ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಬೆಳ್ತಂಗಡಿ ತಾಲೂಕು ಅರೋಗ್ಯ ರಕ್ಷಾ ಸಮಿತಿಗೆ ಆದಿವಾಸಿ ಸಮುದಾಯದ ಶ್ರೀಮತಿ ಸವಿತಾ ಕೊರಗ ನೇಮಕ

Posted by Vidyamaana on 2024-07-06 22:03:35 |

Share: | | | | |


ಬೆಳ್ತಂಗಡಿ ತಾಲೂಕು ಅರೋಗ್ಯ ರಕ್ಷಾ ಸಮಿತಿಗೆ ಆದಿವಾಸಿ ಸಮುದಾಯದ ಶ್ರೀಮತಿ ಸವಿತಾ ಕೊರಗ ನೇಮಕ

ಬೆಳ್ತಂಗಡಿ : ದಕ್ಷಿಣಕನ್ನಡ, ಉಡುಪಿ ಮತ್ತು‌‌ ಕೇರಳದ‌ ಕಾಸರಗೋಡು ಜಿಲ್ಲೆಯ ಮೂಲನಿವಾಸಿಗಳಾದ ಕೊರಗ ಸಮುದಾಯ ಇತ್ತೀಚಿನ ದಿನಗಳಲ್ಲಿ ಅತ್ಯಂತ ವೇಗವಾಗಿ ನಶಿಸಿ ಹೋಗುತ್ತಿರುವ ಭಾರತೀಯ ಸಮುದಾಯಗಳಲ್ಲಿ ಪಟ್ಟಿಯಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಆದಿವಾಸಿ ಸಮುದಾಯವಾಗಿರುವ ಕೊರಗರು ಹೆಚ್ಚಾಗಿ ಅರಣ್ಯದ ಅಂಚಿನಲ್ಲೇ ಬದುಕು ಸಾಗಿಸುತ್ತಿದ್ದವರು.

ಇದೇ ಸಮುದಾಯದ ಶ್ರೀಮತಿ ಸವಿತಾ ಕೊರಗ ಇಂದು ತಾಲೂಕು ಅರೋಗ್ಯ ಸಮಿತಿಗೆ ನಾಮನಿರ್ದೇಶಿತ ವಾಗಿದ್ದರೆ.ಇಂದು ಪಡೆದ ಜವಾಬ್ದಾರಿ ಸಣ್ಣ ಮಟ್ಟದಲ್ಲಿ ಇದ್ದರು ಮುಂದಕ್ಕೆ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು ಬರಬಹುದು.

ಬೆಳ್ತಂಗಡಿ ಯಲ್ಲಿಯೂ ಈ ಸಮುದಾಯದ ಜನರು ಬೆರಳೆಣಿಕೆಯ ಸಂಖ್ಯೆಯಲ್ಲಿ ಇದ್ದಾರೆ. ಕೆಲ ವರ್ಷದ ಹಿಂದೆ ತಾಲೂಕಿನಲ್ಲಿ ಇದ್ದ ಸಮುದಾಯದ ಸಂಘಟನೆಯು ಈಗ ಸಕ್ರಿಯವಾಗಿ ಇಲ್ಲ ಎಂಬುದು ಕೂಡ ನೋವಿನ ಸಂಗತಿ.

ಕಾಡಿನಲ್ಲಿ ಸಿಗುವ ಬೆತ್ತವನ್ನು ಉಪಯೋಗಿಸಿ ಬುಟ್ಟಿಗಳನ್ನು ಹೆಣೆದು, ಅವುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಕೊರಗರು ಅಲೆಮಾರಿ ಜನಾಂಗದಂತೆಯೂ ಗುರುತಿಸಿಕೊಂಡಿದ್ದಾರೆ. ಅಪೌಷ್ಟಿಕತೆ, ಕಡು ಬಡತನ, ಶಿಕ್ಷಣದ ಕೊರತೆ, ಆರೋಗ್ಯ ಮೊದಲಾದ ಸಮಸ್ಯೆಯಿಂದಾಗಿ ಈ ಸಮುದಾಯದಲ್ಲಿ ಮರಣದ ಪ್ರಮಾಣ ಹೆಚ್ಚಾಗಿರುವ ಕಾರಣದಿಂದಾಗಿ, ಈ ಸಮುದಾಯದ ಜನಸಂಖ್ಯೆ ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಕುಸಿದಿದೆ.

ನದಿಗೆ ಹಾರಿ ಆತ್ಮಹತ್ಯೆಗೈದ ಪುತ್ತೂರಿನ ವಿಘ್ನೇಶ್ ಕಾಮತ್

Posted by Vidyamaana on 2023-03-26 10:04:37 |

Share: | | | | |


ನದಿಗೆ ಹಾರಿ ಆತ್ಮಹತ್ಯೆಗೈದ ಪುತ್ತೂರಿನ  ವಿಘ್ನೇಶ್ ಕಾಮತ್

ಪುತ್ತೂರು: ಇಲ್ಲಿನ ಕೋರ್ಟ್ ರೋಡಿನಲ್ಲಿರುವ ಅಂಗಡಿಯೊಂದರ ಮಾಲಕ ದಿವಂಗತ ವಿಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (೩೨) ಅವರು ಭಾನುವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತಹತ್ಯೆಗೈದಿದ್ದಾರೆ.

ಕೆಮ್ಮಿಂಜೆ ನಿವಾಸಿಯಾಗಿರುವ ಇವರು, ಕೋರ್ಟ್ ರೋಡಿನಲ್ಲಿ ಜನರಲ್ ಸ್ಟೋರ್ ನಡೆಸುತ್ತಿದ್ದರು. ಕೆಲವು ದಿನಗಳ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಯತ್ನ ನಡೆಸಿದ್ದರು ಎಂದು ಹೇಳಲಾಗಿದೆ.ನೇತ್ರಾವತಿ ಸೇತುವೆಯ ಬಳಿ ದ್ವಿಚಕ್ರ ಜೂಪಿಟಾರ್ (KA21v3955) ಇದ್ದು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರಾದ ಇಬ್ರಾಹಿಂ, ಮುಹಮ್ಮದ್ ಮಮ್ಮು ನೇತೃತ್ವದ ಯುಕವರ ತಂಡ ನೇತ್ರವತಿ ನದಿಯ ಅಸುಪಾಸು ಹುಡುಕಾಡಿದಾಗ  ನದಿಯಲ್ಲಿ ಮೃತದೇಹಯೊಂದು ನದಿಯಲ್ಲಿ ತೆಲುತೀತು ನಂತರ ಯುವಕರ ತಂಡ ನೀರಿಗೆ  ಇಳಿದು ನೀರಿನಿಂದ ಮೃತ ದೇಹವನ್ನು ಮೇಲಕ್ಕೆತ್ತುವಲ್ಲಿ ಸಫಲರಾಗಿದ್ದಾರು  ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.ಮೃತರು ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.


ಗಾಂಧಿ ಜಯಂತಿ ದಿನ 1 ಗಂಟೆ ಶ್ರಮದಾನ ಮಾಡಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

Posted by Vidyamaana on 2023-09-25 14:38:42 |

Share: | | | | |


ಗಾಂಧಿ ಜಯಂತಿ ದಿನ 1 ಗಂಟೆ ಶ್ರಮದಾನ ಮಾಡಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯ ಅಂಗವಾಗಿ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಸೇವಾ ಕಾರ್ಯಕ್ರಮದಲ್ಲಿ ಎಲ್ಲಾ ಜನರು ಭಾಗವಹಿಸಬೇಕೆಂದು ಅವರು ಒತ್ತಾಯಿಸಿದರು.ಮನ್ ಕಿ ಬಾತ್ ಮತ್ತು ವಂದೇ ಭಾರತ್ ರೈಲುಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವಿಷಯವನ್ನು ಪ್ರಸ್ತಾಪಿಸಿದರು. “ನಿಮ್ಮ ಬೀದಿಯಲ್ಲಿ ಅಥವಾ ನಿಮ್ಮ ನೆರೆಹೊರೆಯಲ್ಲಿ, ಉದ್ಯಾನವನ, ನದಿ, ಸರೋವರ ಅಥವಾ ಇತರ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ನೀವು ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಬಹುದು. ಅಮೃತ ಸರೋವರ ನಿರ್ಮಾಣವಾಗುವ ಎಲ್ಲೆಡೆ ಸ್ವಚ್ಛತೆ ಕಾಪಾಡಬೇಕು” ಎಂದು ಪ್ರಧಾನಿ ಹೇಳಿದರು.


ಆದರೆ.. ಏಕ್ ತಾರೀಖ್ ಏಕ್ ಘಂಟಾ ಏಕ್ ಸಾಥ್ (ಒಂದು ದಿನಾಂಕ ಒಂದು ಗಂಟೆ ಒಟ್ಟಿಗೆ) ಎಂದು ಕರೆಯಲ್ಪಡುವ ಅಭಿಯಾನದ ಭಾಗವಾಗಲು ಅವರು ಬಯಸುತ್ತಾರೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮಾರುಕಟ್ಟೆ ಸ್ಥಳಗಳು, ರೈಲ್ವೆ ಹಳಿಗಳು, ಜಲಮೂಲಗಳು, ಪ್ರವಾಸಿ ಸ್ಥಳಗಳು, ಧಾರ್ಮಿಕ ಸ್ಥಳಗಳು ಮುಂತಾದ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಚಟುವಟಿಕೆಗಳಲ್ಲಿ ಭಾಗವಹಿಸಲು ಎಲ್ಲಾ ವರ್ಗದ ನಾಗರಿಕರನ್ನು ಕೇಳಲಾಗಿದೆ. ಗ್ರಾಮ ಪಂಚಾಯತ್, ನಾಗರಿಕ ವಿಮಾನಯಾನ, ರೈಲ್ವೆ, ಮಾಹಿತಿ ಮತ್ತು ತಂತ್ರಜ್ಞಾನ, ಸರ್ಕಾರಿ ಸಂಸ್ಥೆಗಳು ಸೇರಿದಂತೆ ಸರ್ಕಾರದ ಎಲ್ಲಾವಲಯಗಳು ನಾಗರಿಕರ ನೇತೃತ್ವದ ಸ್ವಚ್ಚತಾ ಕಾರ್ಯಕ್ರಮಗಳಿಗೆ ಅನುಕೂಲ ಮಾಡಿಕೊಡಲಿವೆ ಎಂದು ಅದು ಹೇಳಿದೆ.


ಅಭಿಯಾನಕ್ಕಾಗಿ swachhtahiseva.com ವೆಬ್ಸೈಟ್ ಅನ್ನು ಸಹ ರಚಿಸಲಾಗಿದೆ, ಅಲ್ಲಿ ಎಲ್ಲಾ ಕಾರ್ಯಕ್ರಮಗಳು ಲಭ್ಯವಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್ಜಿಒಗಳು, ಆರ್ಡಬ್ಲ್ಯೂಎಗಳು ಮತ್ತು ಖಾಸಗಿ ಸಂಸ್ಥೆಗಳು ಸಹ ಇಂತಹ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬಹುದು. ಸ್ವಯಂಸೇವಕರು ತಮ್ಮ ಚಟುವಟಿಕೆಗಳ ಫೋಟೋಗಳನ್ನು ತೆಗೆದುಕೊಳ್ಳಬಹುದು ಮತ್ತು ಅವುಗಳನ್ನು ಸೈಟ್ನಲ್ಲಿ ಅಪ್ಲೋಡ್ ಮಾಡಬಹುದು.


ಆದರೆ.. ಈ ಅಭಿಯಾನವನ್ನು ಸಾಮಾಜಿಕ ಮಾಧ್ಯಮಗಳು, ಇನ್ಪುಟ್ಗಳು ಮತ್ತು ಬ್ರಾಂಡ್ ಅಂಬಾಸಿಡರ್ಗಳಂತಹ ಸರ್ಕಾರಿ ಸಂಸ್ಥೆಗಳು ಉತ್ತೇಜಿಸುತ್ತವೆ. ಮನೆಯ ತ್ಯಾಜ್ಯವನ್ನು ಸಂಗ್ರಹಿಸಲು ಬಳಸುವ ಕಸದ ವ್ಯಾನ್ ಗಳು ಈ ಕಾರ್ಯಕ್ರಮವನ್ನು ಉತ್ತೇಜಿಸಲು ಜಾಹೀರಾತುಗಳು ಮತ್ತು ಜಿಂಗಲ್ಸ್ ಗಳನ್ನು ನುಡಿಸುತ್ತವೆ. ಜನರನ್ನುಸಂವೇದನಾಶೀಲಗೊಳಿಸಲು ವಿಶೇಷ ಮೊಬೈಲ್ ಕಾಲರ್ ಟ್ಯೂನ್ ಗಳನ್ನು ಸ್ಥಾಪಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮಧ್ಯೆ.. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಸ್ವಚ್ಛ ಭಾರತ ಅಭಿಯಾನದ ಒಂಬತ್ತನೇ ವಾರ್ಷಿಕೋತ್ಸವವನ್ನು ಅಕ್ಟೋಬರ್ 2 ರಂದು ಆಚರಿಸಲಾಗುವುದು.

ಬಿಯರ್ ರೇಟ್ ಏರಿಕೆ – ಯಾವ ಬ್ರ್ಯಾಂಡಿಗೆ ಎಷ್ಟು ಹೆಚ್ಚಾಯ್ತು?

Posted by Vidyamaana on 2024-02-02 12:12:35 |

Share: | | | | |


ಬಿಯರ್ ರೇಟ್ ಏರಿಕೆ – ಯಾವ ಬ್ರ್ಯಾಂಡಿಗೆ ಎಷ್ಟು ಹೆಚ್ಚಾಯ್ತು?

ಬೆಂಗಳೂರು: ರಾಜ್ಯ ಬಜೆಟ್​ಗೂ ಮೊದಲೇ ಸರ್ಕಾರ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆ ಬಿಗ್ ಶಾಕ್ ನೀಡಿದ್ದು, ಮತ್ತೆ ಬಿಯರ್​ ಬೆಲೆ ಏರಿಕೆಯಾಗಿದೆ.


ಹೌದು, ಸರ್ಕಾರ ಬಿಯ‌ರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.185 ರಿಂದ ಶೇ. 195 ಕ್ಕೆ ಹೆಚ್ಚಳ ಮಾಡಿರುವುದರಿಂದ ಬಿಯರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಗುರುವಾರದಿಂದ (ಫೆ.1) ಪ್ರತಿ ಬಾಟಲ್ ಗೆ 5 ರಿಂದ 12 ರೂ. ವರೆಗೆ ಹೆಚ್ಚಳವಾಗಿದೆ.


ಬ್ರಾಂಡ್‌ಗಳ ಆಧಾರದ ಮೇಲೆ ದರ ಏರಿಕೆಯಾಗಲಿದೆ. ಸಾಮಾನ್ಯ ಬ್ರಾಂಡ್ ಗಳಿಂದ ಪ್ರೀಮಿಯಂ ಬ್ರಾಂಡ್ ಗಳವರೆಗೆ ಎಲ್ಲಾ ಬಗೆಯ ಬಿಯರ್ ಗಳ ದರದಲ್ಲಿ ಹೆಚ್ಚಳವಾಗಲಿದೆ.


ಬಿಯರ್ ಪ್ರಿಯರಿಗೆ ಹೊಸ ರೇಟ್


1. KF ಪ್ರಿಮಿಯಂ

ಹಿಂದಿನ ದರ ₹ 175

ಹೊಸ ದರ ₹185


2. ಕೆಎಫ್ ಸ್ಟ್ರಾಂಗ್

ಹಿಂದಿನ ದರ ₹ 180

ಹೊಸ ದರ ₹190


3. ಟ್ಯೂಬರ್ಗ್

ಹಿಂದಿನ ದರ ₹ 180

ಹೊಸ ದರ ₹190


4. ಬಡ್ ವೈಸರ್

ಹಿಂದಿನ ದರ ₹230

ಹೊಸ ದರ ₹240


5. ಕಾರ್ಲ್ಸ್ ಬರ್ಗ್

ಹಿಂದಿನ ದರ ₹230

ಹೊಸ ದರ ₹240


6. UB ಸ್ಟ್ರಾಂಗ್

ಹಿಂದಿನ ದರ ₹140

ಹೊಸ ದರ ₹150


7. KF ಸ್ಟಾರ್ಮ್

ಹಿಂದಿನ ದರ ₹175

ಹೊಸ‌ ದರ ₹195


8. ಹೆನಿಕೇನ್

ಹಿಂದಿನ ದರ ₹225

ಹೊಸ ದರ ₹240


9. ಆಯಮ್‌ಸ್ಟೆಲ್

ಹಿಂದಿನ ದರ ₹225

ಹೊಸ ದರ ₹240


10. ಪವರ್ ಕೂಲ್

ಹಿಂದಿನ ದರ ₹110

ಹೊಸ ದರ ₹130


ಮೇ 2023 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಚುನಾವಣೆ ಗೆದ್ದ ನಂತರ ಜುಲೈ 7 ರಂದು ಮಂಡಿಸಿದ ಮೊದಲ ಬಜೆಟ್ ನಲ್ಲಿ ಸಿದ್ದರಾಮಯ್ಯ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು ಹೆಚ್ಚಿಸಿತ್ತು. ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇದರ ನಂತರ ಇತರ ಮದ್ಯಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಬಹುದಾದ ಸಾಧ್ಯತೆಯಿದೆ

ಸಿದ್ದರಾಮಯ್ಯರವರ ಆಪ್ತ ಉಡುಪಿ ಜಿಲ್ಲೆಯ ಪ್ರಭಾವಿ ನಾಯಕ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಗೆ ಸೇರ್ಪಡೆ

Posted by Vidyamaana on 2024-03-12 21:29:40 |

Share: | | | | |


ಸಿದ್ದರಾಮಯ್ಯರವರ ಆಪ್ತ  ಉಡುಪಿ ಜಿಲ್ಲೆಯ ಪ್ರಭಾವಿ ನಾಯಕ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಗೆ ಸೇರ್ಪಡೆ

ಬೆಂಗಳೂರು, ಮಾ.12: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಉಡುಪಿ ಜಿಲ್ಲೆಯ ಪ್ರಭಾವಿ ನಾಯಕ ಕೆ. ಜಯಪ್ರಕಾಶ ಹೆಗ್ಡೆಯವರು ಕಡೆಗೂ ಕಾಂಗ್ರೆಸ್ ಪಕ್ಷವನ್ನು ಅಧಿಕೃತ ಸೇರ್ಪಡೆಯಾಗಿದ್ದಾರೆ. 


ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ನಾಯಕರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಹಿರಿಯ ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್ , ಉಡುಪಿ ಮತ್ತು ಚಿಕ್ಕಮಗಳೂರಿನ ಹಲವು ನಾಯಕರು ಪಾಲ್ಗೊಂಡಿದ್ದರು.ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ನೇರ ನಡೆನುಡಿಯ ಸರಳ ರಾಜಕಾರಣಿ ಜಯಪ್ರಕಾಶ್‌ ಹೆಗ್ಡೆ ಈ ಹಿಂದೆ ಆಗಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯಲ್ಲಿ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. 


ಆನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿ ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ನೀಡಿತ್ತು. ಅವರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದ್ದರು. ಹಿಂದೆ ಜನತಾ ಪರಿವಾರದಲ್ಲಿದ್ದಾಗ ಜಯಪ್ರಕಾಶ್ ಹೆಗ್ಡೆ, ಸಿದ್ದರಾಮಯ್ಯ ಆಪ್ತರಾಗಿದ್ದರು. ಇದೀಗ ಸಿದ್ದರಾಮಯ್ಯ ಮತ್ತು ಡಿಕೆಶಿ ಸಾರಥ್ಯದಲ್ಲಿ ಮತ್ತೆ ಕಾಂಗ್ರೆಸ್ ಪಾಳಯ ಸೇರಿದ್ದು ಉಡುಪಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ ಮತ್ತೊಮ್ಮೆ ಲೋಕಸಭೆ ಅಭ್ಯರ್ಥಿಯಾಗೋದು ಖಚಿತವಾಗಿದೆ.

ಮನೆಯಲ್ಲಿ ಅಗ್ನಿ ದುರಂತ; ಉಡುಪಿಯ ಶೆಟ್ಟಿ ಬಾರ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ ಮೃತ್ಯು

Posted by Vidyamaana on 2024-07-15 15:15:15 |

Share: | | | | |


ಮನೆಯಲ್ಲಿ ಅಗ್ನಿ ದುರಂತ; ಉಡುಪಿಯ ಶೆಟ್ಟಿ ಬಾರ್  ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ ಮೃತ್ಯು

ಉಡುಪಿ, ಜುಲೈ.15: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ (Fire) ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ (Death). ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ಅಂಬಲಪಾಡಿಯ ಶೆಟ್ಟಿ ಬಾರ್ - ರೆಸ್ಟೋರೆಂಟ್‌ನ ಮಾಲೀಕರಾಗಿರುವ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ ಹೆಂಡತಿಯನ್ನು ಅಗ್ನಿಶಾಮಕ ಸಿಬ್ಬಂದಿ ವಿನಾಯಕ್ ರಕ್ಷಿಸಿದ್ದರು. ಘಟನೆಯಲ್ಲಿ ರಮಾನಂದ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿಗೆ ಗಂಭೀರ ಗಾಯಗಳಾಗಿದ್ದವು. ಇಬ್ಬರನ್ನೂ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

Recent News


Leave a Comment: