ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಈಶ್ವರಪ್ಪಗೆ ಬರೀ 30 ಸಾವಿರ ಮತ; ಠೇವಣಿ ನಷ್ಟ!

Posted by Vidyamaana on 2024-06-05 15:54:31 |

Share: | | | | |


ಈಶ್ವರಪ್ಪಗೆ ಬರೀ 30 ಸಾವಿರ ಮತ; ಠೇವಣಿ ನಷ್ಟ!

ಶಿವಮೊಗ್ಗ (ಜೂ.5) : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕುಟುಂಬದ ವಿರುದ್ಧ ಬಂಡೆದ್ದು, ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ, ಬಿಜೆಪಿ ಅಭ್ಯರ್ಥಿ ಬಿ. ವೈ.ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಿ ಆತಂಕ ಮೂಡಿಸಿದ್ದ ಕೆ. ಎಸ್.ಈಶ್ವರಪ್ಪ ಅವರು ಚುನಾವಣೆಯಲ್ಲಿ ನಿರೀಕ್ಷಿತ ಮತ ಪಡೆಯದೆ ಠೇವಣಿ ಕಳೆದುಕೊಳ್ಳುವ ಮೂಲಕ ಹೀನಾಯ ಸೋಲು ಅನುಭವಿಸಿದ್ದಾರೆ.

ರಾಘವೇಂದ್ರ 778721 ಮತಗಳನ್ನು ಪಡೆದು ಜಯಭೇರಿ ಬಾರಿಸಿದರೆ, ಈಶ್ವರಪ್ಪ ಪರ ಕೇವಲ 30050 ಮತಗಳು ಚಲಾವಣೆಯಾಗಿವೆ.

ಬ್ಯಾನರ್ ಪ್ರಕರಣದಲ್ಲಿ ವಶಕ್ಕೆ ಪಡೆದ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ

Posted by Vidyamaana on 2023-05-17 15:43:39 |

Share: | | | | |


ಬ್ಯಾನರ್ ಪ್ರಕರಣದಲ್ಲಿ ವಶಕ್ಕೆ ಪಡೆದ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ

ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಪ್ರತಿಕ್ರಿಯಿಸಿದ್ದಾರೆ.

‘ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ ಎಂದಿದ್ದಾರೆ.

ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ವಿಟ್ಲ: ಬಸ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು

Posted by Vidyamaana on 2024-08-21 19:54:00 |

Share: | | | | |


ವಿಟ್ಲ: ಬಸ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು

ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆಗಸ್ಟ್ 12 ಮಂಗಳವಾರ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದ್ದು, ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆ.15:ಸ್ವಾತಂತ್ರೋತ್ಸವದ ಅಂಗವಾಗಿ ಪುತ್ತೂರು ಬಸ್ಸು ನಿಲ್ದಾಣದಲ್ಲಿ ಮಾದಕ ದ್ರವ್ಯ ಮುಕ್ತ ಪುತ್ತೂರು, ಸಂಚಾರಿ ನಿಯಮಗಳ ಜನ ಜಾಗೃತಿ ಕಾರ್ಯಕ್ರಮ

Posted by Vidyamaana on 2024-08-15 09:26:01 |

Share: | | | | |


ಆ.15:ಸ್ವಾತಂತ್ರೋತ್ಸವದ ಅಂಗವಾಗಿ ಪುತ್ತೂರು ಬಸ್ಸು ನಿಲ್ದಾಣದಲ್ಲಿ ಮಾದಕ ದ್ರವ್ಯ ಮುಕ್ತ ಪುತ್ತೂರು, ಸಂಚಾರಿ ನಿಯಮಗಳ ಜನ ಜಾಗೃತಿ ಕಾರ್ಯಕ್ರಮ

ಪುತ್ತೂರು: ಸ್ವಾತಂತ್ರೋತ್ಸವದ ಅಂಗವಾಗಿ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆ ಪುತ್ತೂರು ಹಾಗೂ ಸಿಟಿ ಫ್ರೆಂಡ್ಸ್ ಕ್ಸ್ ಆರ್ಟ್ಸ್  ಆಂಡ್ ಸ್ಪೋರ್ಟ್ಸ್ ಕ್ಲಬ್ (ಅಮರ್ ಆಕ್ಟರ್ ಅಂತೋನಿ ಕ್ರಿಕೆಟ್ ಸಂಘಟಕರು) ಪುತ್ತೂರು

ರಾತ್ರಿ ಪತ್ನಿ ಕಳುಹಿಸು ಎಂದಿದ್ದಕ್ಕೆ ಉದ್ಯಮಿಗೆ 14 ಸಲ ಇರಿದು ಹತ್ಯೆ

Posted by Vidyamaana on 2024-03-16 14:26:00 |

Share: | | | | |


ರಾತ್ರಿ ಪತ್ನಿ ಕಳುಹಿಸು ಎಂದಿದ್ದಕ್ಕೆ ಉದ್ಯಮಿಗೆ 14 ಸಲ ಇರಿದು ಹತ್ಯೆ

 ಬೆಂಗಳೂರು : ಪತ್ನಿಯನ್ನು ತನ್ನೊಂದಿಗೆ ಒಂದು ರಾತ್ರಿ ಕಳುಹಿಸಿಕೊಂಡು ಎಂದ ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಕಾರಿನಲ್ಲಿ 14 ಬಾರಿ ಇರಿದು ಕೊಲೆಗೈದಿದ್ದ ಬಟ್ಟೆ ವ್ಯಾಪಾರಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.ದಾಸರಹಳ್ಳಿ ಮರಿಯಣ್ಣಪಾಳ್ಯ ನಿವಾಸಿ ಸಂತೋಷ್‌ ಕುಮಾರ್‌(39) ಬಂಧಿತ ಆರೋಪಿ.ಮಾ .12ರಂದು ಈತ ಮಾರುತಿನಗರ ನಿವಾಸಿ ಕೃಷ್ಣಯಾದವ್‌(55) ಎಂಬಾತನನ್ನು ಕೊಲೆಗೈದು, ಮೃತದೇಹವನ್ನು ಕಾರಿನಲ್ಲಿ ಇರಿಸಿ ಪರಾರಿಯಾಗಿದ್ದ. ಬಟ್ಟೆ ಅಂಗಡಿಗೆ ಲಕ್ಷಾಂತರ ರೂ. ಹೂಡಿಕೆ ಮಾಡಲು ಪತ್ನಿಯನ್ನು ಒಂದು ರಾತ್ರಿ ತನ್ನೊಂದಿಗೆ ಕಳುಹಿಸುವಂತೆ ಕೇಳಿದಕ್ಕೆ ಆರೋಪಿ ಉದ್ಯಮಿಯನ್ನು ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.


ಆಂಧ್ರಪ್ರದೇಶ ಮೂಲದ ಕೃಷ್ಣಯಾದವ್‌ ನಗರದಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡಿಕೊಂಡಿದ್ದ. ಈತನ ಸ್ನೇಹಿತ ತಮಿಳುನಾಡು ಮೂಲದ ಸಂತೋಷ್‌ ಮೊಬೈಲ್‌ ಅಂಗಡಿ ಮುಂಭಾಗದ ಫ‌ುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಒಂದೆರಡು ಬಾರಿ ಆರೋಪಿಯ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ್ದ ಕೃಷ್ಣಯಾದವ್‌, “ಉತ್ತಮ ಗುಣಮಟ್ಟದ ಬಟ್ಟೆ ಮಾರಾಟ ಮಾಡುತ್ತಿಯಾ, ಹೊಸ ಬಟ್ಟೆ ಅಂಗಡಿಗೆ ನಾನು ಹಣ ಹೂಡಿಕೆ ಮಾಡುತ್ತೇನೆ” ಎಂದು ಭರವಸೆ ನೀಡಿದ್ದ. ಆದರೆ, ನಾಲ್ಕೈದು ತಿಂಗಳಾದರೂ ಹಣ ಹೂಡಿಕೆ ಮಾಡಿರಲಿಲ್ಲ.

14 ಬಾರಿ ಇರಿತಕ್ಕೊಳಗಾದ ಉದ್ಯಮಿ: ಈ ಮಧ್ಯೆ ಉದ್ಯಮಿ ಕೃಷ್ಣಯಾದವ್‌ಗೆ ಹೆಣ್ಣಿನ ಮೇಲೆ ಹೆಚ್ಚಿನ ವ್ಯಾಮೋಹ ಇತ್ತು ಎಂದು ಹೇಳಲಾಗಿದೆ. ಮಾ.11ರಂದು ಆರೋಪಿ ಸಂತೋಷ್‌ ಜತೆ ಕಾರಿನಲ್ಲಿ ಯಲಹಂಕದ ಬಾರ್‌ನಲ್ಲಿ ಮದ್ಯ ಸೇವಿಸಿ ವಿವಿಧೆಡೆ ಸುತ್ತಾಡಿದ್ದ ಕೃಷ್ಣಯಾದವ್‌ಗೆ ಆರೋಪಿ ಸಂತೋಷ್‌ ಕುಮಾರ್‌, ತನ್ನ ಮೊಬೈಲ್‌ನಲ್ಲಿದ್ದ 2ನೇ ಪತ್ನಿಯ ಫೋಟೋವನ್ನು ತೋರಿಸಿದ್ದಾನೆ. ಅದರಿಂದ ವ್ಯಾಮೋಹಕ್ಕೊಳಗಾದ ಕೃಷ್ಣಯಾದವ್‌, “ಬಟ್ಟೆ ಅಂಗಡಿಗೆ ಒಂದೆರಡು ದಿನದಲ್ಲೇ ಲಕ್ಷಾಂತರ ರೂ. ಹೂಡಿಕೆ ಮಾಡುತ್ತೇನೆ. ಇಂದು ರಾತ್ರಿ ನಿನ್ನ ಪತ್ನಿಯನ್ನು ನನ್ನೊಂದಿಗೆ ಕಳುಹಿಸು’ ಎಂದು ಕೇಳಿದ್ದಾನೆ. ಅದರಿಂದ ಕೋಪಗೊಂಡು ಆರೋಪಿ, ಉದ್ಯಮಿ ಕೃಷ್ಣಯಾದವ್‌ ಜತೆ ಜಗಳ ಆರಂಭಿಸಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಆರೋಪಿ ಕಾರಿನಲ್ಲಿದ್ದ ಚಾಕುವಿನಿಂದ ಕೃಷ್ಣಯಾದವ್‌ನ ದೇಹದ ವಿವಿಧೆಡೆ 14 ಬಾರಿ ಇರಿದು ಪರಾರಿಯಾಗಿದ್ದ. ಇತ್ತ ಕೃಷ್ಣಯಾದವ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದ.ಬಳಿಕ ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


ಏನಿದು ಪ್ರಕರಣ? : 


ಆರೋಪಿ ಸಂತೋಷ್‌ ಜತೆ ಉದ್ಯಮಿ ಕೃಷ್ಣಯಾದವ್‌ ಸೋಮವಾರ ಸಂಜೆ ತನ್ನ ಸ್ವಿಫ್ಟ್‌ ಕಾರಿನಲ್ಲಿ ಹೊರಗಡೆ ಹೋಗಿದ್ದಾನೆ. ರಾತ್ರಿಯಾದರೂ ಮನೆಗೆ ವಾಪಸ್‌ ಬಂದಿರಲಿಲ್ಲ. ಈ ಸಂಬಂಧ ಕುಟುಂಬ ಸದಸ್ಯರು ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಬಾಗಲೂರು ಕ್ರಾಸ್‌ನ ಪಾದಚಾರಿ ಮಾರ್ಗದಲ್ಲಿ ಅನುಮಾನ ಸ್ಪದ ರೀತಿ ಯಲ್ಲಿ ಕಾರಿನಲ್ಲಿ ಕೃಷ್ಣ ಯಾದವ್‌ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

70 ನೂತನ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ತರಬೇತಿ

Posted by Vidyamaana on 2023-06-27 05:38:42 |

Share: | | | | |


70 ನೂತನ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ತರಬೇತಿ

ಬೆಂಗಳೂರು: ಇದೇ ಮೊದಲ ಬಾರಿಗೆ ಆಯ್ಕೆಗೊಂಡ 70 ಶಾಸಕರಿಗೆ ಸಂಸದೀಯ ಕಲಾಪದ ಬಗ್ಗೆ ಅರಿವು ಮೂಡಿಸಲು ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ಜೂ.26ರಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆರಂಭಗೊಂಡಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾದರು.

ಸದನದಲ್ಲಿ ಸದಾ ಹಾಜರಿ, ಪೂರ್ವತಯಾರಿ, ಭಾಷೆ ಮೇಲೆ ಹಿಡಿತ, ಜನಪರ ವಿಷಯದ ಮಂಡನೆ, ವಿಷಯ ತಜ್ಞರ ಜತೆ ಚರ್ಚೆ, ಅಧ್ಯಯನಶೀಲತೆ, ಜನರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಕಾಳಜಿ, ಜನರ ಬಗ್ಗೆ ಗೌರವ, ಸಂವಿಧಾನದ 51ನೇ ವಿಧಿವರೆಗಿನ ಅರಿವು, ಸದನದ ನಿಯಮಗಳ ಮಾಹಿತಿ ಮತ್ತು ಸಂವಿಧಾನಕ್ಕೆ ಬದ್ಧತೆ ಮುಂತಾದ ಅಂಶಗಳನ್ನು ರೂಡಿಸಿಕೊಂಡು ಉತ್ತಮ ಸಂಸದೀಯ ಪಟುಗಳಾಗಿ ಬೆಳೆಯಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಯಯ್ಯ ಅವರು ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಕಿವಿ ಮಾತು ಹೇಳಿದರು.

ನೆಲಮಂಗಲದ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಆ್ಯಂಡ್‌ ಯೋಗಿಕ್‌ ಸೈನ್ಸಸ್‌ ಕ್ಷೇಮವನದಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಸದನ ನಡೆಸುವ ನಿಯಮಾವಳಿಗಳನ್ನು ಓದಬೇಕು. ಇಲ್ಲವಾದರೆ ಏನು ಪ್ರಶ್ನೆ ಕೇಳಬೇಕು, ಯಾವ ನಿಯಮದಡಿ ಏನು ಮಾಡಬೇಕು ಎಂದು ಗೊತ್ತಾಗುವುದಿಲ್ಲ. ನಾವು ಏನೇ ಕಾನೂನು, ತಿದ್ದುಪಡಿ ಮಾಡಿದರೂ ಅದು ಸಂವಿಧಾನದ ಆಶಯಕ್ಕೆ ಬದ್ಧವಾಗಿರಲೇಬೇಕು. ಆದ್ದರಿಂದ ಸಂವಿಧಾನದ ಅರಿವು ಇರಬೇಕು. ಜನರಿಗೆ ಪೂರಕವಾದ ಕಾನೂನು ರೂಪಿಸುವ ಸಿದ್ಧತೆ ಮತ್ತು ಬದ್ಧತೆ ಹೊಂದಿರಬೇಕು. ಬಜೆಟ್‌ ಅನ್ನು ಅರ್ಥಮಾಡಿಕೊಳ್ಳುವ ಶಕ್ತಿ ರೂಡಿಸಿಕೊಳ್ಳಿ. ಗ್ರಂಥಾಲಯ ಬಳಸಿಕೊಳ್ಳಿ. ಕಲಾಪ ನಡೆಯುವ ದಿನಗಳಲ್ಲಿ ಬೇರೆ ಯಾವುದೇ ಕಾರ್ಯಕ್ರಮ, ಭೇಟಿಗಳನ್ನು ಇಟ್ಟುಕೊಳ್ಳಬೇಡಿ. ಕೋರ್ಟ್‌ ನಿಮ್ಮನ್ನು ಪ್ರಶ್ನೆ ಮಾಡದಿರಬಹುದು. ಆದರೆ ಜನತಾ ಕೋರ್ಟ್‌ ಪ್ರಶ್ನೆ ಮಾಡುತ್ತದೆ ಎಂದರು.

ಮತದಾರ ಕೈಬಿಡಲ್ಲ

ಜನರ ಧ್ವನಿಯಾಗಿ ಕೆಲಸ ಮಾಡಿದರೆ ಮಾತ್ರ ರಾಜಕಾರಣದಲ್ಲಿ ಉಳಿದು ಮುಂದಿನ ಚುನಾವಣೆಯನ್ನು ಗೆಲ್ಲಲು ಸಾಧ್ಯ. ಜನಪರ ಕಾಳಜಿ ಇಲ್ಲದವರು ಒಂದು ಚುನಾವಣೆ ಮಾತ್ರ ಗೆಲ್ಲಬಹುದು. ಬೆವರಿನ ಶ್ರಮ, ಸಂಸ್ಕೃತಿಗೆ ಅಸಹ್ಯ ಪಡದವರನ್ನು, ಜನರ ಜತೆ ಬೆರೆತು ಗೌರವ ವಿಶ್ವಾಸದಿಂದ ನಡೆದುಕೊಳ್ಳುವವರನ್ನು, ಜನಸೇವೆಗಾಗಿ ರಾಜಕಾರಣ ಮಾಡುವವರನ್ನು ಮತದಾರರು ಕೈ ಬಿಡುವುದಿಲ್ಲ ಎಂದು ಹೇಳಿದರು.ಸದನದಲ್ಲಿ ಇರಬೇಕು

ಬಹಳ ಜನ ಒಮ್ಮೆಯಾದರೂ ವಿಧಾನಸಭೆ ಮೆಟ್ಟಿಲು ಹತ್ತಬೇಕೆಂದು ಬಯಸುತ್ತಾರೆ. ಮೆಟ್ಟಿಲು ಹತ್ತಿದ ಬಳಿಕ ಸದನದ ಒಳಗಡೆ ಬರಲ್ಲ. ಈ ಧೋರಣೆಯನ್ನು ಬಿಡಬೇಕು. ಶಾಸಕರು ಎಲ್ಲ ಸಮಯದಲ್ಲೂ ವಿಧಾನಸಭೆಯಲ್ಲಿ ಇರಬೇಕು. ಬಹಳ ಜನ ಮಂತ್ರಿಗಳೇ ವಿಧಾನಸಭೆಗೆ ಬರುವುದಿಲ್ಲ. ವಿಧಾನಸಭೆಗೆ ಬರುವುದರಿಂದ ಹಿರಿಯರು ಏನು ಮಾತನಾಡುತ್ತಾರೆ, ಸಂಸದೀಯ ಮಾತುಗಳು ಏನು ಎಂಬುದು ಅರ್ಥ ಆಗುತ್ತದೆ ಎಂದು ಸಲಹೆ ನೀಡಿದರು.ವರ್ಗಾವಣೆ ಕಡತ ಇಟ್ಟುಕೊಂಡು ಕಾರ್ಯದರ್ಶಿ ಬಳಿ ಹೋಗಬೇಡಿ

ಕಾನೂನು ಮತ್ತು ಸಂಸದೀಯ ಸಚಿವ ಎಚ್‌. ಕೆ. ಪಾಟೀಲ್‌ ಮಾತನಾಡಿ, ಶಾಸಕರು ಗೌರವಯುತ ಮತ್ತು ಗಂಭೀರ ನಡವಳಿಕೆ ರೂಡಿಸಿಕೊಂಡಾಗ ಜನರು ಮತ್ತು ಅಧಿಕಾರಿಗಳು ಗೌರವಿಸುತ್ತಾರೆ. ಸದನ ಎಂಬುದು ಸಂತೆಯಲ್ಲ ಎಂಬುದನ್ನು ಅರಿತು ಗೌರವಯುತವಾಗಿ ವರ್ತಿಸಿ. ನೀವು ವರ್ಗಾವಣೆ ಕಡತ ಹಿಡಿದುಕೊಂಡು ಕಾರ್ಯದರ್ಶಿ ಹತ್ತಿರ ಹೋದರೆ ನಿಮ್ಮ ಗಂಭೀರತೆ ಕಡಿಮೆ ಆಗುತ್ತದೆ ಎಂದು ಕಿವಿಮಾತು ಹೇಳಿದರು. ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮಾತನಾಡಿದರು.

ವಾಟಾಳ್‌ ನಾಗರಾಜ್‌ ಮಾದರಿ ಶಾಸಕ

ವಾಟಾಳ್‌ ನಾಗರಾಜ್‌ ಅವರು ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್‌ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಅವರು ಕಲಾಪದ ಒಂದು ಕ್ಷಣವನ್ನೂತಪ್ಪಿಸಿಕೊಂಡಿರಲಾರರು. ನಾನು ಆ ತರಹದ ವ್ಯಕ್ತಿಯನ್ನು ಈವರೆಗೂ ನೋಡಿಲ್ಲ. ನಾನಾದರೂ ಈವರೆಗೆ ನಾಲ್ಕೈದು ದಿನ ಗೈರು ಹಾಜರಾಗಿರಬಹುದು. ನಾನು 1994ರಲ್ಲಿ ಹಣಕಾಸು ಸಚಿವನಾಗಿದ್ದಾಗ ಆಗ ಶಾಸಕರಾಗಿದ್ದ ಜಯಪ್ರಕಾಶ್‌ ಹೆಗ್ಡೆ, ಮಾಧುಸ್ವಾಮಿ, ಶ್ರೀರಾಮ ರೆಡ್ಡಿ, ರಾಜೇಂದ್ರ ಅವರು ಏನು ಪ್ರಶ್ನೆ ಕೇಳುತ್ತಾರೋ ಎಂಬ ಆತಂಕದಿಂದ ಅಧಿವೇಶನದ ಒಂದು ಕ್ಷಣವನ್ನು ತಪ್ಪಿಸಿಕೊಳ್ಳುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.


ಪಕ್ಷಾಂತರ ನಿಷೇಧವಾಗಬೇಕು

ನಾನು ರಾಜಕಾರಣ ಆರಂಭಿಸಿದಾಗ ಹಣದ ಪ್ರಭಾವ ಕಡಿಮೆ ಇತ್ತು. ನಾನು 1983ರಲ್ಲಿ ಮೊದಲ ಚುನಾವಣೆ ಗೆದ್ದಾಗ 63 ಸಾವಿರ ರೂ. ಖರ್ಚು ಮಾಡಿದ್ದೆ. ಆಗ ಎರಡೇ ಕಾರು ಬಳಸಿದ್ದೆ. ಆದರೆ ಈಗ ಚುನಾವಣೆ ದುಬಾರಿ ಆಗಿದೆ. ಹಾಗೆಯೇ ಆಗ ಜಾತಿ ಇಷ್ಟೊಂದು ಪ್ರಬಲವಾಗಿರಲಿಲ್ಲ. ಊರಿನ ಮುಖ್ಯಸ್ಥರು ತೀರ್ಮಾನಿಸಿದವರಿಗೆ ಜನ ಮತ ಹಾಕುತ್ತಿದ್ದರು. ಆದರೆ ಈಗ ಯುವಕರು, ಮಹಿಳೆಯರು ತಮಗಿಷ್ಟದಂತೆ ಮತ ಹಾಕುತ್ತಿದ್ದಾರೆ. ಪಕ್ಷಾಂತರ, ಆಪರೇಷನ್‌ ಕಮಲ, ಆಪರೇಷನ್‌ ಹಸ್ತ, ಆಪರೇಷನ್‌ ಜೆಡಿಎಸ್‌ ಹೆಚ್ಚಾಗಿದೆ. ಪಕ್ಷಾಂತರವನ್ನು ನಿರ್ಬಂಧಿಸುವಂತೆ ಸಂವಿಧಾನ ತಿದ್ದುಪಡಿ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.


ಬಜೆಟ್‌ ಎಂದರೆ ಕಾಯಕ ದಾಸೋಹ

ಶಾಸಕರು, ಸಂಸದರು ಬಜೆಟ್‌ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್‌ ಬಗ್ಗೆ ಹೇಳಿ¨ªಾರೆ. ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್‌ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್‌ನ ಮೌಲ್ಯ. ಶ್ರೀಮಂತರಿಗೆ ತೆರಿಗೆ ಹಾಕಬೇಕೇ ಹೋರತು ಬಡವರಿಗಲ್ಲ ಎಂದು ವಿವರಿಸಿದರು.



Recent News


Leave a Comment: