ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


BREAKING : ಅಧಿಕೃತವಾಗಿ ಹೆಸರು ಬದಲಿಸಿದ RCB

Posted by Vidyamaana on 2024-03-19 22:02:50 |

Share: | | | | |


BREAKING : ಅಧಿಕೃತವಾಗಿ ಹೆಸರು ಬದಲಿಸಿದ RCB

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮತ್ತು ಮಹಿಳಾ ಪ್ರೀಮಿಯರ್ ಲೀಗ್ (WPL)ನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂದು ಮರುನಾಮಕರಣ ಮಾಡಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ಹೆಸರು ಬದಲಾವಣೆಯನ್ನ ಘೋಷಿಸಲಾಯಿತು.

ನಾವು ಪ್ರೀತಿಸುವ ನಗರ, ನಾವು ಅಪ್ಪಿಕೊಳ್ಳುವ ಪರಂಪರೆ, ಮತ್ತು ಇದು ನಮ್ಮ ಹೊಸ ಅಧ್ಯಾಯದ ಸಮಯ. ನಿಮಗೆ ಪ್ರಸ್ತುತಪಡಿಸುತ್ತಿದ್ದೇವೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು. ನೀವು ತಂಡ, ನೀವು ಆರ್ಸಿಬಿ" ಎಂದು ಬರೆಯಲಾಗಿದೆ.


ಬಾಂಗ್ಲಾದೇಶದಲ್ಲಿ ದೇವಸ್ಥಾನದ ಕಾವಲಿಗೆ ನಿಂತ ವಿದ್ಯಾರ್ಥಿಗಳು : ಕೋಮು ಸೌಹರ್ದತೆ ಕಾಪಾಡುವಂತೆ ಮಸೀದಿಗಳಲ್ಲಿ ಘೋಷಣೆ

Posted by Vidyamaana on 2024-08-06 10:53:37 |

Share: | | | | |


ಬಾಂಗ್ಲಾದೇಶದಲ್ಲಿ ದೇವಸ್ಥಾನದ ಕಾವಲಿಗೆ ನಿಂತ ವಿದ್ಯಾರ್ಥಿಗಳು : ಕೋಮು ಸೌಹರ್ದತೆ ಕಾಪಾಡುವಂತೆ ಮಸೀದಿಗಳಲ್ಲಿ ಘೋಷಣೆ

ಡಾಕಾ : ದಂಗೆಯ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಹಿಂಸಾಚಾರ ಮುಂದುವರೆದಿದೆ. ಢಾಕಾದ ಖಿಲ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಏತನ್ಮಧ್ಯೆ, ವಿಷಯ ಉಲ್ಬಣಗೊಂಡ ನಂತರ, ಮಸೀದಿಗಳ ಜನರು ಯಾರಿಗೂ ಹಾನಿಯಾಗಬಾರದು ಎಂದು ಘೋಷಿಸಿದರು.ಅದೇ ಸಮಯದಲ್ಲಿ, ಕೆಲವು ಸ್ಥಳಗಳಲ್ಲಿ ದೇವಾಲಯಗಳ ಭದ್ರತೆಗೆ ವಿದ್ಯಾರ್ಥಿಗಳನ್ನು ನಿಯೋಜಿಸಲಾಯಿತು, ಅವರು ರಾತ್ರಿಯಿಡೀ ದೇವಾಲಯಗಳನ್ನು ಕಾವಲು ಕಾಯುತ್ತಿದ್ದರು.

ಬಾಂಗ್ಲಾದೇಶದಲ್ಲಿ, ಮಸೀದಿಯ ಒಳಗಿನಿಂದ ಧ್ವನಿವರ್ಧಕಗಳ ಮೂಲಕ ವಿಶೇಷ ಘೋಷಣೆ ಮಾಡಲಾಯಿತು. ದೇಶದಲ್ಲಿ ಅಶಾಂತಿಯ ಈ ಅವಧಿಯಲ್ಲಿ, ನಾವೆಲ್ಲರೂ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಾದ ನಾವು ನಿಮ್ಮನ್ನು ವಿನಂತಿಸುತ್ತಿದ್ದೇವೆ. ನಾವು ಹಿಂದೂ ಅಲ್ಪಸಂಖ್ಯಾತರನ್ನು ರಕ್ಷಿಸಬೇಕು. ಅವರ ಜೀವನ ಮತ್ತು ಸಂಪತ್ತನ್ನು ದುಷ್ಕರ್ಮಿಗಳು ಮತ್ತು ದುಷ್ಟ ಶಕ್ತಿಗಳಿಂದ ರಕ್ಷಿಸಬೇಕು. ಇದು ನಿಮ್ಮ ಜವಾಬ್ದಾರಿ, ನಮ್ಮ ಮತ್ತು ಎಲ್ಲರ ಜವಾಬ್ದಾರಿ. ನಾವೆಲ್ಲರೂ ಈ ಬಗ್ಗೆ ಜಾಗರೂಕರಾಗಿರಬೇಕು.

ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!

Posted by Vidyamaana on 2023-10-07 18:04:41 |

Share: | | | | |


ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ  ರಾಜ್ಯ ಪ್ರವಾಸಕ್ಕೆ ಅನುಮತಿ ನಿರಾಕರಿಸಲಾಗಿದೆ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.  


ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅವರು ಎಲ್ಲಾ 30 ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾ ಮತ್ತು ತಾಲೂಕು ನಾಯಕರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು. ಆ ಮೂಲಕ ಸುಮಾರು ಏಳು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ  ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಿದರು. 


ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲಿ ಆಂತರಿಕ ಅಘೋಷಿತ ಶೀತಲ ಸಮರ ಇದೆ. ಅದೇ ಕಾರಣದಿಂದ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ  ಎಂದು ಮೂಲಗಳು ಹೇಳುತ್ತವೆ.  ಆದಾಗ್ಯೂ, ಬಿಎಸ್ ವೈ ಹೊರಗೆ ಹೋಗಿ ಪ್ರಚಾರ ಮಾಡಿದರೆ ಮಾತ್ರ ಬಿಜೆಪಿ ಉಳಿದು ಹೆಚ್ಚಿನ ಸ್ಥಾನಗಳನ್ನು ಮರುಪಡೆಯುತ್ತದೆ. ವಿಶೇಷವಾಗಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪಕ್ಷ ಅನುಮತಿ ನೀಡದಿದ್ದರೆ ಏನು ಮಾಡಲು ಸಾಧ್ಯ ಎಂದು ಅವರ ಆಪ್ತರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 


ಸತತ ಮೂರನೇ ವರ್ಷ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸಕ್ಕೆ ತೆರಳಲು ಪ್ರಯತ್ನಿಸುತ್ತಿದ್ದಾರೆ ಆದರೆ ಪಕ್ಷವು ಅವರನ್ನು ಕಾಯುವಂತೆ ಕೇಳಿದೆ. ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಪಕ್ಷವು ಹಲವು ಕೆಲಸಗಳಲ್ಲಿ ನಿರತವಾಗಿದೆ, ಯಡಿಯೂರಪ್ಪ ಅವರು ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಈ ಮಧ್ಯೆ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿದ್ದು, ಅದಾದ ನಂತರ ಯಡಿಯೂರಪ್ಪ  ತಮ್ಮ ಪ್ರವಾಸವನ್ನು ಪ್ರಾರಂಭಿಸಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆದರೆ ಕೆಲವು ಭ್ರಷ್ಟ ವ್ಯಕ್ತಿಗಳೊಂದಿಗೆ ವಿಜಯೇಂದ್ರ ಅವರ ಸಂಪರ್ಕದ ವಿಷಯವನ್ನು ಎತ್ತುತ್ತಿರುವ ಯಡಿಯೂರಪ್ಪ ಅವರನ್ನು ವಿರೋಧಿಸುವ ಗುಂಪು ಅದಕ್ಕೆ ಅಡ್ಡಗಾಲು ಹಾಕುತ್ತಿದೆ ಎನ್ನಲಾಗುತ್ತಿದೆ.


ಯಡಿಯೂರಪ್ಪ ಅವರ ಸಹಾಯಕರಲ್ಲಿ ಒಬ್ಬರಾಗಿದ್ದ ಉಮೇಶ್ ಮೇಲೆ ಇಡಿ ದಾಳಿ ನಡೆಸಿದಾಗ ಇದು ಬಹಿರಂಗವಾಗಿದೆ. ಯಡಿಯೂರಪ್ಪನವರ ವಿರೋಧಿ ಗುಂಪು ಕೂಡ ಅವರ ಮತ್ತೊಬ್ಬ ಪುತ್ರ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿಸಲು ಪ್ರಯತ್ನಿಸುತ್ತಿದೆ. ಆದರೆ, ವಿಜಯೇಂದ್ರಗೆ ಉನ್ನತ ಹುದ್ದೆ ಸಿಕ್ಕರೆ ಸಂತಸ ತರಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ಒಮ್ಮೆ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ 2019 ರಲ್ಲಿ ಮಾಡಿದಂತೆ ರಾಜ್ಯಾದ್ಯಂತ ಪಕ್ಷದ ಪರ ಪ್ರಚಾರ ಕೈಗೊಳ್ಳುವುದು ಯಡಿಯೂರಪ್ಪ ಅವರ ಕರ್ತವ್ಯ ಎಂದು ಪಕ್ಷದ ಮೂಲಗಳು ಸೂಚಿಸಿವೆ.

ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ - ಇಬ್ಬರ ಬಂಧನ

Posted by Vidyamaana on 2023-07-31 13:11:07 |

Share: | | | | |


ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ - ಇಬ್ಬರ ಬಂಧನ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಅನೈತಿಕ ಪೊಲೀಸ್‌ಗಿರಿ ಅಂಕೆ ಮೀರಿ ಬೆಳೆಯುತ್ತಿದ್ದು, ವಿಟ್ಲದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಡ್ಡಗಟ್ಟಿ ನಿಂದಿಸಿದ ಪ್ರಕರಣದ ಸಂದರ್ಭದಲ್ಲೇ ನಗರದ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


ನಗರದ ವೆಬ್‌ಸೈಟ್‌ ಒಂದರ ಯುವ ವರದಿಗಾರ ಅಭಿಜಿತ್ ಅವರು, ಜು. 26ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾವೂರು ಜಂಕ್ಷನ್ ಬಳಿಯ ಹೊಟೇಲೊಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ನೀನು ಬ್ಯಾರಿಯೊಂದಿಗೆ ಏನು ಮಾತನಾಡುತ್ತಿ, ನೀನು ಬ್ಯಾರಿಯ ಇಲ್ಲಿಂದ ಹೊರಡು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಸಂದರ್ಭ ಅಭಿಜಿತ್ ಅವರು ತಾನು ದೈಜಿವರ್ಲ್ಡ್ ವರದಿಗಾರ ಎಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಮತ್ತೆ ಅವಾಚ್ಯ ಶಬ್ದಗಳಿಂದ ಆ ಅಪರಿಚಿತ ವ್ಯಕ್ತಿಈ ಬಗ್ಗೆ ಅಭಿಜಿತ್ ಅದೇ ದಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆ ಸಂದರ್ಭದಲ್ಲಿ ಆ ವ್ಯಕ್ತಿಯ ಕಾರಿನ ನಂಬರ್ ನೋಟ್ ಮಾಡಿದ್ದರು. ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರಿಂದ ಅವರ ನಿರ್ದೇಶನದ ಮೇರೆಗೆ ಆರೋಪಿ ಚೇತನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಗೊಳಪಡಿಸಿದ್ದಾರೆ. ಜು. 28ರಂದು ಎಫ್‌ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣದ ಆರೋಪಿ, ಕೋಟೆಕಾರ್ ನಿವಾಸಿ ಚೇತನ್ ಎಂಬಾತನನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ

ಡಾ.ಮೋಹನ ಆಳ್ವರಿಗೆ ಪಿತೃವಿಯೋಗ

Posted by Vidyamaana on 2023-10-31 16:03:17 |

Share: | | | | |


ಡಾ.ಮೋಹನ ಆಳ್ವರಿಗೆ ಪಿತೃವಿಯೋಗ

ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ. 


ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು. 


1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.

ಆ.10ಕ್ಕೆ ಪುತ್ತೂರು ಬಂಟರ ಸಂಘದಿಂದ ಆಟಿಡೊಂಜಿ ಬಂಟೆರೆ ಸೇರಿಗೆ-ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ

Posted by Vidyamaana on 2024-08-09 09:12:23 |

Share: | | | | |


ಆ.10ಕ್ಕೆ ಪುತ್ತೂರು ಬಂಟರ ಸಂಘದಿಂದ ಆಟಿಡೊಂಜಿ ಬಂಟೆರೆ ಸೇರಿಗೆ-ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ

ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು ಆಟಿಡೊಂಜಿ ಬಂಟೆರೆ ಸೇರಿಗೆ  ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದರು.

ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಅಪರಾಹ್ನ 3 ಗಂಟೆಗೆ ಕೊಂಬೆಟ್ಟು ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಕಾವು ಹೇಮನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಭಾಗಿಯಾಗಲಿದ್ದಾರೆ.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಪ್ರಶಸ್ತಿಪ್ರದಾನ ಮಾಡಲಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಆಶಯ ಮಾತುಗಳನ್ನಾಡಲಿದ್ದಾರೆ. ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಅವರು ವಿದ್ಯಾರ್ಥಿ ವೇತನ ವಿತರಣೆ ಮಾಡಲಿದ್ದಾರೆ.

ಸಾಧಕರಿಗೆ ಸನ್ಮಾನ;

ಎಂಆರ್‍ಜಿ ಗ್ರೂಫ್ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಇಂಡಿಯಾ ಸೋಶಿಯಲ್ ಮತ್ತು ಕಲ್ಚರಲ್ ಸೆಂಟರ್ ಅಬುದಾಬಿ ಇದರ ಅಧ್ಯಕ್ಷ ಮಿತ್ರಂಪಾಡಿ ಜಯರಾಮ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.




Leave a Comment: