ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : MLC ಸೂರಜ್ ರೇವಣ್ಣ ಅರೆಸ್ಟ್

Posted by Vidyamaana on 2024-06-23 08:20:55 |

Share: | | | | |


 BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : MLC ಸೂರಜ್ ರೇವಣ್ಣ ಅರೆಸ್ಟ್

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್‌ ಸಿ ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ಸೂರಜ್‌ ರೇವಣ್ಣರನ್ನು ಬಂಧಿಸಲಾಗಿದೆ. 

ನಿನ್ನೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ.

ಉಪ್ಪಿನಂಗಡಿ : ಜ.13, 14 ರಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವ

Posted by Vidyamaana on 2024-01-11 20:59:54 |

Share: | | | | |


ಉಪ್ಪಿನಂಗಡಿ : ಜ.13, 14 ರಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವ

ಉಪ್ಪಿನಂಗಡಿ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವವು 2024 ಜನವರಿ 13, 14ರಂದು ಉಪ್ಪಿನಂಗಡಿಯ ಸರಳಿಕಟ್ಟೆಯ ಮಸೀದಿ ಸಭಾಂಗಣದಲ್ಲಿ ನಡೆಯಲಿದೆ. ಶಾಖೆ, ಸೆಕ್ಟರ್, ಡಿವಿಷನ್ ಸಾಹಿತ್ಯೋತ್ಸವ ಈಗಾಗಲೇ ಮುಕ್ತಾಯಗೊಂಡಿದ್ದು, ಡಿವಿಷನ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ನಡೆಯುವ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. 5 ವೇದಿಕೆಗಳಲ್ಲಿ ಜೂನಿಯರ್, ‌ಸೀನಿಯರ್, ಜನರಲ್, ಹಾಗೂ ಕ್ಯಾಂಪಸ್ ವಿಭಾಗಗಳಲ್ಲಿ ನಡೆಯುವ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ 6 ಡಿವಿಷನ್ ನಿಂದ ಸುಮಾರು 900 ಸ್ಪರ್ಧಾರ್ಥಿಗಳು ತಮ್ಮ ಪ್ರತಿಭೆಯನ್ನು ಅಲಂಕರಿಸಲಿದ್ದಾರೆ ಎಂದು ಸಂಘಾಟಕರು ತಿಳಿಸಿದ್ದಾರೆ.

ತನ್ನದೇ ಬಸ್ಸಿನಡಿಗೆ ಬಿದ್ದು ಮಾಂಡವಿ ಬಸ್ ಮಾಲಕ ದಯಾನಂದ ಶೆಟ್ಟಿ ಮೃತ್ಯು

Posted by Vidyamaana on 2024-03-14 15:14:13 |

Share: | | | | |


ತನ್ನದೇ ಬಸ್ಸಿನಡಿಗೆ ಬಿದ್ದು ಮಾಂಡವಿ ಬಸ್ ಮಾಲಕ ದಯಾನಂದ ಶೆಟ್ಟಿ ಮೃತ್ಯು

ಉಡುಪಿ, ಮಾ.14: ತನ್ನದೇ ಬಸ್ಸಿನಡಿಗೆ ಬಿದ್ದು ಬಸ್ ಮಾಲಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತರು. 

ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್‌ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್‌ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ಮಾಲಕ ದಯಾನಂದ ಶೆಟ್ಟಿ ಬಸ್ಸನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್‌ ಒಂದರಲ್ಲಿ ರಿಪೇರಿಗೆ ನೀಡಿದ್ದರು. 


ಬಸ್‌ ರಿಪೇರಿಗೆ ನೀಡಿ ಕೆಲವು ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬಸ್‌ ನೋಡಲೆಂದು ಗ್ಯಾರೇಜ್‌ಗೆ ತೆರಳಿದ್ದು ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ ಅವರನ್ನು ನೋಡದೆ ಬಸ್ಸನ್ನು ಏಕಾಏಕಿ ಚಲಾಯಿಸಿದ್ದು ದಯಾನಂದ ಶೆಟ್ಟಿ ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ಗ್ಯಾರೇಜ್​ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ್ದರಿಂದ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳದಲ್ಲಿದ್ದವರು ದಯಾನಂದ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನರೇಂದ್ರ ಮೋದಿ ರೋಡ್ ಶೋ ಗಾಗಿ ಸಿದ್ಧವಾಗಿದೆ 2 ಟನ್‌ ಹೂವಿನ ಎಸಳು

Posted by Vidyamaana on 2024-04-14 13:36:34 |

Share: | | | | |


ನರೇಂದ್ರ ಮೋದಿ ರೋಡ್ ಶೋ ಗಾಗಿ ಸಿದ್ಧವಾಗಿದೆ 2 ಟನ್‌ ಹೂವಿನ ಎಸಳು

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಲಿದ್ದು ರಾತ್ರಿ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಯಲಿದೆ.

ನರೇಂದ್ರ ಮೋದಿ ರೋಡ್ ಶೋ ಗಾಗಿ ಎರಡು ಟನ್ ಹೂವಿನ ಎಸಳುಗಳನ್ನು ಸಿದ್ಧಪಡಿಸಲಾಗಿದ್ದು, ರೋಡ್ ಶೋ ವೇಳೆ ಪ್ರಧಾನಮಂತ್ರಿ ಸಾಗುವ ಮಾರ್ಗದಲ್ಲಿ ಪುಷ್ಪ ವೃಷ್ಟಿಗಾಗಿ ಎರಡು ಟನ್ ಚೆಂಡು ಹೂವನ್ನು ಕೋಲಾರದಿಂದ ತರಿಸಲಾಗಿದೆ.

ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

Posted by Vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ಪ್ರಕರಣ ದಾಖಲು

Posted by Vidyamaana on 2023-12-02 12:05:19 |

Share: | | | | |


ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ಪ್ರಕರಣ ದಾಖಲು

ಗಂಗಾವತಿ: ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಯುವಕರ ಗುಂಪೊಂದು ಮುಸ್ಲಿಂ ಅಂಧ ವೃದ್ಧನಿಗೆ ಥಳಿಸಿದ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮಹೆಬೂಬನಗರದ ನಿವಾಸಿ ಹುಸೇನಸಾಬ್​ (70) ಎಂಬುವರ ಮೇಲೆ ನವೆಂಬರ್​ 20ರಂದು ಹಲ್ಲೆ ನಡೆದಿದೆ. ಗಂಗಾವತಿಯ ಜಯನಗರದ ಬೈಪಾಸ್ ರಸ್ತೆಯಲ್ಲಿ ನಡೆದು ಹೋಗುತ್ತಿರುವಾಗ ಯುವಕರ ಗುಂಪೊಂದು ತಮ್ಮನ್ನು ಅಡ್ಡಗಟ್ಟಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದೆ. ಬಳಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದ್ದಾರೆ. ಜೊತೆಗೆ ಗಡ್ಡಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದು, ಬಳಿಕ ತಮ್ಮ ಬಳಿಯಿದ್ದ ಹಣವನ್ನೂ ದೋಚಿಕೊಂಡು ಹೋಗಿದ್ದಾರೆ. ಸಮಯಕ್ಕೆ ಸರಿಯಾಗಿ ಸಮೀಪದಲ್ಲಿದ್ದ ಕುರಿಗಾಹಿ ಯುವಕರು ಸ್ಥಳಕ್ಕೆ ಆಗಮಿಸಿ ತಮ್ಮನ್ನು ರಕ್ಷಣೆ ಮಾಡಿದ್ದಾರೆ ಎಂದು ವೃದ್ಧ ದೂರಿನಲ್ಲಿ ತಿಳಿಸಿದ್ದಾರೆ.


ಜೊತೆಗೆ ವೃದ್ಧನಿಗೆ ಕೀಟಲೆ ಮಾಡಿದ ಅಪರಿಚಿತ ಯುವಕರು ಗುಂಪು ಬೆದರಿಕೆ ಹಾಕಿದ್ದರು. ಹೀಗಾಗಿ ಅವರು ಘಟನೆಯ ಬಗ್ಗೆ ಯಾರಿಗೂ ಹೇಳಿರಲಿಲ್ಲ ಎನ್ನಲಾಗಿದೆ. ಬಳಿಕ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಕೆಲವರು ಗಂಗಾವತಿಯ ಕೆಲ ಯುವಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಯುವಕರು ವೃದ್ಧನನ್ನು ಹುಡುಕಿ ಘಟನೆಯ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಅಲ್ಲದೇ ಮಾನಸಿಕವಾಗಿ ಕುಗ್ಗಿದ್ದ ವೃದ್ಧನಿಗೆ ಸಮಾಧಾನ ಹೇಳಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಬಂಧನಕ್ಕೆ ಒತ್ತಾಯ: ಘಟನೆ ನಡೆದು ಹತ್ತು ದಿನ ಕಳೆದಿದೆ. ಪ್ರಕರಣ ದಾಖಲಾಗಿ ಒಂದು ವಾರ ಕಳೆದಿದೆ. ಆದರೆ ಇದುವರೆಗೂ ಪೊಲೀಸರು ಆರೋಪಿಗಳ ಪತ್ತೆ ಮಾಡಿಲ್ಲ. ಕೂಡಲೇ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಸ್ಟೂಡೆಂಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸಲೀಂ ಮನಿಯಾರ ಒತ್ತಾಯಿಸಿದ್ದಾರೆ. ಗಂಗಾವತಿಯಲ್ಲಿ ಎಲ್ಲರೂ ಸಹ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇಂತಹ ಘಟನೆಗಳಿಂದ ಸಮಾಜದ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಕೂಡಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಸಲೀಂ ಒತ್ತಾಯಿಸಿದ್ದಾರೆ.

Recent News


Leave a Comment: