ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಹೆಚ್.ಡಿ. ರೇವಣ್ಣ ಬಂಧನ

Posted by Vidyamaana on 2024-05-04 20:04:28 |

Share: | | | | |


ಹೆಚ್.ಡಿ. ರೇವಣ್ಣ ಬಂಧನ

ಬೆಂಗಳೂರು: ಲೈಂಗಿಕ ಪ್ರಕರಣ ಮತ್ತು ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಬಂಧಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಐಡಿ ಕಚೇರಿಗೆ ಕರೆತಂದಿದ್ದಾರೆ. ಇವತ್ತು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ

ಕೆ.ಆರ್ ನಗರ ಠಾಣೆಯಲ್ಲಿ‌ ದಾಖಲಾಗಿರುವ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನ ನಡೆದಿದೆ.

ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿ: ಪ್ರವಾಸದಲ್ಲಿದ್ದ 45 ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

Posted by Vidyamaana on 2023-12-26 13:31:59 |

Share: | | | | |


ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿ: ಪ್ರವಾಸದಲ್ಲಿದ್ದ 45 ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಹಾವೇರಿ:ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ.ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಬಸ್ ಪಲ್ಟಿಯಾಗಿದ್ದು ಅದರಲ್ಲಿ ಇದ್ದ 45 ಮಕ್ಕಳು‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಸಣ್ಣಪುಟ್ಟ ಗಾಯಗೊಂಡ ಮಕ್ಕಳಿಗೆ ಸವಣೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸರ್ಕಾರಿ ಬಸ್ ನಲ್ಲಿ ಮಕ್ಕಳು ಪ್ರವಾಸ ಹೋಗುತ್ತಿದ್ದರು.


ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸ ಹಿನ್ನೆಲೆಯಲ್ಲಿ ರಾಕಗಾರ್ಡ್​ನ್​ಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.ಘಟನೆಯ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಸೌಜನ್ಯ ಸಮಾಧಿಗೆ ನಮಿಸಿ ತಾಯಿಗೆ ಆಮಂತ್ರಣ

Posted by Vidyamaana on 2023-08-11 11:51:00 |

Share: | | | | |


ಸೌಜನ್ಯ ಸಮಾಧಿಗೆ ನಮಿಸಿ ತಾಯಿಗೆ ಆಮಂತ್ರಣ

ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರ ಹೆಸರಿನಲ್ಲಿ ಹುಟ್ಟಿಕೊಂಡ ಪುತ್ತಿಲ‌ ಪರಿವಾರ ಇದೀಗ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ದಿಶೆಯಲ್ಲೂ ಹೋರಾಟ ಹಮ್ಮಿಕೊಂಡಿದೆ.

ಹಿಂದೂ ಪರವಾದ ಹಲವು ಹೋರಾಟಗಳನ್ನು ಹಮ್ಮಿಕೊಂಡು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸಿ ಸೈ ಎನಿಸಿಕೊಂಡಿರುವುದು ಪುತ್ತಿಲ ಬಳಗದ ಹೆಚ್ಚುಗಾರಿಕೆ. ಚುನಾವಣೆ ಬಳಿಕ ಪುತ್ತಿಲ ಪರಿವಾರ ಸಂಘಟನೆ‌ ಅಸ್ತಿತ್ವಕ್ಕೆ ಬಂದಿದ್ದು, ಅದರ ಮೂಲಕ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು‌ ಹಮ್ಮಿಕೊಳ್ಳಲಾಗುತ್ತಿದೆ. ಇದೀಗ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಪುತ್ತೂರಿನಲ್ಲಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪಾದಯಾತ್ರೆ ಹಾಗೂ ರಸ್ತೆ ತಡೆ ಆಯೋಜಿಸಲಾಗಿದೆ. ಈ ಹೋರಾಟಕ್ಕೆ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಪುತ್ತಿಲ ಪರಿವಾರದ ವತಿಯಿಂದ ಆಹ್ವಾನಿಸಲಾಗಿದೆ.

ಸೌಜನ್ಯ ಸಮಾಧಿ ಬಳಿ ಪ್ರಾರ್ಥನೆ ಸಲ್ಲಿಸಿ, ತಾಯಿಗೆ ಮೊದಲ ಆಮಂತ್ರಣ ನೀಡಲಾಯಿತು.

ತಾಯಿ ಕುಸುಮಾವತಿ ಅವರ ಬಳಿ ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. 2013ರಲ್ಲೂ ಅರುಣ್ ಕುಮಾರ್ ಪುತ್ತಿಲರು ಹೋರಾಟ ನಡೆಸಿದ್ದಾರೆ. ಈಗ ಮರುತನಿಖೆಗೆ ಆಗ್ರಹಿಸಿ ಪುತ್ತೂರಿನಲ್ಲಿ ಹೋರಾಟ ನಡೆಸಲಿದ್ದೇವೆ. ಈ ಹೋರಾಟದ ಮೊದಲ ಆಮಂತ್ರಣ ನಿಮಗೆ ನೀಡಿ ಆಮಂತ್ರಿಸುತ್ತಿದ್ದೇವೆ ಎಂದರು.

ಈ ಸಂದರ್ಭ ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ಮನೀಶ್, ಶನ್ಮಿತ್ ರೈ, ಶರತ್ ಎನ್.ಎಸ್. ವಿಟ್ಲ ಮೊದಲಾದವರು ಹಾಜರಿದ್ದರು.


ಆ.14ರಂದು ಬೆಳಿಗ್ಗೆ 9.30ರಿಂದ ದರ್ಬೆಯಿಂದ ಬಸ್ ನಿಲ್ದಾಣದವರೆಗೆ ಜಾಥಾ ಹಾಗೂ ರಸ್ತೆ ತಡೆ ನಡೆಯಲಿದೆ.


10 ಗಂಟೆಯಿಂದ 11 ಗಂಟೆಯವರೆಗೆ ಪುತ್ತೂರಿನ ಅಂಗಡಿ ಮಾಲೀಕರು 1 ಗಂಟೆ ಸ್ವಯಂಪ್ರೇರಿತ ಬಂದ್ ನಡೆಸಿ ಸೌಜನ್ಯಾ ಪ್ರಕರಣದ ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ಭಾಗವಹಿಸುವಂತೆ ಕೇಳಿಕೊಳ್ಳಲಾಗಿದೆ.

ವಿಟ್ಲ: ಚಾಲಕನ ನಿಯಂತ್ರಣ ಕಳೆದು ಟಿ.ಟಿ ವಾಹನ ಪಲ್ಟಿ

Posted by Vidyamaana on 2024-01-16 16:20:50 |

Share: | | | | |


ವಿಟ್ಲ: ಚಾಲಕನ ನಿಯಂತ್ರಣ ಕಳೆದು ಟಿ.ಟಿ ವಾಹನ ಪಲ್ಟಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.


ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಇವರೆಲ್ಲ ಉಜಿರೆ ಮೂಲದವರಾಗಿದ್ದು, ಶಬರಿಮಲೆ ತೆರಳಿ ಹಿಂತಿರುಗುತ್ತಿದ್ದರು.

ಮಂಗಳೂರು: SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

Posted by Vidyamaana on 2023-05-05 08:31:45 |

Share: | | | | |


ಮಂಗಳೂರು:  SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು.

ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ  ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು ಹಾಗೂ ಇತರ ನಾಯಕರು ಉಪಸ್ಥಿತರಿದ್ದರು

ಇಂದು ಮತ್ತು ನಾಳೆ ಉಳ್ವಾಲ, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ನಡೆಯುವ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಂ.ಕೆ ಫೈಝಿಯವರು ಭಾಗವಹಿಸಲಿದ್ದಾರೆ.

ಕರ್ನಾಟಕ ಮುಸ್ಲಿಂ ಜಮಾಹತ್ ಹಾಗೂ ಎಸ್ ವೈ ಎಸ್ ಪಡೀಲ್ ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ

Posted by Vidyamaana on 2023-04-02 10:46:05 |

Share: | | | | |


ಕರ್ನಾಟಕ ಮುಸ್ಲಿಂ ಜಮಾಹತ್ ಹಾಗೂ ಎಸ್ ವೈ ಎಸ್ ಪಡೀಲ್ ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ

ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ವೈ ಎಸ್ ಪಡೀಲ್   ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ ಕಾರ್ಯಕ್ರಮವು ಮಾ 31ರಂದು ಪಡೀಲ್ ನಲ್ಲಿ ನಡೆಯಿತ್ತು.  ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ ದುವಾ ನೆರವೇರಿಸಿದರು.



Leave a Comment: