ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

Posted by Vidyamaana on 2024-03-07 09:09:19 |

Share: | | | | |


ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

ಗಳೂರು(ಮಾ.07): ರಾಜ್ಯದಲ್ಲಿ  ಮಾರಾಟ ಆ್ಯಸಿಡ್ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ  ಆ್ಯಸಿಡ್  ದಾಳಿ ಮಾಡಿದ್ದ.ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ

Posted by Vidyamaana on 2023-01-18 08:23:59 |

Share: | | | | |


ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ

ಪುತ್ತೂರು: 1979ರಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ದಕ್ಷಿಣ ಕನ್ನಡಕ್ಕೆ ಬಂದಿದ್ದರು. ಆಗ ಒಕ್ಕಲುತನ ಮಾಡುತ್ತಿದ್ದ ಮನೆಗಳಲ್ಲಿ ನಿಂತು, ಇಲ್ಲಿನ ಕೃಷಿ ಕಾರ್ಯದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. ಸಂಘಟನೆಯ ಕಾರ್ಯಕ್ಕೂ ಚಾಲನೆ ನೀಡಿ, ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣಕ್ಕೆ, ಕೊಂಬೆಟ್ಟು ಐಟಿಐ ನಿರ್ಮಾಣಕ್ಕೆ ಕಾರಣಕರ್ತರಾದರು. ಅವರ ಈ ಎಲ್ಲಾ ಕೆಲಸಗಳನ್ನು ನೆನಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಜ. 22ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Posted by Vidyamaana on 2023-09-28 21:01:17 |

Share: | | | | |


ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

ಕಡಬ: ಸಮೀಪದ ಮೀನಾಡಿಯಲ್ಲಿಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟು ಮೂರು ತಿಂಗಳು ಕಳೆಯುತ್ತಿದ್ದಂತೆಯೇ ಐತ್ತೂರು ಗ್ರಾಮದಲ್ಲಿ ಮತ್ತೊಂದು ಕಾಡಾನೆ ದಾಳಿಯಾಗಿದ್ದು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.



ಐತ್ತೂರು ಗ್ರಾಮದ ಗೇರ್ತಿಲ‌ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.


ಅವರು ಗುರುವಾರ ಸಂಜೆ ಕೂಲಿ‌ ಕೆಲಸ ಬಿಟ್ಟು ಮನೆಯ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಗ್ರಾಮದ ನೆಲ್ಯಡ್ಕ ಶಾಲೆಗೆ ಹೊಂದಿಕೊಂಡಿರುವ ಕಾರ್ತಿಕೇಯ ಭಜನಾ ಮಂದಿರದ ಬಳಿ ಕಾಡಾನೆ ಹಠಾತ್ತಾಗಿ ಎದುರು ಬಂದು ಅವರನ್ನು‌ ಸೊಂಡಿಲಿನಿಂದ ಎತ್ತಿ ಬಿಸಾಕಿದೆ. ಪರಿಣಾಮವಾಗಿ ಚೋಮ‌ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಪ್ರಥಮ‌ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.


ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಮೇ 6 ಕ್ಕೆ ಪುತ್ತೂರಿಗೆ ಯೋಗಿ ಆದಿತ್ಯನಾಥ್

Posted by Vidyamaana on 2023-04-25 03:40:15 |

Share: | | | | |


ಮೇ 6 ಕ್ಕೆ ಪುತ್ತೂರಿಗೆ ಯೋಗಿ ಆದಿತ್ಯನಾಥ್

ಪುತ್ತೂರು: ಚುನಾವಣಾ ಕಣ ರಂಗು ಪಡೆಯುತ್ತಿದ್ದಂತೆ ಸ್ಟಾರ್ ಪ್ರಚಾರಕರ ದಂಡು ಪುತ್ತೂರಿಗೆ ಆಗಮಿಸುತ್ತಿದೆ.

ಮೇ 6ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದು ಪಕ್ಕಾ ಆಗಿದೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಮತ ಯಾಚಿಸಲಿರುವ ಯೋಗಿ, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಲಿದ್ದಾರೆ.

ರಾಜ್ಯ, ರಾಷ್ಟ್ರದ ರಾಜಕಾರಣ ಪುತ್ತೂರಿನೆಡೆಗೆ ಮುಖ ಮಾಡಿದ್ದು, ಕಣ ರಣಾಂಗಣವಾಗಿದೆ. ವಿಪಕ್ಷ, ಪಕ್ಷೇತರ ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗುತ್ತಿರುವ ನಡುವೆ ಬಿಜೆಪಿಯೂ ಸ್ಟಾರ್ ಪ್ರಚಾರಕರನ್ನು ಕರೆಸಿಕೊಳ್ಳುತ್ತಿದೆ.

ಉಪ್ಪಿನಂಗಡಿ : ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ಟೈಲರಿಂಗ್ ತರಗತಿ ಉದ್ಘಾಟನೆ

Posted by Vidyamaana on 2023-07-19 16:03:08 |

Share: | | | | |


ಉಪ್ಪಿನಂಗಡಿ : ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ಟೈಲರಿಂಗ್ ತರಗತಿ ಉದ್ಘಾಟನೆ

ಉಪ್ಪಿನಂಗಡಿ : ವಿದ್ಯೆ ಯಾವುದೇ ಇರಲಿ ಕಲಿತ ವಿದ್ಯೆಯನ್ನು ಬದುಕಿನಲ್ಲಿ ಉಪಯೋಗಕ್ಕೆ ತಂದರೆ ಮಾತ್ರ ಕಲಿಕೆಗೆ ಮಹತ್ವ ಬರುವುದು. ಕಲಿತಂತೆ  ಸರಳತೆಯಿಂದ ಬದುಕಿದರೆ ನೆಮ್ಮದಿಯ ಬದುಕು ಸಿಗುವುದು,ಕೆಲ ಮಹಿಳೆಯರು ಇಂದು ಆಡಂಬರದ ಬದುಕಿಗೆ ಜೋತು ಬಿದ್ದು ಕಡೆಗೆ ಕುಟುಂಬ ಕಲಹಕ್ಕೂ ಕಾರಣವಾಗುತ್ತಿರುವುದು ಕಾಣುತ್ತಿದ್ದೇವೆ. ಆದ್ದರಿಂದ ಶಿಸ್ತು ಹಾಗೂ ಸರಳತೆಯಿಂದ ಬದುಕುವ ಕಲೆಯನ್ನು ಪ್ರತಿಯೊಬ್ಬರೂ ಕಲಿತು ಕೊಳ್ಳಬೇಕು ಎಂದು ಕೆಮ್ಮಾರ ಶಂಸುಲ್ ಉಲಮಾ ವುಮೆನ್ಸ್ ಕಾಲೇಜ್ ಅಧ್ಯಕ್ಷ ಎಸ್.ಬಿ.ಮುಹಮ್ಮದ್ ದಾರಿಮಿ ಅವರು ಹೇಳಿದರು.

     ಅವರು ಕೆಮ್ಮಾರ ಶಕ್ತಿನಗರ ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿಯನ್ನು ಉದ್ಗಾಟಿಸಿ ಮಾತನಾಡುತ್ತಿದ್ದರು.

      ಮಹಿಳೆಯರು ವಿದ್ಯಾರ್ಥಿ ಜೀವನದಲ್ಲೇ ಟೈಲರಿಂಗ್ ನಂತಹ ಕೌಶಲ್ಯ ಆಧಾರಿತ ಶಿಕ್ಷಣವನ್ನು ಕಲಿತು ಕೊಂಡರೆ ಮುಂದೆ ಮನೆಯಲ್ಲಿದ್ದು ಕೊಂಡೇ ಕೈ ತುಂಬಾ ಸಂಪಾದಿಸಲು ಸಾಧ್ಯವಾಗುವುದು. ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. 

    ಸಂಸ್ಥೆಯ ಉಸ್ತಾದರಾದ ಹನೀಫ್ ದಾರಿಮಿ ಪಡೀಲ್ ಮತ್ತು ಶೌಕತ್ತ್ ಫೈಝಿ ಗಂಡಿಬಾಗಿಲು ಸಮಾರಂಭದಲ್ಲಿ ಮಾತನಾಡಿದರು.ಶಿಕ್ಷಕಿಯರಾದ ಶಾಹಿರಾ ಮಾಹಿರ ಮತ್ತು ಸುಹೈಲಾ ಫಾಳಿಲಾ ಅವರು ವಿದ್ಯಾರ್ಥಿನಿಯರಿಗೆ ಟೈಲರಿಂಗ್ ತರಬೇತಿ ಯ ಬಗ್ಗೆ ಮಾಹಿತಿ ನೀಡಿದರು.

ಸುಳ್ಯ- ಪಾಣತ್ತೂರು ರಸ್ತೆಯಲ್ಲಿ ಗುಡ್ಡ ಕುಸಿತ

Posted by Vidyamaana on 2023-07-06 11:57:42 |

Share: | | | | |


ಸುಳ್ಯ- ಪಾಣತ್ತೂರು ರಸ್ತೆಯಲ್ಲಿ ಗುಡ್ಡ ಕುಸಿತ

ಸುಳ್ಯ: ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಸುಳ್ಯದಿಂದ ಕೇರಳದ ಪಾಣತ್ತೂರು ಸಂಪರ್ಕಿಸುವ ಕಲ್ಲಪಳ್ಳಿಯಲ್ಲಿ ಗುಡ್ಡದಿಂದ ಮಣ್ಣು ಕುಸಿದು ರಸ್ತೆ ಸಂಚಾರದಲ್ಲಿ ತಡೆ ಉಂಟಾಗಿರುವುದಾಗಿ ಘಟನೆ ಜು ೬ ರಂದು ಸಂಭವಿಸಿದೆ.

 ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಇನ್ನೂ ಮಳೆ ಮುಂದುವರಿದರೆ ಗುಡ್ಡ ಇನ್ನಷ್ಟು ಕುಸಿಯುವ ಅಪಾಯ ಎದುರಾಗಿದ್ದು ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಪ್ರಯಾಣಿಸಬೇಕು ಎಂದು ತಿಳಿಸಲಾಗಿದೆ .



Leave a Comment: