ಉಳಾಯಿಬೆಟ್ಟು ದರೋಡೆ ಪ್ರಕರಣ ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ, ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಸುದ್ದಿಗಳು News

Posted by vidyamaana on 2024-07-05 07:31:37 |

Share: | | | | |


ಉಳಾಯಿಬೆಟ್ಟು ದರೋಡೆ ಪ್ರಕರಣ  ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ,  ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್‌ನಿಂದ ವಿನೋಜ್ (38), ತ್ರಿಶೂರ್‌ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್‌ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.

ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.


ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದು, ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ,ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮೀಷನರ್ ಹೇಳಿದ್ದಾರೆ.ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡ ಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ.

ಮೊದಲೇ ಕೇಸ್ ಇತ್ತು

ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದ್ದರೆ, ಜಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 Share: | | | | |


ಸೈಬರ್ ವಂಚಕರಿಂದ ಪ್ರಾಧ್ಯಾಪಕರಿಗೆ ಪಂಗನಾಮ!

Posted by Vidyamaana on 2024-01-31 15:20:24 |

Share: | | | | |


ಸೈಬರ್ ವಂಚಕರಿಂದ ಪ್ರಾಧ್ಯಾಪಕರಿಗೆ ಪಂಗನಾಮ!

ಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಎಂ.ಶಂಕರ್ ಸೈಬರ್ ವಂಚಕರನ್ನು ನಂಬಿ ಮೋಸ ಹೋಗಿದ್ದಾರೆ. ಪೇಸ್‍ಬುಕ್ ಖಾತೆಯಲ್ಲಿದ್ದ ಲಿಂಕ್‍ನ್ನು ತೆರೆದು ಕ್ರೆಡಿಟ್ ಕಾರ್ಡ್‍ಗೆ ಅಪ್ಲೈ ಮಾಡಿದ್ದಾರೆ.ಟ್ಯಾಕ್ಸ್ ಮತ್ತು ಬ್ಯಾಂಕಿನ ಇತರೆ ಫೀಗಳೆಂದು 40,776 ರೂಪಾಯಿಗಳನ್ನು ಆನ್‍ಲೈನ್‍ನಲ್ಲಿ ಪಡೆದು ನಂತರ ಕ್ರೆಡಿಟ್ ಕಾರ್ಡ್ ನೀಡದೆ, ಹಣವನ್ನು ವಾಪಸ್ಸು ನೀಡದೆ, ಪ್ರಾಧ್ಯಾಪಕರಿಗೆ ಸೈಬರ್ ವಂಚಕರು ಪಂಗನಾಮ ಹಾಕಿದ್ದಾರೆ. ಇದರಿಂದ ಪ್ರಾಧ್ಯಾಪಕರಿಂದ ಶಂಕರ್ ಎಂ, ಚಿಕ್ಕಬಳ್ಳಾಪುರದ ಸಿಇಎನ್ ಪೊಲಸ್​ ಠಾಣೆಯಲ್ಲಿ ಐಪಿಸಿ ಕಲಂ 419, 420 ಸೇರಿದಂತೆ ಐ.ಟಿ.ಆಕ್ಟ್ 66ಡಿ ರಡಿ ದೂರು ದಾಖಲಿಸಿದ್ದಾರೆ.

ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಹತ್ಯೆ

Posted by Vidyamaana on 2024-02-25 18:23:41 |

Share: | | | | |


ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಹತ್ಯೆ

ಚೆನ್ನೈ: ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಮೇಲೆ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಚೆನ್ನೈನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.


ಹಲ್ಲೆಗೊಳಗಾಗಿ ಮೃತಪಟ್ಟಿರುವ ಯುವಕನನ್ನು ಪ್ರವೀಣ್(26) ಎಂದು ಗುರುತಿಸಲಾಗಿದೆ. ಈತ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ನಗರದ ಪಲ್ಲಿಕರಣೈ ಬಳಿ ಶನಿವಾರ ಈ ಘಟನೆ ನಡೆದಿದೆ.

ನಾಲ್ಕು ತಿಂಗಳ ಹಿಂದಷ್ಟೇ ಪ್ರವೀಣ್‌ ಪ್ರೀತಿಸಿದ ಯುವತಿ ಜೊತೆ ವಿವಾಹವಾಗಿದ್ದ. ಯುವತಿ ಶರ್ಮಿಳಾ ಅನ್ಯ ಜಾತಿಯವಳಾಗಿದ್ದು, ಮನೆಯವರ ವಿರೋಧದ ನಡುವೆಯೂ ವಿವಾಹವಾಗಿದ್ದರು.

ಶನಿವಾರ(ಫೆ.24 ರಂದು‌  )ಪ್ರವೀಣ್ ಆಹಾರ ತರಲು ಹೊಟೇಲ್‌ ಗೆ ತೆರಳಿದ್ದ, ಈ ವೇಳೆ ಶರ್ಮಿಳಾ ಅವರ ಸಹೋದರ ದಿನೇಶ್‌ ಹಾಗೂ ಇತರ ನಾಲ್ವರು ಆರೋಪಿಗಳು ಪ್ರವೀಣ್‌ ನನ್ನು ಸುತ್ತುವರೆದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಈ ಸಂಬಂಧ ಪೊಲೀಸರು ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಿ, ಐವರು ಆರೋಪಿಗಳಾದ ಸ್ಟೀಫನ್ ಕುಮಾರ್, ಜೋತಿಲಿಂಗಂ, ಶ್ರೀರಾಮ್, ಅಶೋಕ್, ವಿಷ್ಣು ರಾಜ್ ಮತ್ತು ದಿನೇಶ್ ನನ್ನು ಬಂಧಿಸಲಾಗಿದೆ.

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

Posted by Vidyamaana on 2024-04-15 21:29:18 |

Share: | | | | |


ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಪುತ್ತೂರು:  ಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಉಜಿರೆಯಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷದಿಂದ ನ್ಯಾಯ ಸಿಗಲಿಲ್ಲ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಬೇಕೆಂದು ಅಭಿಯಾನ ಮಾಡಲಿದ್ದೇವೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ನೋಟ ಮತ ಪತ್ರ ಬಿಡುಗಡೆಗೊಳಿಸಲಾಯಿತು.

ನಾವು ಯಾವುದೇ ಪಕ್ಷವನ್ನು ದೂಷಣೆ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷ ಸೋಲಿಸಲು ಮತ್ತು ಯಾರನ್ನೋ ತೇಜೋವಧೆ ಮಾಡು ನೋಟ ಅಭಿಯಾನ ಮಾಡುತ್ತಿಲ್ಲ. ಧರ್ಮದ ಸತ್ಯದ ಚುನಾವಣೆಯಾಗಿ ನೋಟಾ ಅಭಿಯಾನ ಮಾಡಲಿದ್ದೇವೆ. ನಮಗೆ ಮೇಲಿನವರು ಯಾರು ಅರ್ಹರಲ್ಲ ಎಂಬ ಉದ್ದೇಶದಿಂದ ನೋಟಾ ಅಭಿಯಾನ ಮಾಡುತ್ತಿದ್ದೇವೆ. ೧೨ ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಹಲವು ಕೇಸು ಹಾಕಿದ್ದಾರೆ. ಇಲ್ಲಿ ಶಾಶಾಂಗ ಸತ್ತಿದೆ. ಹಾಗಾಗಿ ನಾವು ನೋಟಾ ಕ್ಕೆ ಮತ ಚಲಾಯಿಸಲಿದ್ದೇವೆ. ನಮಗೆ ಸುಮಾರು ಒಂದೂವರೆಯಿಂದ ಎರಡು ಲಕ್ಷ ನೋಟಾ ಮತ ಬರುವ ನಿರೀಕ್ಷೆಯಿದೆ ಎಂದರು. 

ನಮ್ಮ ಶಾಸಕರ ಇಂದಿನ ದಿನಚರಿ

Posted by Vidyamaana on 2023-05-30 23:13:04 |

Share: | | | | |


ನಮ್ಮ ಶಾಸಕರ ಇಂದಿನ ದಿನಚರಿ

ಪುತ್ತೂರು: ರಾಜ್ಯಾದ್ಯಂತ ಮೇ 31 ಅಂದರೆ ಇಂದು ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವ ನಡೆಯಲಿದ್ದು, ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವವು ಬೆಳಿಗ್ಗೆ 10 ಗಂಟೆಗೆ ಬೊಳುವಾರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಅವರು ಚಾಲನೆ ನೀಡಲಿದ್ದಾರೆ.

ಉಳಿದಂತೆ ಶಾಸಕರ ದಿನಚರಿ (ಮೇ 31) ಈ ರೀತಿ ಇದೆ -

*ಬೆಳಿಗ್ಗೆ 9.30ಕ್ಕೆ ಕೆಯ್ಯೂರು ಕೆಪಿಎಸ್ ಸ್ಕೂಲ್ ನಲ್ಲಿ ಪ್ರೌಢಶಾಲಾ ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ 19 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು*

10 ಗಂಟೆಗೆ ಬೊಳುವಾರು ಸರಕಾರಿ ಹಿ ಪ್ರಾ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ*

*11 ಗಂಟೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಭೆ*

*12.30 ಕ್ಕೆ ಪಾಣಾಜೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರ‌ಮ*

ನೆಲ್ಯಾಡಿ ಅಡಿಕೆ ಗೋದಾಮಿನಲ್ಲಿ ನಡೆದಿದೆನ್ನಲಾದ ಕಳ್ಳತನ ಪ್ರಕರಣ : ಆರೋಪಿಗಳು ದೋಷ ಮುಕ್ತ

Posted by Vidyamaana on 2024-05-01 15:40:39 |

Share: | | | | |


ನೆಲ್ಯಾಡಿ ಅಡಿಕೆ ಗೋದಾಮಿನಲ್ಲಿ ನಡೆದಿದೆನ್ನಲಾದ ಕಳ್ಳತನ ಪ್ರಕರಣ : ಆರೋಪಿಗಳು ದೋಷ ಮುಕ್ತ

ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿರುತ್ತಾರೆ. ಸದರಿ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಪೊಲೀಸರು ಚಪ್ಪ (ಸರ್ಪರಾಜ್) ಮತ್ತು ಅಬ್ದುಲ್ ಅಸ್ಪರ್ (ಅಸ್ಫಕ್ ) ಎಂಬುವರನ್ನು ಆರೋಪಿಗಳೆಂದು ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ಕೈಗೆತ್ತಿಕೊಂಡು ನ್ಯಾಯಾಲಯವು ಈ ಪ್ರಕರಣದಲ್ಲಿ ಅಭಿಯೋಜನ ಪರ ಸುಮಾರು 21

ED ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರವಾಲ್ ಬಂಧನ

Posted by Vidyamaana on 2024-03-21 21:38:56 |

Share: | | | | |


ED  ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಸ್ವಲ್ಪ ಸಮಯದ ನಂತ್ರದ ಅವ್ರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎನ್ನಲಾಗಿತ್ತು. ಈ ನಡುವೆ ಇಂದು ದೆಹಲಿ ಸಿಎಂ ನಿವಾಸದ ಮೇಲೆ ದಾಳಿ ಮಾಡಿದ್ದಂತ ಇಡಿ ಅಧಿಕಾರಿಗಳು ವಿಚಾರಣೆಯ ಬಳಿಕ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.ಜಾರಿ ನಿರ್ದೇಶನಾಲಯ (ED) ತಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತಲುಪಿದ್ದರು. ಈ ಪ್ರಕರಣದಲ್ಲಿ ಅವರಿಗೆ ಸಮನ್ಸ್ ನೀಡಲು ತನಿಖಾ ಸಂಸ್ಥೆಯ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದರು. ಳಿಸಿವೆ. ಶೋಧ ವಾರಂಟ್ ಇದೆ ಎಂದು ತಂಡವು ಮುಖ್ಯಮಂತ್ರಿ ನಿವಾಸದ ಸಿಬ್ಬಂದಿಗೆ ಮಾಹಿತಿ ನೀಡಿತ್ತು.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ಈ ಹಿಂದೆ ಈ ಪ್ರಕರಣದಲ್ಲಿ ಏಜೆನ್ಸಿಯ ಅನೇಕ ಸಮನ್ಸ್ಗಳನ್ನು ತಪ್ಪಿಸಿಕೊಂಡಿದ್ದರು. ಇದಕ್ಕೂ ಮುನ್ನ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ಪೀಠವು ಕೇಜ್ರಿವಾಲ್ ಅವರಿಗೆ ಈ ಪ್ರಕರಣದಲ್ಲಿ ಬಲವಂತದ ಕ್ರಮದಿಂದ ಯಾವುದೇ ರಕ್ಷಣೆ ನೀಡಲು ನಿರಾಕರಿಸಿತು. ಸಮನ್ಸ್ ಪ್ರಶ್ನಿಸಿ ಎಎಪಿನಾಯಕನ ಮುಖ್ಯ ಅರ್ಜಿ ವಿಚಾರಣೆಗೆ ನಿಗದಿಯಾದಾಗ ಏಪ್ರಿಲ್ 22 ರಂದು ಹೆಚ್ಚಿನ ಪರಿಗಣನೆಗಾಗಿ ನ್ಯಾಯಪೀಠ ಅವರ ಅರ್ಜಿಯನ್ನು ಪಟ್ಟಿ ಮಾಡಿತು ಮತ್ತು ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿತು.

ಈ ನಡುವೆ ಇಂದು ಜಾರಿ ನಿರ್ದೇಶನಾಲದಯ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.

Recent News


Leave a Comment: