ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-03-27 10:20:14 |

Share: | | | | |


ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ  ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾವು ಹೇಮನಾಥ್ ಶೆಟ್ಟಿ ಮನೆಗೆ ಅಶೋಕ್ ರೈ ಭೇಟಿ

Posted by Vidyamaana on 2023-04-17 19:21:28 |

Share: | | | | |


ಕಾವು ಹೇಮನಾಥ್ ಶೆಟ್ಟಿ ಮನೆಗೆ ಅಶೋಕ್ ರೈ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಕೆಪಿಸಿಸಿ ಸಂಯೋಜಕ, ಪುತ್ತೂರಿನ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಕಾವು ಹೇಮನಾಥ್ ಶೆಟ್ಟಿಯವರ ಮನೆಗೆ ಭೇಟಿನೀಡಿದರು.ಎ 17 ರಂದು  ರಾತ್ರಿ ಹೇಮನಾಥ್ ಶೆಟ್ಟಿಯವರ ಕಾವು ನಿವಾಸಕ್ಕೆ ಭೇಟಿ ನೀಡಿದ ಅಶೋಕ್ ರೈಯವರು, ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷ  ಜಯಶಾಲಿಯಗಳು ಚುನಾವಣೆಯಲ್ಲಿ ತಮಗೆ ಬೆಂಬಲ ನೀಡಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಜಯರಾಮ ರೈ, ಅನಿತಾ ಹೇಮನಾಥ್ ಶೆಟ್ಟಿ, ಹನೀಫ್ ಬಗ್ಗುಮೂಲೆ, ಲ್ಯಾನ್ಸಿ ಮಸ್ಕರೇನಸ್, ಕೆಸಿ ಅಶೋಕ್ ಶೆಟ್ಟಿ, ರಹಿಮಾನ್ ಸಂಪ್ಯ, ದಿವ್ಯನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಆಯಿಷಾ ಶಹಿಮ ನಿಧನ

Posted by Vidyamaana on 2024-03-20 15:57:15 |

Share: | | | | |


ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಆಯಿಷಾ ಶಹಿಮ ನಿಧನ

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.

ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

Posted by Vidyamaana on 2024-05-27 21:31:18 |

Share: | | | | |


ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರ ನಗರದ ಡೊಂಗರಕೇರಿಯ ಕೆನರಾ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ ಓರ್ವ ನುರಿತ ರಾಜಕಾರಣಿ. ಅವರ ಮಾತುಗಳು ಕೇಳಿದ್ರೆ ಅವರು ಬಾಲ್ಯದಲ್ಲಿ ಸ್ವಯಂ ಸೇವಕ ಆಗಿರಬೇಕು ಅನಿಸುತ್ತದೆ. ಡಾ.ಧನಂಜಯ ಸರ್ಜಿ ಹೊಟ್ಟೆ ಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ. ಅವರು ಮಾಡಿರುವ ಸೇವೆಯ ಕಾರಣಕ್ಕೆ ಜನರು ಅವರನ್ನು ಗುರುತಿಸಿದ್ದಾರೆ ಎಂದರು.

ಮಲೇಷ್ಯಾದಲ್ಲಿ ಎರಡು ಮಿಲಿಟರಿ ಹೆಲಿಕಾಪ್ಟ‌ರ್ ಪತನಗೊಂಡು 10 ಮಂದಿ ಸಾವು! ವಿಡಿಯೋ ವೈರಲ್

Posted by Vidyamaana on 2024-04-23 12:13:34 |

Share: | | | | |


ಮಲೇಷ್ಯಾದಲ್ಲಿ ಎರಡು ಮಿಲಿಟರಿ ಹೆಲಿಕಾಪ್ಟ‌ರ್ ಪತನಗೊಂಡು 10 ಮಂದಿ ಸಾವು! ವಿಡಿಯೋ ವೈರಲ್

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪೆರಾಕ್ ನ ಲುಮುಟ್ ನಲ್ಲಿ ಮಂಗಳವಾರ ನಡೆದಿದೆ.ಫ್ರೀ ಮಲೇಷ್ಯಾ ಟುಡೇ ವರದಿಯ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಮತ್ತು ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಅವರ ಸಾವುಗಳನ್ನು ದೃಢಪಡಿಸಿದ್ದಾರೆ ಎಂದು ಹೇಳಿದರು.

ರೈಲು ಡಿಕ್ಕಿ ಹೊಡೆದು ಕಾರ್ಮಿಕ ಹರಿಶ್ಚಂದ್ರ ಮೃತ್ಯು

Posted by Vidyamaana on 2024-02-05 12:35:09 |

Share: | | | | |


ರೈಲು ಡಿಕ್ಕಿ ಹೊಡೆದು ಕಾರ್ಮಿಕ ಹರಿಶ್ಚಂದ್ರ ಮೃತ್ಯು

ಬಂಟ್ವಾಳ : ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ.


ಮೂಲತಃ ಮಡಂತ್ಯಾರು ಪಣಕಜೆ ನಿವಾಸಿ, ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು ದಾಸರಗುಡ್ಡೆಯಲ್ಲಿ ವಾಸವಾಗಿರುವ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ.ಕೂಲಿ ಕಾರ್ಮಿಕರಾಗಿರುವ ಹರಿಶ್ಚಂದ್ರ ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದು, ರೈಲ್ವೆ ಹಳಿಯನ್ನು ದಾಟುವ ಸಂದರ್ಭ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರಬೇಕೆಂದು ಸ್ಥಳೀಯರು ತಿಳಿಸಿದ್ದಾರೆ. ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಂಟ್ವಾಳ ಠಾಣಾ ಸಹಾಯಕ ಉಪ ನಿರೀಕ್ಷಕ ದೇವಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Recent News


Leave a Comment: