ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ ಮೃತ್ಯು

Posted by Vidyamaana on 2023-07-16 15:26:15 |

Share: | | | | |


ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ  ಮೃತ್ಯು

ಬೆಳ್ತಂಗಡಿ : ರಜೆ ಇದ್ದ ಕಾರಣ ಮನೆಯಲ್ಲಿ ಸಾರಿಯಲ್ಲಿ ಮಾಡಿದ್ದ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದಿಡುಪೆಯಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14)  ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.

ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ ನೂತನ ಸಮಿತಿ ರಚನೆ

Posted by Vidyamaana on 2023-08-19 16:19:27 |

Share: | | | | |


ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ ನೂತನ ಸಮಿತಿ ರಚನೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆಯು ಆ 18 ರಂದು ಪುತ್ತೂರು ಲಯನ್ಸ್  ಸಭಾಂಗಣದಲ್ಲಿ ನಡೆಯಿತು.

ಕಳೆದ 2ವರ್ಷಗಳ ಪಕ್ಷದ ಕಾರ್ಯ ಚಟುವಟಿಕೆ ಗಳ ಬಗ್ಗೆ  ಕ್ಷೇತ್ರ ಸಮಿತಿ ಪ್ರ.ಕಾರ್ಯದರ್ಶಿ  ಅಬ್ದುಲ್ ರಹಿಮಾನ್ ವರದಿ ಮಂಡಿಸಿದರು.

ಪಕ್ಷ ಬಲವರ್ಧನೆ ಬಗ್ಗೆ ಅಸೆಂಬ್ಲಿ ವಾರು ನಾಯಕರೊಡನೆ SDPI ದ.ಕ ಜಿಲ್ಲಾ ಅದ್ಯಕ್ಷ ರು ಗಳ ಅಬಿಪ್ರಾಯ ಗಳನ್ನು ವಿನಿಮಯ ಮಾಡಿ ಪಕ್ಷ ಬಲವರ್ಧನೆ ಗೆ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು  ನಾಯಕತ್ವದ ಬಗ್ಗೆ ತರಬೇತಿಯನ್ನು ನೀಡಿದರು

ಜಿಲ್ಲೆಯಾದ್ಯಂತರ ಪಕ್ಷದ ಮಧ್ಯಂತರ ಪ್ರತಿನಿಧಿ ಸಬೆಗಳಲ್ಲಿ ಪಕ್ಷದ ಪದಾದಿಕಾರಿಗಳಲ್ಲಿ ಕೆಲವೊಂದು ಬದಲಾವಣೆಗಳಯ ಮಾಡಲಾಯಿತು 

ಅದ್ಯಕ್ಷ ರಾಗಿ ಇಬ್ರಾಹಿಂ ಸಾಗರ್,ಪ್ರ.ಕಾರ್ಯದರ್ಶಿ ಯಾಗಿ ಅಬ್ದುಲ್ ರಹಿಮಾನ್ ಪುತ್ತೂರು ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಸಾಲ್ಮರ ರವರನ್ನು ಮುಂದುವರಿಸಲಾಯಿತು

ಮತ್ತು ಖಜಾಂಚಿ ಯಾಗಿ ವಿಶ್ವನಾಥ್ ಪುಣಚತ್ತಾರು,ಜತೆಕಾರ್ಯದರ್ಶಿಯಾಗಿ ಅಬ್ದುರ್ರಹಿಮಾನ್ (ಅದ್ದು) ಕೊಡಿಪ್ಪಾಡಿ,ಮತ್ತು ಮುಸ್ತಫ DB ಯವರು ಆಯ್ಕೆ ಯಾದರು

 ದ.ಕ ಜಿಲ್ಲಾ ಅದ್ಯಕ್ಷ ಅನ್ವರ್ ಸಾದಾತ್ ಬಜತ್ತೂರು,ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಮತ್ತು ದ‌ಕ ಜಿಲ್ಲಾ ಸದಸ್ಯರಾದ ಅಬೂಬಕ್ಕರ್ ಮದ್ದ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕ್ಷೇತ್ರ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕೆ.ಎ ಸಮಾರೋಪ ಬಾಷಣ ಗೈದರು ಕಾರ್ಯಕ್ರಮ ವನ್ನು ಅಬ್ದುಲ್ ಹಮೀದ್ ಸಾಲ್ಮರ ಸ್ವಾಗತಿಸಿ ಕಾರ್ಯದರ್ಶಿ ಗಳಾದ  ಅಬ್ದುಲ್ ರಹಮಾನ್ ಕೊಡಿಪ್ಪಾಡಿ ವಂದನಾರ್ಪನೆಗೈದರು

ಪುತ್ತಿಲ ಪರಿವಾರ ಆಯೋಜನೆಯ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Posted by Vidyamaana on 2023-11-29 11:45:47 |

Share: | | | | |


ಪುತ್ತಿಲ ಪರಿವಾರ ಆಯೋಜನೆಯ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಪುತ್ತಿಲ ಪರಿವಾರದ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು ಬೆಳಿಗ್ಗೆ ನಡೆಯಿತು.


ಪ್ರಧಾನ ಅರ್ಚಕರಾದ ವಿಎಸ್ ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. 


ಅರುಣ್ ಕುಮಾರ್ ಪುತ್ತಿಲ,  ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ್ ಕೋಟೇಚಾ, ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ  ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ  ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ರವಿ ರೈ ಕೆದಂಬಾಡಿ ಮಠ,  ಆರ್ಯಾಪು ಗ್ರಾ ಪಂ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ, ದಿನೇಶ್ ಅಡ್ಕಾರ್

ಸುಧಾಕರ್ ಸುಳ್ಯ, ಗೋಪಾಲಕೃಷ್ಣ ಭಟ್,ಮಹೇಂದ್ರ ವರ್ಮ, ಲಕ್ಷ್ಮಣ ಬೈಲಾಡಿ, ಪ್ರಶಾಂತ್ ನೆಕ್ಕಿಲಾಡಿ , ಚಿನ್ಮಯ್ ರೈ ಈಶ್ವರಮಂಗಲ,ಗೀತೇಶ್ ರ್,ಚಂದ್ರಹಾಸ ಈಶ್ವರಮಂಗಲ, ಕಿಶೋರ್ ಜೋಗಿ, ಮಹೇಂದ್ರ ವರ್ಮ, ಅರುಣ್ ಭಟ್, ರಾಜೇಶ್  ಭಟ್ ಕುಳ, ರವಿಕೃಷ್ಣ ನಗರ, ಗೋಕುಲ್ ದಾಸ್ ಪ್ರಗತಿ, ಭೀಮಯ್ಯ ಭಟ್, ಪ್ರವೀಣ್ ಭಂಡಾರಿ, ಅನಿಲ್ ಮುಂಡೂರು, ಅಶೋಕ್ ಪುತ್ತಿಲ,ಪುರುಷೋತ್ತಮ ಕೋಲ್ಪೆ , ಜಯಪ್ರಕಾಶ್ , ರತ್ನಾಕರ್ ನಾಯಕ್ ಸಹಿತ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅ. 7 ರಂದು ರೈ ಎಸ್ಟೇಟ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Posted by Vidyamaana on 2023-10-05 21:59:37 |

Share: | | | | |


ಅ. 7 ರಂದು ರೈ ಎಸ್ಟೇಟ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರವರು ಅ. ೭ ರಂದು ಶನಿವಾರ ಬೈಪಾಸ್ ಬಳಿ ಇರುವ ಶಾಸಕರ ಟ್ರಸ್ಟ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಶಾಂತಿನಗರ ತಿಳಿಸಿದ್ದಾರೆ.

ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಡಾ. ಅಂಬೇಡ್ಕರ್ ವೃತ್ತ ಮಂಗಳೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ನುರಿತ ವೈದ್ಯರುಗಳು ಶಿಬಿರದಲ್ಲಿ ಭಾಗವಹಿಸಲಿದ್ದು ಕೆಲವೊಂದು ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.


ಭಾಗವಹಿಸುವ ವಿಭಾಗಗಳು

ಸಾಮಾನ್ಯ ರೋಗ, ಹೃದಯ ರೋಗ, ಕಣ್ಣಿನ ವಿಭಾಗ, ಎಲುಬು ಮತ್ತು ಕೀಲು ರೋಗ, ಗ್ಯಾಸ್ಟೋಎಂಟರಾಲಜಿ ವಿಭಾಗ, ಮೂತ್ರಶಾಸ್ತ್ರ ವಿಭಾಗದ ನುರಿತ ವೈದ್ಯರುಗಳ ಭಾಗವಹಿಸಿ ಸೂಕ್ತ ಚಿಕಿತ್ಸೆ ಮತ್ತು ತಪಾಸಣೆಯನ್ನು ನಡೆಸಲಿದ್ದಾರೆ.


ಸೌಲಭ್ಯಗಳು

ಉಚಿತ ಬಿ ಪಿ ಹಾಗೂ ಮಧುಮೇಹ ತಪಾಸಣೆ, ಅಗತ್ಯ ಇರುವವರಿಗೆ ಉಚಿತ ಇಸಿಜಿ ಪರೀಕ್ಷೆ, ಉಚಿತ ಔಷಧ ವಿತರಣೆ, ಮತ್ತು ಉಚಿತ ಓದುವ ಕನ್ನಡಕದ ವಿತರಣೆ ನಡೆಯಲಿದೆ. ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ ಗಂಟೆಯತನಕ ಶಿಬಿರ ನಡೆಯಲಿದ್ದು ಸಾರ್ವಜನಿಕರು ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕಾರ್ಯಾಧ್ಯಕ್ಷರು ವಿನಂತಿಸಿದ್ದಾರೆ.

ಬಸ್ ನಿಲ್ದಾಣ ಮುಂಭಾಗ ಬಸ್ ಆಮ್ನಿ ಅಪಘಾತ

Posted by Vidyamaana on 2023-07-27 05:52:10 |

Share: | | | | |


ಬಸ್ ನಿಲ್ದಾಣ ಮುಂಭಾಗ ಬಸ್ ಆಮ್ನಿ ಅಪಘಾತ

ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗ ಬಸ್ ಹಾಗೂ ಆಮ್ನಿ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಅಪಘಾತದಿಂದ ಕಾರಿಗೆ ಹಾನಿಯಾಗಿದ್ದು, ಘಟನೆಗೆ ಕೆ.ಎಸ್.ಆರ್.ಟಿ.ಸಿ.ಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ.

ಪುತ್ತೂರು ಕೆ.ಎಸ್.ಆರ್.ಟಿ.ಸಿ. ಮುಂಭಾಗ ತೀರಾ ಇಕ್ಕಟ್ಟಿನ ರಸ್ತೆ. ಹಾಗಿದ್ದು, ಕೆ.ಎಸ್.ಆರ್.ಟಿ.ಸಿ. ಮುಂಭಾಗ ಅಧಿಕಾರಿಗಳು ಬ್ಯಾರಿಕೇಡ್ ಹಾಕಿ, ಇನ್ನಷ್ಟು ಸಮಸ್ಯೆಗೆ ಕಾರಣರಾಗಿದ್ದಾರೆ. ಇದರ ಬಗ್ಗೆ ಅಧಿಕಾರಿಗಳ ಗಮನ ಸೆಳೆದರೂ, ಸ್ಪಂದಿಸದೇ ಇರುವುದು ಘಟನೆಗೆ ಕಾರಣ.

ಕೆ.ಎಸ್.ಆರ್.ಟಿ.ಸಿ. ಮುಂಭಾಗ ನಾಲ್ಕು ರಸ್ತೆ ಸಂಧಿಸುವ ಪ್ರಮುಖ ಸ್ಥಳ. ಇದರಲ್ಲಿ ಎರಡು ರಸ್ತೆ ವನ್ ವೇ ಆಗಿರುವುದು ಸಮಾಧಾನದ ಸಂಗತಿ. ಹಾಗೆಂದು ವಾಹನಗಳ ಸಂಖ್ಯೆಯೇನೂ ಕಡಿಮೆ ಇಲ್ಲ. ಹಳೆ ಪೋಸ್ಟ್ ಕಚೇರಿ ಸಂಪರ್ಕಿಸುವ ರಸ್ತೆ, ಮುಖ್ಯರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ, ನೆಲ್ಲಿಕಟ್ಟೆಯಿಂದ ಬರುವ ರಸ್ತೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಬರುವ ರಸ್ತೆ. ಈ ನಾಲ್ಕು ರಸ್ತೆಗಳ ವಾಹನಗಳು ಬಂದು ಸೇರುವ ಜಂಕ್ಷನ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗ.

ಇಷ್ಟು ಒತ್ತಡವಿದ್ದರೂ, ಕೆ.ಎಸ್.ಆರ್.ಟಿ.ಸಿ.ಗೆ ಬರುವ ಖಾಸಗಿ ವಾಹನಗಳನ್ನು ನಿಲ್ಲಿಸಲು ಸ್ಥಳಾವಕಾಶವಿಲ್ಲ. ಇದ್ದ ಸ್ಥಳವನ್ನು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಬ್ಯಾರಿಕೇಡ್ ಹಾಕಿ, ಬಂದ್ ಮಾಡಿದ್ದಾರೆ. ಹಾಗೆಂದು ಬಸ್ ಟರ್ಮಿನಲ್ ಒಳಗಡೆಗೆ ಖಾಸಗಿ ವಾಹನಗಳ ಪ್ರವೇಶ ನಿಷಿದ್ಧ. ಹಾಗಾದರೆ ಸಾರ್ವಜನಿಕರು ಬಂದಿಳಿಯಲು ವಾಹನ ನಿಲ್ಲಿಸುವುದು ಎಲ್ಲಿ? ಬಸ್ ಟರ್ಮಿನಲಿನ ಮುಂಭಾಗದ ರಸ್ತೆಯಲ್ಲೇ ನಿಲ್ಲಿಸಬೇಕಷ್ಟೇ. ಹೆಚ್ಚಲ್ಲ, ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಪ್ರಯಾಣಿಕರನ್ನು ಹತ್ತಿಸಲು ರಸ್ತೆಯಲ್ಲೇ ನಿಲ್ಲಿಸುವುದು ಇಲ್ಲಿ ಸಾಮಾನ್ಯವಾಗಿ ಕಂಡುಬರುವ ದೃಶ್ಯ.

ಹೀಗಿರುವಾಗ ಮುಂಭಾಗದ ಅಗಲ ಕಿರಿದಾದ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳು ಓಡಾಡುವುದಾದರೂ ಹೇಗೆ? ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಕೇಳಿಯೂ ಕೇಳದಂತೆ, ನೋಡಿಯೂ ನೋಡದಂತೆ ಇರುವುದಾದರೂ ಯಾಕೆ? ಕೆ.ಎಸ್.ಆರ್.ಟಿ.ಸಿ.ಯ ತಪ್ಪು ನಿರ್ಧಾರಕ್ಕೆ ಗುರುವಾರ ಬೆಳಿಗ್ಗೆ ಅಪಘಾತ ನಡೆದಿದ್ದು, ಅಮಾಯಕರು ಕಷ್ಟ ಅನುಭವಿಸುವಂತಾಯಿತು.

ಬ್ಯಾರಿಕೇಡ್ ಹಾಕಿದ್ದಾದರೂ ಯಾಕೆ?

ಕೆ.ಎಸ್.ಆರ್.ಟಿ.ಸಿ. ಮುಂಭಾಗ ಬ್ಯಾರಿಕೇಡ್ ಹಾಕಲು ಒಂದು ಕಾರಣವಿತ್ತು. ಅಂದು ಅವಳಿ ವೀರರಾದ ಕೋಟಿ – ಚೆನ್ನಯರ ಹೆಸರನ್ನು ಟಸ್ ಟರ್ಮಿನಲಿಗೆ ನಾಮಕಾರಣ ಮಾಡುವ ದಿನ. ಸಚಿವರು, ಶಾಸಕರು ಆಗಮಿಸಬೇಕಾಗಿತ್ತು. ಹಾಗೇ ಬರುವಾಗ ನಿಲ್ದಾಣದ ಮುಂಭಾಗ ಒತ್ತಡ ನಿರ್ಮಾಣವಾಯಿತು. ಈ ಒಂದೇ ಕಾರಣಕ್ಕೆ, ಬಸ್ ಟರ್ಮಿನಲ್ ಮುಂಭಾಗ ಬ್ಯಾರಿಕೇಡ್ ಹಾಕಲಾಯಿತು. ಅದನ್ನು ಒಂದು ದಿನಕ್ಕೆ ಸೀಮಿತ ಮಾಡಬಹುದಿತ್ತು. ಆದರೆ ಹಾಗೇ ಮಾಡಲಿಲ್ಲ. ಅದನ್ನೇ ಶಾಶ್ವತವಾಗಿಸುವ ಯೋಜನೆ ಅಧಿಕಾರಿಗಳದ್ದು.

ಕಾನೂನನ್ನು ಬಡವರ ಮೇಲೆ ಹೇರುವ ಅಧಿಕಾರಿಗಳು, ತಮ್ಮ ವ್ಯಾಪ್ತಿಗೆ ಬಂದಾಗ ಕಣ್ಣುಮುಚ್ಚಿ ಕುಳಿತುಕೊಳ್ಳುವುದು ಮಾತ್ರ ವಿಪರ್ಯಾಸ. ವಾಣಿಜ್ಯ ಸಂಕೀರ್ಣದ ಮುಂಭಾಗದ ಪಾರ್ಕಿಂಗ್ ಜಾಗವನ್ನು ಮುಚ್ಚುವಂತೆಯೇ ಇಲ್ಲ. ಅಥವಾ ತನ್ನ ಗ್ರಾಹಕರಿಗೆ ಮಾತ್ರ ಎಂದು ಬೋರ್ಡ್ ಹಾಕುವಂತೆ ಇಲ್ಲ ಎಂದು ಇತ್ತೀಚೆಗೆ ನ್ಯಾಯಾಲಯ ಸೂಚನೆ ನೀಡಿರುವುದೂ ಕೂಡ ಇಲ್ಲಿ ಉಲ್ಲೇಖನೀಯ.

ಶಾಫಿ ಸಅದಿ ರಾಜೀನಾಮೆ

Posted by Vidyamaana on 2023-07-05 15:21:53 |

Share: | | | | |


ಶಾಫಿ ಸಅದಿ ರಾಜೀನಾಮೆ

ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಜುಲೈ 05 ರಂದು ರಾಜೀನಾಮೆ ಸಲ್ಲಿಸಿದ್ದಾರೆ.

ಕಳೆದ ಸಾಲಿನ ನವೆಂಬರ್ 18ಕ್ಕೆ ಶಾಫಿ ಸಅದಿ ವಕ್ಸ್ ಬೋರ್ಡ್‌ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದರು. ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿತ್ತು. ಆದರೆ, ಒಂದೇ ದಿನದಲ್ಲಿ ಆ ಆದೇಶವನ್ನು ಹಿಂಪಡೆಯಲಾಗಿತ್ತು.

ಸುಮಾರು ಎರಡು ಕೋಟಿ ರೂ.ವೆಚ್ಚದಲ್ಲಿ ನವೀಕೃತಗೊಂಡಿರುವ ವಕ್ಸ್ ಬೋರ್ಡ್ ಕಚೇರಿಯ ಕಟ್ಟಡದ ಉದ್ಘಾಟನೆವರೆಗೆ ತಮ್ಮನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುವಂತೆ ಶಾಫಿ ಸಅದಿ ಮನವಿ ಮಾಡಿದ್ದರು ಎಂದು ತಿಳಿದು ಬಂದಿದೆ. ಅದರಂತೆ, ಜು.3ರಂದು ನವೀಕೃತ ಕಟ್ಟಡ ಉದ್ಘಾಟನೆಯಾಗಿದ್ದು, ಅವರು ಇಂದು ರಾಜೀನಾಮೆ ನೀಡಿದ್ದಾರೆ.

ವಕ್ಸ್‌ ಬೋರ್ಡ್‌ಗೆ ಕಳೆದ ಸರಕಾರದ ಅವಧಿಯಲ್ಲಿ ತನ್ವಿರ್ ಸೇರ್ ಹಾಗೂ ಕನೀಝ್ ಫಾತಿಮಾ ಅವರನ್ನು ಶಾಸಕರ ಕೋಟಾದಲ್ಲಿ ನಾಮ ನಿರ್ದೇಶನ ಮಾಡಲಾಗಿತ್ತು. ಇದೀಗ ಹೊಸ ವಿಧಾನಸಭೆ ಅಸ್ತಿತ್ವಕ್ಕೆ ಬಂದಿರುವುದರಿಂದ ವಕ್ಸ್‌ ಬೋರ್ಡ್‌ಗೆ ಹೊಸದಾಗಿ ಶಾಸಕರನ್ನು ನಾಮ ನಿರ್ದೇಶನ ಮಾಡಬೇಕಿದೆ.


ಅಲ್ಲದೆ, ವಕ್ಸ್ ಬೋರ್ಡ್ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಬೇಕಿದೆ. ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಶಾಫಿ ಸಅದಿ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ


Recent News


Leave a Comment: