ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ಅದ್ದೂರಿ ಸಿದ್ಧತೆ

Posted by Vidyamaana on 2023-11-27 08:46:27 |

Share: | | | | |


ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ಅದ್ದೂರಿ ಸಿದ್ಧತೆ

ಬೆಂಗಳೂರು (ನ.27): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಸೋಮವಾರ ಬೆಳಿಗ್ಗೆ 9.30 ರಿಂದ ಇಡೀ ದಿನ ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿ ಜನತಾ ದರ್ಶನ ಆಗಿರುವುದರಿಂದ ಸಕಲ ಮುನ್ನೆಚ್ಚರಿಕೆಗಳೊಂದಿಗೆ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.ಸ್ಥಳದಲ್ಲೇ ಪರಿಹಾರ ಕಲ್ಪಿಸುವುದಕ್ಕೆ ಆದ್ಯತೆ ನೀಡಿ ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯನ್ನು ಹಾಜರಿರುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಹೆಚ್ಚು ಹೊತ್ತು ಸರತಿ ಸಾಲುಗಳಲ್ಲಿ ನಿಲ್ಲದಂತೆ ಮಾಡಲು 20 ಕೌಂಟರ್‌ಗಳನ್ನು ಸ್ಥಾಪಿಸಿ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ನೆರಳಿಗೆ ಟೆಂಟ್ ವ್ಯವಸ್ಥೆ, ನೂಕು ನುಗ್ಗಲು ಆಗದಂತೆ ಬ್ಯಾರಿಕೇಡ್ ವ್ಯವಸ್ಥೆ ಕಲ್ಪಿಸಲಾಗಿದೆ.ಇನ್ನು ವೃದ್ಧರು ಹಾಗೂ ವಿಶೇಷ ಚೇತನರಿಗೆ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಜತೆಗೆ ಕೃಷ್ಣಾ ಸುತ್ತಮುತ್ತಲೂ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಭಾನುವಾರ ಸಂಜೆ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ವೀಕ್ಷಿಸಿದರು ಎಂದು ತಿಳಿದುಬಂದಿದೆ.


ಇಲಾಖಾ ಮುಖ್ಯಸ್ಥರ ಕಡ್ಡಾಯ ಹಾಜರಿ:


ಸಾರ್ವಜನಿಕರಿಂದ ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಿದ್ದಾರೆ.ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈಗಾಗಲೇ ಸುತ್ತೋಲೆ ಹೊರಡಿಸಿ ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ ಎಂದು ಸೂಚಿಸಿದ್ದಾರೆ.


ಆನ್‌ಲೈನಲ್ಲೂ ಅಹವಾಲು ಸಲ್ಲಿಕೆ:


ಸಾರ್ವಜನಿಕರು ದೂರು ಅಥವಾ ಅಹವಾಲು ಸಲ್ಲಿಕೆ ಮಾಡುವ ವ್ಯವಸ್ಥೆ ಸರಳೀಕರಣಗೊಳಿಸುವ ಸಲುವಾಗಿ ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಕಚೇರಿಯು ಕ್ಯೂಆರ್ ಕೋಡ್ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಕ್ಯೂಆರ್ ಕೋಡ್‌ ಸ್ಕ್ಯಾನ್‌ ಮಾಡಿ ಆನ್‌ಲೈನ್ ಮೂಲಕ ದೂರು ಸಲ್ಲಿಸಬಹುದು. ಜತೆಗೆ 1902 ಗೆ ಕರೆ ಮಾಡಿ ದೂರವಾಣಿಮೂಲಕವೂ ಅಹವಾಲು ಸಲ್ಲಿಸಬಹುದು.ವೆಬ್‌ಸೈಟ್‌, ಫೋನ್‌ನಲ್ಲೂ ಅಹವಾಲು ಸಲ್ಲಿಸಬಹುದು


ಜನತಾದರ್ಶನ ಕುರಿತು ಹೆಚ್ಚಿನ ಮಾಹಿತಿಗೆ https://ipgrs.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.


* ದೂರು ಸಲ್ಲಿಸಲು ಸಹಾಯವಾಣಿ: 1902


ಹೆಚ್ಚಿನ ಮಾಹಿತಿಗೆ : https://ipgrs.karnataka.gov.in


ಆಧಾರ್ ಕಾರ್ಡ್, ಪಡಿತರ ಚೀಟಿ ತನ್ನಿ


ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲುಅನುಕೂಲವಾಗಲಿದೆ.


ಅಹವಾಲು ಆಲಿಕೆಗೆ 1000 ಸಿಬ್ಬಂದಿ: ಭದ್ರತೆಗೆ 550 ಪೊಲೀಸ್‌ ನಿಯೋಜನೆ


ಜನಸ್ಪಂದನ ಕಾರ್ಯಕ್ರಮದ ಭದ್ರತೆಗೆ ಒಬ್ಬರು ಡಿಸಿಪಿ, ಮೂರು ಮಂದಿ ಎಸಿಪಿ, 10 ಮಂದಿ ಇನ್‌ಸ್ಪೆಕ್ಟರ್, 15 ಮಂದಿ ಪಿಎಸ್‌ಐ, ಪಿಸಿ-ಗೃಹರಕ್ಷಕ ಸಿಬ್ಬಂದಿ ಸೇರಿದಂತೆ 550 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಜತೆಗೆ ಅಹವಾಲು ಸ್ವೀಕಾರ ಹಾಗೂ ಪರಿಶೀಲನೆಗೆ ವಿವಿಧ ಇಲಾಖೆಗಳಿಂದ 350 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನೇಮಿಸಿದ್ದು, ಸಹಾಯಕ ಸಿಬ್ಬಂದಿ ಸೇರಿದಂತೆ ಒಟ್ಟು 1,000 ಸಿಬ್ಬಂದಿ ಕರ್ತವ್ಯದಲ್ಲಿ ಇರಲಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕರಾಗಿ ಅಶೋಕ ಪರ್ವ ಪ್ರಾರಂಭ - ಜನರ ಸಮಸ್ಯೆಗಳನ್ನು ಆಲಿಸಿದ ನೂತನ ಶಾಸಕರು

Posted by Vidyamaana on 2023-05-29 17:49:02 |

Share: | | | | |


ಶಾಸಕರಾಗಿ ಅಶೋಕ ಪರ್ವ ಪ್ರಾರಂಭ - ಜನರ ಸಮಸ್ಯೆಗಳನ್ನು ಆಲಿಸಿದ ನೂತನ ಶಾಸಕರು

 ಪುತ್ತೂರು; ಶಾಸಕರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪುತ್ತೂರಿನ ತನ್ನ ಕಚೇರಿಯಲ್ಲಿ ಶಾಸಕರಾದ ಅಶೋಕ್‌ಕುಮಾರ್ ರೈಯವರು ಸಾರ್ವಜನಿಕರಿಂದ ಮೇ. ೨೯ ರಂದು ಅಹವಾಲು ಸ್ವೀಕರಿಸಿದರು.ಶಾಸಕರು ಅಪರಾಹ್ನ ಕಚೇರಿಗೆ ಬರುತ್ತಾರೆಂದು ತಿಳಿದು ಮಧ್ಯಾಹ್ನದ ಬಳಿಕ ಕಚೇರಿಯಲ್ಲಿ ನೂರಾರು ಸಂಖ್ಯೆಯ ಸಾರ್ವಜನಿಕರು ನೆರೆದಿದ್ದರು. ಮಂಗಳೂರಿನಲ್ಲಿ ಸ್ಪೀಕರ್ ಯು ಟಿ ಖಾದರ್ ಜೊತೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಸಂಜೆ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದರು.

ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು. ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು. ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ೯೪ ಸಿ, ೯೪ ಸಿ ಸಿ, ನಿರುದ್ಯೋಗಿಗಳು, ಮನೆ ದುರಸ್ಥಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಸಾಸಕರ ಮುಂದೆ ಹೇಳಿಕೊಂಡರು. ವೃದ್ದರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದರು. ಮೊದಲ ಸಾರ್ವಜನಿಕ ಭೇಟಿಯಾದ ಕಾರಣ ನೂರಕ್ಕಿಂತಲೂ ಹೆಚ್ಚು ಆಗಮಿಸಿದ್ದರು.

ಶಾಸಕರನ್ನು ಭೇಟಿಯಾಗಲು ಬಂದಿರುವ ಜನ ಸಾಮಾನ್ಯರಿಗೆ ಮೊದಲ ಆಧ್ಯತೆ ನೀಡಲಾಗಿತ್ತು, ಗ್ರಾಮೀಣ ಭಾಗದಿಂದ ಬಂದಿರುವ ಮಂದಿಯನ್ನು ಮೊದಲ ಸಾಲಿನಲ್ಲೆ ಮನವಿ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಸರ್ವೆ ಗ್ರಾಮದ ಕಟ್ಟತ್ತಿಲ ನಿವಾಸಿ ಅನಾರೋಗ್ಯ ಪೀಡಿತ ಯಮುನಾ ಎಂಬವರಿಗೆ ಕೋಡಿಂಬಾಡಿ ರೈ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೀಲ್ ಚೆಯರ್ ನೀಡಲಾಯಿತು.

ಸಿಲಿಂಡರ್ ಸ್ಫೋಟ : ಗಾಯಗೊಂಡಿದ್ದ ದಂಪತಿ ಮೃತ್ಯು

Posted by Vidyamaana on 2023-09-23 07:27:27 |

Share: | | | | |


ಸಿಲಿಂಡರ್ ಸ್ಫೋಟ : ಗಾಯಗೊಂಡಿದ್ದ ದಂಪತಿ ಮೃತ್ಯು

ಕೋಲಾರ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.


ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆಪ್ಟೆಂಬರ್ 16ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಡಹಳ್ಳಿ ಗ್ರಾಮದ ದಂಪತಿ ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ವಾಸವಿದ್ದರು.


ಕಾಫಿ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯ ಪರಿಣಾಮ ತೀವ್ರ ಗಾಯಗೊಂಡ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ.


 ಸಿಲಿಂಡರ್ ಬ್ಲಾಸ್ಟ್‌ನಿಂದ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ

Posted by Vidyamaana on 2024-01-18 07:28:03 |

Share: | | | | |


ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ  ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ

ಪುತ್ತೂರು: ಜಾಗದ ವಿವಾದ ಸಹಿತ ಅಯೋಧ್ಯೆಯ ಮಂತ್ರಾಕ್ಷತೆ ವಿತರಣಾ ಜವಾಬ್ದಾರಿ ನಮಗೆ ನೀಡಲಿಲ್ಲ ಎಂಬ ಕಾರಣಕ್ಕೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರಿಂದ ನಮಗೆ ಹಲ್ಲೆ ನಡೆದಿದೆ ಎಂದು ಸೋಮವಾರ ರಾತ್ರಿ ಹಲ್ಲೆಗೊಳಗಾದ ಮುಂಡೂರು ನಿವಾಸಿ ಸಂತೋಷ್ ಬಿ.ಕೆ. ಆರೋಪಿಸಿದ್ದಾರೆ.


ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಂಡೂರು ಪರಿಸರದಲ್ಲಿ ಅಕ್ಷತೆ ವಿತರಣೆ ಜವಾಬ್ದಾರಿಯನ್ನು ನನಗೆ ನೀಡಲಾಗಿದ್ದು, ಶುಕ್ರವಾರ ಮಂತ್ರಾಕ್ಷತೆ ವಿತರಿಸಿ ಉಳಿದ ಮಂತ್ರಾಕ್ಷತೆಯನ್ನು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಇಟ್ಟಿದ್ದೇವು. ಅದೇ ರಾತ್ರಿ ಪುತ್ತಿಲ ಪರಿವಾರದವರು ನಮ್ಮಲ್ಲಿ ಕೇಳದೆ ಮಂತ್ರಾಕ್ಷತೆಯನ್ನು ದೇವಸ್ಥಾನದಿಂದ ತೆಗೆದುಕೊಂಡು ಹೋಗಿ ವಿತರಿಸಿದ್ದಾರೆ. ಇದೆಲ್ಲಾ ನಡೆದ ಬಳಿಕ ಸೋಮವಾರ ಕುಕ್ಕಿನಡ್ಕ ದೇವಸ್ಥಾನದಲ್ಲಿ ಮಂತ್ರಾಕ್ಷತೆ ಕುರಿತು ಸಭೆ ನಡೆದಿದ್ದು, ಸಭೆ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಕಾಲುದಾರಿಯಲ್ಲಿ ಧನಂಜಯ, ಕೇಶವ ಹಾಗೂ ಜಗದೀಶ್ ಎಂಬವರು ಏಕಾಏಕಿ ಕಬ್ಬಿಣದ ರಾಡು ಹಾಗೂ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಬೊಬ್ಬೆ ಕೇಳಿ ನನ್ನ ತಾಯಿ ಸವಿತಾ ಅವರು ಸ್ಥಳಕ್ಕೆ ಬಂದಾಗ ಅವರನ್ನು ದೂಡಿ ಹಾಕಿದ್ದಾರೆ. ಪರಿಣಾಮ ಅವರಿಗೂ ಗಾಯವಾಗಿದೆ ಎಂದು ತಿಳಿಸಿದರು.




ಇದಲ್ಲದೆ ನಾಡಾಜೆ – ಬರೆಕೊಲಾಡಿ ರಸ್ತೆ ವಿವಾದವಿದ್ದು, ರಸ್ತೆಗಾಗಿ ನಮ್ಮ ವರ್ಗ ಜಾಗವನ್ನು ಬಳಸಿಕೊಂಡಿದ್ದರು. ಇದೇ ರಸ್ತೆಯನ್ನು ಮೂರು ವರ್ಷದ ಹಿಂದೆ ಬಂದ್ ಮಾಡಿದ್ದರು. ಬಳಿಕ ಜಾಗದ ವಿವಾದ ಮತ್ತೆ ಮತ್ತೆ ಮರುಕಳಿಸಿತ್ತು. ಈ ಘಟನೆಯಲ್ಲಿ ಸಂಪೂರ್ಣ ಪುತ್ತಿಲ ಪರಿವಾರದ ಕೈವಾಡವಿದೆ. ಈ ಕುರಿತು ಎಲ್ಲಿ ಬೇಕಾದರೂ ಬಂದು ನಾನು ಪ್ರಮಾಣ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಕುಡ್ಲದಲ್ಲಿ ನಮೋ ರೋಡ್ ಶೋ – ಪ್ರಧಾನಿ ಗಮನ ಸೆಳೆದ ಕಿರಣ್ ಪೈಂಟಿಂಗ್

Posted by Vidyamaana on 2024-04-16 07:44:30 |

Share: | | | | |


ಕುಡ್ಲದಲ್ಲಿ ನಮೋ ರೋಡ್ ಶೋ – ಪ್ರಧಾನಿ ಗಮನ ಸೆಳೆದ ಕಿರಣ್ ಪೈಂಟಿಂಗ್

ಮಂಗಳೂರು: ಕರಾವಳಿಯ ಯುವಕ ಬಿಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರ “ಆಯಿಲ್‌ ಕ್ಯಾನ್ವಾಸ್‌’ ಚಿತ್ರವೊಂದನ್ನು ರವಿವಾರ ಮಂಗಳೂರಿನಲ್ಲಿ ರೋಡ್‌ ಶೋ ನಡೆಸಿದ ಸಂದರ್ಭ ಪ್ರಧಾನಿ ಮೋದಿ ನೆಚ್ಚಿಕೊಂಡು ಸ್ವೀಕರಿಸಿದ್ದಾರೆ.

ತೊಕ್ಕೊಟ್ಟು ಮೂಲದ ಕಲಾವಿದ ಕಿರಣ್‌ ಅವರು 24 ಇಂಚು ಎತ್ತರ ಹಾಗೂ 20 ಇಂಚು ಅಗಲದ ಪ್ರಧಾನಿ ಮೋದಿಯವರ ಚಿತ್ರವನ್ನು ಹಿಡಿದುಕೊಂಡು ಕೊಡಿಯಾಲಬೈಲು ಸಮೀಪ ನಿಂತಿದ್ದರು.

ಶಿವಮೊಗ್ಗ: ಬೆಚ್ಚಿಬೀಳಿಸಿದ ಒಂಟಿ ಮಹಿಳೆ ಕೊಲೆ

Posted by Vidyamaana on 2023-06-18 07:17:48 |

Share: | | | | |


ಶಿವಮೊಗ್ಗ: ಬೆಚ್ಚಿಬೀಳಿಸಿದ ಒಂಟಿ ಮಹಿಳೆ ಕೊಲೆ

ಶಿವಮೊಗ್ಗ: ಇಲ್ಲಿನ ವಿಜಯ ನಗರ 2ನೇ ತಿರುವಿನಲ್ಲಿರುವ ಮನೆಯಯೊಂದರಲ್ಲಿ ನಡೆದ ಒಂಟಿ ಮಹಿಳೆಯ ಕೊಲೆ ನಗರವನ್ನೇ ಬೆಚ್ಚಿ ಬೀಳಿಸಿದೆ.ಕಮಲಮ್ಮ (54) ಕೊಲೆಯಾದ ಮಹಿಳೆ. ಮನೆಯಲ್ಲಿ ಬೇರೆ ಯಾರೂ ಇರದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿರುವ ಮಲ್ಲಿಕಾರ್ಜುನ ಅವರ ಪತ್ನಿ. ಮಲ್ಲಿಕಾರ್ಜುನ ಅವರು ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದರು. ಶನಿವಾರ ಸಂಜೆ ಮನೆಯಲ್ಲಿ ಕಮಲಮ್ಮ ಒಬ್ಬರೇ ಇದ್ದಾಗ ಕೃತ್ಯ ಎಸೆಯಲಾಗಿದೆ.ಮಲ್ಲಿಕಾರ್ಜುನ ಅವರು ಪತ್ನಿಗೆ ಕರೆ ಮಾಡಿದ್ದು, ಅವರು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅಕ್ಕಪಕ್ಕದರಿಗೆ ಕರೆ ಮಾಡಿದ್ದಾರೆ. ನೆರೆಹೊರೆಯವರು ಮನೆಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

Recent News


Leave a Comment: