ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ಮಂಗಳೂರು ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ

Posted by Vidyamaana on 2023-07-26 11:13:11 |

Share: | | | | |


ಮಂಗಳೂರು  ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ

ಮಂಗಳೂರು: ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತಪಟ್ಟಿರುವುದಾಗಿ ಆರೋಪಿಸಿ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಮಂಗಳೂರಿನಲ್ಲಿ ನಡೆದಿದೆ.


ಆಂಬುಲೆನ್ಸ್ ನಲ್ಲಿ ಶವ ಮುಂದಿಟ್ಟು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ ಹೆರಿಗೆ ನೋವಿನ ಹಿನ್ನೆಲೆ ಜುಲೈ 2ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಪರೀಕ್ಷಿಸಿದ ಡ್ಯೂಟಿ ಡಾಕ್ಟರ್ ಸಿಜೆರಿಯನ್ ಮಾಡಿ ಡೆಲೆವರಿ ಮಾಡಬೇಕೆಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯ ಮನೆಯವರು ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು.



ಶಿಲ್ಪಾರ ಕುಟುಂಬದ ಮೂಲದ ಪ್ರಕಾರ, ಅದೇ ದಿನ ಡಾ. ವೀಣಾ ಅನುಪಸ್ಥಿತಿಯಲ್ಲಿ ಬೇರೆ ವೈದ್ಯರು ಶಿಲ್ಪಾರಿಗೆ ಸಿಜೆರಿಯನ್ ಮಾಡಿ ಡೆಲೆವರಿ ಮಾಡಿದ್ದಾರೆ. ಆ ಬಳಿಕ ಹೆಣ್ಣು ಮಗು ಆಗಿದೆ, ಆದರೇ ಗರ್ಭಕೋಶವನ್ನು ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. ಎರಡು ದಿನಗಳ ನಂತರ ಶಿಲ್ಪಾಗೆ ಜ್ವರ ಬಂದಿದೆ ಎಂದು ಚಿಕಿತ್ಸೆ ನೀಡಿದ್ದಾರೆ. 5 ದಿನಗಳ ನಂತರ ಬ್ರೆನ್ ಮೇಜರ್ ಡ್ಯಾಮೇಜ್ ಆಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಮೃತರ ಪತಿ ಪ್ರದೀಪ್ ಆಚಾರ್ಯ ಮಾಹಿತಿ ನೀಡಿದ್ದಾರೆ. ಆದರೆ ಜುಲೈ 25 ರಂದು ಬಾಣಂತಿ ಶಿಲ್ಪಾ ಆಚಾರ್ಯ ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷಕ್ಕೆ ಆಕೆಯ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಆಕೆಯ ಪತಿ ಠಾಣೆಗೆ ದೂರು ನೀಡಿದ್ದಾರೆ. ಇಂದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲು ಪೊಲೀಸರು ಬಂದಿದ್ದು, ಈ ವೇಳೆ ಖಾಸಗಿ ಆಸ್ಪತ್ರೆ ಬಳಿ ಮೃತದೇಹ ತಡೆದು ಸಂಬಂಧಿಕರು, ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಉಳ್ಳಾಲ : ಕೊಂಡಾಣದ ಭಂಡಾರಮನೆ ಧ್ವಂಸ ಪ್ರಕರಣ

Posted by Vidyamaana on 2024-03-04 04:25:40 |

Share: | | | | |


ಉಳ್ಳಾಲ : ಕೊಂಡಾಣದ ಭಂಡಾರಮನೆ ಧ್ವಂಸ ಪ್ರಕರಣ

ಉಳ್ಳಾಲ, ಮಾ.4: ಕೋಟೆಕಾರು ಗ್ರಾಮದ ಕಾರಣಿಕ ಕೊಂಡಾಣ ಕ್ಷೇತ್ರದಲ್ಲಿ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳಿಗೆ ನಿರ್ಮಾಣಗೊಳ್ಳುತ್ತಿದ್ದ ನೂತನ ಭಂಡಾರಮನೆಯ ಕಟ್ಟಡವನ್ನ ಜೆಸಿಬಿಯಲ್ಲಿ ನೆಲಸಮಗೊಳಿಸಿದ ಘಟನೆ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕೊಂಡಾಣ ಕ್ಷೇತ್ರದ ಗುತ್ತಿನ ಗುರಿಕಾರ ಮುತ್ತಣ್ಣ ಶೆಟ್ಟಿ ಮತ್ತು ಪಟಾಲಮನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ತಾವೇ ನಡೆಸಿರೋದಾಗಿ ಒಪ್ಪಿಕೊಂಡಿದ್ದಾರೆ. 

ಭಾನುವಾರ ಬೆಳಗ್ಗೆ ಮುಜರಾಯಿ ಇಲಾಖೆಗೆ ಒಳಪಟ್ಟ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದಲ್ಲಿದ್ದ ಭಂಡಾರ ಮನೆಯನ್ನ ಕಿಡಿಗೇಡಿಗಳು ಜೆಸಿಬಿ ಬಳಸಿ ಕೆಡವಿ ಹಾಕಿದ್ದರು. ಪ್ರಕರಣ ಸಂಬಂಧ ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಆನಂದ್ ನೀಡಿದ ದೂರಿನ ಮೇಲೆ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿಗಳಾದ ಮುತ್ತಣ್ಣ ಶೆಟ್ಟಿ, ಧೀರಜ್ ಮತ್ತು ಶಿವರಾಜ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಾವೇ ದುಷ್ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಕೊಂಡಾಣ ಕ್ಷೇತ್ರವು 16 ಗುರಿಕಾರರನ್ನು ಹೊಂದಿದೆ. ಅನಧಿಕೃತ ಮತ್ತು ಯಾವುದೇ ಅನುಮತಿಯಿಲ್ಲದೆ ನಿರ್ಮಿಸುತ್ತಿರುವ ಹೊಸ ಭಂಡಾರ ಮನೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಗುರಿಕಾರರು ಒಪ್ಪಿಗೆ ನೀಡಲಿಲ್ಲ. ಈ ಬಗ್ಗೆ ಈಗಾಗಲೇ ಮಂಗಳೂರು ಸಹಾಯಕ ಆಯುಕ್ತ ಹಾಗೂ ತಹಶೀಲ್ದಾರ್‌ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿರುವುದಾಗಿ ಬಂಧಿತ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ. ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಪುರಾಣದ ಭಂಡಾರಮನೆಯು ಖಾಸಗಿ ಗುತ್ತಿನ ಮನೆಯ ಒಡೆತನದಲ್ಲಿದ್ದು ಅದರಲ್ಲಿ ಕ್ಷೇತ್ರದ ದೈವಗಳ ಹದಿನೈದು ಕೋಟಿಗೂ ಮಿಕ್ಕಿ ಬೆಲೆಬಾಳುವ ಒಡವೆಗಳಿವೆ. ಭಂಡಾರ ಮನೆಯನ್ನ ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಾಣವಾಗಬೇಕೆಂದು‌ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಕಾರಣ ಕ್ಷೇತ್ರಕ್ಕೆ ತಾಗಿಕೊಂಡ ಜಮೀನನ್ನು ವ್ಯವಸ್ಥಾಪನಾ ಸಮಿತಿಯವರು ಖರೀದಿಸಿದ್ದರು. ಆ ಜಾಗದಲ್ಲಿ ಕಳೆದ ಜನವರಿ 8 ರಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಮುಂದಾಳುತ್ವದಲ್ಲಿ ನೂತನ ಭಂಡಾರ ಮನೆಗೆ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಎಂಭತ್ತು ಶೇಕಡಾ ಕಾಮಗಾರಿ ಸಂಪೂರ್ಣಗೊಂಡಿತ್ತು. ವ್ಯವಸ್ಥಾಪನಾ ಸಮಿತಿಯ ಅಧಿಕಾರಾವಧಿ ಮುಗಿದಿದ್ದು, ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಕಳೆದ ಎರಡು ದಿವಸಗಳ ಹಿಂದಷ್ಟೇ ಅಧಿಕಾರವನ್ನ ಇಲಾಖೆಗೆ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಮುಕ್ತರಾಗುತ್ತಿದ್ದಂತೆ ಭಾನುವಾರ ಬೆಳಗ್ಗೆ ಕಿಡಿಗೇಡಿಗಳು ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆಯನ್ನ ನೆಲಸಮ ಮಾಡಿದ್ದರು.

ಕ್ಷೇತ್ರದ ಭಕ್ತರಾದ ಕೆ.ಪಿ ಸುರೇಶ್ ಅವರು ನಾವು ಕಾನೂನು ಬಧ್ದವಾಗಿಯೇ ಭಂಡಾರ ಮನೆ ನಿರ್ಮಿಸುತ್ತಿದ್ದು , ಭಂಡಾರ ಮನೆ ಒಡೆಯಲು ಕ್ಷೇತ್ರದ ಗುರಿಕಾರರಾದ ಮುತ್ತಣ್ಣ ಶೆಟ್ಟಿಯೇ ಕಾರಣ ಎಂದು ಬೊಟ್ಟು ಮಾಡಿದ್ದರು. ಗುತ್ತು ಮತ್ತು ಗತ್ತಿನ ಒಣ ಪ್ರತಿಷ್ಠೆಯಲ್ಲಿ ಪುರಾಣ ಪ್ರಸಿದ್ಧ ಕಾರಣಿಕ ಕ್ಷೇತ್ರ ಕೊಂಡಾಣದ ಮಾನವನ್ನು ಊರ ಪ್ರಮುಖರೇ ಸೇರಿಕೊಂಡು ಹರಾಜು ಮಾಡುವಂತಾಗಿದೆ.

ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿ ನಡುವಿನ ಚತುಷ್ಪಥ ಕಾಮಗಾರಿಗೆ ವೇಗ

Posted by Vidyamaana on 2023-01-18 08:17:32 |

Share: | | | | |


ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿ ನಡುವಿನ ಚತುಷ್ಪಥ ಕಾಮಗಾರಿಗೆ ವೇಗ

ಪುತ್ತೂರು: ಒಂದೊಮ್ಮೆ ಉಪ್ಪಿನಂಗಡಿ ತಾಲೂಕು ಕೇಂದ್ರ. ಕ್ರಮೇಣ ತಾಲೂಕು ಕೇಂದ್ರ ಪುತ್ತೂರಿಗೆ ವರ್ಗವಾಯಿತು. ಹಾಗೆಂದು ಈ ಎರಡು ಪಟ್ಟಣಗಳ ನಡುವಿನ ಸಂಬಂಧ ಪ್ರತ್ಯೇಕಗೊಂಡಿಲ್ಲ. ಎರಡೂ ಪಟ್ಟಣಗಳು ಹುಬ್ಬಳ್ಳಿ – ಧಾರವಾಡ ಟ್ವಿನ್ ಸಿಟಿ ಮಾದರಿಯಲ್ಲಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಬಲ ತುಂಬುವ ದಿಶೆಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ವೇಗ ಪಡೆಯುತ್ತಿದೆ.

ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

Posted by Vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪುಣೆಯಲ್ಲಿ ಪತನ-ವಿಡಿಯೋ ವೈರಲ್

Posted by Vidyamaana on 2024-08-25 08:19:29 |

Share: | | | | |


ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪುಣೆಯಲ್ಲಿ ಪತನ-ವಿಡಿಯೋ ವೈರಲ್

ಮಹಾರಾಷ್ಟ್ರ : ಹವಮಾನ ವೈಪರೀತ್ಯದಿಂದ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್​​ ಪತನವಾದ ಘಟನೆ ಪುಣೆ ಜಿಲ್ಲೆಯ ಪೌಡ್ ಪ್ರದೇಶದಲ್ಲಿ ಇಂದು ನಡೆದಿದೆ.ಘಟನೆಯಲ್ಲಿ ಪೈಲೆಟ್​ ಸೇರಿದಂತೆ ಇನ್ನು ಮೂವರು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸುರತ್ಕಲ್ | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಆಕಸ್ಮಿಕ: 10 ಕೋಟಿ ರೂ. ನಷ್ಟ

Posted by Vidyamaana on 2024-07-14 20:11:52 |

Share: | | | | |


ಸುರತ್ಕಲ್ | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಆಕಸ್ಮಿಕ: 10 ಕೋಟಿ ರೂ. ನಷ್ಟ

ಸುರತ್ಕಲ್: ಕಾಟಿಪಳ್ಳದಲ್ಲಿರುವ ಅಥೆಂಟಿಕ್ ಓಷಿಯನ್ ಟ್ರೆಷರ್‌(AOT) ಎಂಬ ಮೀನು ರಫ್ತು ಘಟಕದ ಕಂಪನಿಯಲ್ಲಿ ಇಂದು ಮಧ್ಯಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟವಾಗಿದೆ.

ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ. ಇಂದು ರಜಾದಿನವಾದ ಕಾರಣ ನೌಕರರು ಯಾರು ಇರಲಿಲ್ಲ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ



Leave a Comment: