ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಫೆ 06:ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್, ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆ

Posted by Vidyamaana on 2024-02-05 22:07:35 |

Share: | | | | |


ಫೆ 06:ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್, ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆ

ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಫೆ.6 ರಂದು ಫ್ಯಾಟಿ ಲಿವರ್(ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ  ಫೈಬ್ರೋಸ್ಕ್ಯಾನ್ ಹಾಗೂ ಲಿವರ್ ಫಂಕ್ಷನ್ ಟೆಸ್ಟ್  ತಪಾಸಣೆಯನ್ನು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಾಡಲಾಗುವುದು. ಈ ಪರೀಕ್ಷೆಯು ಉಚಿತವಾಗಿದ್ದು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ. ತಪಾಸಣೆ ಮಾಡಲಿಚ್ಛಿಸುವವರು 08251-231901/23902/231247, ಮೊ:8123276901 ನಂಬರಿಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಅಶೋಕ್ ರೈ ಭೇಟಿಯಾದ ಯು.ಟಿ.ಖಾದರ್

Posted by Vidyamaana on 2023-04-18 13:15:50 |

Share: | | | | |


ಅಶೋಕ್ ರೈ ಭೇಟಿಯಾದ ಯು.ಟಿ.ಖಾದರ್

ಪುತ್ತೂರು: ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಕಾಂಗ್ರೆಸ್ ಚುನಾವಣಾ ಕಚೇರಿಗೆ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್ ಮಂಗಳವಾರ ಭೇಟಿ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರೊಂದಿಗೆ ಮಾತುಕತೆ ನಡೆಸಿ, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಿ, ಶುಭಹಾರೈಸಿದರು.

ಈ ಸಂದರ್ಭ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಯುವ ಕಾಂಗ್ರೆಸ್ ನಗರಾಧ್ಯಕ್ಷ ಮೋನು ಬಪ್ಪಳಿಗೆ, ನಗರಸಭೆ ಸದಸ್ಯ ರಿಯಾಜ್ ಪರ್ಲಡ್ಕ, ಪ್ರಮುಖರಾದ ಮಹಮ್ಮದ್ ಆಲಿ, ನಿರಂಜನ್ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರು ಮೊದಲಾದವರು ಉಪಸ್ಥಿತರಿದ್ದರು.

ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

Posted by Vidyamaana on 2023-12-25 12:55:35 |

Share: | | | | |


ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ.ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ. ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯಾ, ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ನಿತ್ಯಾ ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿದ್ದು,ನಿತ್ಯಾ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ಫಲಶ್ರುತಿ ರಸ್ತೆ ಬದಿ ನಿಲ್ಲುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಸರತಿ ಸಾಲಿಗೆ ಕೊನೆಗೂ ಸಿಕ್ತು ಮುಕ್ತಿ! | ಪಿ.ಎಸ್.ಐ. ಉದಯರವಿ ಕಾರ್ಯಕ್ಕೆ ಪ್ರಶಂಸೆ

Posted by Vidyamaana on 2023-01-25 16:11:33 |

Share: | | | | |


ವರದಿ ಫಲಶ್ರುತಿ  ರಸ್ತೆ ಬದಿ ನಿಲ್ಲುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಸರತಿ ಸಾಲಿಗೆ ಕೊನೆಗೂ ಸಿಕ್ತು ಮುಕ್ತಿ! | ಪಿ.ಎಸ್.ಐ. ಉದಯರವಿ ಕಾರ್ಯಕ್ಕೆ ಪ್ರಶಂಸೆ

ವರದಿ ಫಲಶ್ರುತಿ

ಪುತ್ತೂರು : ಮುಕ್ರಂಪಾಡಿಯಲ್ಲಿ ಮುಖ್ಯರಸ್ತೆ ಬದಿಯಲ್ಲೇ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಿಗೆ ಕೊನೆಗೂ ಪರಿಹಾರ ನೀಡುವಲ್ಲಿ ಕೆ.ಎಸ್.ಆರ್.ಟಿ.ಸಿ. ಶಕ್ತವಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆ ಎಸ್.ಐ. ಉದಯರವಿ ಅವರು ವರದಿ ತಕ್ಷಣ ಸ್ಪಂದಿಸಿದ್ದು, ಕೆ.ಎಸ್.ಆರ್.ಟಿ.ಸಿ. ವಿಭಾಗಕ್ಕೆ ಚುರುಕು ಮುಟ್ಟಿಸಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

   ಪ್ರತಿದಿನ ಸಂಜೆ ಹೊತ್ತು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳನ್ನು ಸಾನ್ತೋಮ್ ಗುರುಮಂದಿರದಿಂದ ಡಿಪೋದವರೆಗೆ ಮುಖ್ಯರಸ್ತೆಯ ಬದಿಯಲ್ಲೇ ನಿಲ್ಲಿಸಲಾಗುತ್ತಿತ್ತು. ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ದರ್ಬೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮುಕ್ರಂಪಾಡಿ ಕೆ.ಎಸ್.ಆರ್.ಟಿ.ಸಿ. ಡಿಪೋದವರೆಗೆ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಸಂಜೆ ಹೊತ್ತು ಕಚೇರಿಯಿಂದ ಮನೆಗೆ ಹೋಗುವವರ ಸಂಖ್ಯೆಯೂ ಅಧಿಕವಾಗಿರುವ ಕಾರಣದಿಂದ, ವಾಹನ ದಟ್ಟಣೆ ಹೆಚ್ಚಿರುತ್ತದೆ. ಆದರೆ ಇದಾವುದನ್ನು ಲೆಕ್ಕಿಸದ ಕೆ.ಎಸ್.ಆರ್.ಟಿ.ಸಿ. ಸ್ಥಳೀಯ ಪೆಟ್ರೋಲ್ ಬಂಕ್ನಿಂದ ಬಸ್ಸುಗಳಿಗೆ ಡೀಸಿಲ್ ಹಾಕಲು ಹಾಗೂ ನಂತರ ಡಿಪೋದ ಒಳ ಹೋಗಲು ಸರತಿ ಸಾಲಿನಲ್ಲಿ ಬಸ್ಸುಗಳನ್ನು ನಿಲ್ಲಿಸುತ್ತಿತ್ತು.

ಮಂಗಳವಾರ ಸಂಜೆ ಹೊತ್ತು ಸಣ್ಣಗೆ ಮಳೆ ಸುರಿಯುತ್ತಿದ್ದ ಹೊತ್ತಿನಲ್ಲಿ, ವಿಪರೀತ ವಾಹನ ದಟ್ಟಣೆ ಉಂಟಾಗಿತ್ತು. ಇದನ್ನು `ವಿದ್ಯಮಾನ’ ವರದಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. ತಕ್ಷಣ ಸ್ಪಂದಿಸಿದ ಪುತ್ತೂರು ಸಂಚಾರ ಪೊಲೀಸ್ ಠಾಣೆ ಪಿ.ಎಸ್.ಐ. ಉದಯರವಿ ಅವರು ಕೆ.ಎಸ್.ಆರ್.ಟಿ.ಸಿ. ವಿಭಾಗಕ್ಕೆ ತೆರಳಿ, ಅಧಿಕಾರಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ಸುಗಳನ್ನು ಮುಖ್ಯರಸ್ತೆ ಬದಿ ನಿಲ್ಲಿಸದಂತೆ ತಿಳಿಸಿದ್ದರು.

ಬುಧವಾರ ಸಂಜೆ ಹೊತ್ತು ಕೆ.ಎಸ್.ಆರ್.ಟಿ.ಸಿ.ಯ ಓರ್ವ ಅಧಿಕಾರಿಗೆ ಜವಾಬ್ದಾರಿ ನೀಡಿದ ಕೆ.ಎಸ್.ಆರ್.ಟಿ.ಸಿ. ಹಿರಿಯ ಅಧಿಕಾರಿಗಳು, ಬಸ್ಸು ಗಳನ್ನು ಸಂಜೆ ಹೊತ್ತು ರಸ್ತೆ ಬದಿ ನಿಲ್ಲಿಸದಂತೆ ಸೂಚನೆ ನೀಡಿದ್ದರು. ಅದರಂತೆ ಅಧಿಕಾರಿಯೋರ್ವರು ಸಂಜೆ ಹೊತ್ತು ರಸ್ತೆ ಬದಿ ನಿಂತು ಬಸ್ಸುಗಳನ್ನು ಮುಖ್ಯರಸ್ತೆಯಲ್ಲಿ ನಿಲ್ಲಲು ಬಿಡದೇ, ನೇರವಾಗಿ ಡಿಪೋಗೆ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿತು.


ಉದಯರವಿ ಕಾರ್ಯಕ್ಕೆ ಮೆಚ್ಚುಗೆ

ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ, ಹಲವು ಸಮಯಗಳಿಂದ ಸಾರ್ವಜನಿಕರಿಗೆ ಎದುರಾಗಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದಲ್ಲೂ ಉತ್ತಮ ಅಧಿಕಾರಿ ಎಂದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದ್ದ ಉದಯರವಿ ಅವರು, ಇದೀಗ ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿಯೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

14 ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದ INDIA ಮೈತ್ರಿಕೂಟ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

Posted by Vidyamaana on 2023-09-15 09:06:27 |

Share: | | | | |


14 ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದ INDIA ಮೈತ್ರಿಕೂಟ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಮುಂಬೈ: ವಿರೋಧ ಪಕ್ಷದ ಮೈತ್ರಿಕೂಟ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ಈಗ ಕೆಲವು ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದೆ.  


ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಬುಧವಾರ ನಡೆದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ INDIA ಮೈತ್ರಿಕೂಟ ಈ ನಿರ್ಧಾರವನ್ನು ತೆಗೆದುಕೊಂಡಿದೆ.


ವಾಸ್ತವವಾಗಿ, ಮಾಧ್ಯಮದ ಒಂದು ವಿಭಾಗವು ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ವಿರೋಧ ಪಕ್ಷಗಳು ಹಲವು ಬಾರಿ ಆರೋಪಿಸಿವೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಭೇಟಿಗೆ ಮಾಧ್ಯಮಗಳು ಅಗತ್ಯ ಪ್ರಸಾರವನ್ನು ನೀಡಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯು ದೆಹಲಿಯ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆಯಿತು. ಶರದ್ ಪವಾರ್ ಹೊರತುಪಡಿಸಿ, ಕಾಂಗ್ರೆಸ್‌ನ ಕೆಸಿ ವೇಣುಗೋಪಾಲ್, ಡಿಎಂಕೆಯ ಟಿಆರ್ ಬಾಲು, ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಜನತಾ ದಳದ (ಯುನೈಟೆಡ್) ಸಂಜಯ್ ಝಾ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದ್ದರು.


ಭಾರತ ಮೈತ್ರಿಯಿಂದ ಬಹಿಷ್ಕರಿಸಿದ ಆಂಕರ್‌ಗಳು:

* ಅದಿತಿ ತ್ಯಾಗಿ

* ಅಮನ್ ಚೋಪ್ರಾ

* ಅಮಿಶ್ ದೇವಗನ್

* ಆನಂದ ನರಸಿಂಹನ್

* ಅರ್ನಾಬ್ ಗೋಸ್ವಾಮಿ

* ಅಶೋಕ್ ಶ್ರೀವಾಸ್ತವ

* ಚಿತ್ರಾ ತ್ರಿಪಾಠಿ

* ಗೌರವ್ ಸಾವಂತ್

* ನಾವಿಕ ಕುಮಾರ್

* ಪ್ರಾಚಿ ಪರಾಶರ

* ರೂಬಿಕಾ ಲಿಯಾಕತ್

* ಶಿವ ಆರೂರ್

* ಸುಧೀರ್ ಚೌಧರಿ

* ಸುಶಾಂತ್ ಸಿನ್ಹಾ

ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ : ಮಾಜಿ ಸಿಎಂ ಯಡಿಯೂರಪ್ಪ

Posted by Vidyamaana on 2023-05-21 13:55:04 |

Share: | | | | |


ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ : ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು : ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ , ಈ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಕಾಂಗ್ರೆಸ್ ನವರು ಸಿಎಂ ಸಂಪುಟ ಸಭೆಯಲ್ಲಿ ಗ್ಯಾರೆಂಟಿ ಜಾರಿಗೆ ಬಗ್ಗೆ ಒಪ್ಪಿಗೆ ಪಡೆದಿದ್ದು, ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಭರವಸೆಗಳು ನಮಗೆ ಹಿನ್ನಡೆಯಾಗಿದೆ, ಹಾಗಂತ ನಾವು ಟೀಕೆ ಟಿಪ್ಪಣಿ ಮಾಡಲ್ಲ. ಕಾಂಗ್ರೆಸ್ ಎಲ್ಲಾ ಭರವಸೆಗಳನ್ನು ಈಡೇರಿಸಲಿ, ಇದರಿಂದ ಜನರಿಗೆ ಒಳ್ಳೆಯಾದರೆ ಸಾಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಬಿಜೆಪಿ ಹಗರಣಗಳ ಬಗ್ಗೆ ತನಿಖೆ ಮಾಡಲಾಗುತ್ತದೆ ಎಂಬ ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಯಾವುದೇ ಹಗರಣ ಇದ್ದರೂ ತನಿಖೆ ಮಾಡಲಿ ಎಂದರು. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದರು.

Recent News


Leave a Comment: