ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಕಡಬ ತಿಮರಡ್ಡಿ ನಿವಾಸಿ ಅಝರ್ ಆತ್ಮಹತ್ಯೆ

Posted by Vidyamaana on 2024-07-21 06:51:40 |

Share: | | | | |


ಕಡಬ ತಿಮರಡ್ಡಿ ನಿವಾಸಿ ಅಝರ್ ಆತ್ಮಹತ್ಯೆ

ಕಡಬ, ಜು.21. ಜೀವನದಲ್ಲಿ ಜಿಗುಪ್ಪೆಗೊಂಡು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ.

ಕುಡಿದು ತೇಲಾಡಿದ ಉರ್ಫಿ ಜಾವೇದ್‌; ವಿಡಿಯೊ ವೈರಲ್

Posted by Vidyamaana on 2024-07-17 16:19:56 |

Share: | | | | |


ಕುಡಿದು ತೇಲಾಡಿದ ಉರ್ಫಿ ಜಾವೇದ್‌; ವಿಡಿಯೊ ವೈರಲ್

ಬೆಂಗಳೂರು : ನಟಿ ಉರ್ಫಿ ಜಾವೇದ್ (Urfi Javed) ಮತ್ತೆ ಕುಡಿದು ತೇಲಾಡಿರುವ ವಿಡಿಯೊ ವೈರಲ್‌ ಆಗಿದೆ. ಮೂರನೇ ಬಾರಿಗೆ ಉರ್ಫಿ ಈ ರೀತಿ ಕಂಡು ಬಂದಿದ್ದಾರೆ. ಕಾರಿನ ಬಳಿ ಹೋಗಲಾರದೇ ಸ್ನೇಹಿತರ ಸಹಾಯದಿಂದ ನಟಿ ಹೋಗುವುದು ಕಂಡು ಬಂತು. ಹಳದಿ ಬಣ್ಣದ ಮಿನಿ ಡ್ರೆಸ್ ಧರಿಸಿದ್ದರು ಉರ್ಫಿ ಪಬ್‌ನಿಂದ ಹೊರಬಂದ ತಕ್ಷಣ, ಪಾಪರಾಜಿಗಳು ಮತ್ತು ಸ್ಥಳೀಯರು ಉರ್ಫಿಯನ್ನು ಗುಂಪುಗೂಡಿದರು. ಕಾರಿನವರೆಗೆ ನಡೆಯಲು ಪ್ರಯಾಸಪಡುತ್ತಿದ್ದಾಗ, ಅವರ ಸಹೋದರಿ ಉರ್ಫಿಯನ್ನು ಬಿಗಿಯಾಗಿ ಹಿಡಿದುಕೊಂಡು ಜನರಿಗೆ ದಾರಿ ಮಾಡಿಕೊಡುವಂತೆ ಕೇಳುತ್ತಿದ್ದರು. ತುಂಬ ಕುಡಿದ್ದಿದ್ದೇನೆ ಎಂದು ಉರ್ಫಿ ಕೂಡ ಹೋಗಲು ದಾರಿ ಮಾಡಿಕೊಂಡಿ ಎಂದು ವಿನಂತಿಸಿದ್ದಾರೆ.

ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Posted by Vidyamaana on 2024-04-17 09:00:06 |

Share: | | | | |


ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

ದುಬೈ: ಕಳೆದ ಕೆಲ ದಿನಗಳಿಂದ ದುಬೈಯಲ್ಲಿ ಮಳೆಯಾಗುತ್ತಿದ್ದು ಮಂಗಳವಾರ ಸುರಿದ ಧಾರಾಕಾರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಮಂಗಳವಾರ ಸುರಿದ ಬಾರಿ ಮಳೆಯಿಂದ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಪ್ರವಾಹದ ಪರಿಸ್ಥಿತಿ ನಿರ್ಮಾಣ ವಾಗಿದೆ ಪರಿಣಾಮ ಕೆಲ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಯಿತು ಜೊತೆಗೆ ದುಬೈ ವಿಮಾನ ನಿಲ್ದಾಣಕ್ಕೆ ಬರಬೇಕಾಗಿದ್ದ ಕೆಲ ವಿಮಾನಗಳ ಮಾರ್ಗಗಳನ್ನು ಬದಲಾಯಿಸಲಾಯಿತು.

ಅಂಚೆ ಮತದಾನ: ದ.ಕ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟ ಮುನ್ನಡೆ

Posted by Vidyamaana on 2024-06-04 08:30:13 |

Share: | | | | |


ಅಂಚೆ ಮತದಾನ: ದ.ಕ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟ ಮುನ್ನಡೆ

ಮಂಗಳೂರು: ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ದ.ಕ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

ಹಿಂದು ಯುವಕರ ಮೇಲೆ ಪೊಲೀಸ್ ದೌರ್ಜನ್ಯ : ಎಲ್ಲರು ಬಂದ್ರೂ.. ಬಿಜೆಪಿ ರಾಜ್ಯಾಧ್ಯಕ್ಷರು ಮಾತ್ರ ಬರ್ಲೇ ಇಲ್ಲ..

Posted by Vidyamaana on 2023-05-18 07:53:11 |

Share: | | | | |


ಹಿಂದು ಯುವಕರ ಮೇಲೆ ಪೊಲೀಸ್ ದೌರ್ಜನ್ಯ : ಎಲ್ಲರು ಬಂದ್ರೂ.. ಬಿಜೆಪಿ ರಾಜ್ಯಾಧ್ಯಕ್ಷರು ಮಾತ್ರ ಬರ್ಲೇ ಇಲ್ಲ..

ಪುತ್ತೂರು: ನಗರದಲ್ಲಿ ಬಿಜೆಪಿ ನಾಯಕರಿಬ್ಬರ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ ಯುವಕರ ಮೇಲೆ ಡಿವೈಎಸ್.ಪಿ. ನೇತೃತ್ವದಲ್ಲಿ ದೌರ್ಜನ್ಯ ನಡೆದಿದೆ ಎನ್ನುವ ಆರೋಪಗಳು ಇದೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.

ಈ ನಡುವೆ ಪುತ್ತೂರಿನಲ್ಲಿರುವ ಡಿವೈಎಸ್.ಪಿ ಕಚೇರಿಯಲ್ಲಿದ್ದ ಹಿಂದು ಯುವಕರನ್ನು ರಾತೋರಾತ್ರಿ ಅರುಣ್ ಪುತ್ತಿಲ ಹೋಗಿ ಬಿಡಿಸಿಕೊಂಡು ಬಂದಿರುವುದು ಮತ್ತು ಈ ಸಂದರ್ಭದಲ್ಲಿ ಯಾರೋ ಮಾಡಿರುವ ವಿಡಿಯೋದ ಮೂಲಕ ಆ ಯುವಕರ ಮೇಲೆ ಪೊಲೀಸರು ಹಿಗ್ಗಾಮುಗ್ಗ ಥಳಿಸಿರುವ ವಿಚಾರ ಬೆಳಕಿಗೆ ಬಂದಿರುವುದು ಪುತ್ತೂರು ಮಾತ್ರವಲ್ಲದೇ ರಾಜ್ಯಾದ್ಯಂತ ಹಿಂದು ಸಂಘಟನೆ ಕಾರ್ಯಕರ್ತರಲ್ಲಿ ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೇಳುವಂತೆ ಮಾಡಿದೆ.

ಇದಕ್ಕೆ ಕಾರಣವೇನೆಂದ್ರ ಬಿಜೆಪಿ ಪಕ್ಷದ ಕೆಲ ಪ್ರಮುಖ ನಾಯಕರೇ ತಮ್ಮದೇ ಪಕ್ಷದ ಕಾರ್ಯಕರ್ತರಿಗೆ ಪೊಲೀಸರ ಮೇಲೆ ಒತ್ತಡ ಹೇರಿ ‘ಲಾಠಿ’ ರುಚಿ ತೋರಿಸಿದ್ದಾರೆ ಎಂಬ ವಿಷಯ ಇದೀಗ ಗುಟ್ಟಾಗಿ ಏನೂ ಉಳಿದಿಲ್ಲ. ಆದರೆ ಇದೀಗ ಪೊಲೀಸರ ದೌರ್ಜನ್ಯ ಬೆಳಕಿಗೆ ಬರುತ್ತಿರುವಂತೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಯುವಕರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸ್ಥಳೀಯ ಬಿಜೆಪಿ ನಾಯಕ ಕಿಶೋರ್ ಬೊಟ್ಯಾಡಿ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಮುರಳಿಕೃಷ್ಣ ಹಸಂತಡ್ಕ ಮೊದಲಾದವರು ಬಂದು ಭೇಟಿಯಾಗಿ ಸಾಂತ್ವನ ಹೇಳುತ್ತಿದ್ದಾರೆ. 

ಆದರೆ ವಿಪರ್ಯಾಸವೆಂದರೆ ತಮ್ಮದೇ ಪಕ್ಷದ ಕಾರ್ಯಕರ್ತರು ಪೊಲೀಸ್ ಲಾಠಿ ಏಟು ತಿಂದು ಆಸ್ಪತ್ರೆಯಲ್ಲಿ ಮಲಗಿದ್ದರೂ ಮಾಜಿ ಶಾಸಕ , ಬಿಜೆಪಿ ಅಭ್ಯರ್ಥಿ ಸಹಿತ ಪುತ್ತೂರಿನ ಬಿಜೆಪಿ ನಾಯಕರು ಇನ್ನೂ ಅತ್ತ ಸುಳಿಯದಿರುವುದು ಈ ಭಾಗದ ಕಮಲ ಕಾರ್ಯಕರ್ತರಲ್ಲಿ ಸಂಶಯ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ವಿಶೇಷವೆಂದರೆ ಜಿಲ್ಲೆಯ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ  ಅವರು ಕೇವಲ ಒಂದು ಲೈನಿನ ಹೇಳಿಕೆ ಮೂಲಕ ಈ ಘಟನೆಯನ್ನು ಖಂಡಿಸಿರುವುದು ಮತ್ತು ಇದುವರೆಗೂ ಪುತ್ತೂರಿಗೆ ಭೇಟಿ ನೀಡದೇ ಇರುವುದು ಇನ್ನಷ್ಟು ಸಂದೇಹಗಳಿಗೆ ಕಾರಣವಾಗಿದೆ.

ಒಟ್ಟಿನಲ್ಲಿ ಪುತ್ತೂರು ಬಿಜೆಪಿ ಈ ಬಾರಿ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದರೂ ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿರುವ ಈ ಭಾಗದ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದು ಕಾರ್ಯಕರ್ತರು ತಮ್ಮ ಪಕ್ಷದ ಮೇಲಿನ ‘ಆಶೆ’ಯನ್ನೇ ತೊರೆದು ತಮ್ಮ ಪಕ್ಷದ ಮುಖಂಡರ ನಿರ್ಲಕ್ಷ್ಯಕ್ಕೆ ತಕ್ಕ ಪಾಠ ಕಲಿಸಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.ಅಂದು, ಪ್ರವೀಣ್ ನೆಟ್ಟಾರು ಕೊಲೆಯಾದ ಸಂದರ್ಭದಲ್ಲಿ ಇಲ್ಲಿನ ಬಿಜೆಪಿ ಮುಖಂಡರು ತೋರಿದ ನಿರ್ಲಕ್ಷ್ಯಕ್ಕೆ ಬಳಿಕ ಅವರೆಲ್ಲಾ ಎಂತಹ ಬೆಲೆ ತೆತ್ತಿದ್ದಾರೆ ಎಂಬುದು ಗೊತ್ತಿದ್ದರೂ ಈ ಬಾರಿ ಪೊಲೀಸ್ ದೌರ್ಜನ್ಯ ಪ್ರಕರಣ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದ್ದರೂ ಕಾಟಾಚಾರಕ್ಕಾದರೂ ಸ್ಥಳೀಯ ಮತ್ತು ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡರು ಕಾರ್ಯಕರ್ತರ ನೋವನ್ನು ಆಲಿಸಲು ಬರದೇ ಇರುವುದು ಎಷ್ಟು ಸರಿ ಎಂಬುದು ಎಲ್ಲರ ಪ್ರಶ್ನೆಯಾಗಿದೆ.

ರಾಧಾಸ್ ಜವಳಿ ಮಳಿಗೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ಆಹ್ವಾನ

Posted by Vidyamaana on 2024-02-20 12:56:38 |

Share: | | | | |


ರಾಧಾಸ್ ಜವಳಿ ಮಳಿಗೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ಆಹ್ವಾನ

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಪ್ರತಿಷ್ಠಿತ ಜವಳಿ ಮಳಿಗೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.

ರಾಧಾಸ್ ಸಿಲ್ಕ್ಸ್, ಟೆಕ್ಸ್ ಟೈಲ್, ರೆಡಿಮೇಡ್ ಸಂಸ್ಥೆಗೆ ಬಿಲ್ಲಿಂಗ್, ಸೇಲ್ಸ್ ಹಾಗೂ ಟೈಲರ್ ಬೇಕಾಗಿದ್ದಾರೆ. ಅನುಭವಸ್ಥ ಹಾಗೂ ಸ್ಥಳೀಯರಿಗೆ ಆದ್ಯತೆ. ಉತ್ತಮ ವೇತನ ನೀಡಲಾಗುವುದು. ಆಸಕ್ತರು ಸಂಸ್ಥೆಯ ಕಚೇರಿಗೆ ಭೇಟಿ ನೀಡುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Recent News


Leave a Comment: