ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ನಾರಾಯಣ ನೇತ್ರಾಲಯ ಮುಖ್ಯಸ್ಥ - ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗ ಶೆಟ್ಟಿ ವಿಧಿವಶ

Posted by Vidyamaana on 2023-05-19 23:14:36 |

Share: | | | | |


ನಾರಾಯಣ ನೇತ್ರಾಲಯ ಮುಖ್ಯಸ್ಥ - ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗ ಶೆಟ್ಟಿ ವಿಧಿವಶ

ಬೆಂಗಳೂರು : ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ. ಭುಜಂಗ ಶೆಟ್ಟಿ (69) ಅವರು ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಇಂದು ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ ಮನೆಯಲ್ಲಿ ತೀವ್ರ ಹೃದಯಾಘಾತವಾಗಿದೆ. ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.ಡಾ.ಭುಜಂಗ ಶೆಟ್ಟಿ ನಿಪುಣ ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದ್ದರು. ಅವರು ಎಂಬತ್ತರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರಶಾಸ್ತ್ರವನ್ನು ಪ್ರಾರಂಭಿಸಿದರು. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಿ ದ್ದರು.

ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ

Posted by Vidyamaana on 2023-03-21 07:26:17 |

Share: | | | | |


ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಬೊಳುವಾರಿನ ಸ್ಥಳದಲ್ಲಿ ಮಾರ್ಚ್ 24ರಂದು ಜನಜಾಗೃತಿ ಸಭೆ, ಆಶ್ಲೇಷ ಬಲಿ, ಧಾರ್ಮಿಕ ಸಭೆ, ಅರ್ಧ ಏಕಾಹ ಭಜನೆ ನಡೆಯಲಿದೆ ಎಂದು ಹಿಂಜಾವೇ ಮಂಗಳೂರು ವಿಭಾಗ ಸಹಸಂಚಾಲಕ ಅಜಿತ್ ರೈ ಹೊಸಮನೆ ಹೇಳಿದರು.

ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ೬ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಜೆ ೭ಕ್ಕೆ ಜನಜಾಗೃತಿ ಸಭೆ ಆಯೋಜಿಸಲಾಗಿದೆ. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಕರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಪುತ್ತೂರು ಆದರ್ಶ ಆಸ್ಪತ್ರೆ ವೈದ್ಯ ಡಾ. ಎಂ.ಕೆ. ಪ್ರಸಾದ್ ಭಂಡಾರಿ ಅಧ್ಯಕ್ಷತೆ ವಹಿಸುವರು. ಧಾರ್ಮಿಕ ಮುಖಂಡ ವೇದಮೂರ್ತಿ ಕುಂಟಾರು ರವೀಶ ತಂತ್ರಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಹಿಂಜಾವೇ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಕಡಬ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾನ್ ಸುಳ್ಳಿ ಮುಖ್ಯ ಅತಿಥಿಯಾಗಿರುವರು ಎಂದರು.

ಮಾರ್ಚ್ 24ರಂದು ಬೆಳಿಗ್ಗೆ 6ಕ್ಕೆ ಗಣಪತಿ ಹೋಮ ನಡೆಯಲಿದೆ. 7 ಗಂಟೆಗೆ ಅರ್ಧ ಏಕಾಹ ಭಜನೆ ಆರಂಭಗೊಳ್ಳಲಿದ್ದು, ಸಂಜೆ 6ಕ್ಕೆ ಆಶ್ಲೇಷ ಬಲಿ ಆರಂಭಗೊಳ್ಳಲಿದೆ. ಸಂಜೆ 7ಕ್ಕೆ ಜನಜಾಗೃತಿ ಸಭೆ ನಡೆಯಲಿದ್ದು, ರಾತ್ರಿ 8ಕ್ಕೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಸಂಚಾಲಕ ದಿನೇಶ್ ಪಂಜಿಗ, ಸದಸ್ಯ ಪುಷ್ಪರಾಜ್ ದರ್ಬೆ ಉಪಸ್ಥಿತರಿದ್ದರು.

ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

Posted by Vidyamaana on 2024-09-05 11:50:33 |

Share: | | | | |


ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ  ಹೊತ್ತಿ ಉರಿದ ಕಾರು

ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ನಡೆದಿದೆ.

ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.

ಎಸ್ಪಿಯಾಗಿ ಪದೋನ್ನತಿ ಹೊಂದಿದ ಬೆಳ್ಳಾರೆಯ ಜಗನ್ನಾಥ್ ರೈ ಬಜನಿ

Posted by Vidyamaana on 2023-11-30 16:21:41 |

Share: | | | | |


ಎಸ್ಪಿಯಾಗಿ ಪದೋನ್ನತಿ ಹೊಂದಿದ ಬೆಳ್ಳಾರೆಯ  ಜಗನ್ನಾಥ್ ರೈ ಬಜನಿ

ಬೆಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ. 

ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮುಗಿಸಿ , ನಂತರ ಪಿಯುಸಿ ಹಾಗೂ ಡಿಗ್ರಿ ವಿದ್ಯಾಭ್ಯಾಸವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದರು. 

1996 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಸೇರ್ಪಡೆಗೊಂಡ ಜಗನ್ನಾಥ್ ರೈ ಯವರು, ನಂತರ ಇನ್ಸ್ ಪೆಕ್ಟರ್ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ತದನಂತ ಡಿವೈಎಸ್ಪಿ ಯಾಗಿ  ಸಿಸಿಬಿ ಎಸಿಪಿಯಾಗಿ ಇದೀಗ ಎಸ್ಪಿಯಾಗಿದ್ದಾರೆ. 

ಬೆಂಗಳೂರಿನ ಗುಪ್ತಚಾರ ವಿಭಾಗದ ಎಸ್ಪಿಯಾಗಿ ಪದೋನ್ನತಿ ಹೊಂದಿದ್ದಾರೆ.  

ಜಗನ್ನಾಥ ರೈಯವರು ಬೆಳ್ಳಾರೆ ಬಜನಿಗುತ್ತು ರಾಮಯ್ಯ ರೈ ಹಾಗೂ ಕುಸುಮಾವತಿ ದಂಪತಿಯ ಪುತ್ರ

ಮಂಗಳೂರು ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ

Posted by Vidyamaana on 2023-07-26 11:13:11 |

Share: | | | | |


ಮಂಗಳೂರು  ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ

ಮಂಗಳೂರು: ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತಪಟ್ಟಿರುವುದಾಗಿ ಆರೋಪಿಸಿ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಮಂಗಳೂರಿನಲ್ಲಿ ನಡೆದಿದೆ.


ಆಂಬುಲೆನ್ಸ್ ನಲ್ಲಿ ಶವ ಮುಂದಿಟ್ಟು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ ಹೆರಿಗೆ ನೋವಿನ ಹಿನ್ನೆಲೆ ಜುಲೈ 2ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಪರೀಕ್ಷಿಸಿದ ಡ್ಯೂಟಿ ಡಾಕ್ಟರ್ ಸಿಜೆರಿಯನ್ ಮಾಡಿ ಡೆಲೆವರಿ ಮಾಡಬೇಕೆಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯ ಮನೆಯವರು ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು.



ಶಿಲ್ಪಾರ ಕುಟುಂಬದ ಮೂಲದ ಪ್ರಕಾರ, ಅದೇ ದಿನ ಡಾ. ವೀಣಾ ಅನುಪಸ್ಥಿತಿಯಲ್ಲಿ ಬೇರೆ ವೈದ್ಯರು ಶಿಲ್ಪಾರಿಗೆ ಸಿಜೆರಿಯನ್ ಮಾಡಿ ಡೆಲೆವರಿ ಮಾಡಿದ್ದಾರೆ. ಆ ಬಳಿಕ ಹೆಣ್ಣು ಮಗು ಆಗಿದೆ, ಆದರೇ ಗರ್ಭಕೋಶವನ್ನು ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. ಎರಡು ದಿನಗಳ ನಂತರ ಶಿಲ್ಪಾಗೆ ಜ್ವರ ಬಂದಿದೆ ಎಂದು ಚಿಕಿತ್ಸೆ ನೀಡಿದ್ದಾರೆ. 5 ದಿನಗಳ ನಂತರ ಬ್ರೆನ್ ಮೇಜರ್ ಡ್ಯಾಮೇಜ್ ಆಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಮೃತರ ಪತಿ ಪ್ರದೀಪ್ ಆಚಾರ್ಯ ಮಾಹಿತಿ ನೀಡಿದ್ದಾರೆ. ಆದರೆ ಜುಲೈ 25 ರಂದು ಬಾಣಂತಿ ಶಿಲ್ಪಾ ಆಚಾರ್ಯ ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷಕ್ಕೆ ಆಕೆಯ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಆಕೆಯ ಪತಿ ಠಾಣೆಗೆ ದೂರು ನೀಡಿದ್ದಾರೆ. ಇಂದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲು ಪೊಲೀಸರು ಬಂದಿದ್ದು, ಈ ವೇಳೆ ಖಾಸಗಿ ಆಸ್ಪತ್ರೆ ಬಳಿ ಮೃತದೇಹ ತಡೆದು ಸಂಬಂಧಿಕರು, ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್

Posted by Vidyamaana on 2024-02-01 10:57:16 |

Share: | | | | |


ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್‌ ಗುರುವಾರ (ಫೆ.01) ಮಂಡನೆಯಾಗಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ವಿತ್ತ ಸಚಿವಾಲಯಕ್ಕೆ ಆಗಮಿಸಿದ್ದು, ಬೆಳಗ್ಗೆ 11ಗಂಟೆಗೆ ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ.ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್‌ ಆಗಿದೆ. ಲೋಕಸಭೆ ಚುನಾವಣೆಗೂ ಮುನ್ನ ಮಂಡನೆಯಾಗುತ್ತಿರುವ ಮಧ್ಯಂತರ ಬಜೆಟ್‌ ನಲ್ಲಿ ಬಂಪರ್‌ ಘೋಷಣೆಗಳ ನಿರೀಕ್ಷೆ ಹೆಚ್ಚಾಗಿದೆ.

ಮಧ್ಯಂತರ ಬಜೆಟ್‌ ಈಗ ಮಂಡನೆಯಾಗಲಿದ್ದು, ಲೋಕಸಭೆ ಚುನಾವಣೆ ಬಳಿಕ ನೂತನ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಬಜೆಟ್‌ ನಲ್ಲಿ ಬೃಹತ್‌ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆ ಎಂದು ವಿಶ್ಲೇಷಿಸಲಾಗುತ್ತಿದೆ.ನಿರ್ಮಲಾ ಸೀತಾರಾಮನ್‌ ಅವರು ಇಂದು 6ನೇ ಬಜೆಟ್‌ ಮಂಡಿಸುತ್ತಿದ್ದಾರೆ. 2023ನೇ ಸಾಲಿನ ಬಜೆಟ್‌ ನಲ್ಲಿ 45,03,097 ಕೋಟಿ ರೂಪಾಯಿ ಗಾತ್ರದ ಬೃಹತ್‌ ಮೊತ್ತದ ಬಜೆಟ್‌ ಮಂಡಿಸಿದ್ದರು



Leave a Comment: