ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಮಾಣಿಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-01 06:46:16 |

Share: | | | | |


ಮಾಣಿಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಮಾಣಿಲ ಮತ್ತು ಎಣ್ಮಕಜೆ ನದಿಗೆ ಸೇತುವೆ ನಿರ್ಮಾಣವಾಗಬೇಕೆಂಬುದು ಮಾಣಿಲ ಗ್ರಾಮಸ್ಥರ ಕನಸಾಗಿದ್ದು ಅದನ್ನು ಶಾಸಕರಾದ ಬಳಿಕ ಅಶೋಕ್ ರೈಗಳು ನನಸು ಮಾಡಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಮಾಣಿಲದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ನಾನು ಶಾಸಕಳಾಗಿದ್ದ ವೇಳೆ 12 ಕೋಟಿ ರೂ ಪ್ರಸ್ತಾವನೆ ಸಲ್ಲಿಸಿದ್ದೆ ಆದರೆ ಸರಕಾರ ಬಿಜೆಪಿ ಇದ್ದ ಕಾರಣ ಹಣ ಮಂಜೂರಾಗಿಲ್ಲ ಎಂದು ಹೇಳಿದರು. ಈ ಬಾರಿ ಕಾಂಗ್ರೆಸ್ ಗೆದ್ದರೆ ಸೇತುವೆ ನಿರ್ಮಾಣ ಮಾಡಿಸಿಯೇ ಸಿದ್ದ ಕೈ ಗೆ ಬಲ ಕೊಡೊ ಎಂದು‌ಮನವಿ ಮಾಡಿದರು. ಪುತ್ತೂರಿನಲ್ಲಿ ಬಿಜೆಪಿ ಯ ಪಾಪದ ಕೊಡ ತುಂಬಿದೆ ಈ ಕಾರಣಕ್ಕೆ ಹಿಂದುತ್ವವನ್ನು ಈ ಬಾರಿ ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.‌ಬಿಜೆಪಿಯವರ ಹಿಂದುತ್ವವನ್ನು ಪಕ್ಷೇತರ ಅಭ್ಯರ್ಥಿ ಕೊಂಡು ಹೋಗಿದ್ದಾರಂತೆ ಎಂದು ವ್ಯಂಗ್ಯವಾಡಿದರು.ಬಿಜೆಪಿಗೆ ಮತ ನೀಡಿ ವೋಟುಹಾಳುಮಾಡಬೇಡಿಎಂದು‌ಮನವಿ‌ಮಾಡಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ ಮಾತನಾಡಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಮನೆಗೆ ಮನೆಗೆ ತೆರಳಿ ಪ್ರಚಾರ ಮಾಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು. ಸಮುದಾಯದ ಮಧ್ಯೆ ವಿಷ ಬೀಜ ಬಿತ್ತುವವರು ನಮಗೆ ಬೇಡ ಎಂದು ಮನವಿ ಮಾಡಿದರು.

ಪ್ರತೀ ಬೂತ್ ನಲ್ಲಿ ವೋಟ್ ಲೀಡ್ ಬರಬೇಕು: ಅಶೋಕ್ ರೈ

ಪ್ರತೀಯೊಬ್ಬ ಕಾರ್ಯಕರ್ತರು ಯಾವ ಮನೆಯನ್ನೂ ಬಿಡದೆ ಭೇಟಿ ಮಾಡಬೇಕು. ಪ್ರತೀ ಬೂತ್ ನಲ್ಲಿ‌ಲೀಡ್ ಬರುವಂತೆ ನೋಡಿಕೊಳ್ಳಬೇಕು. ಪಕ್ಷದಲ್ಲಿ ಕಾರ್ಯಕರ್ತರ ಕೊರತೆಯಿಲ್ಲ. ಎಲ್ಲಾ ಕಡೆ ಕಾರ್ಯಕರ್ತರ ಪಡೆಯೇ ಇದೆ ಎಂಬುದು ಸಂತೋಷದ ವಿಷಯ. ನಾವು ಇನ್ನು ಎಂಟು ದಿನ ಆಹೋರಾತ್ರಿ ಕೆಲಸ ಮಾಡಿದರೆ ಮುಂದಿನ 5 ವರ್ಷ ನೆಮ್ಮದಿಯ ಜೀವನ ಮಾಡಬಹುದು. ಬೂತ್ ಮಟ್ಟದ ಪ್ರತೀ ಮನೆಗೂ ಗ್ಯಾರಂಟಿ ಕಾರ್ಡು ಕಡ್ಡಾಯವಾಗಿ ಕೊಡಿ. ಬಿಜೆಪಿಯವರು ನಮ್ಮ ಜೊತೆ ಸೇರಿಕೊಳ್ಳುತ್ತಿದ್ದಾರೆ,ಕೆಲವರು ಎದುರು ಬೀಳುವುದಿಲ್ಲ ಹಿಂದಿನಿಂದ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆಯಬೇಕು. ನಮ್ಮ ಪಕ್ಷದ ಗ್ಯಾರಂಟಿ ಯೋಜನೆಯ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಿ ಎಂದು ಮನವಿ ಮಾಡಿದರು.ಕುಚ್ಚಲಕ್ಕಿ ಕೊಡ್ತೇವೆ ನಾವು ಅಧಿಕಾರಕ್ಕೆ ಬಂದರೆ ತಲಾ 5 ಕೆ ಜಿ ಕುಚ್ಚಲಕ್ಕಿ ಮತ್ತು 5 ಕೆ ಜಿ ಬೆಳ್ತಿಗೆಯನ್ನು ಕೊಡ್ತೇವೆ. ಯಾವ ತಾಯಂದಿರೂ ಇನ್ನು‌ಮನೆಗೆ ದುಡ್ಡು ಕೊಟ್ಟು ಅಕ್ಕಿ ತರುವುದು ಬೇಡ,ಕರೆಂಟ್ ಬಿಲ್ ಕಟ್ಟುವುದು ಬೇಡ, ಉಳಿದ ಖರ್ಚಿಗೆ ತಿಂಗಳಿಗೆ ಎರಡು ಸಾವಿರ ತಾಯಂದಿರ ಖಾತೆಗೆ ಜಮೆಯಾಗ್ತದೆ. ಸಂಚಾರಕ್ಕೆ ಸರಕಾರಿ ಬಸ್ ಉಚಿತವಾಗಿ ತಾಯಂದಿರಿಗೆ ಪ್ರಯಾಣಿಸಲು ಅವಕಾಶವನ್ನು ಸರಕಾರ ಒದಗಿಸಲಿದೆ. ನೆಮ್ಮದಿಯ ಜೀವನಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ ಎಂದು‌ಮನವಿ‌ಮಾಡಿದರು.

ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

Posted by Vidyamaana on 2023-12-03 04:27:12 |

Share: | | | | |


ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

ಮಂಗಳೂರು: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ. 


ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು.‌ ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು. 


ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ‌

ಮದುವೆಯ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ

Posted by Vidyamaana on 2024-01-02 14:16:13 |

Share: | | | | |


ಮದುವೆಯ ಆಸೆ ತೋರಿಸಿ ಅಪ್ರಾಪ್ತ  ಬಾಲಕಿ ಮೇಲೆ ನಿರಂತರ ಅತ್ಯಾಚಾರ

ಉಳ್ಳಾಲ: ಮದುವೆಯಾಗುವುದಾಗಿ ನಂಬಿಸಿ ಉಳ್ಳಾಲ ತಾಲೂಕಿನ ಕುಂಪಲದ ಬಾಡಿಗೆ ಮನೆಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನ ಕೂಡಿಹಾಕಿ, ನಾಲ್ಕು ತಿಂಗಳಿನಿಂದ ನಿರಂತರ ಅತ್ಯಾಚಾರಗೈದ ಮೂಡಿಗೆರೆಯ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 


ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಅಣಜೂರು ಗ್ರಾಮದ ನಿವಾಸಿ ಮೊಹಮ್ಮದ್ ರಝೀನ್(25) ಬಂಧಿತ ಆರೋಪಿ. ರಾಝೀನ್ 17 ವರ್ಷದ ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನ ಪ್ರೀತಿಸುವ ನಾಟಕವಾಡಿ ನಾಲ್ಕು ತಿಂಗಳ ಹಿಂದೆ ಆಕೆಯನ್ನ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಅಲ್ಲಿಂದ ತನ್ನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಯೊಂದಕ್ಕೆ ಕರೆದೊಯ್ದು ಮದುವೆಯಾಗೋದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದಿದ್ದಾನೆ. 


ಊರಲ್ಲಿ ಅಜ್ಜಿಯ ಪಾಲನೆಯಲ್ಲಿದ್ದ ಅಪ್ರಾಪ್ತ ಬಾಲಕಿ, ರಾಝೀನ್ ಮಾತನ್ನ ನಂಬಿ ಕುಂಪಲದ‌ ಬಾಡಿಗೆ ಮನೆಯಲ್ಲೇ ದಿಕ್ಕು ತೋಚದೆ ವಾಸಿಸುತ್ತಿದ್ದಳು. ಅನುಮಾನಗೊಂಡ ಬಜರಂಗದಳ ಕಾರ್ಯಕರ್ತರು ಜೋಡಿಯನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದರು. ಬಾಲಕಿಯರ ಬಾಲ ಮಂದಿರದಲ್ಲಿ ಅಪ್ರಾಪ್ತ ಬಾಲಕಿ ನೀಡಿರುವ ಹೇಳಿಕೆಯಿಂದ ಸತ್ಯಾಂಶ ಬೆಳಕಿಗೆ ಬಂದಿದೆ. ಆರೋಪಿ ರಾಝೀನ್ ನನ್ನು ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Posted by Vidyamaana on 2023-08-19 12:39:01 |

Share: | | | | |


ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಆಗಸ್ಟ್ 20 ರಂದು ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಆಚರಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಲಡಾಖ್ ನ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ.

ರಾಹುಲ್ ಗಾಂಧಿಯವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಜಗತ್ತಿನ ಅತ್ಯಂತ ಸುಂದರ ಸ್ಥಳಗಳಲ್ಲೊಂದು ಎಂದು ನನ್ನ ತಂದೆ ಹೇಳುತ್ತಿದ್ದ ಪಂಗೊಂಗ್‌ ಲೇಕ್‌ನತ್ತ ನಾವು ಸಾಗುತ್ತಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.


ರಾಹುಲ್ ಗಾಂಧಿಯವರು KTM 390 ಅಡ್ವೆಂಚರ್ ನಲ್ಲಿ ಸವಾರಿ ಮಾಡುತ್ತಿದ್ದು, ಇತರ ಸವಾರರು ಅವರನ್ನು ಅನುಸರಿಸುತ್ತಿದ್ದಾರೆ. ಸಂಪೂರ್ಣ ಬೈಕಿಂಗ್ ಗೇರ್ ನಲ್ಲಿ ಹೆಲ್ಮೆಟ್, ಕೈಗವಸುಗಳು, ಸವಾರಿ ಬೂಟುಗಳು ಮತ್ತು ಜಾಕೆಟ್ ನೊಂದಿಗೆ ಲಡಾಖ್ ನ ಸುಂದರವಾದ ಪರ್ವತಗಳ ಮೂಲಕ ತಮ್ಮ ಸವಾರಿಯನ್ನು ಆನಂದಿಸುತ್ತಾರೆ.

ರಾಹುಲ್ ಗಾಂಧಿ ಪ್ರಸ್ತುತ ಲಡಾಖ್ ಪ್ರವಾಸದಲ್ಲಿದ್ದು, ಇದು ಆಗಸ್ಟ್ 25 ರವರೆಗೆ ಅಲ್ಲಿ ಸಮಯ ಕಳೆಯಲಿದ್ದಾರೆ ಎಂದು ತಿಳಿದು ಬಂದಿದೆ

ವಸಂತ ಬಂಗೇರ ಅಂತ್ಯಕ್ರಿಯೆ: ಪುತ್ರಿಯಿಂದ ಅಗ್ನಿಸ್ಪರ್ಶ

Posted by Vidyamaana on 2024-05-10 07:42:12 |

Share: | | | | |


ವಸಂತ ಬಂಗೇರ ಅಂತ್ಯಕ್ರಿಯೆ: ಪುತ್ರಿಯಿಂದ ಅಗ್ನಿಸ್ಪರ್ಶ

ಬೆಳ್ತಂಗಡಿ : ಬುಧವಾರ ನಿಧನರಾಗಿದ್ದ ಇಲ್ಲಿನ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಕುವೆಟ್ಟು ಗ್ರಾಮದ ಕೇದೆ ಮನೆತನದ ಜಾಗದಲ್ಲಿ ಗುರುವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ವಸಂತ ಬಂಗೇರ ಅವರ ಕಿರಿಯ ಮಗಳು ಬಿನುತಾ ಬಂಗೇರ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಪುರುಷರಕಟ್ಟೆ ಮದ್ರಸ ವಠಾರದಲ್ಲಿ ಧಾರ್ಮಿಕ ಮತಪ್ರವಚನ ಕಾರ್ಯಕ್ರಮ

Posted by Vidyamaana on 2024-02-04 09:14:39 |

Share: | | | | |


ಪುರುಷರಕಟ್ಟೆ ಮದ್ರಸ ವಠಾರದಲ್ಲಿ ಧಾರ್ಮಿಕ ಮತಪ್ರವಚನ ಕಾರ್ಯಕ್ರಮ

ಪುತ್ತೂರು: ನಾನೇ ಶ್ರೇಷ್ಠ, ನನ್ನ ಧರ್ಮ ಮಾತ್ರ ಶ್ರೇಷ್ಠ ಉಳಿದವು ಶೂನ್ಯ ಎಂಬ ಭಾವನೆ ನಮ್ಮಲ್ಲಿ ಇರಬಾರದು, ಎಲ್ಲಾ ಧರ್ಮಗಳು ಒಳಿತನ್ನೇ ಕಲಿಸಿಸುತ್ತದೆ, ಧರ್ಮಗಳ ಬಗ್ಗೆ ಪರಸ್ಪರ ಅರಿತುಕೊಂಡಲ್ಲಿ ಸಮಾಜದಲ್ಲಿ ಸೌಹಾರ್ಧತೆಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಪುರುಷರಕಟ್ಟೆ ಮದ್ರಸ ವಠಾರದಲ್ಲಿ ನಡೆಯುತ್ತಿರುವ ಧಾರ್ಮಿಕ ಮತಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ನಮ್ಮ ಧರ್ಮದ ಆಚಾರ ವಿಚಾರಗಳನ್ನು ಕಲಿಸಬೇಕು. ತನ್ನ ಧರ್ಮವನ್ನು ಅರಿತುಕೊಳ್ಳುವುದರ ಜೊತೆಗೆ ಸಹೋದರ ಧರ್ಮದ ಬಗ್ಗೆ ಅರಿವು ಮೂಡಿಸಿಕೊಂಡಲ್ಲಿ ಪರಸ್ಪರ ಜ್ಞಾನ ವೃದ್ದಿಯಾಗುತ್ತದೆ. ಧರ್ಮದ ಬಗ್ಗೆ ತಿಳುವಳಿಕೆಯ ಕೊರತೆಯಿಂದಲೇ ಇಂದು ಸಮಾಜದಲ್ಲಿ ಧರ್ಮ ದಂಗಲ್‌ಗಳು ನಡೆಯುತ್ತದೆ ಎಂದು ಹೇಳಿದರು. ಭಾರತ ವಿಸ್ವ ಗುರುವಾಗಬೇಕಾದರೆ ದೇಶದಲ್ಲಿ ಸೌಹಾರ್ಧತೆ ನೆಲಸಬೇಕು. ಸೌಹಾರ್ಧತೆಯ ಭಾಷಣ ಮಾಡಿದ ಮಾತ್ರಕ್ಕೆ ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ. ದೇಶದಲ್ಲಿರುವ ಎಲ್ಲಾ ಧರ್ಮದ ಸಹೋದರರು ಅಣ್ಣ ತಮ್ಮಂದಿರಂತೆ ಬಾಳಿದರೆ ಮಾತ್ರ ನಾವು ವಿಶ್ವಕ್ಕೆ ಗುರುವಾಗಲು ಸಾಧ್ಯವಾಗುತ್ತದೆ. ಧರ್ಮ, ಜಾತಿ ಹೆಸರಿನಲ್ಲಿ ಯಾರೂ ಕಚ್ಚಾಟ ಮಾಡಬಾರದು. ಎಲ್ಲರೂ ಉಸಿರಾಡುವ ಗಾಳಿಯೊಂದೇ, ರಕ್ತವೂ ಒಂದೇ ಹೀಗಿರುವಾಗ ನಾವು ವಿಭಜನೆಯ ಹಾದಿಯನ್ನು ಹಿಡಿಯಬಾರದು.ಜನರು ಪರಸ್ಪರ ಹತ್ತಿರವಾದಾಗ ಮಾತ್ರ ಎಲ್ಲವನ್ನೂ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ಭರತ ಭೂಮಿಯಲ್ಲಿ ಸಾಧನೆ ಮಾಡಿದವರು ಯಾರೂ ಇಲ್ಲ ಎಂದು ಹೇಳಿದರು.


ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಎಲ್ಲರನ್ನೂ ಪ್ರೀತಿಸುವುದೇ ಹಿಂದುತ್ವವಾಗಿದೆ.ಅನ್ಯ ಧರ್ಮದವರನ್ನು ದ್ವೇಷಿಸುವುದು ಹಿಂದುತ್ವ ಎಂದು ನಂಬಿಕೊಂಡ ಅಲ್ಪಜ್ಞಾನಿಗಳು ನಮ್ಮೊಳಗಿದ್ದಾರೆ. ಪರಸ್ಪರ ಸಾಹೋದರ್ಯ ಭಾನವೆಯಿದ್ದಲ್ಲಿ ಮಾತ್ರ ನಾವು ಮನುಷ್ಯರಾಗಲು ಸಾಧ್ಯವಾಗುತ್ತದೆ. ಮಾನವೀಯ ಧರ್ಮವೇ ಶ್ರೇಷ್ಟ ಎಂಬ ಭಾವನೆ ನಮ್ಮಲ್ಲಿ ಮಾಡಿದಾಗ ಸಹೋದರತ್ವ ಮೂಡುತ್ತದೆ ಅದು ಇಲ್ಲದವರು ಮನುಷ್ಯರಾಗಲು ಸಾಧ್ಯವಿಲ್ಲ ಎಂದು ಹೇಳಿದರು.


ವೇದಿಕೆಯಲ್ಲಿ ಧಾರ್ಮಿಕ ಮುಖಂಡರುಗಳು ಉಪಸ್ಥಿತರಿದ್ದರು.



Leave a Comment: