ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ನೆಟ್ಟಾರು ಪತ್ನಿ ನೇಮಕಾತಿ ರದ್ದು ವಿಚಾರ

Posted by Vidyamaana on 2023-05-27 11:08:30 |

Share: | | | | |


ನೆಟ್ಟಾರು ಪತ್ನಿ ನೇಮಕಾತಿ ರದ್ದು ವಿಚಾರ

ಪುತ್ತೂರು: ಮತಾಂಧರ ಕ್ರೂರ ಕೃತ್ಯಕ್ಕೆ ಬಲಿಯಾದ ದಿ.ಪ್ರವೀಣ್ ನೆಟ್ಟಾರ್ ಪತ್ನಿ ನೂತನರವರು ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದಿದ್ದು, ರಾಜಕೀಯ ಚರ್ಚೆ ಮಾಡುವುದು ಬಿಟ್ಟು ಅವರಿಗೆ ಸರ್ಕಾರ ಅದೇ ಉದ್ಯೋಗ ಮರುನೇಮಕಾತಿ ಮಾಡಬೇಕು ಎಂದು ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದ್ದಾರೆ.

ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳಿಂದ ಹತ್ಯೆಯಾದ ಬಳಿಕ ರಾಜ್ಯಾದ್ಯಂತ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದರು. ಪರಿಣಾಮ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗಿತ್ತು. ಮೊದಲಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನೀಡಿ ಬಳಿಕ ಮಂಗಳೂರು‌ ಜಿಲ್ಲಾಧಿಕಾರಿ ಕಚೇರಿಯಲ್ಲೇ ಕೆಲಸ ನೀಡಲಾಗಿತ್ತು. ಇದೀಗ ಕೆಲಸದಿಂದ ಬಿಡುಗಡೆ ಮಾಡಿದ್ದು, ಈ ಬಗ್ಗೆ ಅರುಣ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರು ಎಲ್ಲರೂ ಒಂದಿಲ್ಲೊಂದು ಸಮಸ್ಯೆ ಎದುರಿಸಿದವರೆ. ದಯವಿಟ್ಟು ಸರ್ಕಾರ ಅನುಕಂಪದ ಆಧಾರದಲ್ಲಿ ಪಡೆದ ಉದ್ಯೋಗಿಗಳ ಉದ್ಯೋಗದ ನಿಯಮವನ್ನು ಮರುಪರಿಶೀಲಿಸಬೇಕು ಎನ್ನುವುದು ಎಲ್ಲರ ಒತ್ತಾಯ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ 

ಪ್ರವೀಣ್ ನೆಟ್ಟಾರು ಪ್ರಕರಣದಲ್ಲೂ ಸರಕಾರ ಕೀಳು ಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ. ನೂತನ ಕುಮಾರಿ ಅವರಿಗೆ ಮಾನವೀಯತೆ ದೃಷ್ಟಿಯಿಂದ ತಕ್ಷಣ ಮರುನೇಮಕಾತಿ ಆದೇಶ ನೀಡುವಂತೆ 

ಒಂದು ಹೆಣ್ಣು ಮಗಳನ್ನು ಹಠಾತ್ ಆಗಿ ಕೆಲಸದಿಂದ ವಜಾಗೊಳಿಸುವುದು ಸರಿಯಾದ ಕ್ರಮವಲ್ಲ. ಈ ವಿಷಯದಲ್ಲಿ ಕೀಳು ಮಟ್ಟದ ರಾಜಕಾರಣ ಮಾಡಬಾರದು. ಮಾನವೀಯತೆ ದೃಷ್ಟಿಯಿಂದ ತಕ್ಷಣವೇ ನೂತನ ರನ್ನು ಮರು ನೇಮಕಾತಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಧನುಷ್ ಪತ್ತೆ

Posted by Vidyamaana on 2024-02-26 11:19:40 |

Share: | | | | |


ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಧನುಷ್ ಪತ್ತೆ

ಮೂಡಿಗೆರೆ: ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಾಳ ರಾಯ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಗೆ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದರೊಂದಿಗೆ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.ಏನಿದು ಘಟನೆ:

ಭಾನುವಾರ ಮುಂಜಾನೆ ಯುವಕರ ತಂಡವೊಂದು ಭಂಡಾಜೆ ಫಾಲ್ಸ್ ನೋಡಲು ತಂಡ ಹೊರಟಿತ್ತು ಅದರಂತೆ ತಂಡದ ಸದಸ್ಯರು ಚಾರಣ ಕೈಗೊಂಡು ಹಿಂತಿರುಗುವ ವೇಳೆ ತಂಡದಲ್ಲಿ ಓರ್ವನಾದ ಧನುಷ್ ಎಂಬಾತ ನಾಪತ್ತೆಯಾಗಿದ್ದ ಇದರಿಂದ ಗಾಬರಿಗೊಂಡ ಜೊತೆಗಿದ್ದ ಯುವಕರು ಆತನ ಮೊಬೈಲ್ ಗೆ ಕರೆ ಮಾಡಿದರೆ ನೆಟ್ ವರ್ಕ್ ಇರಲಿಲ್ಲ ಕೂಡಲೇ ಯುವಕರು ನಡೆದುಕೊಂಡು ಸುಂಕ ಸಾಲೆ ಗ್ರಾಮಕ್ಕೆ ಬಂದು ಅಲ್ಲಿಂದ ಆತನ ಮೊಬೈಲ್ ಗೆ ಕರೆ ಮಾಡಿದರೆ ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಬಳಿಕ ಎಚ್ಚೆತ್ತ ಯುವಕರು ಕೂಡಲೇ 112 ಗೆ ಕರೆ ಮಾಡಿ ಯುವಕ ನಾಪತ್ತೆಯಾಗಿರುವ ವಿಚಾರ ಪೊಲೀಸರೀಗೆ ತಿಳಿಸಿದ್ದಾರೆ.

ಮಾಹಿತಿ ಪಡೆದುಕೊಂಡ ಪೊಲೀಸರ ತಂಡ ಧನುಷ್ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ. ಅದರಂತೆ ಧನುಷ್ ನಾಪತ್ತೆಯಾದ ಸ್ಥಳದಿಂದ ಪೊಲೀಸರು ಮೂರೂ ತಂಡ ರಚಿಸಿ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ ಬರೋಬ್ಬರಿ ಮೂರೂ ಗಂಟೆ ಮೂವತ್ತು ನಿಮಿಷಗಳ ಕಾರ್ಯಾಚರಣೆ ಬಳಿಕ ಧನುಷ್ ದಟ್ಟ ಕಾಡಿನ ನಡುವೆ ಪತ್ತೆಯಾಗಿದ್ದಾನೆ.ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಧನುಷ್ ನಾಪತ್ತೆಯಾದ ಸ್ಥಳದಿಂದ ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿ ಕಾಡಿನ ನಡುವೆ ಹುಡುಕಾಟ ನಡೆಸಿದ ನಮಗೆ ಸುಮಾರು ಮೂರುವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಸುಮಾರು 700 ಅಡಿ ಕೆಳಗೆ ದಟ್ಟವಾದ ಅರಣ್ಯ ಪ್ರದೇಶದ ಮದ್ಯದಲ್ಲಿ ಒಬ್ಬನೇ ನಿಂತಿರುವುದು ಕಂಡು ಬಂದಿದೆ ಕೂಡಲೇ ನಮ್ಮ ತಂಡ ಆತನ ಬಳಿಗೆ ಹೋಗುತ್ತಿದ್ದಂತೆ ಗಾಬರಿಗೊಂಡಿದ್ದ ಯುವಕ ನಮ್ಮನ್ನು ನೋಡಿ ನಮ್ಮತ್ತ ಓಡಿ ಬಂದಿದ್ದಾನೆ ಬಳಿಕ ವಿಚಾರಿಸಿದ ವೇಳೆ ಆತನೇ ಎಂಬುದು ದೃಢವಾಗಿದ್ದು ಬಳಿಕ ಗಾಬರಿಗೊಂಡಿದ್ದ ಆತನನ್ನು ಸಂತೈಸಿ ಬಳಿಕ ಯುವರನ್ನು ಕೊಟ್ಟಿಗೆಹಾರಕ್ಕೆ ಕರೆದುಕೊಂಡು ಬಂದು ಬಳಿಕ ಪೋಷಕರಿಗೆ ಕರೆ ಮಾಡಿ ಮಾತನಾಡಿಸಿ ಆ ಬಳಿಕ ಮಂಗಳೂರಿಗೆ ಕಳುಹಿಸಿಕೊಡಲಾಯಿತು ಎಂದು ಹೇಳಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ ಶಂಕರ್ ಬೋವಿ ಹಾಗೂ ಸ್ಥಳೀಯರು ಜೊತೆಗಿದ್ದರು.

ಮುಳಿಯ ಜ್ಯುವೆಲ್ಸ್ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ರೈನ್ ಕೋಟ್ ವಿತರಣೆ

Posted by Vidyamaana on 2024-06-15 12:28:20 |

Share: | | | | |


ಮುಳಿಯ ಜ್ಯುವೆಲ್ಸ್ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ರೈನ್ ಕೋಟ್ ವಿತರಣೆ

ಪುತ್ತೂರು: ಸರ್ಕಾರದಿಂದ ಕೆಲವು ಸವಲತ್ತುಗಳು ಸಿಬ್ಬಂದಿಗಳಿಗೆ ಲಭಿಸಿದರೂ, ಸಿಗದೇ ಇರುವುದನ್ನು ಮುಳಿಯ ಸಂಸ್ಥೆಯ ಮೂಲಕ ನೀಡಲಾಗುತ್ತಿದೆ. ಪೊಲೀಸರು ಜನರ ಹತ್ತಿರವಾಗುತ್ತಿದ್ದು, ಇನ್ನಷ್ಟು ಉತ್ತಮ ಕೆಲಸಗಳು ಅವರಿಂದ ನಡೆಯುವಂತಾಗಬೇಕು ಎಂದು ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹೇಳಿದರು.

ಪುತ್ತೂರು ನಗರ ಠಾಣೆಯಲ್ಲಿ ಪುತ್ತೂರು ಮುಳಿಯ ಜುವೆಲ್ಸ್ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಪೊಲೀಸ್ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಳಿಯ ಸಂಸ್ಥೆಯಿಂದ ರೈನ್ ಕೋಟ್ ವಿತರಣೆಯನ್ನು ಮೂರನೇ ಬಾರಿ ಮಾಡಲಾಗುತ್ತಿದ್ದು, ಜಾಹೀರಾತು ಪಡೆದುಕೊಳ್ಳುವ ಉದ್ದೇಶದಿಂದ ಇದನ್ನು ಮಾಡುತ್ತಿಲ್ಲ. ಧರಿಸುವ ವ್ಯಕ್ತಿಗೆ ಮಾತ್ರ ಯಾರು ನೀಡಿದ್ದು ಎಂದು ತಿಳಿದರೆ ಸಾಕು ಎಂದು ತಿಳಿಸಿದರು.

ಉಪ್ಪಿನಂಗಡಿ ;ವಿದ್ಯಾರ್ಥಿ ಇರ್ಫಾನ್ ಹೃದಯಾಘಾತದಿಂದ ನಿಧನ

Posted by Vidyamaana on 2023-11-08 07:57:04 |

Share: | | | | |


ಉಪ್ಪಿನಂಗಡಿ ;ವಿದ್ಯಾರ್ಥಿ ಇರ್ಫಾನ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.


ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಫಾನ್ (18 )ಮೃತಪಟ್ಟ ಯುವಕ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ. ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್ ಎಂದಿನಂತೆ ತರಗತಿ ಮುಗಿದು ಸಂಜೆ ಮನೆಗೆ ಬಂದಿದ್ದ.


ಸಾಯಂಕಾಲ 6 ಗಂಟೆಯ ವೇಳೆಗೆ ಇರ್ಫಾನ್ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ಕುಸಿದು ಬಿದ್ದಾಗ ಮನೆಯವರು ತಕ್ಷಣ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದರಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.


ಮೃತ ಯುವಕ ತಂದೆ, ತಾಯಿ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

Posted by Vidyamaana on 2023-10-17 07:28:41 |

Share: | | | | |


ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

Posted by Vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: