KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಪುತ್ತೂರು ಮುಸ್ಲಿಂ ಯುವಕನ ಮೇಲೆ ಹಲ್ಲೆ ಕಠಿಣ ಕ್ರಮಕ್ಕೆ -ಎಸ್‌ಡಿಪಿಐ ಒತ್ತಾಯ

Posted by Vidyamaana on 2023-05-03 23:14:26 |

Share: | | | | |


ಪುತ್ತೂರು  ಮುಸ್ಲಿಂ ಯುವಕನ ಮೇಲೆ ಹಲ್ಲೆ  ಕಠಿಣ ಕ್ರಮಕ್ಕೆ -ಎಸ್‌ಡಿಪಿಐ ಒತ್ತಾಯ

ಪುತ್ತೂರು: ಸಹಪಾಠಿ ವಿಧ್ಯಾರ್ಥಿನಿಯೊಂದಿಗೆ ಮಾತನಾಡಿದ ಎಂಬ ಕ್ಷುಲ್ಲಕ ಕಾರಣವಿಟ್ಟು ಮಹಮ್ಮದ್ ಫಾರಿಸ್ ಎಂಬ ಮುಸ್ಲಿಂ ಯುವಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಪಂಚವಟಿ ಎಂಬಲ್ಲಿಗೆ ಬಲವಂತವಾಗಿ ಕರೆದುಕೊಂಡು ಹೋಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ  ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಅವರು ಚುನಾವಣೆಗೆ ಇನ್ನೇನು ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇರುವ ಸಮಯದಲ್ಲಿ ಪುತ್ತೂರು ತಾಲ್ಲೂಕಿನಲ್ಲಿ ಸಂಘಪರಿವಾರ ಕೋಮು ಗಲಭೆ ನಡೆಸಿ ರಾಜಕೀಯ ದುರ್ಲಾಭವನ್ನು ಪಡೆಯಲು ಯತ್ನಿಸುತ್ತಿದೆ.ಅದರ  ಭಾಗವಾಗಿ ಮುಸ್ಲಿಂ ವಿಧ್ಯಾರ್ಥಿಯ ಮೇಲೆ ಸಹಪಾಠಿನಿಯೊಂದಿಗೆ ಮಾತನಾಡಿದ ಎಂಬ ಕ್ಷುಲ್ಲಕ ಕಾರಣ ಇಟ್ಟುಕೊಂಡು ಸಂಘಪರಿವಾರದ ಕಾರ್ಯಕರ್ತರಿಗೆ ಕೋಮು ವಿಷ ಬೀಜ ಬಿತ್ತುವ ಕೇಂದ್ರವಾದ ಪಂಚವಟಿ ಎಂಬಲ್ಲಿಗೆ ಬಲವಂತವಾಗಿ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿ ಕೊಲೆಗೆ ಯತ್ನ ನಡೆಸಲಾಗಿದೆ.

ಪುತ್ತೂರಿನಲ್ಲಿ ಬಿಜೆಪಿ ಒಡೆದ ಮನೆಯಂತಾಗಿ ಸೋಲು ಗ್ಯಾರಂಟಿ ಎಂಬಂತಾಗಿದೆ,ಹಾಗಾಗಿ ತಾಲ್ಲೂಕಿನಲ್ಲಿ ಇಂತಹ ದುಷ್ಕೃತ್ಯ ನಡೆಸಿ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸಿ ಮತ ಪಡೆಯುವ ಹುನ್ನಾರವಾಗಿದೆ.

ಕೆಲವು ವರ್ಷಗಳ ಹಿಂದೆ ಎಬಿವಿಪಿ ಕಾರ್ಯಕರ್ತರು ಹಿಂದು ವಿಧ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ನಡೆಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಾಗ ಸುಮ್ಮನಾಗಿದ್ದಾವರು ಇಂದು ಅನ್ಯ ಧರ್ಮದ ಸಹಪಾಠಿ ವಿಧ್ಯಾರ್ಥಿನಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕಾಗಿ ಗೂಂಡಾಗಿರಿ ನಡೆಸುವುದಾದರೆ ಇದರ ಒಳಗುಟ್ಟು ಪುತ್ತೂರಿನ ಜನತೆಗೆ ಅರ್ಥವಾಗದ ವಿಚಾರವಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಹಾಗಾಗಿ ವಿಧ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪೋಲಿಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಂಡು ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಜೈಲಿಗಟ್ಟಬೇಕೆಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಡಿಪ್ಲೋಮಾ ಪದವೀಧರರಿಗೆ ಗುಡ್ ನ್ಯೂಸ್ : ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್

Posted by Vidyamaana on 2023-11-10 12:54:44 |

Share: | | | | |


ಡಿಪ್ಲೋಮಾ ಪದವೀಧರರಿಗೆ ಗುಡ್ ನ್ಯೂಸ್ : ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಡಿಪ್ಲೋಮಾ, ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, 2024 ರ ಜನವರಿಯಿಂದ ಜಾರಿಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


ಈ ಕುರಿತು ಮಾಹಿತಿ ನೀಡಿರುವ ಮಧು ಬಂಗಾರಪ್ಪ ಅವರು, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿಗೊಳಿಸಲಾಗುತ್ತಿದ್ದು, ಡಿಪ್ಲೋಮಾ ಪೂರ್ಣಗೊಳಿಸಿದವರಿಗೆ 1,500 ರೂ. ಪದವಿ ಪೂರ್ಣಗೊಂಡವರಿಗೆ 3,000 ರೂ. ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಶಿಕ್ಷಣ ಮುಗಿಸಿ ಕೆಲಸ ಸಿಗದೆ ಮನೆಯಲ್ಲಿರುವ ವಿದ್ಯಾರ್ಥಿಗಳು ತಂದೆ-ತಾಯಿಗಳಿಗೆ ಹೊರೆಯಾಗದಿರಲೆಂದು ಹಾಗೂ ತಮ್ಮ ಸಣ್ಣ ಪುಟ್ಟ ಖರ್ಚುಗಳು, ಉದ್ಯೋಗ ಹುಡುಕಲು ಅನುಕೂಲವಾಗಲೆಂಬ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಆರೋಪ : ಪುತ್ತೂರಿನಲ್ಲಿ ಬಿಜೆಪಿಯಿಂದ ಪ್ರತಿಕೃತಿ ದಹಿಸಿ ಆಕ್ರೋಶ

Posted by Vidyamaana on 2024-02-28 20:57:08 |

Share: | | | | |


ಪಾಕಿಸ್ತಾನ ಪರ ಘೋಷಣೆ ಆರೋಪ : ಪುತ್ತೂರಿನಲ್ಲಿ ಬಿಜೆಪಿಯಿಂದ ಪ್ರತಿಕೃತಿ ದಹಿಸಿ ಆಕ್ರೋಶ

ಪುತ್ತೂರು : ವಿಧಾನಸೌಧದಲ್ಲಿ ನಿನ್ನೆ ಸಂಜೆ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ನಾಸೀರ್ ಹುಸೇನ್ ರವರ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ಹೊರ ಹಾಕಿದರು.

ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

Posted by Vidyamaana on 2024-03-22 08:14:00 |

Share: | | | | |


ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಎ.10 ರಿಂದ 20 ರ ತನಕ ನಡೆಯಲಿದ್ದು, ಈ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಚಿತವಾಗಿ ಸೇವಾ ರೂಪದಲ್ಲಿ ನಡೆಸಲು ಇಚ್ಚಿಸುವವರು ದೇವಳದ ಕಚೇರಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ.ಅರ್ಜಿಯಲ್ಲಿ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕಾರ್ಯಕ್ರಮದ ವಿವರ, ತಂಡದಲ್ಲಿ ಭಾಗವಹಿಸುವ ಸದಸ್ಯರ ಸಂಖ್ಯೆಯನ್ನು ನಮೂದಿಸಬೇಕು. ತಂಡಗಳು ನೀಡುವ ಕಾರ್ಯಕ್ರಮ ಭಾರತೀಯ ಸಂಸ್ಕೃತಿಯದ್ದಾಗಿದ್ದು, ಪಾಶ್ಚಾತ್ಯ ಶೈಲಿಗೆ ಅವಕಾಶವಿರುವುದಿಲ್ಲ. ಆಸಕ್ತರು ಮಾ.25ರ ಒಳಗೆ ಅರ್ಜಿಯನ್ನು ದೇವಳದ ಕಚೇರಿಗೆ ನೀಡುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448732414 ಅನ್ನು ಸಂಪರ್ಕಿಸುವುದು. ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದೆಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ಕೆ.ವಿ.ಶ್ರೀನಿವಾಸ ಅವರು ತಿಳಿಸಿದ್ದಾರೆ.

ಇಂದು ಸಂಜೆ (ಜೂ. 9) ಮಹಿಳಾ ಕಾರ್ಯಕರ್ತರೊಂದಿಗೆ ಶಾಸಕರ ಸಭೆ

Posted by Vidyamaana on 2023-06-09 09:37:41 |

Share: | | | | |


ಇಂದು ಸಂಜೆ (ಜೂ. 9) ಮಹಿಳಾ ಕಾರ್ಯಕರ್ತರೊಂದಿಗೆ ಶಾಸಕರ ಸಭೆ

ಪುತ್ತೂರು: ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣಕ್ಕೆ ಸಂಬಂಧಿಸಿದಂತೆ  ಮಹಿಳಾ ಕಾರ್ಯಕರ್ತರ ಜೊತೆ ಶಾಸಕ ಅಶೋಕ್ ರೈ ಅವರು ಜೂನ್ 9ರಂದು ಸಂಜೆ 5 ಗಂಟೆಗೆ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

ಪುತ್ತೂರಿನ ಗಡಿಗ್ರಾಮಗಳಲ್ಲಿ ಬೇಟೆಗಾರನಿಗೆ ಬಲಿಯಾಗುತ್ತಿರುವ ಕಾಟಿಗಳು

Posted by Vidyamaana on 2023-09-29 12:00:28 |

Share: | | | | |


ಪುತ್ತೂರಿನ ಗಡಿಗ್ರಾಮಗಳಲ್ಲಿ ಬೇಟೆಗಾರನಿಗೆ ಬಲಿಯಾಗುತ್ತಿರುವ ಕಾಟಿಗಳು

ಪುತ್ತೂರು: ಕಾಡು ನಾಶವಾಗುತ್ತಿದ್ದಂತೆಯೇ ಆಹಾರ ಹರಿಸಿ ಕಾಡುಪ್ರಾಣಿಗಳು ನಾಡಿಗೆ ಬರುವುದು ಮತ್ತು ನಾಡಿಗೆ ಬಂದು ಕೃಷಿಗಳನ್ನು ನಾಶ ಮಾಡುವುದು ಪುತ್ತೂರು ತಾಲೂಕಿನ ಗಡಿಗ್ರಾಮಗಳಲ್ಲಿ ನಿತ್ಯದ ಪರಿಪಾಠವಾಗಿದೆ. ಕಾಡಿನಲ್ಲಿ ಆಹಾರದ ಕೊರತೆಯುಂಟಾದಾಗ ಮಾತ್ರ ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡುತ್ತವೆ, ಆಹಾರ ಕೊರತೆಯಾಗಲು ಕಾಡುಗಳ ನಾಶವೂ ಕಾರಣವಾಗಿದೆ. ಕಾಡುಗಳ ರಕ್ಷಣೆಗೆ ಮತ್ತು ಕಾಡುಪ್ರಾಣಿಗಳ ರಕ್ಷಣೆಗೆ ಅರಣ್ಯ ಇಲಾಖೆ ಅದೆಷ್ಟೋ ಅಧಿಕಾರಿಗಳನ್ನು ಇರಿಸಿಕೊಂಡಿದೆ, ಆದರೆ ಕಾಡು ನಾಶವಾಗುತ್ತಲೇ ಇದೆ ಕಾಡುಪ್ರಾಣಿಗಳು ನಾಡಿಗೆ ಬರುತ್ತಲೇ ಇದೆ. ಇಲ್ಲಿ ವಿಶೇಷವೇನೆಂದರೆ ನಾಡಿಗೆ ಬಂದ ಕಾಡುಪ್ರಾಣಿಗಳು ಮರಳಿ ಕಾಡು ಸೇರುವುದೇ ಇಲ್ಲ ಅವು ಮಾನವ ಹೊಟ್ಟೆ ಪಾಲಾಗುತ್ತಿದೆ ಎಂಬ ಆತಂಕದ ವಿಚಾರ ಬೆಳಕಿಗೆ ಬಂದಿದೆ.

ಪುತ್ತೂರು ತಾಲೂಕಿನ ಕೇರಳ ಗಡಿಗ್ರಾಮಗಳಲ್ಲಿ ಇಂಥಹದೊಂದು ಅಮಾನವೀಯ ಕೃತ್ಯಗಳು ನಿತ್ಯವೂ ನಡೆಯುತ್ತಿದೆ. ನೆಟ್ಟಣಿಗೆ ಮುಡ್ನೂರು, ಪಾಣಾಜೆ, ಜಾಲ್ಸೂರು ಗಡಿಗ್ರಾಮಗಳಲ್ಲಿ ಕಾಡಾಣೆಗಳ ಹಾವಳಿ ಇಲ್ಲ. ಈ ಭಾಗದಲ್ಲಿ ಕಾಡುಕೋಣಗಳ ಹಾವಳಿ ಇದೆ. ಕಾಡುಕೋಣಗಳು ಗುಂಪುಗುಂಪಾಗಿ ರಾತ್ರಿ ವೇಳೆ ಕೆಲವೊಮ್ಮೆ ಹಗಲು ವೇಳೆಯೇ ನಾಡಿಗೆ ಬಂದು ಕೃಷಿಗಳನ್ನು ತಿಂದು ಹಾಕುತ್ತಿದೆ. ಈ ವಿಚಾರವನ್ನು ಗ್ರಾಮಸಭೆಗಳಲ್ಲಿ ಗ್ರಾಮಸ್ಥರು ಹೇಳುತ್ತಲೇ ಇದ್ದಾರೆ. ಮೇಲಧಿಕಾರಿಗಳ ಗಮನಕ್ಕೆ ತಂದರೆ ವ್ಯವಸ್ಥೆ ಮಾಡುವ ಎಂದು ತಲೆ ಆಡಿಸುತ್ತಲೇ ಕಾಲ ಕಳೆಯುತ್ತಿದ್ದಾರೆ. ಕಾಡು ಕೋಣಗಳು ನಾಡಿಗೆ ಬರದಂತೆ ತಡೆಗಟ್ಟುವುದು ಬಿಡಿ ಆ ಗ್ರಾಮಗಳಿಗೆ ತೆರಳಿ ಪರಿಶೀಲನೆ ಮಾಡಲು ಅರಣ್ಯ ಇಲಾಖೆಯ ಮೇಲಧಿಕಾರಿಗಳಿಗೆ ಸಮಯ ಕೂಡಿ ಬರುತ್ತಿಲ್ಲ ಎಂಬ ಆರೋಪ ಗ್ರಾಮಸ್ಥರದ್ದು.


ಕಾಡುಕೋಣ ಕೊಂದು ತಿನ್ನುತ್ತಾರೆ

ರಾತ್ರಿ ವೇಳೆ ಕೆಲವೊಂದು ಆಯಕಟ್ಟಿನ ಸ್ಥಳಗಳಿಂದಲೇ ಕಾಡುಕೋಣಗಳು ಬರುತ್ತದೆ ಎಂಬ ಮಾಹಿತಿ ತಿಳಿದುಕೊಳ್ಳುವ ಬೇಟೆಗಾರರು ರಾತ್ರಿ ವೇಳೆ ಅವುಗಳನ್ನು ಗುಂಡು ಹೊಡೆದು ಸಾಯಿಸುತ್ತಾರೆ. ಕಾಡು ಕೋಣಗಳ ಬರುತ್ತವೆ , ದಾಳಿ ಮಾಡುತ್ತದೆ ಎಂಬ ಕಾರಣಕ್ಕೆ ಸಂಜೆಯಾಗುತ್ತಲೇ ಗ್ರಾಮಸ್ಥರು ಮನೆ ಸೇರುವ ಕಾರಣ ಬೇಟೆಗಾರರಿಗೆ ಅವುಗಳನ್ನು ಹಿಡಿದು ಕೊಲ್ಲಲು ಸುಲಭವಾಗುತ್ತಿದೆ. ಯಾರ ಕಣ್ಣಿಗೂ ಬೀಳದ ರೀತಿಯಲ್ಲಿ ಅವುಗಳನ್ನು ಕೊಲ್ಲುವ ಮತ್ತು ಆ ಬಳಿಕ ಮಾಂಸ ಮಾಡಿ ಕೇರಳಕ್ಕೆ ಸಾಗಿಸುವ ದಂಧೆ ನಿರಂತರವಾಗಿ ನಡೆಯುತ್ತಲೇ ಇದೆ. ಈಗಾಗಲೇ ನೂರಾರು ಕಾಡುಕೋಣಗಳನ್ನು ಭೇಟೆಗಾರರು ಕೊಂದು ಮುಗಿಸಿದ್ದಾರೆ ಎಂಬ ಆತಂಕದ ಮಾಹಿತಿಯನ್ನು ಗ್ರಾಮಸ್ಥರು ಹೊರ ಹಾಕಿದ್ದಾರೆ. ಕಾಡುಪ್ರಾಣಿಗಳನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದೇ ಈ ಅನಾಹುತಕ್ಕೆ ಕಾರಣವಾಗಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಬೇಟೆಗಾರರ ಜೊತೆ ಕೆಲವೊಂದು ಮೇಲಧಿಕಾರಿಗಳಿಗೆ ನಿಟಕ ಕೃಪಾಕಟಾಕ್ಷ ಇರುವುದರಿಂದ ಇದೊಂದು ವ್ಯವಹಾರಿಕ ದಂಧೆಯಾಗಿ ಪರಿಣಮಿಸಿದ್ದು, ಮುಂದಿನ ಕೆಲವೇ ತಿಂಗಳಲ್ಲಿ ಕಾಡುಕೋಣಗಳೇ ನಾಶವಾದರೂ ಅಚ್ಚರಿಯಿಲ್ಲ. ಈ ಪರಿಸ್ಥಿತಿ ತಲೆದೋರುವ ಮುನ್ನ ಜಿಲ್ಲಾಮಟ್ಟದ ಅರಣ್ಯಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಾಗಿದೆ ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ತುರ್ತು ಕ್ರಮ: ಡಿಸಿಎಫ್

ಈ ವಿಚಾರದಲ್ಲಿ ಯಾರೂ ನನ್ನ ಗಮನಕ್ಕೆ ತಂದಿಲ್ಲ. ಕಾಡುಕೋಣಗಳು ಸೇರಿದಂತೆ ಕಾಡುಪ್ರಾಣಿಗಳನ್ನು ಭೇಟೆಯಾಡುವುದು ಅಕ್ಷಮ್ಯ ಅಪರಾಧವಾಗಿದೆ. ಪಾಣಭಾಜೆ, ಜಾಲ್ಸೂರು ಹಾಗೂ ಕರ್ನೂರು ಗಡಿಗ್ರಾಮದಲ್ಲಿ ವಿಶೇಷ ತಪಾಸಣೆ ಮಾಡುವಂತೆ ಕ್ರಮಕೈಗೊಳ್ಳುತ್ತೇನೆ. ಸಾರ್ವಜನಿಕರು ಇಂಥಹ ಕೃತ್ಯಗಳು ಕಂಡು ಬಂದಲ್ಲ ನೇರವಾಗಿ ನನಗೆ ಕರೆ ಮಾಡಿ ತಿಳಿಸಬಹುದು.


ಆಂಟ್ಯನಿ ಮರಯಪ್ಪನ್, ಡಿಸಿಎಫ್ ಮಂಗಳೂರು

Recent News


Leave a Comment: