ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ವೀರಕಂಭ: ತನಗೆ ಸರ್ಕಾರ ನೀಡಿದ ಒಂದು ಎಕರೆ ಕೃಷಿ ಭೂಮಿಯನ್ನು ಸರ್ಕಾರಕ್ಕೆ ನೀಡಲು ಮುಂದಾದ ಬಡ ವೃದ್ಧ

Posted by Vidyamaana on 2024-07-06 14:29:29 |

Share: | | | | |


ವೀರಕಂಭ: ತನಗೆ ಸರ್ಕಾರ ನೀಡಿದ ಒಂದು ಎಕರೆ ಕೃಷಿ ಭೂಮಿಯನ್ನು ಸರ್ಕಾರಕ್ಕೆ ನೀಡಲು ಮುಂದಾದ ಬಡ ವೃದ್ಧ

ವಿಟ್ಲ: ಮಂಗಳಪದವು ಎಂಬಲ್ಲಿ ಪರಿಶಿಷ್ಟ ಜಾತಿಯ ಬಡ ಕುಟುಂಬದ ಮಾಂಕು ಕೊರಗ ಎಂಬವರು ತನಗೆ ಸರ್ಕಾರ ನೀಡಿದ ಒಂದು ಎಕರೆ ಕೃಷಿ ಭೂಮಿಯನ್ನು ಸರ್ಕಾರಕ್ಕೆ ನೀಡಲು ಮುಂದಾಗಿರುವ ಘಟನೆಯೊಂದು ವೀರಕಂಭ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 

2010 ರಲ್ಲಿ ಅಂದಿನ ಜಿಲ್ಲಾಧಿಕಾರಿಯವರು ಇವರಿಗೆ ಸರ್ವೇ ನಂ. 283 ಮತ್ತು 282 ರಲ್ಲಿ ಒಂದು ಎಕ್ರೆ ಕೃಷಿ ಭೂಮಿಯನ್ನು ಮಂಜೂರು ಮಾಡಿತ್ತು. ಆದರೆ ತನಗೆ ಸೇರಬೇಕಿದ್ದ ಭೂಮಿಯ ಕೆಲವು ದಾಖಲೆಗಳನ್ನು ಮಾತ್ರ ನೀಡಿ, ಕೃಷಿ ಕಾರ್ಯ ನಡೆಸದಂತೆ ಸಮಸ್ಯೆ ಎದುರಾಗಿದೆ. ಸುಮಾರು ಹದಿಮೂರು ವರ್ಷ ಕಳೆದರೂ ತನ್ನ ಜಾಗಕ್ಕೆ ಹೋಗದಂತೆ ಕೃಷಿ ಚಟುವಟಿಕೆಗಳನ್ನು ನಡೆಸದಂತೆ ಸಮಸ್ಯೆಯಲ್ಲಿ ಸಿಲುಕಿರುವ ಈ ವೃದ್ಧ ಸಾಮಾಜಿಕ ಹೋರಾಟಗಾರಲ್ಲಿ ತನ್ನ ನೋವನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರರಾದ ದೇವಿ ಪ್ರಸಾದ್‌ ಶೆಟ್ಟಿ ಬೆಂಞಂತ್ತಿಮಾತ್ ಗುತ್ತು ಹಾಗೂ ಧನಂಜಯ ಪಾದೆ ಇವರು ಮಾಂಕು ಕೊರಗ ಎಂಬವರಿಗೆ ಸೇರಬೇಕಾದ ಎಲ್ಲಾ ದಾಖಲೆಗಳನ್ನು ಒಂದು ವಾರದಲ್ಲಿ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಯವರು ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ. 


ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2023-07-26 03:52:42 |

Share: | | | | |


ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

ಪುತ್ತೂರು: ವಿಧಾನಸಭೆ ಚುನಾವಣೆಯಲ್ಲಿ ವೀರೋಚಿತ ಸೋಲುಂಡು, ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಸತ್ವ ಪರೀಕ್ಷೆಗೆ ಇಳಿದ ಪುತ್ತಿಲ ಪರಿವಾರ ಜಯದ ಖಾತೆ ತೆರೆದಿದೆ. ಆರ್ಯಾಪು ಗ್ರಾಮ ಪಂಚಾಯತಿನ 2ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಭೇರಿ ಬಾರಿಸುವ ಮೂಲಕ ಪುತ್ತಿಲ ಪರಿವಾರದ ರಾಜಕೀಯ ಆಟ ಶುರುವಾದಂತಾಗಿದೆ.

ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499ಮತ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ ಗೆಣಸಿನಕುಮೇರು140 ಮತ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಿ. ಪುರುಷೋತ್ತಮ ಪ್ರಭು ಅಬ್ಬುಗದ್ದೆ.353. ಮತ ಪಡೆದುಕೊಂಡಿದ್ದಾರೆ. 1237 ಮತದಾರರನ್ನು ಹೊಂದಿರುವ ಆರ್ಯಾಪಿನ ವಾರ್ಡ್ 2ರಲ್ಲಿ 999 ಮತ ಚಲಾವಣೆಯಾಗಿತ್ತು.

ಆರ್ಯಾಪು ಗ್ರಾ.ಪಂ.ನ ಚುನಾವಣಾಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಓ ನಾಗೇಶ್ ಎಂ.ರವರ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

ಮಂಗಳೂರು ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಕಮಲ – ಖಾಕಿ ಜಟಾಪಟಿ!

Posted by Vidyamaana on 2024-04-26 11:11:36 |

Share: | | | | |


ಮಂಗಳೂರು ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಕಮಲ – ಖಾಕಿ ಜಟಾಪಟಿ!

ಮಂಗಳೂರು, ಎ.25: ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ. 


ಮತಗಟ್ಟೆ ಹೊರಗೆ ಮಾಧ್ಯಮಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರತಿಕ್ರಿಯೆ ನೀಡುತ್ತಿದ್ದಾಗ, ಅಲ್ಲಿ ಒಂದಷ್ಟು ಗುಂಪು ಸೇರಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ ಪ್ರಶ್ನೆ ಮಾಡಲು ಬಂದಿದ್ದಾನೆ. ಮಂಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಬಳಿ ವಾಯ್ಸ್ ರೈಸ್ ಮಾಡಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಇನ್ಸ್ ಪೆಕ್ಟರ್, ಬಿಜೆಪಿ ಕಾರ್ಯಕರ್ತನ ಕಾಲರ್ ಹಿಡಿದು ಎಳೆದೊಯ್ದಿದ್ದಾರೆ.

ದುಬೈನಲ್ಲಿ ರಸ್ತೆ ಅಪಘಾತ - ಕೋಟೆಕಾರು ಬೀರಿ ನಿವಾಸಿ ವಿದಿಶಾ ದುರ್ಮರಣ

Posted by Vidyamaana on 2024-02-23 15:57:28 |

Share: | | | | |


ದುಬೈನಲ್ಲಿ ರಸ್ತೆ ಅಪಘಾತ - ಕೋಟೆಕಾರು ಬೀರಿ ನಿವಾಸಿ ವಿದಿಶಾ ದುರ್ಮರಣ

ಉಳ್ಳಾಲ: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.


ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22 ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.

ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ಯಾಕ್ಟ್  ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.ಹೊಸ ಕಾರು ಖರೀದಿಸಿದ್ದರು: ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದರು. ತಂದೆ-ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.

ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿದ ರಿಕ್ಷಾ ಡ್ರೈವರ್

Posted by Vidyamaana on 2023-11-15 05:38:10 |

Share: | | | | |


ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿದ ರಿಕ್ಷಾ ಡ್ರೈವರ್

ಉಳ್ಳಾಲ, ನ.15: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ. 


ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.

ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.


ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.


ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ  ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.

ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Posted by Vidyamaana on 2024-02-08 21:24:46 |

Share: | | | | |


ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

ಪುತ್ತೂರು:ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಭೂನ್ಯಾಯ ಮಂಡಳಿ ಸದಸ್ಯರಾಗಿ ಮಾಜಿ ಕೆಡಿಪಿ ಸದಸ್ಯ ಕೃಷ್ಣಪ್ರಸಾದ್‌ ಆಳ್ವ, ಆಳ್ವರಮನೆ ಚೆಲ್ಯಡ್ಕ, ನಿರಂಜನ್ ರೈ ಮಠಂತಬೆಟ್ಟು, ಅಬ್ದುಲ್ ರಹಿಮಾನ್ ಯು. (ಯುನಿಕ್)ಬೋಳಂತಿಲ ಮತ್ತು ಮಂಜುನಾಥ ನಾಯ್ಕ ಎಂ.ಬೊಳ್ವಾರ್‌ಬೈಲ್ ಉರ್ಲಾಂಡಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸದಸ್ಯರಾಗಿ ನಾಮನಿರ್ದೇಶನಗೊಳಿಸಲಾಗಿದೆ. ಉಪವಿಭಾಗದ ಸಹಾಯಕ ಆಯುಕ್ತರು ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ತಹಸಿಲ್ದಾರ್ ಅವರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.



Leave a Comment: