ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಇಂದಿನಿಂದಲೇ ಐದು ಗ್ಯಾರಂಟಿಗಳು ಜಾರಿ: ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

Posted by Vidyamaana on 2023-05-20 08:28:54 |

Share: | | | | |


ಇಂದಿನಿಂದಲೇ ಐದು ಗ್ಯಾರಂಟಿಗಳು ಜಾರಿ: ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ನಾವು ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡುತ್ತೇವೆ ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರುಕಂಠೀರವ ಮೈದಾನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಐದು ಯೋಜನೆಗಳಿಗೆ ಅನುಮತಿ ನೀಡಿ ಜಾರಿಗೆ ತರುತ್ತೇವೆ. ನುಡಿದಂತೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಭಾರತ ಜೋಡೊ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯ್ತು. ರಾಷ್ಟ್ರೀಯ ನಾಯಕರು ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಅವರಿಗೆ ಧನ್ಯವಾದಗಳು. ಸಾಹಿತಿಗಳೂ ಚಿಂತಕರು, ಸಂಘಟನೆಗಳ ನಾಯಕರು ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದರು.

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Posted by Vidyamaana on 2024-06-05 15:08:02 |

Share: | | | | |


ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಬೆಳ್ತಂಗಡಿ, ಜೂ.5: ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಮೇಲೆ ಜೂ.4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

Posted by Vidyamaana on 2024-04-06 13:10:16 |

Share: | | | | |


ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಕಡಬ: ಕಡಬ ತಾಲೂಕಿನ ಕೊಂಬಾರು ಸಮೀಪದ ಚೆರು ಗ್ರಾಮಕ್ಕೆ ಗರುವಾರ ಸಾಯಂಕಾಲ ನಕ್ಸಲರ ತಂಡ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ.

ನಕ್ಸಲರು ಚೆರು ಗ್ರಾಮದ ಮನೆಯೊಂದಕ್ಕೆ ತೆರಳಿ, ಎರಡು ಗಂಟೆಗಳ ಕಾಲ ಅಲ್ಲೇ ಕಾಲ ಕಳೆದಿದ್ದಾರೆ. ನಂತರ ಅದೇ ಮನೆಯಲ್ಲಿ ಊಟ ಮಾಡಿ ಬಳಿಕ ದಿನಸಿ ಸಾಮಗ್ರಿ ಪಡೆದಿರುವ ಮಾಡಿರುವ ಮಾಹಿತಿ ದೊರೆತಿದೆ.

ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯ ಶಿಕ್ಷಕಿ ಅಮಾನತು

Posted by Vidyamaana on 2023-12-29 11:19:52 |

Share: | | | | |


ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯ ಶಿಕ್ಷಕಿ ಅಮಾನತು

ಚಿಕ್ಕಬಳ್ಳಾಪುರ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಸುದ್ದಿಯಾಗಿದ್ದ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅನುಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.ಶಿಕ್ಷಕ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್‌ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿತ್ತು.


ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿದ್ದರು

ಶಿವಮೊಗ್ಗದಲ್ಲಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ

Posted by Vidyamaana on 2023-10-03 18:31:03 |

Share: | | | | |


ಶಿವಮೊಗ್ಗದಲ್ಲಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ

ಶಿವಮೊಗ್ಗ, ಅ.3: ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂಬ ಸುಳ್ಳು ಸುದ್ಧಿ ಹರಡುತ್ತಿದೆ. ಈ ಸುದ್ಧಿ ಫಾರ್ವರ್ಡ್ ಮಾಡಿರುವ ಅಜ್ಗರ್ ಎಂಬಾತನ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಮಾಡಿರುವವರ ವಿರುದ್ಧವೂ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ‌

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!

ರಾಗುಗುಡ್ಡ ಘರ್ಷಣೆ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಕೈಗೊಂಡಿರುವ ಎಸ್ಪಿ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವುದನ್ನು ತಿಳಿಸಿದ್ದಾರೆ. ಪೊಲೀಸ್ ಎನ್ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ. ಸುಳ್ಳು ಸುದ್ಧಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.‌ ಬೇರೆ ರಾಜ್ಯದ, ಬೇರೆ ಜಿಲ್ಲೆಗಳ ವಿಡಿಯೋಗಳನ್ನು ಹರಡಲಾಗುತ್ತಿದೆ. ಅಂತಹವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು. 


ರಾಗಿಗುಡ್ಡದಲ್ಲಿ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗತ್ತೆ. ಅನೇಕರು ಸುಳ್ಳು ವಿಡಿಯೋಗಳನ್ನು ಹರಡುತ್ತಿದ್ದಾರೆ. ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದುಬಂದಿದೆ. ಅಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸುಳ್ಳು ಸುದ್ಧಿ, ವಿಡಿಯೋಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ. 


ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ, 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಸುಳ್ಳು ಸುದ್ಧಿಗಳನ್ನು ನಂಬಬೇಡಿ. ಇನ್ನೂ ಹಲವರನ್ನು ಬಂಧಿಸಲಿದ್ದೆವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಹೊರಗಿನಿಂದ ಬಂದವರು ಯಾರಿದ್ದಾರೆಂದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿದೆ. ಯಾರು ಕಾರಣಕರ್ತರಿದ್ದಾರೆ, ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ. ‌

ಕಾರಿನೊಳಗೆ ಇರಲೇ ಇಲ್ಲ ಆ ಮಹಿಳೆ ಆದ್ರೂ AI ಕ್ಯಾಮೆರಾದಲ್ಲಿ ಸೆರೆ

Posted by Vidyamaana on 2023-11-05 18:32:53 |

Share: | | | | |


ಕಾರಿನೊಳಗೆ ಇರಲೇ ಇಲ್ಲ ಆ ಮಹಿಳೆ ಆದ್ರೂ AI ಕ್ಯಾಮೆರಾದಲ್ಲಿ ಸೆರೆ

ತಿರುವನಂತಪುರ: ಕೇರಳದಲ್ಲೊಂದು ವಿಚಿತ್ರ ಪ್ರಕರಣ ವರದಿಯಾಗಿದೆ. ಸೀಟ್ ಬೆಲ್ಟ್ ಧರಿಸಿಲ್ಲ ಎಂಬ ಕಾರಣಕ್ಕೆ ಎಐ ಚಾಲಿತ ಕ್ಯಾಮೆರಾ ಟ್ರಾಫಿಕ್ ಉಲ್ಲಂಘನೆಯನ್ನು ಪತ್ತೆಹಚ್ಚಿತ್ತು. ಬಳಿಕ ಕಾರು ಮಾಲಕರಿಗೆ ದಂಡಸ ಚಲನ್ ನೀಡಿದಾಗ ಅದರಲ್ಲಿ ಎಐ ಕ್ಯಾಮೆರಾದ ಸೆರೆಹಿಡಿದಿದ್ದ ಫೋಟೋ ನೋಡಿ ಮಾಲಕರು ಗಾಬರಿಗೊಂಡಿದ್ದಾರೆ

ಏಕೆಂದರೆ, ಆ ಸಮುದಲ್ಲಿ ಕಾರಿನಲ್ಲಿ ಇಬ್ಬರೇ ಪ್ರಯಾಣಿಸುತ್ತಿದ್ದರು ಆದರೆ ದಂಡದ ಚಲನ್ ನಲ್ಲಿ ಪ್ರಿಂಟ್ ಆಗಿದ್ದ ಕಾರಿನ ಫೊಟೋದಲ್ಲಿ ಮೂವರಿರುವುದು ಕಂಡುಬಂದಿದೆ.

ಚೆರುವತ್ತೂರಿನ ಕೈತಕ್ಕಾಡ್ ಮೂಲದ ಆದಿತ್ಯನ್ ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ. ಪಯ್ಯನ್ನೂರಿನಲ್ಲಿ ಅಳವಡಿಸಲಾಗಿದ್ದ ಎಐ ಕ್ಯಾಮೆರಾದಲ್ಲಿ ಈ ಮೇಲಿನ ಚಿತ್ರ ಸೆರೆಯಾಗಿದೆ.

ಟ್ರಾಫಿಕ್ ಪೊಲೀಸರು ನೀಡಿರುವ ನೋಟೀಸ್ನಲ್ಲಿರುವ ಚಿತ್ರವು ಕಾರಿನ ಹಿಂಬದಿಯ ಸೀಟಿನಲ್ಲಿ ಇನ್ನೊಬ್ಬ ಮಹಿಳೆಯ ಆಕೃತಿಯನ್ನು ತೋರಿಸುತ್ತದೆ. ಆದರೆ ಅಂತಹ ವ್ಯಕ್ತಿ ಕಾರಿನಲ್ಲಿರಲಿಲ್ಲ ಎಂದು ಆದಿತ್ಯನ್ ಮತ್ತು ಆತನ ಕುಟುಂಬದವರು ವಾದಿಸಿದ್ದಾರೆ. ಹಾಗದರೆ ಆ ಮಹಿಳೆ ಯಾರು ಎಂಬುದು ಇದೀಗ ದೊಡ್ಡ ಪ್ರಶ್ನೆಯಾಗಿದೆ.

ಚಲನ್ ಮೇಲೆ ವಾಹನದಲ್ಲಿ ಇಲ್ಲದವರ ಫೋಟೋ ಮುದ್ರಿಸಿರುವುದು ಮೋಟಾರು ವಾಹನ ಇಲಾಖೆಗೂ ಗೊಂದಲ ಮೂಡಿಸಿದ್ದು ಇದು ತಾಂತ್ರಿಕ ದೋಷದಿಂದ ಆಗಿರುವ ಎಡವಟ್ಟೋ ಅಥವಾ ಇನ್ನಾವುದಾದರೂ ‘ನಿಗೂಢ’ ಶಕ್ತಿಯ ಕೈವಾಡವೋ ಎಂಬ ಬಿಸಿ ಬಿಸಿ ಚರ್ಚೆ ಇದೀಗ ನೆಟ್ಟಿಗರ ವಲಯದಲ್ಲಿ ಜೋರಾಗಿ ನಡೆಯುತ್ತಿದೆ.



Leave a Comment: