ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಬೈಡಲ್ ಮೇಕಪ್ ಸ್ಪರ್ಧೆಯಲ್ಲಿ ಪ್ರತಿಭಾ ದಯಾ ಕುಕ್ಕಾಜೆಗೆ ಪ್ರಶಸ್ತಿ

Posted by Vidyamaana on 2023-02-15 11:58:07 |

Share: | | | | |


ಬೈಡಲ್ ಮೇಕಪ್ ಸ್ಪರ್ಧೆಯಲ್ಲಿ ಪ್ರತಿಭಾ ದಯಾ ಕುಕ್ಕಾಜೆಗೆ ಪ್ರಶಸ್ತಿ

ಪುತ್ತೂರು: ಅಖಿಲ ಭಾರತ ಹೇರ್ & ಬ್ಯೂಟಿ ಅಸೋಸಿಯೇಷನ್ ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿ ಪ್ರೊಫೆಷನಲ್‌ಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬ್ರೆಡಲ್ ಮೇಕಪ್ ಸ್ಪರ್ಧೆಯಲ್ಲಿ ಪ್ರತಿಭಾ ದಯಾ ಕುಕ್ಕಾಜೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಮಂಗಳೂರು, ಕಾಸರಗೋಡು, ಉಡುಪಿ, ಮಡಿಕೇರಿ, ಕಾರವಾರದಿಂದ 45ಕ್ಕೂ ಹೆಚ್ಚು ಮೇಕಪ್ ಕಲಾವಿದರು ಭಾಗವಹಿಸಿದ್ದರು. ಸ್ಪರ್ಧೆಯ ಪೈಕಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ದಿ ಬ್ಯೂಟಿ ಬ್ಲಾಗ್ ಮಾಲಕಿ ಪ್ರತಿಭಾ ದಯಾ ಕುಕ್ಕಾಜೆಯವರು ತಮ್ಮದಾಗಿಸಿಕೊಂಡರು. ಪ್ರತಿಭಾ ಅವರು ಈ ಹಿಂದೆ 2019ರ ಬೈಡಲ್ ಕಾಂಪಿಟೇಶನ್ ನಲ್ಲಿ ವಿನ್ನರ್ ಆಗಿ ಹೊರ ಹೊಮ್ಮಿದ್ದರು. 2021ರ ಶ್ರೀ ಶಾರದಾ ಮಾತಾ ಫೊಟೋ ಕಂಟೆಸ್ಟ್ ಸ್ಪರ್ಧೆಯಲ್ಲಿ ಪ್ರತಿಭಾ ಅವರ ಶ್ರೀ ಶಾರದೆಯ ಮೇಕಪ್ ಗೆ ಬೆಸ್ಟ್ ಮೇಕಪ್ ಆರ್ಟಿಸ್ಟ್ ಬಹುಮಾನ ಒಲಿದಿತ್ತು. ಸೌಂದರ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರತಿಭಾರವರು ಮಾಣಿಲ ಕುಕ್ಕಾಜೆ ನಿವಾಸಿಯಾಗಿರುವ ಖ್ಯಾತ ಫೊಟೋ ಜರ್ನಲಿಸ್ಟ್, ಡೈಜಿವರ್ಲ್ಡ್ ವಾಹಿನಿಯ ಛಾಯಾಗ್ರಾಹಕ ದಯಾ ಕುಕ್ಕಾಜೆಯವರ ಪತ್ನಿ.

ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

Posted by Vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಖಾಸಗಿ ಬಸ್‌ ಆಕ್ಟಿವಾ ಗೆ ಡಿಕ್ಕಿ: ಆಕ್ಟಿವಾ ಸವಾರ ಪರಾರಿ ನಿವಾಸಿ ಧರನೇಂದ್ರ ಮೃತ್ಯು

Posted by Vidyamaana on 2024-02-04 19:35:22 |

Share: | | | | |


ಖಾಸಗಿ ಬಸ್‌ ಆಕ್ಟಿವಾ ಗೆ ಡಿಕ್ಕಿ: ಆಕ್ಟಿವಾ ಸವಾರ ಪರಾರಿ ನಿವಾಸಿ ಧರನೇಂದ್ರ  ಮೃತ್ಯು

ಬೆಳ್ತಂಗಡಿ: ಖಾಸಗಿ ಬಸ್ಸಿನ ವೇಗದ ಅವಂತಾರದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರು ಎಳೆದುಕೊಂಡ ಹೋದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಸಮೀಪ ಫೆ.4 ರಂದು(ಇಂದು) ಸಂಜೆ ನಡೆದಿದೆ. 



ಮೃತಪಟ್ಟ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಧರಣೇಂದ್ರ (24) ಎನ್ನಲಾಗಿದೆ. ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ವೇಗವಾಗಿ ಬರುತಿದ್ದ ಶ್ರೀ ದುರ್ಗಾ ಹೆಸರಿನ ಖಾಸಗಿ ಬಸ್ ಡಿಕ್ಕಿ ಹೊಡೆದು ನಂತರ ಸ್ವಲ್ಪ ದೂರ ಸ್ಕೂಟರ್ ಸಮೇತ ಬಸ್ ಎಳೆದುಕೊಂಡು ಹೋಗಿದೆ. 


ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗೊಂಡಿದ್ದು.ತಕ್ಷಣ ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸಾಮೂಹಿಕ ಪ್ರಾರ್ಥನೆಗೂ., ಸಂಘಟನೆಯ ಹೆಸರು ಉಲ್ಲೇಖಿಸಿ ಬಂದಿರುವ ವರದಿಗೂ ಸಂಬಂಧವಿಲ್ಲ ಹಿಂ.ಜಾ.ವೇ ಪ್ರಾಂತ ಸಂಯೋಜಕ ದೊ ಕೇಶವಮೂರ್ತಿ ಸ್ಪಷ್ಟನೆ

Posted by Vidyamaana on 2024-02-03 04:46:16 |

Share: | | | | |


ಸಾಮೂಹಿಕ ಪ್ರಾರ್ಥನೆಗೂ., ಸಂಘಟನೆಯ ಹೆಸರು ಉಲ್ಲೇಖಿಸಿ ಬಂದಿರುವ ವರದಿಗೂ ಸಂಬಂಧವಿಲ್ಲ ಹಿಂ.ಜಾ.ವೇ ಪ್ರಾಂತ ಸಂಯೋಜಕ ದೊ ಕೇಶವಮೂರ್ತಿ ಸ್ಪಷ್ಟನೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಫೆ.1 ರಂದು ನಡೆದ ಸಾಮೂಹಿಕ ಪ್ರಾರ್ಥನೆಗೂ ಸಂಘಟನೆಯ ಹೆಸರನ್ನು ಉಲ್ಲೇಖಿಸಿ ಪತ್ರಿಕಾ ಮಾಧ್ಯಮಗಳಲ್ಲಿ ಬಂದಿರುವ ವರದಿಗಳಿಗೂ ಸಂಬಂಧವಿಲ್ಲ ಎಂದು ಹಿಂ.ಜಾ.ವೇ ಪ್ರಾಂತ ಸಂಯೋಜಕ ದೊ ಕೇಶವಮೂರ್ತಿ ಸ್ಪಷ್ಟನೆ ನೀಡಿದ್ದಾರೆಂದು ಪುತ್ತೂರು ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ತಿಳಿಸಿದ್ದಾರೆ.


ಅಭಿಮಾನಿ ಬಳಗದ ಹೆಸರಿನಲ್ಲಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕೆಲವೊಂದು ಸಭೆಗಳು ನಡೆದಿದೆ ಅನ್ನೋದು ಪತ್ರಿಕೆ-ಮಾಧ್ಯಮಗಳಲ್ಲಿ ಬಂದಿರುತ್ತದೆ. ಈ ಸಭೆಗೂ ಸಂಘಟನೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಸಂಘಟನೆಯು ಸ್ಪಷ್ಟಪಡಿಸುತ್ತಿದೆ. ಮತ್ತು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಗೂ ಸಂಘಟನೆಯ ಹೆಸರನ್ನು ಉಲ್ಲೇಖಿಸಿ ಪತ್ರಿಕಾ-ಮಾಧ್ಯಮಗಳಲ್ಲಿ ವರದಿಗಳು ಬಂದಿರುವುದು ಸಂಘಟನೆಯ ಗಮನಕ್ಕೆ ಬಂದಿರುವುದರಿಂದ ಈ ಕಾರ್ಯಕ್ರಮಕ್ಕೂ ಸಂಘಟನೆಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.


ಅದೇ ರೀತಿ ಈಗಾಗಲೇ ಜಾಗರಣಾ ವೇದಿಕೆಯ ಹೊಸ ಸಂಘಟನಾ ವ್ಯವಸ್ಥೆಯಲ್ಲಿ ಪ್ರಾಂತ, ಜಿಲ್ಲೆ, ತಾಲೂಕು ಸಮಿತಿಗಳನ್ನು ರಚಿಸಲಾಗಿದೆ. (ಈ ಹಿಂದೆ ಇದ್ದ ವಲಯ, ಘಟಕಗಳನ್ನು ವಿಸರ್ಜಿಸಲಾಗಿದೆ) ಹಿಂದೂ ಜಾಗರಣ ವೇದಿಕೆಯು ಒಂದು ಆಂದೋಲನಾತ್ಮಕ ರೂಪದಲ್ಲಿ ಜಾಗೃತ, ಸಂಘಟಿತ, ಸುರಕ್ಷಿತ ಹಿಂದೂ ಸಮಾಜದ ನಿರ್ಮಾಣದ ಕಾರ್ಯಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಯಾಗಿರುತ್ತದೆ. ಕಾರ್ಯ ಮತ್ತು ಆಯಾಮಗಳ ಮೂಲಕ ಸಂಘಟನೆಯು ಹೊಸ ಸಂಘಟನಾ ವ್ಯವಸ್ಥೆಯಲ್ಲಿ ಕಾರ್ಯ ಚಟುವಟಿಕೆಯನ್ನು ಈಗಾಗಲೇ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತುಂಡುಡುಗೆ ಧರಿಸುತ್ತಿದ್ದಾಳೆ ಎಂಬ ಕೋಪಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ

Posted by Vidyamaana on 2023-12-31 16:41:49 |

Share: | | | | |


ತುಂಡುಡುಗೆ ಧರಿಸುತ್ತಿದ್ದಾಳೆ ಎಂಬ ಕೋಪಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ

ಹಾಸನ: ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ನಡೆದಿದೆ. ಈ ವೇಳೆ ಪತಿಯೇ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arsikere) ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ.ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆ ಯಾಗಿದ್ದರು (Love Marriage). ಕಳೆದ 6 ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದಾ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದ ಜ್ಯೋತಿ ಬೋಲ್ಡ್‌ ಆಗಿ ಇರುತ್ತಿದ್ದರು. ಇದೇ ಕಾರಣಕ್ಕೆ ಪತಿ ಜೀವನ್‌ ಕೋಪಗೊಂಡಿದ್ದ, ಅನುಮಾನ ಪಟ್ಟು ಜಗಳವಾಡಿದ್ದ.


ಶನಿವಾರ ಸಂಜೆಯು ಸಹ ಮಾಡ್ರನ್‌ ಡ್ರೆಸ್‌ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗಲೂ ಜೀವನ್‌ ವಿರೋಧಿಸಿದ್ದ, ಕೊನೆಗೆ ಬೈಕ್‌ನಲ್ಲಿ ಡ್ರಾಪ್‌ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್‌ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ಎಸ್ಕೇಪ್‌ ಆಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹತ್ರಾಸ್ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಸಾವಿನ ಸಂಖ್ಯೆ 122 ಕ್ಕೆ ಏರಿಕೆ.!

Posted by Vidyamaana on 2024-07-02 19:47:54 |

Share: | | | | |


ಹತ್ರಾಸ್ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಸಾವಿನ ಸಂಖ್ಯೆ 122 ಕ್ಕೆ ಏರಿಕೆ.!

ಹತ್ರಾಸ್ : ಹತ್ರಾಸ್ನಲ್ಲಿ ಭೋಲೆ ಬಾಬಾ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 122 ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿದೆ.ಈ ಅವಘಡದಲ್ಲಿ 150 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, ಅನೇಕರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Recent News


Leave a Comment: