ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ನಮ್ಮೂರಿನ ನಮ್ಮ ಅಭ್ಯರ್ಥಿ -ಇಂದು ಸಂಜೆ ತವರೂರಲ್ಲಿ ಅಶೋಕ್ ರೈ ಭರ್ಜರಿ ಪ್ರಚಾರಕ್ಕೆ ಸಿದ್ಧತೆ

Posted by Vidyamaana on 2023-05-04 10:01:41 |

Share: | | | | |


ನಮ್ಮೂರಿನ ನಮ್ಮ ಅಭ್ಯರ್ಥಿ -ಇಂದು ಸಂಜೆ ತವರೂರಲ್ಲಿ ಅಶೋಕ್ ರೈ ಭರ್ಜರಿ ಪ್ರಚಾರಕ್ಕೆ ಸಿದ್ಧತೆ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಶೋಕ್ ಕುಮಾರ್ ರೈ ಅವರ ತವರೂರು ಕೋಡಿಂಬಾಡಿ, ಬೆಳ್ಳಾಪ್ಪಾಡಿಯಲ್ಲಿ ಭರ್ಜರಿ ಪ್ರಚಾರಕ್ಕೆ ಸಿದ್ಧತೆ ನಡೆಯುತ್ತಿದೆ.

ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಶೋಕ್ ಕುಮಾರ್ ರೈ ಅವರ ಹಿತೈಷಿಗಳು ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಕೋಡಿಂಬಾಡಿ ಹೋಟೆಲ್ ತುಳುನಾಡ್ ಹತ್ತಿರ ಮೇ ೪ರಂದು ಸಂಜೆ ೬ರಿಂದ ಪ್ರಚಾರ ಸಭೆ ನಡೆಯಲಿದೆ. ಅಶೋಕ್ ಕುಮಾರ್ ರೈ ಅವರ ಮನೆಯಿರುವ ಕೋಡಿಂಬಾಡಿ ಪ್ರದೇಶದಲ್ಲಿ ಈ ಸಭೆ ಆಯೋಜನೆಯಾಗಿರುವುದರಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Posted by Vidyamaana on 2023-09-01 01:50:24 |

Share: | | | | |


ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.


ಸುಸ್ತು, ಬಳಲಿಕೆಯಿಂದಾಗಿ ಹೆಚ್‌ಡಿಕೆ ಮಂಗಳವಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಕೂಡ ಸಿಎಂ ಜೊತೆಗಿದ್ದರು.


ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಆಗಿದ್ದು, ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್‌ ಆಗುವ ಸಾಧ್ಯತೆ ಇದೆ.


ತಂದೆ ಆರೋಗ್ಯ ಸ್ಥಿರವಾಗಿದ್ದು, ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಕೆಲ ದಿನಗಳು ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದು, ಯಾರೂ ಕೂಡ ಆತಂಕಕ್ಕೆ ಒಳಗಾಗೋದು ಬೇಡ ಅಂತ ನಿಖಿಲ್‌ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಎಜುಕೇಶನ್ ನಂತ್ರ ಮುಂದೇನು..?– ಈ ಗೊಂದಲ ನಿಮ್ಮಲಿದ್ಯಾ

Posted by Vidyamaana on 2023-10-07 09:31:15 |

Share: | | | | |


ಎಜುಕೇಶನ್ ನಂತ್ರ ಮುಂದೇನು..?– ಈ ಗೊಂದಲ ನಿಮ್ಮಲಿದ್ಯಾ

ಸುಳ್ಯ: ವಿದ್ಯಾಭ್ಯಾಸದ ನಂತರ ನಾವೇನು ಮಾಡಬೇಕು? ಎಂಬುದಕ್ಕೆ ಉತ್ತರವಾಗಿ ಇದೇ ಬರುವ ದಿನಾಂಕ ಅಕ್ಟೋಬರ್ 15 ಭಾನುವಾರದಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ರ ವರೆಗೆ ಐಎಎಸ್/ ಕೆಎಎಸ್/ ಬ್ಯಾಂಕಿಂಗ್/ ಎಸ್.ಡಿ.ಎ ಮತ್ತು ಎಫ್.ಡಿ.ಎ ಇತ್ಯಾದಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡುವುದು ಹೇಗೆ ಮತ್ತು ನೇಮಕಾತಿಗಳ ವಿವರ , ಪ್ರಶ್ನೆಪತ್ರಿಕೆಗಳ ಸ್ವರೂಪ - ಪರೀಕ್ಷೆಗಳು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ತನ್ನ ಸುಳ್ಯ ಶಾಖೆಯಲ್ಲಿ ಉಚಿತ ಮಾಹಿತಿ ಕಾರ್ಯಗಾರದ ಮೂಲಕ ನೀಡಲಿದೆ.

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?

ಅಲ್ಲದೇ ಖಾಸಗಿ ಉದ್ಯೋಗಗಳಿಗೆ ಪ್ರಯತ್ನಿಸುವವರಿಗಾಗಿ ಕಂಪನಿಗಳ ನೇರ ಸಂದರ್ಶನವನ್ನು ಎದುರಿಸುವ ಬಗ್ಗೆ ಉದ್ಯೋಗ ಕೌಶಲ್ಯತೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಾರ್ಯಾಗಾರದಲ್ಲಿ ನೀಡಲಾಗುವುದು.

ವಿದ್ಯಾಮಾತಾ ಅಕಾಡೆಮಿಯು ಸುಳ್ಯದಲ್ಲಿ ನೂತನವಾಗಿ ಶಾಖೆಯನ್ನು ಪ್ರಾರಂಭಿಸಿದ್ದು ಬ್ಯಾಂಕಿಂಗ್, ಪೊಲೀಸ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ನೂರಾರು ಅಭ್ಯರ್ಥಿಗಳು ತರಬೇತಿಯನ್ನು ಪಡೆದು ಸೇರಿರುವುದನ್ನು ಸ್ಮರಿಸಿಕೊಳ್ಳಬಹುದು. ಇದೀಗ ಸುಳ್ಯ, ಕೊಡಗು, ಕಾಸರಗೋಡು ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಉದ್ಯೋಗಗಳಿಗೆ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕೆಂಬ ಯೋಜನೆಯೊಂದಿಗೆ ಉಚಿತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳು 12/10/2023 ರ ಒಳಗಾಗಿ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ (ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದಕ್ಷಿಣ ಕನ್ನಡ) ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.

ಅಥವಾ 9448527606 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ನೇತ್ರಾವತಿಗೆ ಹಾರಿ ಬದುಕಿ ಬಂದಿದ್ದ ಯುವತಿ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಸಾವು..!

Posted by Vidyamaana on 2023-09-22 16:11:25 |

Share: | | | | |


ನೇತ್ರಾವತಿಗೆ ಹಾರಿ ಬದುಕಿ ಬಂದಿದ್ದ ಯುವತಿ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಸಾವು..!

ಬೆಂಗಳೂರು ; ಧರ್ಮಸ್ಥಳದ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಅಂದು ಸ್ಥಳೀಯರು ರಕ್ಷಣೆ ಮಾಡಿದ್ದರು. ಆದ್ರೆ ಅದೇ ಯುವತಿ ಇದೀಗ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ದುರ್ಘಟನೆ ನಡೆದಿದೆ.ಹದಿನೇಳು ವರ್ಷದ ವಿಜಯಲಕ್ಷ್ಮೀ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಖಿನ್ನತೆಗೆ ಒಳಗಾಗಿದ್ದು, ಕೆಲ ದಿನಗಳ ಹಿಂದೆ ನೇತ್ರಾವತಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ ಮಾಡಿದ್ದಳು. ಆದ್ರೆ ಅದನ್ನು ನೋಡಿದ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿದ್ದರು. ಅನಂತರ ವಿಜಯಲಕ್ಷ್ಮೀಗೆ ಬುದ್ಧಿವಾದ ಹೇಳಿದ್ದರು. ಅನಂತರ ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿ, ವಿಜಯಲಕ್ಷ್ಮೀಯನ್ನು ಬೆಂಗಳೂರಿಗೆ ಕಳುಹಿಸಿದ್ದರು.


ಧರ್ಮಸ್ಥಳದಿಂದ ಬೆಂಗಳೂರಿಗೆ ಬಂದಿದ್ದ ವಿಜಯಲಕ್ಷ್ಮೀ ಮತ್ತೆ ಅದೇ ಕೆಲಸ ಮಾಡಿದ್ದಾಳೆ. ಬ್ಯಾಟರಾಯನಪುರದ ಬ್ರೈಡ್‌ ಅಪಾರ್ಟ್‌ಮೆಂಟ್‌ನ ಟೆರೇಸ್‌ಗೆ ಹೋಗಿ ಅಲ್ಲಿಂದ ಹಾರಿ ಪ್ರಾಣ ಬಿಟ್ಟಿದ್ದಾಳೆ.

ಅ.30: ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಝಾರ್ ಶುಭಾರಂಭ

Posted by Vidyamaana on 2023-10-23 15:26:10 |

Share: | | | | |


ಅ.30: ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಝಾರ್ ಶುಭಾರಂಭ

ಪುತ್ತೂರು: ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಝಾರ್ ಅ.30ರಂದು ಮಿತ್ತೂರಿನಲ್ಲಿ ಶುಭಾರಂಭಗೊಳ್ಳಲಿದೆ. ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ದುವಾ ನೆರವೇರಿಸಲಿದ್ದು ಎಚ್.ಎಂ.ಎಸ್ ಗ್ರೂಪ್‌ನ ಚೇರ್‌ಮೆನ್ ಹರೀಶ್ ಎಂ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ವಾಹನ ಮಾರಾಟ ಕೇಂದ್ರವನ್ನು ಉದ್ಘಾಟಿಸಲಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ರವರು ಕಚೇರಿ ಉದ್ಘಾಟಿಸಲಿದ್ದಾರೆ.


ಸಯ್ಯದ್ ಇಬ್ರಾಹಿಂ ಹಂಝ ತಂಙಳ್ ಪಾಟ್ರಕೋಡಿ ಹಾಗೂ ಸಯ್ಯದ್ ಮಹಮ್ಮದ್ ಮಿಹ್ರಾಜ್ ಅಲ್ ಹಾದಿ ಅಲ್ ಅಶ್‌ಅರಿ ತಂಙಳ್‌ರವರು ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ, ವಿಟ್ಲ ಪೊಲೀಸ್ ಠಾಣಾ ಸರ್ಕಲ್ ಇನ್ಸ್‌ಪೆಕ್ಟರ್ ಎಚ್.ಇ ನಾಗರಾಜ್, ಕೊಂಬೆಟ್ಟು ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ನೆಟ್ಲಮುಡ್ನೂರು ಗ್ರಾ.ಪಂ ಅಧ್ಯಕ್ಷೆ ಸಮಿತಾ ಬಿ ಪೂಜಾರಿ, ಎಚ್.ಎಂ.ಎಸ್ ಗ್ರೂಪ್ ಬೆಂಗಳೂರು ಇದರ ಸುಬೋಧ್ ಬಿ ಶೆಟ್ಟಿ, ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಇಬ್ರಾಹಿಂ ಹಾಜಿ ಕೊಡಾಜೆ(ರಾಜ್‌ಕಮಲ್), ಮಿತ್ತೂರು ಶುಭೋದಯ ಫ್ಯೂಯಲ್ಸ್‌ನ ಮಾಲಕ ಗೋಪಾಲಕೃಷ್ಣ ಭಟ್, ಕೆದಂಬಾಡಿ ಗ್ರಾ.ಪಂ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪತ್ರಕರ್ತ ಲತೀಫ್ ನೇರಳಕಟ್ಟೆ, ನ್ಯಾಯವಾದಿ ರಮಾನಾಥ ರೈ, ಯುವ ಉದ್ಯಮಿ ಬಾತಿಷ್ ಅಳಕೆಮಜಲು, ಸಂಸ್ಥೆಯ ಕಟ್ಟಡದ ಮಾಲಕ ಎ ವೆಂಕಪ್ಪ ನಾಯ್ಕ, ಮಿತ್ತೂರು ಜುಮಾ ಮಸೀದಿ ಅಧ್ಯಕ್ಷ ಮಹಮ್ಮದ್ ಸಲೀಂ ಕೆ.ಎಸ್ ಭಾಗವಹಿಸಲಿದ್ದಾರೆ.

ಆರು ಮಂದಿಗೆ ಗೌರವಾರ್ಪಣೆ:

ಕಬಕ ಶ್ರೀ ಮಹಾದೇವಿ ಇಂಜಿನಿಯರಿಂಗ್ ಮತ್ತು ಮೋಟಾರ್ ವರ್ಕ್ಸ್ ಇದರ ಜಯರಾಮ ಕಬಕ, ವಿನಾಯಕ ಬೆಸ್ಟ್ ಮಾರುತಿ ಪಾಯಿಂಟ್ ಕಬಕ ಇದರ ದಿನೇಶ್ ಪಿ, ಪುತ್ತೂರು ಕಾರ್ ಡೆಕೋರ್‌ನ ತೌಫೀಕ್, ಸಾನ್ವಿ ಇಂಜಿನಿಯರಿಂಗ್ ವರ್ಕ್ಸ್ ಕಬಕ ಇದರ ಮನೋಹರ ಶೆಟ್ಟಿ, ಡೇಟಿಂಗ್ ಮತ್ತು ಪೈಂಟಿಂಗ್ ಇದರ ಬಕ್ಷ್ ಪರ್ಲಡ್ಕ ಮಚ್ಚಿಮಲೆ ಹಾಗೂ ಪೈಂಟರ್ ಹರೀಶ್ ನಾಯ್ಕ ಇವರಿಗೆ ಗೌರವರ್ಪಾಣೆ ಕಾರ್ಯಕ್ರಮ ನಡೆಯಲಿದೆ.


ಭಾರತ್ ವೆಹಿಕಲ್ ಬಝಾರ್‌ನಲ್ಲಿ ಉಪಯೋಗಿಸಿದ ಕಾರುಗಳು ಹಾಗೂ ಗೂಡ್ಸ್ ವಾಹನಗಳ ಖರೀದಿ, ಮಾರಾಟ ಮತ್ತು ವಿನಿಮಯ, ವಾಹನಗಳ ಇನ್ಸೂರೆನ್ಸ್, ವೆಹಿಕಲ್ ಫೈನಾನ್ಸ್ ಹಾಗೂ ಕಾರು ವಾಶ್ ಲಭ್ಯವಿರಲಿದೆ ಎಂದು ಎಚ್.ಎಂ.ಎಸ್ ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

Posted by Vidyamaana on 2023-08-04 01:49:31 |

Share: | | | | |


ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ಮಂಗಳೂರು: ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು.ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆ.3ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ ನ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕಾಲೇಜುಗಳಲ್ಲಿ ಈಗಾಗಲೇ ಡ್ರಗ್ಸ್ ನಿರ್ಮೂಲನಾ ಸಮಿತಿಯನ್ನು ರಚಿಸಿ, ಸದಸ್ಯರನ್ನು ನೇಮಕ ಮಾಡಲಾಗಿದೆ ಅವರುಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು. ಅದೇ ರೀತಿ ಜಿಲ್ಲೆಯ ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿರ್ಮೂಲನೆ ಕುರಿತಂತೆ ಉತ್ತಮ ಸ್ಕ್ರೀಪ್ಟ್ ರಚಿಸಿ ಒಂದು ನಿಮಿಷದೊಳಗೆ ರೀಲ್ಸ್, ಕಿರು ವಿಡಿಯೋಗಳನ್ನು ವಿದ್ಯಾರ್ಥಿಗಳೇ ನಿರ್ಮಿಸಿಕೊಡುವ ಬಗ್ಗೆ  ಕಾಲೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ದೇವಿ ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಕ್ರಮವಹಿಸಬೇಕು ಹಾಗೂ ತಯಾರಾದ ಅತ್ಯುತ್ತಮ ರೀಲ್ಸ್ ಹಾಗೂ ಕಿರು ಚಿತ್ರಗಳಿಗೆ ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಬಹುಮಾನ ಕೊಡಿಸಲಾಗುವುದು ಎಂದವರು ಹೇಳಿದರು.


ಜಿಲ್ಲೆಯಲ್ಲಿರುವ ಡ್ರಗ್ಸ್ ವ್ಯಸನಿಗಳಿಗೆ ಕೌನ್ಸಲಿಂಗ್ ಮಾಡಲು ಜಿಲ್ಲಾ ಮಟ್ಟದಲ್ಲಿ ಗುರುತಿಸಲಾದ ಒಬ್ಬರು ಕೌನ್ಸಿಲರ್ ಅನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಅವರಿಗೆ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ ಡ್ರಗ್ಸ್ ಸೇವನೆ ಪ್ರಕರಣಗಳು ವರದಿಯಾದಾಗ ಸಂಬಂಧಿಸಿದವರು ಅವರ ಬಳಿ ಕೌನ್ಸೆಲಿಂಗ್‍ಗೆ ಕಳುಹಿಸಿಕೊಡಬೇಕು, ಮುಖ್ಯವಾಗಿ ಎಲ್ಲಾ ಖಾಸಗಿ ಕಾಲೇಜುಗಳಲ್ಲಿಯೂ ಕೌನ್ಸಿಲರ್ ಒಬ್ಬರ ನೇಮಕವಾಗಬೇಕು. ಈ ಸಭೆ ನಡೆಸಿ ಕಡ್ಡಾಯವಾಗಿ ಎಲ್ಲಾ ಕಾಲೇಜುಗಳಲ್ಲಿಯೂ ಕೌನ್ಸೆಲರ್ ನೇಮಕ ಮಾಡಿಕೊಳ್ಳುವಂತೆ ನಿರ್ದೇಶನ ನೀಡುವಂತೆ ತಿಳಿಸಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಅವರು ಮಾತನಾಡಿ ಜಿಲ್ಲೆಯಲ್ಲಿರುವ ಡ್ರಗ್ ಕೌನ್ಸಿಲಿಂಗ್ ಸೆಂಟರ್ ಗಳ ನಂಬರ್‍ ಗಳ ಪಟ್ಟಿ ಕೊಟ್ಟಲ್ಲಿ ಡ್ರಗ್ಸ್ ವ್ಯಸನಿಗಳು ಕಂಡುಬಂದ ಕೂಡಲೇ ಅವರನ್ನು ಕೌನ್ಸೆಲಿಂಗ್‍ಗೆ ಕಳುಹಿಸಲು ಅನುಕೂಲವಾಗಲಿದೆ ಎಂದರು.


ಬೆಳ್ತಂಗಡಿಯ ನೆರಿಯಾದಲ್ಲಿ ಗಾಂಜಾ ಬೆಳೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯವರು ಪರಿಶೀಲಿಸಿ ಕೂಡಲೇ ವರದಿ ನೀಡಬೇಕು ಹಾಗೂ ಈ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಬಗ್ಗೆ ಘೋಷಿಸುವಂತೆ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.


ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್, ಪುತ್ತೂರು ಡಿವೈಎಸ್‍ಪಿ ಡಾ. ಗಾನಾ ಪಿ. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.



Leave a Comment: