ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಹರೀಶ್ ಪೂಂಜ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ :ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

Posted by Vidyamaana on 2024-05-23 17:53:31 |

Share: | | | | |


ಹರೀಶ್ ಪೂಂಜ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ :ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

ಮಂಗಳೂರು,ಶಾಸಕ ಹರೀಶ್ ಪೂಂಜ ಪೊಲೀಸರು, ತಹಸೀಲ್ದಾರನ್ನು ನಿಂದಿಸಿ ಬೆಳ್ತಂಗಡಿ ನಾಗರಿಕರಿಗೆ ಅವಮಾನ ಮಾಡಿದ್ದಾರೆ. ರೌಡಿಯಂತೆ ವರ್ತಿಸಿ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ. ರೌಡಿ ರೀತಿ ವರ್ತಿಸುತ್ತಿರುವುದನ್ನು ನಾವು ಖಂಡಿಸುತ್ತೇವೆ. ತಾಕತ್ತಿದ್ದರೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಜನರಿಂದ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಹರೀಶ್ ಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿ ಕ್ಷೇತ್ರವನ್ನು ರತ್ನವರ್ಮ ಹೆಗ್ಗಡೆ, ವೈಕುಂಠ ಬಾಳಿಗಾ, ಸುಬ್ಬಯ್ಯ ಹೆಗಡೆ, ವಸಂತ ಬಂಗೇರರಂತವರು ಪ್ರತಿನಿಧಿಸಿದ್ದರು. ವಸಂತ ಬಂಗೇರ ಐದು ಬಾರಿ ಶಾಸಕರಾಗಿ ಗೌರವ ತಂದುಕೊಟ್ಟಿದ್ದಾರೆ. ಹರೀಶ್ ಪೂಂಜ ಈಗ ವಸಂತ ಬಂಗೇರ ಮಾಡಲು ಹೋಗಿ ಎಲ್ಲೆ ಮೀರಿ ವರ್ತಿಸಿದ್ದಾರೆ. ಬಂಗೇರ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದವರು, ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಟ್ಟು ಕೆಲಸ ಮಾಡುತ್ತಿದ್ದರು. ಯಾವತ್ತೂ ಭ್ರಷ್ಟಾಚಾರಿ, ರೌಡಿಗಳ ಪರ ಕೆಲಸ ಮಾಡಿದವರಲ್ಲ.

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

Posted by Vidyamaana on 2023-04-15 14:44:59 |

Share: | | | | |


ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶನಿವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆಗೈದು ಸಹಸ್ರಾರು ಕಾರ್ಯಕರ್ತ ರೊಂದಿಗೆ ಕಾಲ್ನಡಿಗೆಯ ಮೂಲಕ ಸಾಗಿ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಇನ್ಫೋಸಿಸ್ ಸುಧಾಮೂರ್ತಿ ಹೆಸರು ಬಳಸಿ ವಂಚನೆ

Posted by Vidyamaana on 2023-10-16 15:08:21 |

Share: | | | | |


ಇನ್ಫೋಸಿಸ್ ಸುಧಾಮೂರ್ತಿ ಹೆಸರು ಬಳಸಿ ವಂಚನೆ

ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಡಾ ಸುಧಾಮೂರ್ತಿಯವರ ಹೆಸರು ಬಳಸಿಕೊಂಡು ವಂಚನೆ ಮಾಡಲಾದ ಪ್ರಕರಣ ಸಂಬಂಧ ಕೆಲ ದಿನಗಳ ಹಿಂದಷ್ಟೇ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿತ್ತು. ಈಗ  ಮತ್ತೊಂದು ವಂಚನೆ ಬಯಲಾಗಿದೆ. ಸುಧಾ ಮೂರ್ತಿ ಅವರ ಹೆಸರಿನಲ್ಲಿ ಸುಳ್ಳು ಭರವಸೆ ನೀಡಿ ವಂಚನೆ ಮಾಡಿದ ಆರೋಪದಲ್ಲಿ 34 ವರ್ಷದ ಅರುಣ್ ಕುಮಾರ್ ಎಂಬ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ.



ಈ ಎರಡೂ ಪ್ರಕರಣದ ಹಿಂದೆ ಆರೋಪಿ ಅರುಣ್ ಮಾಸ್ಟರ್ ಮೈಂಡ್ ಇದೆ ಎಂಬುವುದು ಬಯಲಾಗಿದೆ.ಆರೋಪಿ ಅರುಣ್ ಕುಮಾರ್, ತಾನು ಸುಧಾ ಮೂರ್ತಿ ಅವರ ಸಂಸ್ಥೆಯ ಸಿಬ್ಬಂದಿ ಎಂದು ಸುಳ್ಳು ಹೇಳಿಯುಎಸ್‌ಎ ನಲ್ಲಿ ನಡೆಯಲಿರುವ ಕಾರ್ಯಕ್ರಮಗಳಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದರು.


ಆರೋಪಿ ಅರುಣ್ ಕುಮಾರ್ ಜನರಿಂದ 5 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಸೆಪ್ಟೆಂಬರ್‌ನಲ್ಲಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ರಾಜಾಜಿನಗರದ ನಿವಾಸಿ ಅರುಣ್ ಕುಮಾರ್ ಅವರನ್ನು ಬಂಧಿಸಲಾಗಿದೆ.


ತನಿಖೆ ವೇಳೆ ಅರುಣ್ ಕುಮಾರ್ ತನ್ನ ಧ್ವನಿಯನ್ನು ಮಹಿಳೆಯಂತೆ ಬದಲಾಯಿಸಿ ಸಂಪರ್ಕಿಸಿ ಹಣ ವಂಚಿಸಿದ್ದಾನೆ ಎಂದು ಬಯಲಾಗಿದ್ದು ಸುಧಾ ಮೂರ್ತಿಯವರ ಹೆಸರು ಬಳಸಿ ಮಾಡಲಾಗಿದ್ದ ಎರಡೂ ವಂಚನೆಗಳ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಅರುಣ್ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ವಂಚನೆ ಪ್ರಕರಣದಲ್ಲಿ ಇನ್ನೆಷ್ಟು ಮಂದಿ ಶಾಮೀಲಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಅರುಣ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನಕಲಿ ಪೇಪರ್ ಕಟ್ಟಿಂಗ್: ಸ್ಪೀಕರ್ ಖಾದರ್ ಸ್ಪಷ್ಟನೆ

Posted by Vidyamaana on 2023-06-13 03:37:13 |

Share: | | | | |


ನಕಲಿ ಪೇಪರ್ ಕಟ್ಟಿಂಗ್: ಸ್ಪೀಕರ್ ಖಾದರ್ ಸ್ಪಷ್ಟನೆ

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರದ್ದು ಎನ್ನಲಾದ ಹೇಳಿಕೆಯ ಪೇಪರ್ ಕಟ್ಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.

. ನಕಲಿ ಸೃಷ್ಟಿಸಿ ಅಪಪ್ರಚಾರ ಮಾಡುವವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು‌ ರವಾನಿಸಿದ್ದಾರೆ‌

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕೋಮು ಸಂಘರ್ಷಕ್ಕೆ ಪ್ರಚೋದನೆ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.

ನೀವಿರುವ ವಾಟ್ಸಾಪ್ ನಲ್ಲಿ ಈ ಪೇಪರ್ ಕಟ್ಟಿಂಗ್ ಬಂದರೆ ಅವರ ಫೋನ್ ನಂಬರ್ ಕಾಣುವಂತೆ screen shot ತೆಗೆದು 9343346439 ನ ವಾಟ್ಸಾಪ್ ಗೆ ಕಳುಹಿಸುವಂತೆ ಕಾಂಗ್ರೇಸ್ ನ ಕಾನೂನು ಘಟಕ ಮನವಿ ಮಾಡಿದೆ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.

ಏನಿದೆ ಪೇಪರ್ ಕಟ್ಟಿಂಗ್ ನಲ್ಲಿ..?

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಅನುದಾನ ತಸ್ತೀಕ್ ರೂಪದಲ್ಲಿ ಮಸೀದಿಗಳಿಗೆ ಹೋಗುವುದನ್ನು ತಡೆದ ಬಿಜೆಪಿ ಸರ್ಕಾರದ ಕ್ರಮಕ್ಕೆ ಶಾಸಕ ಮತ್ತು ಮಾಜಿ ಮಂತ್ರಿ ಯು.ಟಿ.ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಇಲ್ಲಿ ಶುಕ್ರ ವಾರ ಮಾತನಾಡಿದ ಅವರು, ಜನರನ್ನು ಧರ್ಮದ ಹೆಸರಿನ ಮೇಲೆ ವಿಭಜಿಸುವ ಸರ್ಕಾರದ ಹುನ್ನಾರ ಇದಾಗಿದೆ. ಮುಜರಾಯಿ ಇಲಾಖೆ ಅನುದಾನ ಮಸೀದಿಗಳಿಗೆ ಹೋಗುವುದನ್ನು ತಡೆದಿರುವ ಕುರಿತಾದ ಗೊಂದಲ ನಿವಾರಿಸುವಂತೆ ಒತ್ತಾಯಿಸಿದರು. ಮುಜರಾಯಿ ಇಲಾಖೆ ಸ್ವಾಮ್ಯಕ್ಕೆ ಒಳಪಟ್ಟ ಮಂದಿರದ ಹುಂಡಿಯಲ್ಲಿನ ಹಣವನ್ನು ಆಯಾ ಮಂದಿರಕ್ಕಾಗಿ ಬಳಸಿಕೊಳ್ಳತಕ್ಕದ್ದು ಎಂದು ನಿಯಮವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಕ್ರಮ ಅಸಮಂಜಸದಿಂದ ಕೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಶಾಸಕ ರಹೀಮ್ ಖಾನ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


ಎಂಬ ಪೇಪರ್ ಕಟ್ಟಿಂಗ್ ಹರಿದಾಡುತ್ತಿದೆ. ಇಂತಹ ಹೇಳಿಕೆಯೂ ನೀಡಿಲ್ಲ ಎಂದು ಯುಟಿ ಖಾದರ್ ಸ್ಪಷ್ಟ ಪಡಿಸಿದ್ದಾರೆ.

ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ ಸ್ವಗ್ರಾಮದ ಬೂತಲ್ಲಿ ಶಾಸಕರಿಂದ ಭರ್ಜರಿ ಪ್ರಚಾರ

Posted by Vidyamaana on 2024-04-24 14:13:44 |

Share: | | | | |


ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ ಸ್ವಗ್ರಾಮದ ಬೂತಲ್ಲಿ ಶಾಸಕರಿಂದ ಭರ್ಜರಿ ಪ್ರಚಾರ

ಪುತ್ತೂರು: ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನದಂತೆ ಶಾಸಕರಾದ ಅಶೋಕ್ ರೈ ಅವರು ತನ್ನ ಸ್ವ ಗ್ರಾಮದ ಬೂತ್ ನಂ: 53 ರಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕಾರ್ಯ ನಡೆಸಿದರು.

ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ವತಿಯಿಂದ ಬಡ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳ ನೆರವು

Posted by Vidyamaana on 2023-07-23 17:17:55 |

Share: | | | | |


ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ವತಿಯಿಂದ ಬಡ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳ ನೆರವು

ಮಂಜೇಶ್ವರ : ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ  ಯೋಜನೆಯ 57ನೇ ಸೇವಾ ಕಾರ್ಯವು ಉಪ್ಪಳ ಸಮೀಪದ ಪೈವಳಿಕೆ ಲಾಲ್‌‌ಬಾಗ್ ಬೋಳಂಗಳ ನಿವಾಸಿ  ಕಲ್ಯಾಣಿ ಕೃಷ್ಣ ದಂಪತಿಗಳ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಜು 23ರಂದು ನಡೆಯಿತು . ಇವರ ಮನೆಯು ಶೋಚನಿಯಾವಸ್ಥೆಯಲ್ಲಿದ್ದು,  ಮುಪ್ಪಿನ ಕಾಲದಲ್ಲಿ ದುಡಿದು ಸಾಕಾಬೇಕಾದ ಮಕ್ಕಳ ಅನಾರೋಗ್ಯ ಇನ್ನೊಂದು ಕಡೆ.  ಈ ಪರಿಸ್ಥಿತಿಯಲ್ಲಿ ಕಲ್ಯಾಣಿಯವರಿಗೆ ದಿಕ್ಕು ತೋಚದ ಪರಿಸ್ಥಿತಿ.. ಮೂರು ಮಂದಿಯ ಚಿಕಿತ್ಸೆಯ ವೆಚ್ಚ, ಮನೆಯ ಖರ್ಚು ವೆಚ್ಚ ಹೀಗೆ ಆರ್ಥಿಕವಾಗಿ ನೊಂದ ಕುಟುಂಬಕ್ಕೆ ಸೇವೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಾಯಂಜನಿ ಯುವ ಬಳಗ ಸಂಸ್ಥಾಪಕರಾದ ರಂಜಿತ್ ಕುಮಾರ್, ಅಧ್ಯಕ್ಷರಾದ ಅಜಯ್ ರಾಜ್ ಉಪ್ಪಳ, ಸದಸ್ಯರಾದ ನವೀನ್ ಗುರಿಕಾರ, ನವೀನ್, ಟೀಮ್ ಮಂಜುಶ್ರೀ ತುಳುನಾಡ್ (ರಿ.) ಸಂಸ್ಥೆಯ ಗೌರವಾಧ್ಯಕ್ಷರು ಸದಾಶಿವ ಹೊಸಬೆಟ್ಟು, ಸಂಸ್ಥಾಪಕರು ರಾಜ್ಯ ಘಟಕ ಸಲಹೆಗಾರರು ಬಾಲಚಂದ್ರ ಶೆಟ್ಟಿ ಸೋಮೇಶ್ವರ, ಸ್ಥಾಪಕ ಅಧ್ಯಕ್ಷರು ಮನೋಜ್ ಕುಲಾಲ್ ಕೊಡಕ್ಕಲ್, ಸಂಸ್ಥಾಪಕರು ರಾಜ್ಯ ಅದ್ಯಕ್ಷರು ವಂಶಿ ಪಂಡಿತ್ ಕಣ್ಣೂರು, ಸಂಸ್ಥಾಪಕರು ರಾಜ್ಯ ಸಮಿತಿ ಪ್ರಚಾರ ಅಧ್ಯಕ್ಷರು ಸಚಿನ್ ಜಿ ಮಣೇಲ್‌ಬೈಲ್, ರಾಜ್ಯ ಸಮಿತಿ ಸದಸ್ಯರಾದ ಶರಣ್ ಜಿ ಮಣೇಲ್‌ಬೈಲ್, ರಮೇಶ್ ಕುಲಾಲ್ ನಾರಾಯಣ ಮಂಗಲ, ಮಹಿಳಾ ಘಟಕದ ಸದಸ್ಯರಾದ ಅಮಿತಾ ಶೆಟ್ಟಿ, ಬಬಿತಾ ಶೆಟ್ಟಿ, ಪೂರ್ಣಿಮ ರಾವ್ ಮುಂತಾದವರು ಉಪಸ್ಥಿತರಿದ್ದರು.



Leave a Comment: