತೂರು : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ಮುಳಿಯ ಜ್ಯುವೆಲ್ಸ್ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಂಚೆ ಜನ ಸಂಪರ್ಕ ಅಭಿಯಾನವನ್ನು ಇಂದು ಮುಳಿಯ ಜ್ಯುವೆಲ್ಸ್ ಕೋರ್ಟ್ ರಸ್ತೆ ಪುತ್ತೂರಿನಲ್ಲಿ ನಡೆಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಸಂಸ್ಥೆ ಯ ನಿರ್ದೇಶಕಿಯರದ ಕೃಷ್ಣ ವೇಣಿ ಪ್ರಸಾದ್ ಮುಳಿಯ ಹಾಗೂ ಅಶ್ವಿನಿ ಕೃಷ್ಣ ಮುಳಿಯ ವಹಿಸಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಜನರ ಬಳಿಗೆ ಇಲಾಖೆ ಯೋಜನೆಯನ್ನು ಕೊಂಡೊಯ್ಯಲು ಯೋಜಿಸಲಾಗಿದೆ. ಇದರ ಭಾಗವಾಗಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇಲಾಖೆಯ ಇತರ ಸೇವೆಗಳನ್ನು ಸ್ಥಳದಲ್ಲೇ ಜನರಿಗೆ ನೀಡಲಾಗುವುದು. ಗ್ರಾಮೀಣ ಭಾಗದ ಜನತೆಗೂ ಬ್ಯಾಂಕ್ ಹಾಗೂ ವಿಮೆ ಸೌಲಭ್ಯಗಳನ್ನು ನೀಡುತ್ತಿದೆ ಗ್ರಾಮೀಣ ಜನತೆಗೂ ಅನುಕೂಲವಾಗುವ ನಿಟ್ಟಿನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.


ಮಾಹಿತಿಯನ್ನು ಅತಿಥಿಗಳಾಗಿ ಹರೀಶ್ ಜಿ, ಹಿರಿಯ ಅಂಚೆ ಅಧೀಕ್ಷಕರು ಪುತ್ತೂರು ವಿಭಾಗ, ಉಷಾ ಕೆ.ಆರ್ ಉಪ ಅಂಚೆ ಅಧೀಕ್ಷಕರು ಪುತ್ತೂರು ವಿಭಾಗ, ಸುನಿತಾ ಮಹಿಳಾ ಪೊಲೀಸ್


ಠಾಣಾಧಿಕಾರಿ ಪುತ್ತೂರು, ಗಣಪತಿ ಮರಡಿ ಸಹಾಯಕ ಅಂಚೆ ಅಧೀಕ್ಷಕರು ಪುತ್ತೂರು ಉಪವಿಭಾಗ, ತೀರ್ಥಪ್ರಸಾದ್ ಪ್ರಧಾನ ಅಂಚೆ ಪಾಲಕರು ಪ್ರಧಾನ ಅಂಚೆ ಕಛೇರಿ ಪುತ್ತೂರು ಇವರು ವಹಿಸಿದ್ದರು.

ಟೊಮೆಟೋ ಅಂಗಡಿಗೆ ಬೌನ್ಸರ್ ನೇಮಿಸಿದ್ದ ವ್ಯಾಪಾರಿ ಅಜಯ್ ಫೌಜಿ ಬಂಧನ

Posted by Vidyamaana on 2023-07-12 17:06:37 |

Share: | | | | |


ಟೊಮೆಟೋ ಅಂಗಡಿಗೆ ಬೌನ್ಸರ್ ನೇಮಿಸಿದ್ದ ವ್ಯಾಪಾರಿ ಅಜಯ್ ಫೌಜಿ ಬಂಧನ

ವಾರಾಣಸಿ: ಟೊಮೆಟೋಗಳನ್ನು ರಕ್ಷಿಸಿಕೊಳ್ಳಲು ಬೌನ್ಸರ್ ಗಳನ್ನು ನೇಮಿಸಿದ್ದ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಮಾಜವಾದಿ ಪಕ್ಷದ ಕಾರ್ಯಕರ್ತ ಅಜಯ್ ಫೌಜಿ ಎಂಬವರು ರವಿವಾರ ವಾರಣಾಸಿಯ ಲಂಕಾ ಪ್ರದೇಶದಲ್ಲಿ ತರಕಾರಿ ಮಾರಾಟಗಾರರ ಅಂಗಡಿಯೊಂದರಲ್ಲಿ ಎರಡು ಬೌನ್ಸರ್ ಗಳನ್ನು ನಿಯೋಜಿಸಿದ್ದರು. ಇದು ಟೊಮೆಟೊ ಬೆಲೆಯ ಬಗ್ಗೆ ಚೌಕಾಶಿ ಮಾಡುವಾಗ ಖರೀದಿದಾರರು ಆಕ್ರಮಣಕಾರಿ ವರ್ತನೆ ತೋರುವುದನ್ನು ತಡೆಯಲು ಕೈಗೊಂಡ ಕ್ರಮ ಎಂದು ಅವರು ಹೇಳಿದ್ದರು.

ಅಂಗಡಿ ಮಾಲೀಕ ರಾಜ್ ನಾರಾಯಣ್ ನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದ್ದು, ನಾಟಕೀಯ ಪ್ರತಿಭಟನೆ ನಡೆಸಿದ ಅಜಯ್ ಫೌಜಿ ಹಾಗೂ ಇಬ್ಬರು ಬೌನ್ಸರ್ ಗಳು ಪರಾರಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ನಾರಾಯಣ್ ಮತ್ತು ವಿಕಾಸ್ ನನ್ನು ಐಪಿಸಿ ಸೆಕ್ಷನ್ 153 ಗಲಭೆಗೆ ಪ್ರಚೋದನೆ, 291 (ತಪ್ಪು ಪುನರಾವರ್ತನೆ) ಹಾಗೂ 505 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Recent News


Leave a Comment: