ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪುತ್ತೂರು : ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೊಬೈಲ್ ಒಡೆದು ಹಾನಿ : ದೂರು ದಾಖಲು

Posted by Vidyamaana on 2023-07-16 15:35:23 |

Share: | | | | |


ಪುತ್ತೂರು : ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೊಬೈಲ್ ಒಡೆದು ಹಾನಿ : ದೂರು ದಾಖಲು

ಪುತ್ತೂರು : ಬಪ್ಪಳಿಕೆ ಎಂಬಲ್ಲಿ ಪತ್ರಕರ್ತ ನಿಶಾಂತ್ ಬಿಲ್ಲಂಪದವು ಎಂಬವರ ಮೊಬೈಲ್ ಅನ್ನು ಒಡೆದು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.


ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 427 ಐಪಿಸಿ ರನ್ವಯ ದಾಖಲಿಸಿಕೊಂಡು ಸದ್ರಿ ದೂರಿನಲ್ಲಿ ಸಲ್ಲಿಸಿರುವ ವಿಚಾರಗಳ ಕುರಿತು ಸೂಕ್ತ ಕಾನೂನು ಮತ್ತು ನಿಯಮಗಳ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ.

ಆಪರೇಷನ್ ಎಲಿಫೆಂಟ್ ಕೊನೆಗೂ ಸಕ್ಸಸ್ ; ಇಬ್ಬರನ್ನು ಬಲಿ ಪಡೆದ ನರಹಂಕಕ ಕಾಡಾನೆ ಸೆರೆ

Posted by Vidyamaana on 2023-02-23 13:09:14 |

Share: | | | | |


ಆಪರೇಷನ್ ಎಲಿಫೆಂಟ್ ಕೊನೆಗೂ ಸಕ್ಸಸ್ ; ಇಬ್ಬರನ್ನು ಬಲಿ ಪಡೆದ ನರಹಂಕಕ ಕಾಡಾನೆ ಸೆರೆ

ಕಡಬ; ಇಬ್ಬರನ್ನು ಬಲಿ ಪಡೆದ ನರಹಂತಕ ಆನೆ ಕೊನೆಗೂ ಸೆರೆಯಾಗಿದೆ. ಆ ಮೂಲಕ ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಸಕ್ಸಸ್ ಆಗಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.

ಫೆ.20 ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52 ವ) ಮೃತಪಟ್ಟಿದ್ದರು. ಅಂದು ರಾತ್ರಿಯೇ ಮೈಸೂರು ದುಬಾರೆಯಿಂದ 5 ಆನೆಗಳನ್ನು ತರಲಾಗಿದ್ದು, ಫೆ.21 ರಂದು ಡೋನ್ ಕ್ಯಾಮರಾ ಬಳಸಿ ಆನೆಯನ್ನು ಪತ್ತೆ ಹಚ್ಚಲಾಗಿತ್ತು.

ದುಬಾರೆಯ ಆನೆಗಳ ಮೂಲಕ ಸೆರೆಹಿಡಿಯುವ ಕಾರ್ಯಾಚರಣೆಯು ರೆಂಜಲಾಡಿ ಗ್ರಾಮದ ತುಂಬೆ ರಕ್ಷಿತಾರಣ್ಯದಲ್ಲಿ ಆರಂಭಗೊಂಡಿತ್ತು. ಆದರೆ ನಿನ್ನೆ ಆನೆಗೆ ಅರಿವಳಿಕೆ ನೀಡುವ ಪ್ರಯತ್ನ ವಿಫಲಗೊಂಡಿತ್ತು. ಇಂದು ಸಂಜೆ ಮತ್ತೆ ಆನೆಯನ್ನು ಪತ್ತೆ ಹಚ್ಚಿ ಅರಿವಳಿಕೆ ಮದ್ದು ಶೂಟ್ ಮಾಡಿ ಆನೆಯನ್ನು ಸೆರೆ ಹಿಡಿಯಲಾಗಿದೆ.

HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Posted by Vidyamaana on 2024-02-12 06:39:50 |

Share: | | | | |


HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (High Security number plate-HSRP) ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ.ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಾರಿಗೆ ಇಲಾಖೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನೇಕ ಇಲಾಖೆಗಳನ್ನ ಸಿಎಂ ಸಭೆ ಕರೆದಿದ್ದರು. ಅದೇ ರೀತಿ ಸಾರಿಗೆ ಇಲಾಖೆಯವರು ಕೂಡ ಭಾಗಿಯಾಗಿದ್ದರು. ಆಟೋ ಟ್ಯಾಕ್ಸಿ, ಲಾರಿ ಅಸೋಷಿಯಷನ್ ಅವರು ಎಲ್ಲಾ ಬಂದಿದ್ದರು. ಅವರ ಬೇಡಿಕೆಗಳನ್ನ ಕೂಡ ಇಟ್ಟಿದ್ದಾರೆ. ಜೊತೆಗೆ, ನಮ್ಮ ಸರ್ಕಾರ ಬಂದಮೇಲೆ ಸಾಕಷ್ಟು ಬೇಡಿಕೆ ಈಡೇರಿಸಿದ್ದೇವೆ ಎಂದರು. ಇಂದು ಹೊಸ ಬೇಡಿಕೆಗಳನ್ನೂ ಸಹ ಇಟ್ಟಿದ್ದಾರೆ. ಮುಂದಿನದ್ದು ಬಜೆಟ್ ದಿನ ನೋಡೋಣ ಎಂದು ಹೇಳಿದ್ದೇವೆ ಎಂದು ಹೇಳಿದರು.


ಇನ್ನು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇದೆ. ಹಿಂದೆ ಒಂದು ಸರಿ ಮುಂದಕ್ಕೆ ಹಾಕಿದ್ದೆವು. ಈಗ ಮತ್ತೆ ಮುಂದಕ್ಕೆ ಹಾಕಿ ಅಂತಾ ಹೇಳ್ತ ಇದಾರೆ. ಇನ್ನು ಒಂದುವಾರ ಸಮಯ ಇದೆ. ಎಲ್ಲಾ ಕೊನೇನಲ್ಲಿ ಅರ್ಜಿ ಹಾಕೋಕೆ ಬರ್ತಾರೆ. ಒತ್ತಡ ಜಾಸ್ತಿ ಆಗಿ ಅಪ್ಲೋಡ್ ಆಗೋಲ್ಲ ಅದೊಂದು ಸಮಸ್ಯೆ ಇದೆ. ಇನ್ನು ಟೈಮ್ ಇದೆ ನೋಡೋಣ ಎಂದುಸಾರಿಗೆ ಸಚೊವ ರಾಮಲಿಂಗಾರೆಡ್ಡಿ ಅವರು ಬಿಗ್ ಅಪ್ಡೇಟ್ ನೀಡಿದರು.

ಪತ್ನಿ ನಿದ್ರೆಯಲ್ಲಿದ್ದಾಗಲೇ ಡೂಪ್ಲಿಕೇಟ್‌ ಕೀ ಬಳಸಿ ಕತ್ತು ಕುಯ್ದು ಹೋದ ಪತಿ!

Posted by Vidyamaana on 2024-08-29 05:28:04 |

Share: | | | | |


ಪತ್ನಿ ನಿದ್ರೆಯಲ್ಲಿದ್ದಾಗಲೇ ಡೂಪ್ಲಿಕೇಟ್‌ ಕೀ ಬಳಸಿ ಕತ್ತು ಕುಯ್ದು ಹೋದ ಪತಿ!

ಬೆಂಗಳೂರು :(ಆ.28): ಸಿನಿಮಾದಲ್ಲಿ ಕೊರಿಯೋಗ್ರಾಫರ್‌ ಆಗಿದ್ದ ನವ್ಯಶ್ರಿ ಕೊಲೆ ಪ್ರಕರಣದ ಮತ್ತಷ್ಟು ಅಪ್‌ಡೇಟ್‌ಗಳು ಗೊತ್ತಾಗಿವೆ. ನವ್ಯಶ್ರಿ ಹಾಗೂ ಕಿರಣ್‌ ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆ ಬಳಿಕ ಕೆಂಗೇರಿ ಉಪನಗರದ 1ನೇ ಬ್ಲಾಕ್‌ನ ಎಸ್.ಎಂ.ವಿ.ಲೇಔಟ್‌ನಲ್ಲಿ ವಾಸವಾಗಿದ್ದರು.

ಮಂಗಳವಾರ ಬೆಳಿಗ್ಗೆ ಸ್ನೇಹಿತೆಗೆ ಕರೆ ಮಾಡಿದ್ದ ನವ್ಯಾ ಮನೆಗೆ ಬರುವಂತೆ ತಿಳಿಸಿದ್ದಳು. ಈ ವೇಳೆ ಆಕೆಯೊಂದಿಗೆ ಮಾತನಾಡುವ ವೇಳೆ, ತನಗೆ ಮನೆಯಲ್ಲೂ ನೆಮ್ಮದಿಯಿಲ್ಲ. ಹೊರಗಡೆಯೂ ನೆಮ್ಮದಿ ಇಲ್ಲ ಎಂದು ಹೇಳಿದ್ದರು. ಸ್ನೇಹಿತೆ ಮನೆಗೆ ಬಂದ ಬಳಿಕ ನವ್ಯಾ, ತನ್ನ ಇನ್ನೊಬ್ಬ ಗೆಳೆಯನಿಗೆ ಕರೆ ಮಾಡಿದ್ದಳು. ಆತನೊಂದಿಗೆ ಮಾತನಾಡುವ ವೇಳೆ ನನಗೆ ಮನೆಯಲ್ಲಿ ಸೇಫ್‌ ಫೀಲ್‌ ಆಗುತ್ತಿಲ್ಲ. ತಕ್ಷಣವೇ ಭೇಟಿಯಾಗಬಹುದಾ ಎಂದು ಕೇಳಿದ್ದಳು. ಬಳಿಕ ಮೂವರು ಕಾರ್‌ನಲ್ಲಿಯೇ ಆರ್‌ಆರ್‌ ನಗರದವರೆಗೂ ಹೋಗಿ ಮೋಮೋಸ್‌ ತಿಂದಿದ್ದರು. ಈ ಹಂತದಲ್ಲಿ ಗಂಡನ ಮೇಲೆ ದೂರು ನೀಡುವಂತೆ ನವ್ಯಾಶ್ರಿಯ ಗೆಳೆಯ ಹೇಳಿದ್ದ. ಬಳಿಕ ಗೆಳೆಯನನ್ನು ಆತನ ಮನೆಗೆ ನವ್ಯಾಶ್ರೀ ಡ್ರಾಪ್‌ ಮಾಡಿದ್ದರು. ಆಕೆಯ ಗೆಳತಿಯ ಜೊತೆ ರಾತ್ರಿ 11.30ಕ್ಕೆ ಮನೆಗೆ ಬಂದಿದ್ದರು.

ಜನವರಿ 22ಕ್ಕೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆಹ್ವಾನ ಸ್ವೀಕರಿಸಿದ ಮೋದಿ

Posted by Vidyamaana on 2023-10-25 20:44:19 |

Share: | | | | |


ಜನವರಿ 22ಕ್ಕೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆಹ್ವಾನ ಸ್ವೀಕರಿಸಿದ ಮೋದಿ

ನವದೆಹಲಿ (ಅ.25): ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜನವರಿ 22 ಕ್ಕೆ ನಡೆಯಲಿದೆ. ಈ ಬಗ್ಗೆ ಏಷ್ಯಾನೆಟ್‌ ನ್ಯೂಸ್‌ ಆಗಸ್ಟ್‌ನಲ್ಲಿ ಎಕ್ಸ್‌ಕ್ಲೂಸಿವ್‌ ಮಾಹಿತಿಯನ್ನು ನೀಡಿತ್ತು. ಬುಧವಾರ ಅಯೋಧ್ಯೆ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ ನೀಡಿದ ಆಹ್ವಾನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವೀಕರಿಸಿದ್ದು 2024ರ ಜನವರಿ 22 ರಂದು ಮಂದಿರದ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ.ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ದೇಗುಲದ ಪ್ರತಿಷ್ಠಾಪನೆಯ ಸಮಯ ಸಮೀಪಿಸಿದೆ. ಮಾಹಿತಿ ಪ್ರಕಾರ, ರಾಮ ಜನ್ಮಭೂಮಿ ತೀರ್ಥ ಪ್ರದೇಶದ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಭೇಟಿ ಮಾಡಿದೆ. ಈ ನಿಯೋಗದಲ್ಲಿ ಕರ್ನಾಟಕದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸ್ವಾಮಿ ಗೋವಿಂದದೇವ ಗಿರಿ ಮತ್ತು ನೃಪೇಂದ್ರ ಮಿಶ್ರಾ ಇದ್ದರು. ನಿಯೋಗ ಮತ್ತೊಮ್ಮೆ ಪ್ರಧಾನಿ ಮೋದಿಯವರನ್ನು ಅಯೋಧ್ಯೆಗೆ ಆಹ್ವಾನಿಸಿದ್ದು, ಅದನ್ನು ಪ್ರಧಾನಿ ಮೋದಿ ಸಂತೋಷದಿಂದ ಸ್ವೀಕರಿಸಿದ್ದಾರೆ. ನಿಗದಿತ ವೇಳಾಪಟ್ಟಿಯ ಪ್ರಕಾರ, 22 ಜನವರಿ 2024 ರಂದು ಅಯೋಧ್ಯೆಯ ಭಗವಾನ್ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಜನವರಿಯಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರ ಟ್ರಸ್ಟ್‌ನ ಚಂಪಕ್ ರೈ ಹೇಳಿದ್ದಾರೆ. ಇವರಲ್ಲದೆ ನಾಡಿನ ಪ್ರಮುಖ ಋಷಿಮುನಿಗಳು, ಸಂತರು ಹಾಗೂ ಇತರ ಗಣ್ಯರನ್ನು ಆಹ್ವಾನಿಸಲಾಗುವುದು. ಮುಖ್ಯ ಕಾರ್ಯಕ್ರಮವನ್ನು ರಾಜಕೀಯ ರಹಿತವಾಗಿಡಲು ಪ್ರಯತ್ನಿಸಲಾಗುವುದು ಎಂದು ಚಂಪಕ್ ರೈ ಹೇಳಿದರು. ವಿವಿಧ ರಾಜಕೀಯ ಪಕ್ಷಗಳ ಅತಿಥಿಗಳನ್ನೂ ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ವೇದಿಕೆ ಇರುವುದಿಲ್ಲ, ಸಾರ್ವಜನಿಕ ಸಭೆಯೂ ಇರುವುದಿಲ್ಲ. ಸಮಾರಂಭಕ್ಕೆ 136 ಸನಾತನ ಸಂಪ್ರದಾಯಗಳ 25,000 ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲು ಟ್ರಸ್ಟ್ ಯೋಜಿಸಿದೆ.ಜೈ ಸಿಯಾ ರಾಮ್! ಇಂದು ಭಾವನೆಗಳಿಂದ ತುಂಬಿರುವ ದಿನ. ಇತ್ತೀಚೆಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಶ್ರೀರಾಮ ಮಂದಿರದ ಶಂಕುಸ್ಥಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ಅವರು ನನ್ನನ್ನು ಆಹ್ವಾನಿಸಿದ್ದಾರೆ. ನಾನು ತುಂಬಾ ಆಶೀರ್ವಾದ ಪಡೆದಿದ್ದೇನೆ. ನನ್ನ ಜೀವಿತಾವಧಿಯಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ಮೋದಿ ಟ್ರಸ್ಟ್‌ ಅಧಿಕಾರಿಗಳ ಜೊತೆಗಿ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

Posted by Vidyamaana on 2024-03-25 04:45:39 |

Share: | | | | |


ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

ಶಿರಸಿ: ಜನಕ್ಕೆ ಸೇವೆಯ ಸೌಭಾಗ್ಯ ಕೊಟ್ಟ ಜನ‌ಮನಕ್ಕೆ ಸಾಷ್ಟಾಂಗ ಪ್ರಣಾಮ ಎಂದು ಸಂಸದ ಅನಂತಕುಮಾರ ಹೆಗಡೆ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯಿಂದ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಂಚಿತ ಅನಂತಕುಮಾರ ಹೆಗಡೆ ಅವರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅದರ ಪೂರ್ಣ ಪಾಠ ಇಲ್ಲಿದೆ.

ಈ ಭೂಮಿಯಲ್ಲಿ ಒಂದು ಲೌಕಿಕ ಬದುಕಿನಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನ್ನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ‌ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ  ನಾನು ಈ ಪೂಜೆಯನ್ನು ಎಲ್ಲಿಂದ ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ಧನ ಆರಾಧನೆ. ಸರಿ‌ ಸುಮಾರು ೩೦ ವರ್ಷಗಳ ಲಾಲ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ‌ಪ್ರೀತಿ, ಸ್ನೇಹ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು. ಅದು ಅದಮ್ಯ.


ಯಾವುದೇ ಪೂಜೆ, ಆರಾಧ‌ನೆ ಅದು ಎಂದಿಗೂ‌ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ ಆಕೆಯ ಸೇವೆಯಲ್ಲಿ ನನ್ನನ್ನು‌ ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದ ಪದ್ಮಗಳಿಗೆ ಅನಂತ‌ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ‌ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ . ಈ ಬದುಕಿನಲ್ಲಿ ಅದು ನನಗೊಂದು ಗುರುತು ನೀಡಿದೆ.ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೆ ಸಿಕ್ಕೀತು? ಎಂದೂ ಕೇಳಿದ್ದಾರೆ.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ, ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ಮು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಮತ್ತೊಮ್ಮೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯಾಂತರಾಳದ ಕೃತಜ್ಞತೆಗಳು ಎಂದು ಪತ್ರ ಬರೆದಿದ್ದಾರೆ

Recent News


Leave a Comment: