ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಭೆ

Posted by Vidyamaana on 2023-05-25 10:08:00 |

Share: | | | | |


ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಭೆ

ಉಪ್ಪಿನಂಗಡಿ: ಕಾಲೇಜು ಆರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ದಾಖಲಾತಿಗಳು ಆರಂಭಗೊಂಡಿವೆ. ದಾಖಲಾತಿಗಾಗಿ ಬರುವ ಯಾವುದೇ ಅರ್ಜಿಗಳನ್ನು ತಿರಸ್ಕರಿಸಬಾರದು ಎಂದು ಅಶೋಕ್ ಕುಮಾರ್ ರೈ ಸೂಚನೆ ನೀಡಿದರು.

ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೊ ಚಿತ್ರೀಕರಣ ಪ್ರಕರಣ: ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ

Posted by Vidyamaana on 2023-08-05 10:51:31 |

Share: | | | | |


ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೊ ಚಿತ್ರೀಕರಣ ಪ್ರಕರಣ: ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ

ಮಂಗಳೂರು: ಮಹಿಳೆಯೊಬ್ಬರು ಸ್ನಾನ ಮಾಡುವಾಗ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದವ ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬುಧವಾರ ನಡೆದಿದ್ದು, ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನವಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ, ಘಟನೆಗೆ ಸಂಬಂಧಿಸಿ ಪ್ರಜ್ವಲ್ ಎಂಬವರು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸುಮಂತ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಸುಮಂತ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮೊಬೈಲ್ ಫೋನ್ ನ್ನು ಎಫ್ಎಸ್ಎಲ್ ತನಿಖೆಗೆ ಕಳುಹಿಸಲಾಗಿದ್ದು, ವರದಿಯ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ

ಗೃಹ ಜ್ಯೋತಿ ಸ್ಕೀಮ್ ಯೋಜನೆ ನೋಂದಣಿಗೆ ಹಣ ಪಡೆದ ಆರೋಪ: ಗ್ರಾಮ ಒನ್ ಕೇಂದ್ರ ಸೀಜ್

Posted by Vidyamaana on 2023-07-29 12:22:10 |

Share: | | | | |


ಗೃಹ ಜ್ಯೋತಿ ಸ್ಕೀಮ್ ಯೋಜನೆ ನೋಂದಣಿಗೆ ಹಣ ಪಡೆದ ಆರೋಪ: ಗ್ರಾಮ ಒನ್ ಕೇಂದ್ರ ಸೀಜ್

ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಜನರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಅವರಖೋಡ ಗ್ರಾಮದಲ್ಲಿನ ಗ್ರಾಮ ಒನ್ ಕೇಂದ್ರವನ್ನು ಸೀಜ್ ಮಾಡಲಾಗಿದೆಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದಲ್ಲಿರುವ ಗ್ರಾಮ‌ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ,


ಸಂಬಂಧಿಸಿದ ವ್ಯಕ್ತಿಯ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಏ.28 : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ

Posted by Vidyamaana on 2023-04-27 05:50:02 |

Share: | | | | |


ಏ.28 : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ

ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ ಏ.28 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ನೇಮೋತ್ಸವದ ಅಂಗವಾಗಿ ಏ.27 ಗುರುವಾರ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಧ್ಯಾಹ್ನ 12.15 ಕ್ಕೆ ದೇವತಾ ಪ್ರಾರ್ಥನೆ, ಮಹಾಪೂಜೆ, ಸಂಜೆ 6 ಕ್ಕೆ ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ, ರಾತ್ರಿ 7 ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು, ರಾತ್ರಿ 9 ಕ್ಕೆ ತಂಬಿಲಾದಿಗಳು ನಡೆದು ಪ್ರಸಾದ ವಿತರಣೆ, 9.30 ಕ್ಕೆ ಅನ್ನಸಂತರ್ಪಣೆ ಜರಗಲಿದೆ.

ಏ.28 ಶುಕ್ರವಾರ ಬೆಳಿಗ್ಗೆ 9 ರಿಂದ ಶ್ರೀ ದಂಡನಾಯಕ ದೈವದ ವಾಲಸರಿ ನೇಮ, 10 ರಿಂದ ಶ್ರೀ ಉಳ್ಳಾಲ್ತಿ ನೇಮ, ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ, ಮಧ್ಯಾಹ್ನ 2 ರ ನಂತರ ಶ್ರೀ ಕಾಳರಾಹು ಮತ್ತು ಶ್ರೀ ಮಲರಾಯ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಶ್ರೀ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿ

Posted by Vidyamaana on 2024-06-24 11:44:41 |

Share: | | | | |


ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿ

ಸುಬ್ರಮಣ್ಯ; ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು

ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

Posted by Vidyamaana on 2024-08-11 14:29:53 |

Share: | | | | |


ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಡಾ.ಡಿ. ವೀರೇಂದ್ರ ಹೆಗ್ಗಡೆ ಸಂಸದ್ ಭವನದ ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿ, ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವುದಕ್ಕೆ ಶುಭ ಹಾರೈಸಿದರು. ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ, ದೇಶಕ್ಕೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು.ರಾಜ್ಯಸಭಾ ಸಂಸದರ ನಿಧಿಯನ್ನು ಬೀದರ್​ನಲ್ಲಿ ವಿನೂತನವಾಗಿ ವಿನಿಯೋಗಿಸಿ ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ ಪ್ರಧಾನಿಗೆ ಡಾ.ಹೆಗ್ಗಡೆ ಅವರು ವಿವರಿಸಿದರು.

ಇದು ಒಂದು ಸಂಸದರ ನಿಧಿಯ ಮಾದರಿ ಸದ್ವಿನಿಯೋಗ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.ರಾಜ್ಯಾದ್ಯಂತ ಗ್ರಾಮಾಭಿವೃದ್ಧಿ ಯೋಜನ ಯಿಂದ ನಿರ್ವಹಿಸಲ್ಪಡುತ್ತಿರುವ 10 ಸಾವಿರ ಸಿಎಸ್​ಸಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರದ ಹಾಗೂ ಸಿಎಸ್​ಸಿಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನತೆಯ ಮನೆ ಬಾಗಿಲಿಗೆ ತಲುಪಿಸುತ್ತಿರುವುದನ್ನು ಡಾ.ಹೆಗ್ಗಡೆ ಅವರು ವಿವರಿಸಿದರು. ಇಲ್ಲಿಯವರೆಗೆ 3 ಕೋಟಿ ಸಿಎಸ್​ಸಿ ಸೇವೆಗಳು ಯೋಜನೆ ಮೂಲಕ ಜನಸಾಮಾನ್ಯರಿಗೆ ತಲುಪಿರುವ ಬಗ್ಗೆ ಪ್ರಧಾನಿ ಅಚ್ಚರಿ ವ್ಯಕ್ತಪಡಿಸಿದರು. ಡಾ.ಹೆಗ್ಗಡೆ ಅವರ ಈ ಎಲ್ಲ ಸೇವೆಗಳ ಚಿಂತನೆ ದೇಶಕ್ಕೆ ಮಾದರಿ ಎಂದರು.

Recent News


Leave a Comment: